Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ವಿಶೇಷ ಚೇತನರಿಗಾಗಿ ಸಮಗ್ರ ಕೌಶಲ್ಯ ಮತ್ತು...

ವಿಶೇಷ ಚೇತನರಿಗಾಗಿ ಸಮಗ್ರ ಕೌಶಲ್ಯ ಮತ್ತು ಉದ್ಯೋಗಾವಕಾಶ ಕಲ್ಪಿಸಲು ಬದ್ಧ : ಡಾ.ಶರಣಪ್ರಕಾಶ್ ಪಾಟೀಲ್

ವಾರ್ತಾಭಾರತಿವಾರ್ತಾಭಾರತಿ20 Dec 2025 9:26 PM IST
share
ವಿಶೇಷ ಚೇತನರಿಗಾಗಿ ಸಮಗ್ರ ಕೌಶಲ್ಯ ಮತ್ತು ಉದ್ಯೋಗಾವಕಾಶ ಕಲ್ಪಿಸಲು ಬದ್ಧ : ಡಾ.ಶರಣಪ್ರಕಾಶ್ ಪಾಟೀಲ್

ಬೆಂಗಳೂರು : ವಿಶೇಷ ಚೇತನರ ಬಗ್ಗೆ ಯಾರೂ ಕನಿಷ್ಠ ಭಾವನೆ ಹೊಂದಬೇಕಾಗಿಲ್ಲ. ಅವರಿಗೆ ದೇವರು ವಿಶೇಷವಾದ ಶಕ್ತಿಯನ್ನು ಕೊಟ್ಟಿರುತ್ತಾನೆ. ಹೀಗಾಗಿ ಅವರು ಸಮರ್ಥರು. ಅವರಿಗೆ ಕೌಶಲ್ಯಪೂರ್ಣ ಮತ್ತು ಉತ್ತಮ ಸಮಾಜವನ್ನು ನಿರ್ಮಿಸಲು ರಾಜ್ಯ ಸರಕಾರ ಸದಾ ಬದ್ಧವಾಗಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.

ಶನಿವಾರ ಕೆಎಸ್‍ಡಿಎ, ಕೆಎಸ್‍ಡಿಸಿ ಮತ್ತು ಅಸಿಸ್‍ಟೆಕ್ ಫೌಂಡೇಶನ್ ಜಂಟಿಯಾಗಿ ಬಿಎಂಎಸ್ ಮಹಿಳಾ ಕಾಲೇಜಿನಲ್ಲಿ ವಿಶೇಷ ಚೇತನರಿಗಾಗಿ ಆಯೋಜಿಸಲಾದ "ಜಾಬ್ ಹಬ್ಬ"ವನ್ನು ಉದ್ದೇಶಿಸಿ ಅವರು ಮಾತನಾಡಿದರು.

ಈ ಕಾರ್ಯಕ್ರಮವು ಅಂಗವಿಕಲ ಉದ್ಯೋಗಾಕಾಂಕ್ಷಿಗಳು, ಉದ್ಯೋಗದಾತರು, ತರಬೇತಿ ಪಾಲುದಾರರು ಮತ್ತು ನಾಗರಿಕ ಸಮಾಜವನ್ನು ಒಟ್ಟುಗೂಡಿಸಿದೆ. ನಿಜಕ್ಕೂ ಇದೊಂದು ಅಪರೂಪದ ಕಾರ್ಯಕ್ರಮ. ಒಂದು ರಾಜ್ಯ ಸಮಗ್ರವಾಗಿ ಬೆಳವಣಿಗೆಯಾಗಬೇಕಾದರೆ ಎಲ್ಲರನ್ನು ಒಳಗೊಂಡ ಪ್ರಗತಿ ಮುಖ್ಯ, ಇದಕ್ಕೆ ಸೂಕ್ತ ಆರ್ಥಿಕತೆಯ ಅವಶ್ಯಕತೆಯೂ ಇದೆ ಎಂದು ಶರಣಪ್ರಕಾಶ್ ಪಾಟೀಲ್ ಹೇಳಿದರು.

ಕರ್ನಾಟಕದಲ್ಲಿ 20 ಲಕ್ಷಕ್ಕೂ ಹೆಚ್ಚು ವಿಶೇಷ ಚೇತನರಿದ್ದಾರೆ ಎಂಬ ಮಾಹಿತಿ ಇದೆ. ಇವರಿಗೆ ಶಿಕ್ಷಣ ಮತ್ತು ಉದ್ಯೋಗ ಎರಡರಲ್ಲೂ ಅವಕಾಶಗಳನ್ನು ಒದಗಿಸಲು ನಮ್ಮ ಸರಕಾರವು ಹೊಸ ನೀತಿಯನ್ನು ರೂಪಿಸಿ ಆ ನಿಟ್ಟಿನಲ್ಲಿ ಕೆಲಸ ಮಾಡುತ್ತಿದೆ ಎಂದು ಅವರು ವಿವರಿಸಿದರು.

"ಕಾರ್ಪೊ ರೇಟ್ ಕ್ಷೇತ್ರದಲ್ಲಿ ವಿಶೇಷ ಚೇತನರ ಸಂಖ್ಯೆ ಕಡಿಮೆ ಇದೆ. ಈ ನಿಟ್ಟಿನಲ್ಲಿ ಕೆಲವೊಂದು ಬದಲಾವಣೆ ತರುವ ತುರ್ತು ಅವಶ್ಯಕತೆಯಿದೆ. ವಿಶೇಷ ಚೇತನರಿಗೆ ಖಾಸಗಿ ವಲಯದಲ್ಲಿ ಶೇ.5ರಷ್ಟು ಉದ್ಯೋಗ ಮೀಸಲಾತಿ ಕಲ್ಪಿಸಲು ಸರಕಾರ ಈಗಾಗಲೇ "ಕರ್ನಾಟಕ ಉದ್ಯೋಗ ಮತ್ತು ಶಿಕ್ಷಣದಲ್ಲಿ ವಿಶೇಷ ಚೇತನ ವ್ಯಕ್ತಿಗಳ ಹಕ್ಕುಗಳ ಮಸೂದೆ 2025" ವಿಧೇಯಕವನ್ನು ಜಾರಿಗೆ ತಂದಿದೆ ಎಂದು ಅವರು ಮಾಹಿತಿ ನೀಡಿದರು.

ಇದು ದೇಶದಲ್ಲಿ ಅತ್ಯಂತ ಪರಿಣಾಮಕಾರಿ ಕಾನೂನಾಗಿದೆ. ಇದಲ್ಲದೇ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನೀತಿ 2025–32 ಅನ್ನೂ ನಾವು ರೂಪಿಸಿದ್ದೇವೆ. ಕೌಶಲ್ಯ, ಕೈಗಾರಿಕಾ ಪಾಲುದಾರಿಕೆ, ಮೂಲಸೌಕರ್ಯ ಮತ್ತು ತಂತ್ರಜ್ಞಾನಕ್ಕೆ ಪೂರಕವಾದ ತರಬೇತಿ ನೀಡಲು ನಮ್ಮ ಸರಕಾರ ಮುಂದಾಗಿದೆ ಎಂದು ಶರಣಪ್ರಕಾಶ್ ಪಾಟೀಲ್ ನುಡಿದರು.

ಮುಖ್ಯಮಂತ್ರಿಯವರ ಕೌಶಲ್ಯ ಕರ್ನಾಟಕ ಯೋಜನೆಯು ವಿಶೇಷ ಚೇತನ ವ್ಯಕ್ತಿಗಳಿಗೆ ತರಬೇತಿ ನೀಡಲು ಅವಕಾಶ ಒದಗಿಸಿದೆ. ರಾಜ್ಯದಾದ್ಯಂತ ಹೆಚ್ಚಿನ ಅಭ್ಯರ್ಥಿಗಳು ಕೌಶಲ್ಯ ಮತ್ತು ನಿರ್ದಿಷ್ಟ ತರಬೇತಿ ಪಡೆಯಲು ಅವಕಾಶ ಒದಗಿಸಲು ನಾವು ಬದ್ಧವಾಗಿದ್ದೇವೆ. ಎಐ ತಂತ್ರಜ್ಞಾನ, ವರ್ಚುವಲ್ ಉದ್ಯೋಗ ಅವಕಾಶಗಳನ್ನು ಒದಗಿಸಲು ಅಸಿಸ್‍ಟೆಕ್ ಫೌಂಡೇಶನ್ ಸಹಯೋಗ ಅಗತ್ಯ ಎಂದು ಅವರು ಹೇಳಿದರು.

ಈ ರೀತಿಯ ನೇಮಕಾತಿಯು "ಸ್ಮಾರ್ಟ್ ಎಕನಾಮಿಕ್ಸ್ ಆಗಿದೆ ಹೊರತು ಚಾರಿಟಿ ರೀತಿಯಲ್ಲ. ಉದ್ಯೋಗದಾತರು ವೈವಿಧ್ಯತೆ, ನಾವೀನ್ಯತೆಗೆ ಹೆಚ್ಚು ಆದ್ಯತೆ ನೀಡಬೇಕು. ಈ ಜಾಬ್ ಹಬ್ಬದ ಮೂಲಕ ಕರ್ನಾಟಕದಿಂದ ಕೆಲವು ಯಶಸ್ವಿ ಕಥೆಗಳು ಹೊರಹೊಮ್ಮಲಿ. ಈ ನಿಟ್ಟಿನಲ್ಲಿ ಈ ವೇದಿಕೆ ಮುನ್ನಡೆಯಲಿ ಎಂದು ಶರಣ ಪ್ರಕಾಶ್ ಪಾಟೀಲ್ ಶುಭ ಕೋರಿದರು.

ಕಾರ್ಯಕ್ರಮದಲ್ಲಿ ಕೌಶಲ್ಯಾಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಎನ್.ಎಂ. ನಾಗರಾಜ, ಅಸಿಸ್‍ಟೆಕ್ ಸಹ ಸಂಸ್ಥಾಪಕ ಪ್ರತೀಕ್, ಭಾರತ ಅಂಧರ ಕ್ರಿಕೆಟ್ ತಂಡದ ನಾಯಕ ಶೇಖರ್ ನಾಯ್ಕ್, ಬಿಎಂಎಸ್ ಮಹಿಳಾ ಕಾಲೇಜಿನ ಪ್ರಾಂಶುಪಾಲ ಡಾ.ಎನ್.ರಘುಕುಮಾರ್ ಉಪಸ್ಥಿತರಿದ್ದರು.


share
ವಾರ್ತಾಭಾರತಿ
ವಾರ್ತಾಭಾರತಿ
Next Story
X