Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಜನಚಳವಳಿಯ ಮೂಲಕ 'ಕಸಾಪ'ವನ್ನು...

ಜನಚಳವಳಿಯ ಮೂಲಕ 'ಕಸಾಪ'ವನ್ನು ಉಳಿಸಿಕೊಳ್ಳಬೇಕಿದೆ : ಡಾ.ಕೆ.ಮರುಳಸಿದ್ದಪ್ಪ

ವಾರ್ತಾಭಾರತಿವಾರ್ತಾಭಾರತಿ25 April 2025 12:52 AM IST
share
ಜನಚಳವಳಿಯ ಮೂಲಕ ಕಸಾಪವನ್ನು ಉಳಿಸಿಕೊಳ್ಳಬೇಕಿದೆ : ಡಾ.ಕೆ.ಮರುಳಸಿದ್ದಪ್ಪ

ಬೆಂಗಳೂರು : ರಾಜ್ಯ ಸರಕಾರ ಕನ್ನಡ ಸಾಹಿತ್ಯ ಪರಿಷತ್‌ನ ವಿರುದ್ದ ಸಣ್ಣ ಕ್ರಮ ಜರುಗಿ ಸಿದರೂ, ವಿಪಕ್ಷವು ಸಾಂಸ್ಕೃತಿಕ ಹಲ್ಲೆ ಮಾಡುತ್ತಿದೆ ಎಂದು ಸರಕಾರವನ್ನು ಟೀಕಿಸುತ್ತದೆ. ಹೀಗಾಗಿ ನಾವು ಜನ ಚಳವಳಿಗಳ ಮೂಲಕ ಅಧ್ಯಕ್ಷ ಮಹೇಶ್ ಜೋಶಿಯಿಂದ ಸಾಹಿತ್ಯ ಪರಿಷತ್‌ಅನ್ನು ಉಳಿಸಿಕೊಳ್ಳಬೇಕಾಗಿದೆ ಎಂದು ಸಾಹಿತಿ ಡಾ.ಕೆ.ಮರುಳಸಿದ್ದಪ್ಪ ಕರೆ ನೀಡಿದ್ದಾರೆ.

ಗುರುವಾರ ಗಾಂಧಿ ಭವನದಲ್ಲಿ ಆಯೋಜಿಸಿದ್ದ 'ಸ್ವಾಯತ್ತ ಕನ್ನಡ ಸಾಹಿತ್ಯ ಪರಿಷತನ್ನು ಸರ್ವಾಧಿಕಾರಿ ಧೋರಣೆಯಿಂದ ರಕ್ಷಿಸಲು ಸಮಾನ ಮನಸ್ಕರ ಸಮಾಲೋಚನಾ ಸಭೆ'ಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಇಂದು ಪರಿಷತ್ ಕೇವಲ ಹಣದಿಂದ ಮಾತ್ರ ಕೆಟ್ಟಿಲ್ಲ, ಜಾತಿಯಿಂದಲೂ ಅಪವಿತ್ರವಾಗಿದೆ. ಇದನ್ನು ಹೋಗಲಾಡಿಸಲು ಸಾಧ್ಯವೇ ಇಲ್ಲ ಎನಿಸುತ್ತಿದೆ. ಹೀಗಾಗಿ ಪರಿಷತ್‌ಗೆ ಮೂಲಭೂತ ಬದಲಾವಣೆಯನ್ನು ತರಬೇಕಾಗಿದೆ ಎಂದರು.

ಮಹೇಶ್ ಜೋಶಿ ನಗರದ ಪಂಪ ಕವಿ ರಸ್ತೆಯ ಹೆಸರನ್ನು ಬದಲಾಯಿಸಲು ಹೊರಟಿದ್ದರು. ಅವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಸ್ವಲ್ಪವಾದರೂ ತಿಳಿವಳಿಕೆ ಇದೆಯೇ ಎಂದು ಅವರು ಪ್ರಶ್ನಿಸಿದರು.

ಸಭೆಯಲ್ಲಿ ಹೋರಾಟಗಾರ್ತಿ ಸುನಂದಾ ಜಯರಾಂ, ಮಂಡ್ಯ ಜಿಲ್ಲಾ ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ.ಜಯಪ್ರಕಾಶ್ ಗೌಡ, ಕಲಾವಿದ ಶ್ರೀನಿವಾಸ ಕಪ್ಪಣ್ಣ, ಸಾಮಾಜಿಕ ಹೋರಾಟಗಾರ ಹನುಮೇಗೌಡ, ದಲಿತ ಮುಖಂಡ ಮಾವಳ್ಳಿ ಶಂಕರ್, ಜಾಣಗೆರೆ ವೆಂಕಟರಾಮಯ್ಯ, ವಿಧಾನ ಪರಿಷತ್‌ ಮಾಜಿ ಸದಸ್ಯ ಶ್ರೀಕಂಠೇಗೌಡ, ಡಾ.ವಸುಂಧರಾ ಭೂಪತಿ, ವಿಮಲಾ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಸ್ವತಂತ್ರವಾಗಿ ನಡೆದುಕೊಳ್ಳುವ ಪರಿಷತ್‌ನ ಜಿಲ್ಲಾಧ್ಯಕ್ಷರ ಮೇಲೆ ಮಹೇಶ್ ಜೋಶಿ ಕಿರುಕುಳ ನೀಡುತ್ತಿದ್ದಾರೆ. ಅಲ್ಲದೇ, ಅನುಚಿತ ನಡವಳಿಕೆಯಿಂದ ಅಧ್ಯಕ್ಷ ಸ್ಥಾನದ ಗೌರವ ಕಳೆಯುತ್ತಿದ್ದರೂ, ಸರಕಾರ ಮತ್ತು ಸಾಂಸ್ಕೃತಿಕ ವಲಯ ಸುಮ್ಮನಿರುವುದು ವಿಪರ್ಯಾಸ.

-ಪ್ರೊ.ಎಸ್.ಜಿ.ಸಿದ್ದರಾಮಯ್ಯ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ

ಸಭೆಯ ನಿರ್ಣಯಗಳು

1.ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿನ ಆರ್ಥಿಕ ಅಶಿಸ್ತು ಪ್ರಶ್ನಿಸಿ, ವಿಚಾರಣೆ ನಡೆಸಬೇಕು. ಪರಿಷತ್ತಿನ ಅಧ್ಯಕ್ಷ ಸ್ಥಾನದಿಂದ ಮಹೇಶ್ ಜೋಶಿಯನ್ನು ಕೂಡಲೇ ಅಮಾನತು ಮಾಡಿ, ಆಡಳಿತಾಧಿಕಾರಿಯನ್ನು ನೇಮಕ ಮಾಡಬೇಕು.

2. ಕಸಾಪ ಅಧ್ಯಕ್ಷರಿಗೆ ನೀಡಿರುವ ಸಚಿವ ಸ್ಥಾನಮಾನವನ್ನು ತಕ್ಷಣ ಹಿಂಪಡೆಯಬೇಕು.

3. ಪರಿಷತ್ತಿನ ಅಧ್ಯಕ್ಷರ ಅಧಿಕಾರಾವಧಿಯನ್ನು 5 ವರ್ಷದಿಂದ 3 ವರ್ಷಗಳಿಗೆ ಇಳಿಸಬೇಕು.

4. ಇತ್ತೀಚೆಗೆ ಪರಿಷತ್ತಿನ ಬೈಲಾಗೆ ತಂದಿರುವ 2 ತಿದ್ದುಪಡಿಗಳನ್ನು ರದ್ದುಗೊಳಿಸಬೇಕು.

5. ಅಧ್ಯಕ್ಷರ ಸರ್ವಾಧಿಕಾರಿ ಧೋರಣೆಯನ್ನು ಖಂಡಿಸಬೇಕು.

6. ಅಮಾನತುಗೊಳಿಸಿರುವ ಸದಸ್ಯರನ್ನು ವಾಪಸ್ಸು ಪಡೆಯಬೇಕು.

7. ಸಮ್ಮೇಳನಕ್ಕೆ ಬೇಡಿಕೆ ಇಟ್ಟಿರುವ 40 ಕೋಟಿ ರೂ. ಅನುದಾನ ರಾಜ್ಯ ಸರಕಾರ ನೀಡುವುದನ್ನು ತಡೆಯಬೇಕು.

........................

share
ವಾರ್ತಾಭಾರತಿ
ವಾರ್ತಾಭಾರತಿ
Next Story
X