Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ‘ಯುವನಿಧಿ’ ಸ್ಥಗಿತಗೊಳಿಸುವ ಪ್ರಶ್ನೆಯೇ...

‘ಯುವನಿಧಿ’ ಸ್ಥಗಿತಗೊಳಿಸುವ ಪ್ರಶ್ನೆಯೇ ಇಲ್ಲ : ಡಾ.ಶರಣ ಪ್ರಕಾಶ್ ಪಾಟೀಲ್

ವಾರ್ತಾಭಾರತಿವಾರ್ತಾಭಾರತಿ17 March 2025 9:10 PM IST
share
‘ಯುವನಿಧಿ’ ಸ್ಥಗಿತಗೊಳಿಸುವ ಪ್ರಶ್ನೆಯೇ ಇಲ್ಲ : ಡಾ.ಶರಣ ಪ್ರಕಾಶ್ ಪಾಟೀಲ್

ಬೆಂಗಳೂರು : ಯುವನಿಧಿ ಯೋಜನೆಯಡಿ ಆರ್ಥಿಕ ಸಹಾಯವನ್ನು ನೀಡಲು ಸರಕಾರ ಬದ್ಧವಾಗಿದೆ. ಯಾವುದೇ ಕಾರಣಕ್ಕೂ ಅದನ್ನು ಸ್ಥಗಿತಗೊಳಿಸುವ ಪ್ರಶ್ನೆಯಿಲ್ಲ ಎಂದು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಸ್ಪಷ್ಟಪಡಿಸಿದ್ದಾರೆ.

ಸೋಮವಾರ ವಿಧಾನ ಪರಿಷತ್‍ನ ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿ ಸದಸ್ಯ ಡಿ.ಎಸ್.ಅರುಣ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ನಮ್ಮ ಸರಕಾರದ ಗ್ಯಾರಂಟಿಗಳಲ್ಲೊಂದಾದ ಯುವನಿಧಿ ಯೋಜನೆಯನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ. ನಾವು ಕೊಟ್ಟ ವಾಗ್ದಾನದಂತೆ ನಡೆದುಕೊಳ್ಳುತ್ತೇವೆ. ಚುನಾವಣೆಗೂ ಮುನ್ನ ಜನತೆಗೆ ಯಾವ ಭರವಸೆ ಕೊಟ್ಟಿದ್ದೇವೋ, ಅವೆಲ್ಲವನ್ನೂ ಈಡೇರಿಸಲು ನಾವು ಬದ್ಧರಾಗಿದ್ದೇವೆ ಎಂದು ವದಂತಿಗಳಿಗೆ ತೆರೆ ಎಳೆದರು.

ಕೆಲವು ತಾಂತ್ರಿಕ ಕಾರಣಗಳಿಂದ ಯುವನಿಧಿ ಯೋಜನೆಯಡಿ ನೀಡಲಾಗುತ್ತಿರುವ ಆರ್ಥಿಕ ನೆರವು ವಿಳಂಬವಾಗಿರಬಹುದು. ಹಾಗೆಂದು ಇದನ್ನು ಸ್ಥಗಿತ ಮಾಡುತ್ತೇವೆಂದು ಯಾರೂ ಭಾವಿಸಬೇಕಾಗಿಲ್ಲ. ಅನುದಾನದ ಕೊರತೆಯೂ ಇಲ್ಲ. ನಿಯಮಗಳ ಅನುಸಾರವಾಗಿ ನೀಡಬೇಕು ಎಂದು ಡಾ.ಶರಣಪ್ರಕಾಶ್ ಪಾಟೀಲ್ ಸ್ಪಷ್ಟಪಡಿಸಿದರು.

ಯುವನಿಧಿ ಯೋಜನೆಯ ಬಗ್ಗೆ ಗ್ರಾಮೀಣ ಪ್ರದೇಶದಲ್ಲಿ ಹೆಚ್ಚಿನ ಪ್ರಚಾರ ಕೈಗೊಳ್ಳಲು ಅಗತ್ಯ ಕ್ರಮ ವಹಿಸಲಾಗುವುದು. ಯುವ ನಿಧಿಯೋಜನೆಯಡಿ 2025ನೇ ಮಾ.10ರ ಅಂತ್ಯಕ್ಕೆ ಒಟ್ಟು 2,62,207 ಅಭ್ಯರ್ಥಿಗಳು ನೋಂದಾಯಿಸಿದ್ದಾರೆ. ಡಿಜಿಟಲ್ ಪರ್ಸನಲ್ ಡಾಟಾ ಪ್ರೊಟೆಕ್ಷನ್ ಆಕ್ಟ್ 2023ರ ಸೆಕ್ಷನ್ 6ರ ಅನ್ವಯ ಸಂಬಂಧಿಸಿದ ಫಲಾನುಭವಿ ದತ್ತಾಂಶವನ್ನು ಅವರ ಒಪ್ಪುಗೆ ಇಲ್ಲದೆ ಮತ್ತೊಬ್ಬರಿಗೆ ಹಂಚಲು ಅವಕಾಶ ಇರುವುದಿಲ್ಲ. ಯುವನಿಧಿ ಯೋಜನೆಯಡಿ ನೋಂದಾಯಿಸಿದ ಫಲಾನುಭವಿಗಳ ವೈಯಕ್ತಿಕ ದತ್ತಾಂಶವನ್ನು/ಪೂರ್ಣ ಮಾಹಿತಿಯುಳ್ಳ ಪಟ್ಟಿಯನ್ನು ಫಲಾನುಭವಿಗಳ ಒಪ್ಪಿಗೆ ಇಲ್ಲದೆ ಮೂರನೇ ವ್ಯಕ್ತಿಗಳಿಗೆ ಒದಗಿಸಲು ಅವಕಾಶ ವಿರುವುದಿಲ್ಲ ಎಂದು ಡಾ.ಶರಣಪ್ರಕಾಶ್ ಪಾಟೀಲ್ ತಿಳಿಸಿದರು.

ಯುವನಿಧಿ ಯೋಜನೆಯ ಪ್ರಯೋಜನ ಪಡೆಯಲು ವಿದ್ಯಾರ್ಥಿಗಳು ಪಾಸಾಗಿ 6 ತಿಂಗಳ (180 ದಿನ) ಒಳಗೆ ನೌಕರಿ ಸಿಗಲಿಲ್ಲ ಎಂದಾಗ ಮಾತ್ರ ಯುವನಿಧಿ ಯೋಜನೆಯಡಿ ಬರುತ್ತಾರೆ. ಕರ್ನಾಟಕ ರಹವಾಸಿಯಾಗಿರುವುದಕ್ಕೆ ದಾಖಲೆ ಪರಿಶೀಲನೆಗೆ ಡಿಡಿಪಿಐ, ಡಿಡಿಪಿಯು ಮತ್ತು ಡಿಇಇಒ ಇವರ ಲಾಗಿನ್‍ಗಳಲ್ಲಿ ಒಟ್ಟು 16,648 ಅರ್ಜಿಗಳು ಭೌತಿಕ ಪರಿಶೀಲನೆ ಬಾಕಿ ಇರುತ್ತವೆ. ಯುವನಿಧಿ ಯೋಜನೆಯಡಿ ಜನವರಿ 2025ರ ಅಂತ್ಯಕ್ಕೆ 1,74,170 ಫಲನುಭವಿಗಳಿಗೆ ನಿರುದ್ಯೋಗ ಭತ್ಯೆಯನ್ನು ನೇರ ನಗದು ವರ್ಗಾವಣೆ ಮೂಲಕ ಪಾವತಿಸಲಾಗಿದೆ ಎಂದು ಡಾ.ಶರಣಪ್ರಕಾಶ್ ಪಾಟೀಲ್ ತಿಳಿಸಿದರು.

ಕೌಶಲ್ಯಾಭಿವೃದ್ಧಿ ತರಬೇತಿ: ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದಿಂದ ಜಿಟಿಟಿಸಿ ಹಾಗೂ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳ ಮುಖೇನ 2065 ಅಭ್ಯರ್ಥಿಗಳಿಗೆ ತರಬೇತಿಯು ಪೂರ್ಣಗೊಂಡಿದ್ದು, 9130 ಅಭ್ಯರ್ಥಿಗಳಿಗೆ ತರಬೇತಿ ನಡೆಯುತ್ತಿರುತ್ತದೆ. ಹಾಗೂ ಐಎಲ್‍ಸಿ ಮತ್ತು ಪ್ಯೂಚರ್ ಸ್ಕಿಲ್ಸ್ ಕಾರ್ಯಕ್ರಮದ ಮುಖೇನ 120 ಅಭ್ಯರ್ಥಿಗಳಿಗೆ ತರಬೇತಿ ಪೂರ್ಣಗೊಂಡಿದ್ದು, 717 ಅಭ್ಯರ್ಥಿಗಳಿಗೆ ತರಬೇತಿ ನಡೆಯುತ್ತಿದೆ. ಉಳಿದಂತೆ ಕಲಿಕೆ ಜೊತೆ ಕೌಶಲ್ಯ ಕಾರ್ಯಕ್ರಮದಡಿ 28,893 ವಿದ್ಯಾರ್ಥಿಗಳಿಗೆ ಕೌಶಲ್ಯಾಧಾರಿತ ತರಬೇತಿಯನ್ನು ನೀಡಲಾಗಿದೆ ಎಂದು ಡಾ.ಶರಣಪ್ರಕಾಶ್ ಪಾಟೀಲ್ ತಿಳಿಸಿದರು.


share
ವಾರ್ತಾಭಾರತಿ
ವಾರ್ತಾಭಾರತಿ
Next Story
X