Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಗ್ರಾಮೀಣ ಭಾಗದಲ್ಲಿ ವೈದ್ಯರ ಕೊರತೆ...

ಗ್ರಾಮೀಣ ಭಾಗದಲ್ಲಿ ವೈದ್ಯರ ಕೊರತೆ ನೀಗಿಸಲು ತಂತ್ರಜ್ಞಾನ ಆಧಾರಿತ ಆರೋಗ್ಯ ಸೇವೆ ಅಗತ್ಯ: ಡಾ.ಶರಣಪ್ರಕಾಶ್ ಪಾಟೀಲ್

ವಾರ್ತಾಭಾರತಿವಾರ್ತಾಭಾರತಿ25 July 2026 6:46 PM IST
share
ಗ್ರಾಮೀಣ ಭಾಗದಲ್ಲಿ ವೈದ್ಯರ ಕೊರತೆ ನೀಗಿಸಲು ತಂತ್ರಜ್ಞಾನ ಆಧಾರಿತ ಆರೋಗ್ಯ ಸೇವೆ ಅಗತ್ಯ: ಡಾ.ಶರಣಪ್ರಕಾಶ್ ಪಾಟೀಲ್

ಬೆಂಗಳೂರು : ರಾಜ್ಯದಲ್ಲಿ ಪ್ರತಿವರ್ಷ ಸುಮಾರು 14,900 ವೈದ್ಯರು ಪದವಿ ಪಡೆದರೂ ಗ್ರಾಮೀಣ ಪ್ರದೇಶಗಳಲ್ಲಿ ವೈದ್ಯರ ಕೊರತೆಯಿದ್ದು, ಇದು ನಮ್ಮ ಮುಂದಿನ ಗಂಭೀರ ಸವಾಲು. ಕೃತಕ ಬುದ್ಧಿಮತ್ತೆ, ಟೆಲಿಮೆಡಿಸಿನ್ ಹಾಗೂ ಡಿಜಿಟಲ್ ಆರೋಗ್ಯ ಸೇವೆಗಳಂತಹ ತಂತ್ರಜ್ಞಾನ ಆಧಾರಿತ ಪರಿಹಾರಗಳು ಇಂದಿನ ಅಗತ್ಯ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಹೇಳಿದ್ದಾರೆ.

ಶನಿವಾರ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿವಿಯಿಂದ ಆಯೋಜಿಸಿದ್ದ ‘ವೈದ್ಯಕೀಯ ಶಿಕ್ಷಣದ ಭವಿಷ್ಯಕ್ಕಾಗಿ ಕೃತಕ ಬುದ್ಧಿಮತ್ತೆ ಮತ್ತು ದತ್ತಾಂಶ’ ವಿಷಯದ ವಿಶೇಷ ಶೈಕ್ಷಣಿಕ ಸಂವಾದ-ಸಭೆಯಲ್ಲಿ ಮಾತನಾಡಿದ ಅವರು, ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ವ್ಯವಸ್ಥೆಯ ಅಗತ್ಯಗಳಿಗೆ ಹೊಂದುವಂತೆ ರಾಜ್ಯಕ್ಕೆ ವಿಶೇಷವಾದ ಕೃತಕ ಬುದ್ಧಿಮತ್ತೆ ಮಾದರಿಯನ್ನು ಅಭಿವೃದ್ಧಿಪಡಿಸಬೇಕಿದೆ. ವೈದ್ಯಕೀಯ ಶಿಕ್ಷಣದಲ್ಲಿ ಎಐ ಅಳವಡಿಕೆಗೆ ಸ್ಪಷ್ಟ ಹಾಗೂ ಸಮಗ್ರ ಕಾರ್ಯತಂತ್ರ ರೂಪಿಸುವುದು ಕಾಲದ ಅಗತ್ಯವಾಗಿದೆ ಎಂದು ಹೇಳಿದರು.

ಕೃತಕ ಬುದ್ಧಿಮತ್ತೆಯನ್ನು ಸಮರ್ಪಕವಾಗಿ ಅಳವಡಿಸಿಕೊಂಡರೆ ವೈದ್ಯಕೀಯ ಶಿಕ್ಷಣದಲ್ಲಿ ಉತ್ಪಾದಕತೆ ಹೆಚ್ಚುವುದರ ಜೊತೆಗೆ ಬೋಧನೆ, ಕಲಿಕೆ, ಸಂಶೋಧನೆ ಹಾಗೂ ಆರೋಗ್ಯ ಸೇವೆಗಳ ಗುಣಮಟ್ಟ ಸುಧಾರಿಸಬಹುದು. ಭವಿಷ್ಯದ ವೈದ್ಯಕೀಯ ವೃತ್ತಿಪರರು ತಂತ್ರಜ್ಞಾನ ಆಧಾರಿತ ಆರೋಗ್ಯ ವ್ಯವಸ್ಥೆಯಲ್ಲಿ ಸಮರ್ಥವಾಗಿ ಕಾರ್ಯನಿರ್ವಹಿಸಲು ಪರಿಕರಗಳ ಬಳಕೆಯಲ್ಲಿ ಪರಿಣತಿ ಹೊಂದುವುದು ಅಷ್ಟೇ ಮುಖ್ಯ. ಈ ನಿಟ್ಟಿನಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿವಿ ಸೂಕ್ತ ಮಾರ್ಗಸೂಚಿಗಳನ್ನು ಸಿದ್ಧಗೊಳಿಸಬೇಕು ಎಂದು ಅವರು ಸಲಹೆ ನೀಡಿದರು.

ಆರೋಗ್ಯ ವಿವಿ ಕುಲಪತಿ ಡಾ.ಬಿ.ಸಿ.ಭಗವಾನ್ ಮಾತನಾಡಿ, ವೈದ್ಯಕೀಯ ಶಿಕ್ಷಣದಲ್ಲಿ ಸಮರ್ಥ ಮತ್ತು ಪರಿಣಾಮಕಾರಿಯಾಗಿ ಕೃತಕ ಬುದ್ಧಿಮತ್ತೆಯನ್ನು ಬಳಸಿಕೊಳ್ಳುವ ಮೂಲಕ ಎಐ ಕ್ರಾಂತಿಗೆ ವಿವಿ ಬದ್ಧ. ವಿವಿಯ ಶೈಕ್ಷಣಿಕ ಹಾಗೂ ಸಂಶೋಧನಾ ಚಟುವಟಿಕೆಗಳಲ್ಲಿ ಈಗಾಗಲೇ ಎಐ ಅಳವಡಿಸಿಕೊಳ್ಳಲಾಗಿದ್ದು, ಅದರ ಆರಂಭಿಕ ಫಲಿತಾಂಶಗಳು ಆಶಾದಾಯಕವಾಗಿವೆ ಎಂದರು.

ಮುಂದಿನ ದಿನಗಳಲ್ಲಿ ಶೈಕ್ಷಣಿಕ ಚಟುವಟಿಕೆಗಳು, ಸಂಶೋಧನೆ, ಕ್ಲಿನಿಕಲ್ ತರಬೇತಿ, ಮೌಲ್ಯಮಾಪನ ಮತ್ತು ವಿಶ್ವವಿದ್ಯಾಲಯದ ಆಡಳಿತ ವ್ಯವಸ್ಥೆಯ ಎಲ್ಲ ಹಂತಗಳಲ್ಲಿಯೂ ಎಐ ಅನ್ನು ಸಮಗ್ರವಾಗಿ ಅಳವಡಿಸಲಾಗುವುದು. ನವೋದ್ಯಮ ಹಾಗೂ ಜಾಗತಿಕ ಸಹಭಾಗಿತ್ವದ ಮೂಲಕ ಆರೋಗ್ಯ ವಿಜ್ಞಾನ ಶಿಕ್ಷಣದಲ್ಲಿ ಗುಣಾತ್ಮಕ ಪರಿವರ್ತನೆ ತಂದು, ಕಾರ್ಯಕ್ಷಮತೆ ಹಾಗೂ ರೋಗಿಕೇಂದ್ರಿತ ಆರೋಗ್ಯ ವ್ಯವಸ್ಥೆಯನ್ನು ಸುಧಾರಿಸಲಾಗುವುದು ಎಂದು ಹೇಳಿದರು.

Tags

Dr. Sharanaprakash Patil
share
ವಾರ್ತಾಭಾರತಿ
ವಾರ್ತಾಭಾರತಿ
Next Story
X