Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಮೈಸೂರಿನ ವೈದ್ಯಕೀಯ ಕಾಲೇಜು ಅಡಿಯಲ್ಲಿನ...

ಮೈಸೂರಿನ ವೈದ್ಯಕೀಯ ಕಾಲೇಜು ಅಡಿಯಲ್ಲಿನ ಆಸ್ಪತ್ರೆಗಳಲ್ಲಿ ಐಸಿಯು ಹಾಸಿಗೆ ಸಾಮರ್ಥ್ಯ ಹೆಚ್ಚಿಸಲು ಕ್ರಮ : ಡಾ.ಶರಣಪ್ರಕಾಶ್ ಪಾಟೀಲ್

ವಾರ್ತಾಭಾರತಿವಾರ್ತಾಭಾರತಿ9 March 2026 11:05 PM IST
share
ಮೈಸೂರಿನ ವೈದ್ಯಕೀಯ ಕಾಲೇಜು ಅಡಿಯಲ್ಲಿನ ಆಸ್ಪತ್ರೆಗಳಲ್ಲಿ ಐಸಿಯು ಹಾಸಿಗೆ ಸಾಮರ್ಥ್ಯ ಹೆಚ್ಚಿಸಲು ಕ್ರಮ : ಡಾ.ಶರಣಪ್ರಕಾಶ್ ಪಾಟೀಲ್

ಬೆಂಗಳೂರು : ಮೈಸೂರಿನ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ಅಡಿಯಲ್ಲಿ ಬರುವ ಆಸ್ಪತ್ರೆಗಳಲ್ಲಿ ಐಸಿಯು ಹಾಸಿಗೆ ಸಾಮರ್ಥ್ಯ ವನ್ನು ಹೆಚ್ಚಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.

ಸೋಮವಾರ ಪರಿಷತ್ತಿನ ಪ್ರಶ್ನೋತ್ತರ ವೇಳೆಯಲ್ಲಿ ಕಾಂಗ್ರೆಸ್ ಸದಸ್ಯ ಶಿವಕುಮಾರ್ ಕೆ. ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ವ್ಯಾಪ್ತಿಯಲ್ಲಿ ಬರುವ ಆಸ್ಪತ್ರೆಗಳ ಮೂಲಸೌಕರ್ಯ ಬಲವರ್ಧನೆ, ಸಿಬ್ಬಂದಿ ನೇಮಕಾತಿ ಮತ್ತು ಹೊಸ ಕಟ್ಟಡ ನಿರ್ಮಾಣ ಕಾರ್ಯಗಳಿಗೆ ಸರಕಾರವು ಹೆಚ್ಚಿನ ಒತ್ತು ನೀಡಿದ್ದು, ಎಂಎಂಸಿಆರ್ ಅಡಿಯಲ್ಲಿ ಒಟ್ಟು 37 ವಿಭಾಗಗಳು ಕಾರ್ಯನಿರ್ವಹಿಸುತ್ತಿವೆ. ಎಂಎಂಸಿಆರ್‍ಐ ಕಾಲೇಜು 8, ಕೆ.ಆರ್. ಆಸ್ಪತ್ರೆ 10, ಚೆಲುವಾಂಬ ಆಸ್ಪತ್ರೆ 3, ಪಿಕೆಟಿಬಿ ಮತ್ತು ಸಿಡಿ ಆಸ್ಪತ್ರೆ 2 ವಿಭಾಗಗಳು, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ 12 ವಿಭಾಗಗಳು, ಟ್ರಾ ಮಾ ಕೇರ್ ಸೆಂಟರ್ 2 ವಿಭಾಗಗಳು ಕಾರ್ಯನಿರ್ವಹಿಸುತ್ತಿವೆ ಎಂದರು.

ಸಂಸ್ಥೆಯಲ್ಲಿ ಒಟ್ಟು 445 ಮಂಜೂರಾದ ಹುದ್ದೆಗಳಿದ್ದು, ಅದರಲ್ಲಿ 328 ಹುದ್ದೆ ಗಳು ಭರ್ತಿಯಾಗಿವೆ. ಖಾಯಂ ವೈದ್ಯರು- 229, ಗುತ್ತಿಗೆ ಆಧಾರಿತ ವೈದ್ಯರು- 84 ಮತ್ತು ಒಂದು ವರ್ಷದ ಕಡ್ಡಾಯ ಸೇವೆ- 15, ಖಾಲಿ ಹುದ್ದೆಗಳು 117 ಇವೆ ಎಂದು ಶರಣಪ್ರಕಾಶ್ ಪಾಟೀಲ್ ತಿಳಿಸಿದರು.

ಸಂಸ್ಥೆಯ ವಿವಿಧ ಆಸ್ಪತ್ರೆಗಳಲ್ಲಿ ಒಟ್ಟು 2,150 ಹಾಸಿಗೆಗಳು ಲಭ್ಯವಿದ್ದು, ದೈನಂದಿನ ಒಳರೋಗಿ(ಐಪಿಡಿ) ಮತ್ತು ಹೊರರೋಗಿ(ಒಪಿಡಿ) ಸೇವೆಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸಲಾಗುತ್ತಿದೆ. ವೈದ್ಯರು ಮತ್ತು ಹಾಸಿಗೆಗಳ ಸಂಖ್ಯೆಯು ಸದ್ಯದ ರೋಗಿಗಳ ಸಂಖ್ಯೆಗೆ ಅನುಗುಣವಾಗಿ ಸಮರ್ಪಕವಾಗಿದೆ. ಮೈಸೂರು ವೈದ್ಯಕೀಯ ಕಾಲೇಜಿನ ಶತಮಾನೋತ್ಸವದ ನೆನಪಿಗಾಗಿ ಸರಕಾರವು ವಿಶೇಷ ಯೋಜನೆಗಳನ್ನು ಕೈಗೆತ್ತಿಕೊಂಡಿದ್ದು, ಕೆ.ಆರ್.ಆಸ್ಪತ್ರೆ ಆವರಣದಲ್ಲಿ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಹೆಸರಿನಲ್ಲಿ ಸುಸಜ್ಜಿತ ಹೊಸ ಹೊರರೋಗಿ ಕಟ್ಟಡ ನಿರ್ಮಾಣಕ್ಕೆ 75 ಕೋಟಿ ರೂ. ಅನುದಾನ ಮೀಸಲಿಡಲಾಗಿದೆ. ಈ ಕಾಮಗಾರಿಗೆ 12.07.2024ರಂದು ಆಡಳಿತಾತ್ಮಕ ಅನುಮೋದನೆ ದೊರೆತಿದೆ ಎಂದು ಶರಣಪ್ರಕಾಶ್ ಪಾಟೀಲ್ ಹೇಳಿದರು.

ಇದಕ್ಕೂ ಮೊದಲು ಮಾತನಾಡಿದ ಸದಸ್ಯ ಶಿವಕುಮಾರ್ ಕೆ, ಡಯಾಲಿಸಿಸ್ ಸೌಲಭ್ಯ ಸರಿಯಾಗಿ ಸಿಗುತ್ತಿಲ್ಲ. ಚಲುವಾಂಬ ಆಸ್ಪತ್ರೆಯಲ್ಲಿ ಒಂದು ಹಾಸಿಗೆಯಲ್ಲೇ ಎರಡ್ಮೂರು ಮಕ್ಕಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಶಿಶುಮರಣ ದರವು ರಾಷ್ಟ್ರೀಯ ಸರಾಸರಿಗಿಂತ ಹೆಚ್ಚಿಗೆ ಇದೆ. ವೈದ್ಯಕೀಯ ಸೌಲಭ್ಯಗಳನ್ನು ಉತ್ತಮಪಡಿಸಬೇಕು ಎಂದು ಆಗ್ರಹಿಸಿದರು.


Tags

Dr. Sharanaprakash Patil
share
ವಾರ್ತಾಭಾರತಿ
ವಾರ್ತಾಭಾರತಿ
Next Story
X