ಅಟ್ಟಿಕಾ ಗೋಲ್ಡ್ ಕಂಪೆನಿಯ 19 ಸ್ಥಳಗಳ ಮೇಲೆ ಈ.ಡಿ. ದಾಳಿ

Photo Credit ; PTI
ಬೆಂಗಳೂರು : ಚಿನ್ನದ ಅಕ್ರಮ ಸಾಗಣೆ ಮತ್ತು ಆರ್ಥಿಕ ವಂಚನೆಗೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪೆನಿಯ ಕಚೇರಿ ಸಹಿತ ಕಂಪೆನಿಗೆ ಸೇರಿದ 19 ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯ (ಈ.ಡಿ) ಅಧಿಕಾರಿಗಳು ಬುಧವಾರದಂದು ದಾಳಿ ನಡೆಸಿ, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರು, ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡು ಸೇರಿದಂತೆ 19 ಕಡೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಲಾಗಿದೆ. ಈ.ಡಿ.ಅಧಿಕಾರಿಗಳು ದಾಳಿ ನಡೆಸುತ್ತಿದ್ದಂತೆ ಅಟ್ಟಿಕಾ ಗೋಲ್ಡ್ ಕಂಪೆನಿ ಮಾಲಕ ಅಟ್ಟಿಕಾ ಬಾಬು (ಬೊಮ್ಮನಹಳ್ಳಿ ಬಾಬು) ಸದ್ಯ ನಾಪತ್ತೆಯಾಗಿದ್ದಾರೆ.
ಸಾಕಷ್ಟು ಜನರಿಗೆ ಮೋಸ ಹಾಗೂ ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಈ ದಾಳಿ ನಡೆದಿದೆ. ಈ ಹಿಂದೆಯೂ ಅಟ್ಟಿಕಾ ಗೋಲ್ಡ್ ಕಂಪೆನಿ ವಿರುದ್ಧ ವಂಚನೆ ಹಾಗೂ ಮೋಸದ ಆರೋಪಗಳು ಕೇಳಿಬಂದಿದ್ದು, ಸಂಸ್ಥೆಯ ವಿರುದ್ಧ ತನಿಖೆಗಳು ನಡೆದಿದ್ದವು ಎನ್ನಲಾಗಿದೆ.
Next Story




