Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಎನ್‍ಆರ್‌ಐ ಒಕ್ಕಲಿಗ ವೇದಿಕೆ ಸೃಷ್ಟಿಸುವ...

ಎನ್‍ಆರ್‌ಐ ಒಕ್ಕಲಿಗ ವೇದಿಕೆ ಸೃಷ್ಟಿಸುವ ಅಗತ್ಯವಿದೆ : ಡಾ.ಆರತಿ ಕೃಷ್ಣ

ವಾರ್ತಾಭಾರತಿವಾರ್ತಾಭಾರತಿ4 Jan 2025 9:56 PM IST
share
ಎನ್‍ಆರ್‌ಐ ಒಕ್ಕಲಿಗ ವೇದಿಕೆ ಸೃಷ್ಟಿಸುವ ಅಗತ್ಯವಿದೆ : ಡಾ.ಆರತಿ ಕೃಷ್ಣ

ಬೆಂಗಳೂರು : ವಿಶ್ವದಾದ್ಯಂತ ಒಕ್ಕಲಿಗ ಸಮುದಾಯವನ್ನು ಸಂಪರ್ಕಿಸುವ ಮತ್ತು ಬೆಂಬಲಿಸುವಂತಹ ಎನ್‍ಆರ್‌ಐ ಒಕ್ಕಲಿಗ ವೇದಿಕೆಯನ್ನು ನಿರ್ಮಿಸುವ ಅಗತ್ಯವಿದೆ ಎಂದು ಅನಿವಾಸಿ ಭಾರತೀಯ ಸಮಿತಿ-ಕರ್ನಾಟಕದ ಉಪಾಧ್ಯಕ್ಷ ಡಾ.ಆರತಿ ಕೃಷ್ಣ ಸಲಹೆ ನೀಡಿದ್ದಾರೆ.

ಶನಿವಾರ ನಗರದ ಅರಮನೆ ಮೈದಾನದಲ್ಲಿ ನಡೆದ ಉದ್ಯಮಿ ಒಕ್ಕಲಿಗ ಎಕ್ಸ್‌ ಪೋನಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ವಿದೇಶದಲ್ಲಿ ನೆಲೆಸಿರುವ ಒಕ್ಕಲಿಗ ಸಮುದಾಯಗಳಿಗೆ ಮೀಸಲಾದ ಸೆಲ್ ಅನ್ನು ರಚಿಸಬೇಕು. ಈ ಉಪಕ್ರಮವು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುವುದರ ಜೊತೆಗೆ ಭಾರತದ ಹೊರಗಿರುವ ಒಕ್ಕಲಿಗರ ನಿಖರ ಸಂಖ್ಯೆಯನ್ನು ಅರ್ಥಮಾಡಿಕೊಳ್ಳಲು ಸಹಾಯ ಮಾಡಲಿದೆ. ಇದು ಅನಿವಾಸಿ ಒಕ್ಕಲಿಗರನ್ನು ಸಂಪರ್ಕಿಸಲು, ಅಗತ್ಯ ಸಲಹೆಗಳನ್ನು ನೀಡಲು ಮತ್ತು ಮಾಹಿತಿ ಕಲೆ ಹಾಕಲು ಸಂಪನ್ಮೂಲವಾಗಿ ಕಾರ್ಯನಿರ್ವಹಿಸುತ್ತದೆ ಎಂದರು.

ಈ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯರ ಅಧಿಕಾರಾವಧಿಯಲ್ಲಿ ಎನ್‍ಆರ್‌ಐ ಫೋರಂನ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ ಡಾ.ಆರತಿ ಕೃಷ್ಣ ಅವರು ಪ್ರಸ್ತುತ ಸರಕಾರದಲ್ಲಿ ಮರುನೇಮಕಗೊಂಡಿದ್ದಾರೆ. ವಾಷಿಂಗ್ಟನ್ ಡಿಸಿಯ ಭಾರತೀಯ ರಾಯಭಾರ ಕಚೇರಿಯಲ್ಲಿ ಸಮುದಾಯ ಅಭಿವೃದ್ಧಿ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ ಮತ್ತು ಭಾರತೀಯ ವ್ಯವಹಾರಗಳ ಸಚಿವಾಲಯದ ಅಡಿಯಲ್ಲಿ ಇಂಡಿಯಾ ಡೆವಲಪ್‍ಮೆಂಟ್ ಫೌಂಡೇಶನ್‍ನೊಂದಿಗೆ ಸಲಹೆಗಾರರಾಗಿ ಕೆಲಸ ಮಾಡಿರುವ ಅವರು ತಮ್ಮ ಅನುಭವಗಳನ್ನು ಹಂಚಿಕೊಂಡರು. ಇದರ ಜೊತೆಗೆ ಕರ್ನಾಟಕದ ಹಳ್ಳಿಗಳಲ್ಲಿ ಶೈಕ್ಷಣಿಕ, ಸಾಮಾಜಿಕ ಮತ್ತು ಆರ್ಥಿಕ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಕೃಷ್ಣ ಫೌಂಡೇಶನ್ ಎಂಬ ಎನ್‍ಜಿಒ ಸ್ಥಾಪಿಸಿರುವುದಾಗಿ ತಿಳಿಸಿದರು.

ಪ್ರಸ್ತುತ ಉದ್ಯಮಿ ಒಕ್ಕಲಿಗ ಎಕ್ಸ್‌ಪೋದಲ್ಲಿ ಪಾಲ್ಗೊಂಡು ಅದರ ಉಪಕ್ರಮಗಳ ಕುರಿತಾಗಿ ಚರ್ಚಿಸಿದ ಡಾ.ಆರತಿ ಕೃಷ್ಣ ಅವರು, ಸಿದ್ದರಾಮಯ್ಯ ಸರಕಾರದ ಅಡಿಯಲ್ಲಿ ಎನ್‍ಆರ್‌ಐ ಸಮಿತಿಯನ್ನು ಪುನಃ ಸಕ್ರಿಯಗೊಳಿಸಲಾಗಿದೆ. ಈ ನಿಟ್ಟಿನಲ್ಲಿ ಎನ್‍ಆರ್‌ಐ ಕನ್ನಡಿಗರ ಅಗತ್ಯತೆಯನ್ನು ಪರಿಹರಿಸಲು ಶಾಶ್ವತವಾದ ಮೀಸಲಾದ ಸಚಿವಾಲಯವನ್ನು ಸೃಷ್ಟಿಸುವ ಅಗತ್ಯವಿದೆ ಎಂದು ಹೇಳಿದರು. ಎಫ್‍ಸಿ ಎಕ್ಸ್‌ಪೋ ನಿಜಕ್ಕೂ ಒಕ್ಕಲಿಗರನ್ನು ಸಬಲೀಕರಣಗೊಳಿಸಲು ಮತ್ತು ಮರುಸಂಪರ್ಕಿಸಲು ವೇದಿಕೆಯಾಗಿ ಹೊರಹೊಮ್ಮಲಿದೆ ಎಂದರು.

ಮಹಿಳಾ ಉದ್ಯಮಿಗಳ ವಿಚಾರ ಸಂಕಿರಣದಲ್ಲಿ ಡಾ.ಶೃತಿ ಚೇತನ್‍ಗೌಡ, ಸುನೀತಾ ಗೌಡ, ಅಮಿತಾ ಪ್ರಶಾಂತ್, ಸ್ವಪ್ನಾ ಕೃಷ್ಣ, ಡಾ.ಪುಣ್ಯವತಿ ಸಿ. ನಾಗರಾಜ್, ಸಿ.ಇಂದಿರಾ ಚನ್ನೇಗೌಡ, ಪವಿತ್ರಾ ಹಳೆಕೋಟೆ, ಶಿಲ್ಪಾಗೌಡ, ಸವಿತಾ ರಮೇಶ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X