Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಬೌದ್ಧ ಅಲ್ಪಸಂಖ್ಯಾತ ಶಿಕ್ಷಣಕ್ಕೆ ಸರಕಾರಿ...

ಬೌದ್ಧ ಅಲ್ಪಸಂಖ್ಯಾತ ಶಿಕ್ಷಣಕ್ಕೆ ಸರಕಾರಿ ಮಾನ್ಯತೆ ನೀಡಲು ಮಹಾಬೋಧಿ ಸೊಸೈಟಿ ಮನವಿ

ವಾರ್ತಾಭಾರತಿವಾರ್ತಾಭಾರತಿ24 Sept 2026 12:07 AM IST
share
ಬೌದ್ಧ ಅಲ್ಪಸಂಖ್ಯಾತ ಶಿಕ್ಷಣಕ್ಕೆ ಸರಕಾರಿ ಮಾನ್ಯತೆ ನೀಡಲು ಮಹಾಬೋಧಿ ಸೊಸೈಟಿ ಮನವಿ

ಬೆಂಗಳೂರು : ಕರ್ನಾಟಕದಲ್ಲಿ ಸಾಂಪ್ರದಾಯಿಕ ಬೌದ್ಧ ಹಾಗೂ ಸನ್ಯಾಸಿ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಪ್ರೌಢ ಮತ್ತು ಪದವಿಪೂರ್ವ ಹಂತದಲ್ಲಿ ಸರಕಾರಿ ಮಾನ್ಯತೆ ಹೊಂದಿರುವ ಪರೀಕ್ಷೆ ಹಾಗೂ ಪ್ರಮಾಣಪತ್ರ ವ್ಯವಸ್ಥೆ ರೂಪಿಸುವಂತೆ ರಾಜ್ಯ ಅಲ್ಪಸಂಖ್ಯಾತರ ಆಯೋಗಕ್ಕೆ ‘ಮಹಾಬೋಧಿ ಸನ್ಯಾಸಿಕ ಸಂಸ್ಥೆ, ಮಹಾಬೋಧಿ ಸೊಸೈಟಿ, ಬೆಂಗಳೂರು’ ಮನವಿ ಸಲ್ಲಿಸಿದೆ.

ಈ ಸಂಬಂಧ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರಿಗೆ ಪತ್ರ ಬರೆದು ಪ್ರಸ್ತಾವ ಸಲ್ಲಿಸಿರುವ ಮಹಾಬೋಧಿ ಸೊಸೈಟಿ, ಬೌದ್ಧ ಸಮುದಾಯವು ಕರ್ನಾಟಕದಲ್ಲಿ ಮಾನ್ಯತೆ ಪಡೆದ ಧಾರ್ಮಿಕ ಅಲ್ಪಸಂಖ್ಯಾತ ಸಮುದಾಯವಾಗಿದ್ದು, ಸಂವಿಧಾನದ 30(1)ನೇ ವಿಧಿಯಡಿ ಧಾರ್ಮಿಕ ಮತ್ತು ಭಾಷಾ ಅಲ್ಪಸಂಖ್ಯಾತರಿಗೆ ತಮ್ಮ ಆಯ್ಕೆಯ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿ, ನಿರ್ವಹಿಸುವ ಹಕ್ಕು ಇದೆ. ಈ ಹಿನ್ನೆಲೆಯಲ್ಲಿ ಸಾಂಪ್ರದಾಯಿಕ ಬೌದ್ಧ ಶಿಕ್ಷಣ ವ್ಯವಸ್ಥೆಗೆ ಸೂಕ್ತ ಶೈಕ್ಷಣಿಕ ಮಾನ್ಯತೆ ಕಲ್ಪಿಸುವ ಅಗತ್ಯವಿದೆ ಎಂದು ತಿಳಿಸಿದೆ.

ಮಹಾಬೋಧಿ ಮೊನಾಸ್ಟಿಕ್ ಇನ್‌ಸ್ಟಿಟ್ಯೂಟ್‌ನಲ್ಲಿ ಪಾಳಿ ಭಾಷೆ, ವಿನಯ, ಸುತ್ತ, ಅಭಿಧಮ್ಮ, ಧಮ್ಮಪದ, ಬೌದ್ಧ ತತ್ವಶಾಸ್ತ್ರ ಸೇರಿದಂತೆ ಬೌದ್ಧ ಧರ್ಮ, ಸಂಸ್ಕೃತಿ ಮತ್ತು ಪರಂಪರೆಗೆ ಸಂಬಂಧಿಸಿದ ವಿಷಯಗಳೊಂದಿಗೆ ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳನ್ನೂ ಒಳಗೊಂಡ ವ್ಯವಸ್ಥಿತ ಶಿಕ್ಷಣ ನೀಡಲಾಗುತ್ತಿದೆ. ಈ ಶಿಕ್ಷಣ ಕ್ರಮವನ್ನು ಪ್ರಾಥಮಿಕ, ಹಿರಿಯ ಪ್ರಾಥಮಿಕ, ಪ್ರೌಢ ಹಾಗೂ ಪದವಿಪೂರ್ವ ಹಂತಗಳಿಗೆ ಅನುಗುಣವಾಗಿ ರೂಪಿಸಲಾಗಿದೆ ಎಂದು ಸಂಸ್ಥೆ ಹೇಳಿದೆ.

ಸಾಂಪ್ರದಾಯಿಕ ಬೌದ್ಧ ಶಿಕ್ಷಣದಲ್ಲಿ ಹಲವು ವರ್ಷಗಳ ಕಾಲ ಅಧ್ಯಯನ ನಡೆಸುವ ವಿದ್ಯಾರ್ಥಿಗಳಿಗೆ ಅವರ ಶಿಕ್ಷಣಕ್ಕೆ ಅಧಿಕೃತ ಶೈಕ್ಷಣಿಕ ಮಾನ್ಯತೆ ದೊರೆಯದಿರುವುದರಿಂದ ಮುಂದಿನ ಹಂತದ ಶಿಕ್ಷಣಕ್ಕೆ ಪ್ರವೇಶ ಪಡೆಯುವ ಸಂದರ್ಭದಲ್ಲಿ ಸಮಸ್ಯೆಗಳು ಎದುರಾಗಬಹುದು. ಹೀಗಾಗಿ, ಬೌದ್ಧ ಧಾರ್ಮಿಕ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳಲ್ಲಿ ನಿರ್ದಿಷ್ಟ ಮಾನದಂಡಗಳಡಿ ಶಿಕ್ಷಣ ನೀಡಲು ಹಾಗೂ ಪ್ರೌಢ ಮತ್ತು ಪದವಿಪೂರ್ವ ಹಂತಗಳಲ್ಲಿ ಸರಕಾರಿ ಮಾನ್ಯತೆ ಹೊಂದಿರುವ ಪರೀಕ್ಷೆಗಳನ್ನು ನಡೆಸಲು ಸೂಕ್ತ ವ್ಯವಸ್ಥೆ ರೂಪಿಸಬೇಕು ಎಂದು ಸಂಸ್ಥೆ ಮನವಿ ಮಾಡಿದೆ.

ಅರ್ಹ ಬೌದ್ಧ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳಿಗೆ ಮಾನ್ಯತೆ ನೀಡುವುದು, ಪಠ್ಯಕ್ರಮ ಮತ್ತು ಶೈಕ್ಷಣಿಕ ಮಾನದಂಡಗಳನ್ನು ರೂಪಿಸುವುದು, ಪರೀಕ್ಷೆ ನಡೆಸಲು ಸೂಕ್ತ ಪ್ರಾಧಿಕಾರವನ್ನು ಗುರುತಿಸುವುದು ಹಾಗೂ ಉತ್ತೀರ್ಣ ವಿದ್ಯಾರ್ಥಿಗಳಿಗೆ ಮಾನ್ಯ ಪ್ರಮಾಣಪತ್ರ ನೀಡುವ ವ್ಯವಸ್ಥೆಯನ್ನು ರೂಪಿಸಬಹುದು ಎಂದು ಪ್ರಸ್ತಾವನೆಯಲ್ಲಿ ತಿಳಿಸಲಾಗಿದೆ.

ಇದರೊಂದಿಗೆ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ, ವೃತ್ತಿಪರ ಶಿಕ್ಷಣ ಹಾಗೂ ಇತರ ಮಾನ್ಯತೆ ಪಡೆದ ಶೈಕ್ಷಣಿಕ ಅವಕಾಶಗಳಿಗೆ ಮುಂದುವರಿಯಲು ಸೂಕ್ತ ಮಾರ್ಗ ಕಲ್ಪಿಸಬೇಕು ಎಂಬ ಬೇಡಿಕೆಯನ್ನೂ ಮುಂದಿಡಲಾಗಿದೆ.

ಸಂಸ್ಕೃತ ಶಿಕ್ಷಣ ಮಾದರಿ ಪರಿಗಣನೆ: ಸಾಂಪ್ರದಾಯಿಕ ಸಂಸ್ಕೃತ ಶಿಕ್ಷಣದಲ್ಲಿ ಇರುವ ಮಾದರಿಯನ್ನು ಈ ಸಂದರ್ಭದಲ್ಲಿ ಪರಿಗಣಿಸಬಹುದಾಗಿದೆ ಎಂದು ಮಹಾಬೋಧಿ ಮೊನಾಸ್ಟಿಕ್ ಇನ್‌ಸ್ಟಿಟ್ಯೂಟ್ ಸೂಚಿಸಿದೆ. ಸಾಂಪ್ರದಾಯಿಕ ಶಿಕ್ಷಣದ ಅರ್ಹತೆಗಳನ್ನು ಆಧುನಿಕ ಶಿಕ್ಷಣದ ವಿವಿಧ ಹಂತಗಳಿಗೆ ಹೊಂದಾಣಿಕೆ ಮಾಡುವ ರೀತಿಯ ವ್ಯವಸ್ಥೆಯನ್ನು ಬೌದ್ಧ ಶಿಕ್ಷಣಕ್ಕೂ ರೂಪಿಸಬಹುದು ಎಂಬುದು ಸಂಸ್ಥೆಯ ಅಭಿಪ್ರಾಯ.

ಆದರೆ, ಸಂಸ್ಕೃತ ಶಿಕ್ಷಣದ ಮಾದರಿಯನ್ನು ಯಥಾವತ್ತಾಗಿ ಅನುಸರಿಸುವ ಬದಲು, ಬೌದ್ಧ ಧರ್ಮದ ವಿಶಿಷ್ಟ ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ಸನ್ಯಾಸಿ ಪರಂಪರೆಯನ್ನು ಗಮನದಲ್ಲಿಟ್ಟುಕೊಂಡು ಪ್ರತ್ಯೇಕ ವ್ಯವಸ್ಥೆ ರೂಪಿಸಬೇಕು ಎಂದು ಸಂಸ್ಥೆ ಕೋರಿದೆ.

ಬೌದ್ಧ ಧಾರ್ಮಿಕ ಅಲ್ಪಸಂಖ್ಯಾತ ಶಿಕ್ಷಣ ಮತ್ತು ಪರೀಕ್ಷಾ ವ್ಯವಸ್ಥೆಯ ಸಾಧ್ಯತೆಗಳನ್ನು ಪರಿಶೀಲಿಸಲು ಸೂಕ್ತ ಸಮಿತಿ ಅಥವಾ ಪ್ರಾಧಿಕಾರ ರಚಿಸುವಂತೆ ಅಲ್ಪಸಂಖ್ಯಾತರ ಆಯೋಗವನ್ನು ಸಂಸ್ಥೆ ಕೋರಿದೆ. ಶಿಕ್ಷಣ ಇಲಾಖೆಗಳು ಹಾಗೂ ಸಂಬಂಧಿಸಿದ ಇತರ ಇಲಾಖೆಗಳೊಂದಿಗೆ ಸಮಾಲೋಚನೆ ನಡೆಸಿ ಪಠ್ಯಕ್ರಮ, ಪರೀಕ್ಷಾ ಮಾನದಂಡ, ಶೈಕ್ಷಣಿಕ ಸಮಾನತೆ ಮತ್ತು ಪ್ರಮಾಣಪತ್ರ ನೀಡುವ ವ್ಯವಸ್ಥೆ ಕುರಿತು ನಿರ್ಧಾರ ಕೈಗೊಳ್ಳಬೇಕು ಎಂದು ಮನವಿ ಮಾಡಲಾಗಿದೆ.

ಪಾಳಿ ಭಾಷೆ, ಬೌದ್ಧ ಸಾಹಿತ್ಯ, ತತ್ವಶಾಸ್ತ್ರ, ಇತಿಹಾಸ, ನೈತಿಕ ಬೋಧನೆಗಳು ಹಾಗೂ ಸನ್ಯಾಸಿ ಪರಂಪರೆಯನ್ನು ಮುಂದಿನ ಪೀಳಿಗೆಗೆ ಕೊಂಡೊಯ್ಯುವ ಜತೆಗೆ, ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯಕ್ಕೆ ಅಗತ್ಯವಾದ ಅಧಿಕೃತ ಮಾನ್ಯತೆ ಒದಗಿಸುವ ನಿಟ್ಟಿನಲ್ಲಿ ಸರಕಾರ ಕ್ರಮ ಕೈಗೊಳ್ಳಬೇಕು ಎಂದು ಸಂಸ್ಥೆ ಮನವಿ ಮಾಡಿದೆ.

ಇತರ ಅಲ್ಪಸಂಖ್ಯಾತ ಸಮುದಾಯಗಳ ಧಾರ್ಮಿಕ ಶಿಕ್ಷಣಕ್ಕೆ ಒಳಪಟ್ಟಿರುವ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ (ಮದ್ರಸಾ, ಚರ್ಚ್, ಜೈನ್, ಸಿಖ್ ಮತ್ತು ಪಾರ್ಸಿ ಶಿಕ್ಷಣ ಪಡೆಯುತ್ತಿರುವ) ಈ ಪ್ರಸ್ತಾವನೆಯಂತೆ ಮುಂದಿನ ಆಯೋಗದ ಸಭೆಯಲ್ಲಿ ಚರ್ಚಿಸಲು ತೀರ್ಮಾನಿಸಲಾಗಿದ್ದು, ಈ ಕುರಿತು ತಮ್ಮ ಸಮುದಾಯದ ಧಾರ್ಮಿಕ ಶಿಕ್ಷಣದ ತತ್ಸಮಾನತೆಯನ್ನು ಕುರಿತು ಸೂಕ್ತ ಪ್ರಸ್ತಾವವನ್ನು ತುರ್ತಾಗಿ ಆಯೋಗಕ್ಕೆ ಸಲ್ಲಿಸುವಂತೆ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಎಲ್ಲ ಸದಸ್ಯರಿಗೆ ಅಧ್ಯಕ್ಷರು ತಿಳಿಸಿದ್ದಾರೆ.

Tags

Education
share
ವಾರ್ತಾಭಾರತಿ
ವಾರ್ತಾಭಾರತಿ
Next Story
X