Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ರಾಜ್ಯದ ಎಲ್ಲ ಎಸ್.ಟಿ.ಪಿ ಘಟಕಗಳ...

ರಾಜ್ಯದ ಎಲ್ಲ ಎಸ್.ಟಿ.ಪಿ ಘಟಕಗಳ ಸಮೀಕ್ಷೆಗೆ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಸೂಚನೆ

ವಾರ್ತಾಭಾರತಿವಾರ್ತಾಭಾರತಿ24 July 2026 6:52 PM IST
share
ರಾಜ್ಯದ ಎಲ್ಲ ಎಸ್.ಟಿ.ಪಿ ಘಟಕಗಳ ಸಮೀಕ್ಷೆಗೆ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಸೂಚನೆ

ಬೆಂಗಳೂರು : ರಾಜ್ಯದಲ್ಲಿರುವ ಎಲ್ಲ ಚರಂಡಿ ಹಾಗೂ ತ್ಯಾಜ್ಯ ನೀರು ಸಂಸ್ಕರಣಾ ಘಟಕ(ಎಸ್.ಟಿ.ಪಿ)ಗಳನ್ನು ಸರಿಯಾಗಿ ಸಮೀಕ್ಷೆ ಮಾಡಿ, ಆಯಾ ಪ್ರದೇಶದ ಸಾಮಥ್ರ್ಯಕ್ಕೆ ಅನುಗುಣವಾಗಿ ಸೂಕ್ತವಾದ ಸುಧಾರಿತ ತಂತ್ರಜ್ಞಾನವನ್ನು ಬಳಕೆ ಮಾಡಿಕೊಳ್ಳಬೇಕು ಎಂದು ನಗರ ನೀರು ಸರಬರಾಜು ಮಂಡಳಿಯ ಅಧಿಕಾರಿಗಳಿಗೆ ನಗರಾಭಿವೃದ್ಧಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಸೂಚನೆ ನೀಡಿದರು.

ಶುಕ್ರವಾರ ನಗರದಲ್ಲಿರುವ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ಮಂಡಳಿಯ ಯೋಜನೆಗಳ ಪ್ರಗತಿ ಹಾಗೂ ಆಡಳಿತಾತ್ಮಕ ಸುಧಾರಣೆಗಳಿಗೆ ಹಲವು ಪ್ರಮುಖ ನಿರ್ದೇಶನಗಳನ್ನು ನೀಡಿದರು.

ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿ, ನಿಗದಿತ ಗುರಿ ಸಾಧಿಸಬೇಕು. ಕಾಮಗಾರಿ ವಿಳಂಬವಾಗುತ್ತಿರುವ ಸ್ಥಳಗಳನ್ನು ಗುರುತಿಸಿ ಗುತ್ತಿಗೆದಾರರೊಂದಿಗೆ ಚರ್ಚಿಸಿ ಪರಿಹಾರ ಕಂಡುಕೊಳ್ಳಬೇಕು. ಸಕಾರಣವಿಲ್ಲದೆ ಅನಗತ್ಯವಾಗಿ ಹಣ ಬಿಡುಗಡೆ ಮಾಡುವುದನ್ನು ತಡೆಯಬೇಕು. ಗುತ್ತಿಗೆದಾರ ಏಜೆನ್ಸಿಗೆ ಅನುದಾನ ಬಿಡುಗಡೆ ಮಾಡಲು ವಿಶ್ವಬ್ಯಾಂಕ್ ಅನುಸರಿಸುವ ಮಾದರಿಯನ್ನು ಅನುಸರಿಸಿ, ಸೂಕ್ತ ‘ಪಾಲಿಸಿ ಫ್ರೇಮ್‍ವರ್ಕ್' ರೂಪಿಸಬೇಕು ಎಂದು ಅವರು ಹೇಳಿದರು.

ಸ್ಥಳೀಯ ಸಂಸ್ಥೆಗಳು ಯೋಜನೆಗಳ ಸೂಕ್ತ ನಿರ್ವಹಣೆ ಮಾಡದಿರುವುದು ಹಾಗೂ ಬಾಕಿ ಹಣ ಪಾವತಿಸದಿರುವುದನ್ನು ಗಮನಿಸಿದ ಸಚಿವರು, ಮಂಡಳಿಯೇ ಪ್ರತ್ಯೇಕ ಪಾಲಿಸಿ ರೂಪಿಸಿ ಆದಾಯ ತರಬಲ್ಲ ವ್ಯವಸ್ಥೆ ಮಾಡಿಕೊಳ್ಳಬೇಕು. ನೀರು ಪೋಲಾಗುವುದು ಮತ್ತು ಸಿಬ್ಬಂದಿ ದುರುಪಯೋಗ ತಡೆಯಲು ‘ಸ್ಮಾರ್ಟ್ ಮೀಟರ್' ಅಳವಡಿಸಲು ಸಲಹೆ ನೀಡಿದರು.

ಆರಂಭದಲ್ಲಿ ಇದನ್ನು ‘ಪೈಲಟ್ ಪ್ರಾಜೆಕ್ಟ್' ಆಗಿ ಜಾರಿಗೆ ತಂದು, ಮಂಡಳಿಯೇ ನಿರ್ವಹಿಸುವ ಮೂಲಕ ಆದಾಯ ಹೆಚ್ಚಿಸಿಕೊಳ್ಳುವ ಮಾದರಿಯನ್ನು ಪರಿಶೀಲಿಸಬೇಕು. ಯೋಜನಾ ವರದಿ ತಯಾರಿಸುವಾಗ ಹಾಗೂ ಎಸ್.ಟಿ.ಪಿ. ನಿರ್ಮಾಣಕ್ಕೆ ಜಾಗ ಕಾಯ್ದಿರಿಸುವಾಗ ಸ್ಥಳೀಯ ಸಂಸ್ಥೆಗಳೊಂದಿಗೆ ಪೂರ್ಣ ಪ್ರಮಾಣದಲ್ಲಿ ಚರ್ಚಿಸಬೇಕು. ಒಮ್ಮೆ ಜಾಗ ಅಂತಿಮಗೊಂಡ ಮೇಲೆ ಪದೇ ಪದೇ ಬದಲಾಯಿಸುವುದನ್ನು ತಡೆದು, ತಾಂತ್ರಿಕ ತಂಡ ಪೂರ್ಣ ಜವಾಬ್ದಾರಿಯಿಂದ ಕೆಲಸ ಮಾಡಬೇಕು ಯತೀಂದ್ರ ಸಿದ್ದರಾಮಯ್ಯ ಸೂಚಿಸಿದರು.

ಗ್ರೇಟರ್ ಬೆಂಗಳೂರು ವ್ಯಾಪ್ತಿಯನ್ನು ಹೊರತುಪಡಿಸಿ, ರಾಜ್ಯದ ಇತರ ನಗರ ಪ್ರದೇಶಗಳಲ್ಲಿ ನೀರು ಸರಬರಾಜು ಮತ್ತು ಒಳಚರಂಡಿ ಸೌಕರ್ಯ ಒದಗಿಸುವ ಜವಾಬ್ದಾರಿಯನ್ನು ಮಂಡಳಿ ಹೊಂದಿದೆ. ರಾಜ್ಯದಲ್ಲಿ ಈವರೆಗೆ 256 ನಗರ ಪ್ರದೇಶಗಳಿಗೆ ಶಾಶ್ವತ ಮೇಲ್ಮೈ ಮೂಲಗಳಿಂದ ಸುರಕ್ಷಿತ ಕುಡಿಯುವ ನೀರು ಕಲ್ಪಿಸಲಾಗಿದ್ದು, ಉಳಿದ 60 ಪಟ್ಟಣಗಳಿಗೆ ಅಂತರ್ಜಲ ಮೂಲದಿಂದ ನೀರು ಪೂರೈಸಲಾಗುತ್ತಿದೆ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

ಮಾರ್ಚ್ 2026ರವರೆಗಿನ ಸಾಧನೆ: ಮಂಡಳಿಯಿಂದ ಇದುವರೆಗೆ 649 ನೀರು ಸರಬರಾಜು ಯೋಜನೆಗಳು ಹಾಗೂ 181 ಒಳಚರಂಡಿ ಯೋಜನೆಗಳನ್ನು ಅನುμÁ್ಠನಗೊಳಿಸಲಾಗಿದೆ.ಒಟ್ಟು 16,887.84 ಕೋಟಿ ರೂ. ವೆಚ್ಚ ಮಾಡಲಾಗಿದ್ದು, ಇದರಲ್ಲಿ ಕುಡಿಯುವ ನೀರಿಗೆ 11,531.91 ಕೋಟಿ ರೂ. ಹಾಗೂ ಒಳಚರಂಡಿ ಯೋಜನೆಗಳಿಗೆ 5,355.93 ಕೋಟಿ ರೂ.ವಿನಿಯೋಗಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದರು.

2026-27ನೇ ಸಾಲಿನ ಆಯವ್ಯಯ ಹಾಗೂ ಯೋಜನೆಗಳು: 2026-27ನೆ ಸಾಲಿನ ಬಜೆಟ್‍ನಲ್ಲಿ ರಾಜ್ಯ ಯೋಜನೆಯಡಿ 700 ಕೋಟಿ ರೂ. ಅನುದಾನ ಹಂಚಿಕೆ ಮಾಡಲಾಗಿದೆ. ಕಲಬುರಗಿ ನಗರಕ್ಕೆ 24/7 ಶಾಶ್ವತ ಕುಡಿಯುವ ನೀರು ಪೂರೈಸಲು 1,863 ಕೋಟಿ ರೂ.ವೆಚ್ಚದ ಡಿಪಿಆರ್‍ಗೆ ತಾತ್ವಿಕ ಅನುಮೋದನೆ ದೊರೆತಿದೆ. ಮೈಸೂರು ನಗರಕ್ಕೆ ಕಾವೇರಿ ನದಿಯಿಂದ (ಉಂಡವಾಡಿ) ಸಗಟು ನೀರು ಸರಬರಾಜು ಯೋಜನೆ (ಅಂದಾಜು ವೆಚ್ಚ 595 ಕೋಟಿ ರೂ.) ಸೇರಿದಂತೆ ಹಲವು ಬೃಹತ್ ಯೋಜನೆಗಳ ಕಾಮಗಾರಿ ಚಾಲ್ತಿಯಲ್ಲಿದೆ ಎಂದು ಅಧಿಕಾರಿಗಳು ವಿವರಿಸಿದರು.

ಅಮೃತ್ 2.0 ಯೋಜನೆ: ಅಮೃತ್ 2.0 ಯೋಜನೆಯಡಿ ಒಟ್ಟು 227 ನೀರು ಸರಬರಾಜು ಯೋಜನೆಗಳನ್ನು (9,590 ಕೋಟಿ ರೂ.) ಹಮ್ಮಿಕೊಳ್ಳಲಾಗಿದೆ. ಒಟ್ಟು 215 ಯೋಜನೆಗಳಿಗೆ ಗುತ್ತಿಗೆ ವಹಿಸಲಾಗಿದ್ದು, ಕಾಮಗಾರಿಗಳು ವಿವಿಧ ಹಂತಗಳಲ್ಲಿ ಪ್ರಗತಿಯಲ್ಲಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಸಭೆಯಲ್ಲಿ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಅಧ್ಯಕ್ಷೆ ಶಿವಲೀಲಾ ವಿನಯ್ ಕುಲಕರ್ಣಿ, ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ಬಿ.ಬಿ.ಕಾವೇರಿ, ಮಂಡಳಿಯ ವ್ಯವಸ್ಥಾಪಕ ನಿರ್ದೇಶಕ ಡಾ.ಮಹೇಶ್ ಮತ್ತಿತರರು ಉಪಸ್ಥಿತರಿದ್ದರು.

Tags

Dr. Yathindra Siddaramaiah
share
ವಾರ್ತಾಭಾರತಿ
ವಾರ್ತಾಭಾರತಿ
Next Story
X