Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ರೈತರ ಆದಾಯವನ್ನು ಹೆಚ್ಚಿಸಲು ‘ಸಂಪೂರ್ಣ...

ರೈತರ ಆದಾಯವನ್ನು ಹೆಚ್ಚಿಸಲು ‘ಸಂಪೂರ್ಣ ಗ್ರ್ಯಾಂಡ್ ಚಾಲೆಂಜ್’ ಆಯೋಜನೆ : ಡಾ.ಶಾಲಿನಿ ರಜನೀಶ್

ವಾರ್ತಾಭಾರತಿವಾರ್ತಾಭಾರತಿ28 Sept 2026 9:14 PM IST
share
ರೈತರ ಆದಾಯವನ್ನು ಹೆಚ್ಚಿಸಲು ‘ಸಂಪೂರ್ಣ ಗ್ರ್ಯಾಂಡ್ ಚಾಲೆಂಜ್’ ಆಯೋಜನೆ : ಡಾ.ಶಾಲಿನಿ ರಜನೀಶ್

ಬೆಂಗಳೂರು : ರಾಜ್ಯದ ರೈತರ ಬೆಳೆಗಳ ಕಟಾವಿನ ನಂತರದ ನಷ್ಟ ಮತ್ತು ಆಹಾರ ಸಂರಕ್ಷಣೆಯ ಮೂಲಕ ವ್ಯರ್ಥವನ್ನು ತಡೆಯಲು ಹಾಗೂ ರೈತರ ಆದಾಯವನ್ನು ಹೆಚ್ಚಿಸಲು ಮಾದರಿ ಪರಿಹಾರಗಳನ್ನು ಗುರುತಿಸಲು ರಾಜ್ಯ ಸರಕಾರ ‘ಸಂಪೂರ್ಣ ಗ್ರ್ಯಾಂಡ್ ಚಾಲೆಂಜ್’ನ್ನು ಹಮ್ಮಿಕೊಂಡಿದೆ ಎಂದು ಸರಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ತಿಳಿಸಿದ್ದಾರೆ.

ನಗರದ ವಿಧಾನಸೌಧದಲ್ಲಿ ನಡೆದ ‘ಸಂಪೂರ್ಣ ಗ್ರ್ಯಾಂಡ್ ಚಾಲೆಂಜ್’ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಕರ್ನಾಟಕ ಸರಕಾರದ ನಾವೀನ್ಯತಾ ಉಪಕ್ರಮವಾದ ಸಂಪೂರ್ಣ ಗ್ರ್ಯಾಂಡ್ ಚಾಲೆಂಜ್ 2026ರ ಮೂಲಕ ಆರು ನಾವೀನ್ಯತಾ ಪರಿಹಾರಗಳನ್ನು ಅಂತಿಮಗೊಳಿಸಲಾಗಿದ್ದು, ಇವು ಮುಂದಿನ ಹಂತದಲ್ಲಿ ಸರಕಾರಿ, ಮಾರುಕಟ್ಟೆ ಮತ್ತು ಹೂಡಿಕೆ ಸಂಪರ್ಕಗಳನ್ನು ಪಡೆದುಕೊಳ್ಳಲಿವೆ ಎಂದು ಹೇಳಿದರು.

‘ಸಂಪೂರ್ಣ 2026' ವೇದಿಕೆಯ ಭಾಗವಾಗಿ ಕರ್ನಾಟಕ ಸರ್ಕಾರದ ದೂರದೃಷ್ಟಿ ಮತ್ತು ಮಾರ್ಗದರ್ಶನದಲ್ಲಿ ಈ ಉಪಕ್ರಮವನ್ನು ನಡೆಸಲಾಗುತ್ತಿದೆ. ನಾವೀನ್ಯಕಾರರು, ಉದ್ಯಮಿಗಳು, ಸಂಶೋಧಕರು, ಹೂಡಿಕೆದಾರರು ಮತ್ತು ಸರಕಾರಿ ಸಂಸ್ಥೆಗಳನ್ನು ಒಂದೆಡೆ ಸೇರಿಸಿ ಆಹಾರ ನಷ್ಟದ ಸಮಸ್ಯೆಯನ್ನು ಬೃಹತ್ ಮಟ್ಟದಲ್ಲಿ ಪರಿಹರಿಸುವುದು ಇದರ ಆಶಯವಾಗಿದೆ ಎಂದರು.

ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಯ ಸರಕಾರದ ಕಾರ್ಯದರ್ಶಿ ಆರ್.ಗಿರೀಶ್ ಅವರ ಬೆಂಬಲದೊಂದಿಗೆ ಈ ವೇದಿಕೆಯನ್ನು ರೂಪಿಸಲಾಗಿದೆ. ಕರ್ನಾಟಕದ ಕೃಷಿ ಮತ್ತು ತೋಟಗಾರಿಕೆ ಮೌಲ್ಯ ಸರಪಳಿಯಲ್ಲಿ ಆಹಾರ ನಷ್ಟ ಮತ್ತು ಕಟಾವಿನ ನಂತರದ ಅಡಚಣೆಗಳನ್ನು ತಡೆಯಬಲ್ಲ ತಂತ್ರಜ್ಞಾನ ಆಧಾರಿತ ಹಾಗೂ ತಂತ್ರಜ್ಞಾನೇತರ ಪರಿಹಾರಗಳನ್ನು ಗುರುತಿಸಲು ‘ಸಂಪೂರ್ಣ ಗ್ರ್ಯಾಂಡ್ ಚಾಲೆಂಜ್' ಅನ್ನು ವಿನ್ಯಾಸಗೊಳಿಸಲಾಗಿದೆ.

ಉನ್ನತ ಮಟ್ಟದ ಸ್ಟೀರಿಂಗ್ ಸಮಿತಿಯ ಈ ಸಭೆಯಲ್ಲಿ ಭಾರತದಾದ್ಯಂತದ ಆಹಾರ ಮತ್ತು ಪಾನೀಯ, ಅಗ್ರಿಟೆಕ್, ಕೃಷಿ-ವ್ಯಾಪಾರ, ಪರಿಸರ ವಿಜ್ಞಾನ ಮತ್ತು ಲೋಕೋಪಕಾರಿ ಕ್ಷೇತ್ರಗಳ ಹಿರಿಯ ಮಾರುಕಟ್ಟೆ ನಾಯಕರು ಭಾಗವಹಿಸಿದ್ದರು.

ಅ.15ರಿಂದ 18ರ ವರೆಗೆ ಸಮಾರೋಪ

‘ಸಂಪೂರ್ಣ ಗ್ರ್ಯಾಂಡ್ ಚಾಲೆಂಜ್’ ನಾವೀನ್ಯತಾ ವೇದಿಕೆಯು ನೈಜ ಜಗತ್ತಿನಲ್ಲಿ ಹೇಗೆ ಅನುಷ್ಠಾನಗೊಳ್ಳಲಿದೆ ಎಂಬುದರ ಕುರಿತು ಸ್ಟೀರಿಂಗ್ ಸಮಿತಿ ಸಭೆಯಲ್ಲಿ ಚರ್ಚಿಸಲಾಗಿದೆ. ಗ್ರ್ಯಾಂಡ್ ಚಾಲೆಂಜ್ 2026ರ ಸಮಾರೋಪ ಸಮಾರಂಭವು ಅ.15ರಿಂದ 18 ರವರೆಗೆ ಬೆಂಗಳೂರಿನ ಜಿಕೆವಿಕೆ ಕ್ಯಾಂಪಸ್‍ನಲ್ಲಿ ನಡೆಯಲಿರುವ ‘ಕೃಷಿಮೇಳ 2026'ರಲ್ಲಿ ಜರುಗಲಿದೆ. ಇಲ್ಲಿ ಆಯ್ಕೆಯಾದ ಪರಿಹಾರಗಳನ್ನು ಗೌರವಿಸಲಾಗುವುದು ಮತ್ತು ಸರಕಾರಿ, ಮಾರುಕಟ್ಟೆ ಹಾಗೂ ಬಂಡವಾಳ ಕ್ಷೇತ್ರದ ಪ್ರಮುಖರೊಂದಿಗೆ ಸಂಪರ್ಕ ಕಲ್ಪಿಸಲಾಗುತ್ತದೆ.

Tags

Dr. Shalini Rajneesh
share
ವಾರ್ತಾಭಾರತಿ
ವಾರ್ತಾಭಾರತಿ
Next Story
X