Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಸಣ್ಣ ಉದ್ಯಮ ಹೂಡಿಕೆಗೆ ಆಸರೆಯಾದ ಗೃಹ...

ಸಣ್ಣ ಉದ್ಯಮ ಹೂಡಿಕೆಗೆ ಆಸರೆಯಾದ ಗೃಹ ಲಕ್ಷ್ಮೀ ಯೋಜನೆ : ಡಾ.ಶಾಲಿನಿ ರಜನೀಶ್

ವಾರ್ತಾಭಾರತಿವಾರ್ತಾಭಾರತಿ29 Aug 2026 10:48 PM IST
share
ಸಣ್ಣ ಉದ್ಯಮ ಹೂಡಿಕೆಗೆ ಆಸರೆಯಾದ ಗೃಹ ಲಕ್ಷ್ಮೀ ಯೋಜನೆ : ಡಾ.ಶಾಲಿನಿ ರಜನೀಶ್

ಬೆಂಗಳೂರು : ಮಹಿಳಾ ಉದ್ಯಮಿಗಳು ಸಣ್ಣ ಉದ್ಯಮ ಹೂಡಿಕೆಗೆ ರಾಜ್ಯ ಸರಕಾರ ಜಾರಿಗೆ ತಂದಿರುವ ಗೃಹ ಲಕ್ಷ್ಮೀ ಯೋಜನೆ ಆಸರೆಯಾಗಿದೆ ಎಂದು ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಹೇಳಿದ್ದಾರೆ.

ಶನಿವಾರ ನಗರದ ಪ್ರೆಸ್ಟೀಜ್ ಟವರ್ಸ್‍ನಲ್ಲಿ ಎಫ್‍ಐಸಿಸಿಐ ಮತ್ತು ಯುಕೆ ಅಂಡ್ ಕೋ ಜಂಟಿಯಾಗಿ ಆಯೋಜಿಸಿದ್ದ ಭಾರತ ಕುಟುಂಬ ಉದ್ಯಮ ಶೃಂಗಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಮಹಿಳಾ ಉದ್ಯಮಿಗಳನ್ನು ಉತ್ತೇಜಿಸಲು ರಾಜ್ಯ ಸರಕಾರ ಹಲವು ಮಹತ್ವದ ಯೋಜನೆಗಳನ್ನು ಜಾರಿಗೆ ತಂದಿದೆ. ಅದರಲ್ಲೂ, ಕುಟುಂಬದ ಯಜಮಾನಿಯರಾದ 2 ಕೋಟಿಗೂ ಹೆಚ್ಚು ಮಹಿಳೆಯರಿಗೆ ಗೃಹ ಲಕ್ಷ್ಮೀ ಯೋಜನೆಯಡಿ ತಿಂಗಳಿಗೆ 2,000 ರೂಪಾಯಿ ಪ್ರೋತ್ಸಾಹಧನ ನೀಡಲಾಗುತ್ತಿದ್ದು, ಇದು ಸಣ್ಣ ಉದ್ಯಮಗಳಿಗೆ ಬಂಡವಾಳದ ಆಧಾರವಾಗುತ್ತಿದೆ ಎಂದರು.

3 ರಿಂದ 4 ಮಹಿಳೆಯರು ಸೇರಿ 'ಜಂಟಿ ಹೊಣೆಗಾರಿಕೆ ಗುಂಪು' (ಜೆಎಲ್‍ಜಿ) ರಚಿಸಿಕೊಂಡರೆ ಯಾವುದೇ ಬ್ಯಾಂಕ್ ಮೇಲಾಧಾರ ಇಲ್ಲದೆ ಸಾಲ ಸೌಲಭ್ಯ ದೊರೆಯಲಿದೆ. ಜತೆಗೆ ಉಚಿತ ಸಾರ್ವಜನಿಕ ಸಾರಿಗೆ ಸೌಲಭ್ಯವು ಮಹಿಳೆಯರ ವ್ಯಾಪಾರ-ವಹಿವಾಟಿನ ಸಂಚಾರಕ್ಕೆ ಹೆಚ್ಚಿನ ಅನುಕೂಲ ಮಾಡಿಕೊಟ್ಟಿದೆ. ಒಟ್ಟಿನಲ್ಲಿ ಉದ್ಯಮಿಗಳು ಆತ್ಮವಿಶ್ವಾಸದಿಂದ ಬೆಳೆಯಲು ಅನುಕೂಲಕರ ವಾತಾವರಣ ನಿರ್ಮಿಸುವುದು ಸರಕಾರದ ಆದ್ಯತೆಯಾಗಿದೆ ಎಂದು ಅವರು ನುಡಿದರು.

ಎಂಎಸ್‍ಎಂಇ: ಕರ್ನಾಟಕದಲ್ಲಿ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು ಹಾಗೂ ಕುಟುಂಬ ಉದ್ಯಮಗಳು ರಾಜ್ಯದ ಆರ್ಥಿಕ ಪ್ರಗತಿಯ ಚಾಲಕ ಶಕ್ತಿಯಾಗಿದ್ದು, ಪ್ರಸ್ತುತ 50 ಲಕ್ಷ ನೋಂದಾಯಿತ ಎಂಎಸ್‍ಎಂಇಗಳು 2.3 ಕೋಟಿ ಜನರಿಗೆ ಉದ್ಯೋಗಾವಕಾಶ ಕಲ್ಪಿಸಿವೆ. ರಾಜ್ಯದಲ್ಲಿರುವ ಎಂಎಸ್‍ಎಂಇಗಳು ಒಟ್ಟು ರಾಜ್ಯ ದೇಶೀಯ ಉತ್ಪನ್ನಕ್ಕೆ ಶೇ. 8.30ರಷ್ಟು ಕೊಡುಗೆ ನೀಡುತ್ತಿವೆ. ಉತ್ಪಾದನಾ ವಲಯದ ಶೇ.45ರಷ್ಟು ಹಾಗೂ ಒಟ್ಟು ರಫ್ತಿನ ಶೇ.40ರಷ್ಟು ಕೊಡುಗೆ ಈ ವಲಯದಿಂದಲೇ ಬರುತ್ತಿದೆ. ದೇಶದ ದೊಡ್ಡ ಕಂಪೆನಿಗಳ ಬೇರುಗಳು ಕುಟುಂಬ ಆಧಾರಿತ ಸಣ್ಣ ಉದ್ಯಮಗಳಲ್ಲೇ ಇವೆ ಎಂದು ಹೇಳಿದರು.

ಕೈಗಾರಿಕಾ ಮತ್ತು ಸೇವಾ ವಲಯಗಳ ಸಮೀಕ್ಷೆಯಲ್ಲಿ ಭಾಗವಹಿಸಿದ ಬಹುಪಾಲು ಉದ್ಯಮಿಗಳು ರಾಜ್ಯ ಸರಕಾರದ ನೀತಿಗಳು ಮತ್ತು ಕಾರ್ಯಕ್ರಮಗಳ ಬಗ್ಗೆ ತೃಪ್ತಿ ವ್ಯಕ್ತಪಡಿಸಿದ್ದಾರೆ. ಸಣ್ಣ ಉದ್ಯಮಗಳಲ್ಲಿ ಪ್ರತಿಭಾ ಸಂಪನ್ಮೂಲ ಬಲಪಡಿಸುವುದು ಮತ್ತು ಸರಕಾರ ಯೋಜನೆಗಳ ಕುರಿತು ಹೆಚ್ಚಿನ ಅರಿವು ಮೂಡಿಸುವ ಶಿಫಾರಸುಗಳನ್ನು ಸರಕಾರ ಸ್ವಾಗತಿಸಿದೆ ಎಂದೂ ಅವರು ಉಲ್ಲೇಖಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X