Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಶಿಕ್ಷಣಕ್ಕೆ ಮೊದಲ ಆದ್ಯತೆ ನೀಡಬೇಕು :...

ಶಿಕ್ಷಣಕ್ಕೆ ಮೊದಲ ಆದ್ಯತೆ ನೀಡಬೇಕು : ಬಿ.ಕೆ.ಹರಿಪ್ರಸಾದ್

ಮಾಳಿಂಗರಾಯ ಕೆಂಭಾವಿ/ವಾರ್ತಾಭಾರತಿಮಾಳಿಂಗರಾಯ ಕೆಂಭಾವಿ/ವಾರ್ತಾಭಾರತಿ28 Nov 2026 8:20 PM IST
share
ಶಿಕ್ಷಣಕ್ಕೆ ಮೊದಲ ಆದ್ಯತೆ ನೀಡಬೇಕು : ಬಿ.ಕೆ.ಹರಿಪ್ರಸಾದ್

ಬೆಂಗಳೂರು : ನಾವು ಶಿಕ್ಷಣಕ್ಕೆ ಮೊದಲ ಆದ್ಯತೆ ಕೊಡಬೇಕು. ಈಡಿಗ ಸಮುದಾಯದ್ದೇ ಆದ ಶಿಕ್ಷಣ ಸಂಸ್ಥೆ ನಿರ್ಮಾಣವಾಗಬೇಕು ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ತಿಳಿಸಿದ್ದಾರೆ.

ಶನಿವಾರ ನಗರದ ಅರಮನೆ ಮೈದಾನದಲ್ಲಿ ನಡೆದ ಈಡಿಗ, ಬಿಲ್ಲವ, ದೀವರು, ನಾಮಧಾರಿ, ನಾಡರ್, ತಿಯ್ಯ ಸೇರಿದಂತೆ ಒಟ್ಟು 26 ಉಪಜಾತಿಗಳನ್ನು ಒಳಗೊಂಡ ರಾಜ್ಯಮಟ್ಟದ ನಾರಾಯಣ ಗುರು ಮಹಾಒಕ್ಕೂಟದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.

ರಾಜ್ಯದಲ್ಲಿ ಜಿಲ್ಲಾ, ತಾಲೂಕು ಪಂಚಾಯತ್ ಚುನಾವಣಾ ಮೀಸಲಾತಿ ಪ್ರಕಟವಾಗಿದೆ. ಇಡೀ ಹಿಂದುಳಿದ ಸಮುದಾಯಕ್ಕೆ ಶೇ.19ರಷ್ಟು ಮೀಸಲಾತಿ ಸಿಕ್ಕಿದೆ. ಎಸ್ಸಿ-ಎಸ್ಟಿಗೆ ಶೇ.30ರಷ್ಟು, ಶೇ.51ರಷ್ಟು ಮೇಲ್ಜಾತಿಯವರು ಇದ್ದಾರೆ, ಅವರೊಂದಿಗೆ ಹೇಗೆ ಸ್ಪರ್ಧೆ ಮಾಡುವುದು?, ಅದಕ್ಕಾಗಿ ನಾವು ಜಾಗೃತಿ ಮೂಡಿಸಿಕೊಳ್ಳಬೇಕಿದೆ ಎಂದು ತಿಳಿಸಿದರು.

ಸಂವಿಧಾನದ ಚೌಕಟ್ಟಿನಲ್ಲಿ ನಮಗೆಲ್ಲ ಸಮಾನ ಹಕ್ಕಿದೆ. ಸಮ ಬಾಳು, ಸಮಪಾಲು ಎಂದು ನಮ್ಮ ಸಂವಿಧಾನದಲ್ಲಿ ಹೇಳಲಾಗಿದೆ. ಅಧಿಕಾರದಲ್ಲಿರುವವರು ಯಾವುದಾದರೂ ತೀರ್ಮಾನ ತೆಗೆದುಕೊಳ್ಳುವಾಗ ಸಮಾಜದ ಕಟ್ಟಕಡೆಯ ವ್ಯಕ್ತಿಯ ಅನುಕೂಲಕ್ಕೆ ಏನು ಮಾಡಬಹುದು ಎಂಬುದರ ಬಗ್ಗೆ ತೀರ್ಮಾನಿಸಬೇಕು ಎನ್ನುವುದನ್ನು ಗಾಂಧೀಜಿ ಹೇಳಿದ್ದಾರೆ. ಬೇರೆಯವರ ಜೀವನವನ್ನು ಬದಲಾವಣೆ ಮಾಡಲು ರಾಜಕಾರಣಕ್ಕೆ ಬರಬೇಕು ಎಂದು ಅಂಬೇಡ್ಕರ್ ಅವರು ಹೇಳಿದ್ದಾರೆ. ಎಷ್ಟು ಜನ ರಾಜಕಾರಣಿಗಳು ಹಾಗೇ ಇದ್ದಾರೆ ಎಂದು ಪ್ರಶ್ನಿಸಿದರು.

ಒಂದೇ ಜಾತಿ, ಒಂದೇ ಧರ್ಮ, ಒಂದೇ ದೇವರು’ ಎಂಬ ನಾರಾಯಣ ಗುರುಗಳ ಸಿದ್ಧಾಂತದಲ್ಲಿ ನಾನು ಅಚಲವಾದ ನಂಬಿಕೆ ಇಟ್ಟುಕೊಂಡಿದ್ದೇನೆ. ಜಾತಿ ತಾರತಮ್ಯ, ಧರ್ಮದ್ವೇಷ ಹಾಗೂ ಸಾಮಾಜಿಕ ಅಸಮಾನತೆಯ ವಿರುದ್ಧ ಹೋರಾಡಿದ ನಾರಾಯಣ ಗುರುಗಳು ಶಿಕ್ಷಣದ ಮೂಲಕ ಸ್ವಾತಂತ್ರ್ಯ, ಸಂಘಟನೆಯ ಮೂಲಕ ಶಕ್ತಿ ಗಳಿಸುವ ಮಾರ್ಗವನ್ನು ತೋರಿಸಿಕೊಟ್ಟಿದ್ದಾರೆ ಎಂದು ತಿಳಿಸಿದರು.

ರಾಜಕೀಯವಾಗಿ ಭಿನ್ನಾಭಿಪ್ರಾಯಗಳಿದ್ದರೂ ಸಮಾಜದ ಹಿತಕ್ಕಾಗಿ ವಿವಿಧ ಪಕ್ಷಗಳ ಜನಪ್ರತಿನಿಧಿಗಳು ಒಂದೇ ವೇದಿಕೆಗೆ ಬರುತ್ತೇವೆ. ಸಮುದಾಯದ ಸ್ವಾಮೀಜಿಗಳೂ ಕೂಡ ತಮ್ಮ ನಡುವಿನ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಒಗ್ಗಟ್ಟು ಪ್ರದರ್ಶಿಸಬೇಕು. ಸಮಾಜದ ಸಂಘ-ಸಂಸ್ಥೆಗಳು ವೈಯಕ್ತಿಕ ಹಿತಾಸಕ್ತಿಗಳಿಗೆ ಬಳಕೆಯಾಗದೇ ಸಮುದಾಯದ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ಹೇಳಿದರು.

ನಾರಾಯಣಗುರು ಮಾಡಿರುವ ವೈಕಂ ಚಳವಳಿ ದೇವಸ್ಥಾನ ಪ್ರವೇಶಕ್ಕೆ ಮಾಡಲಿಲ್ಲ. ನಮ್ಮವರಿಗೆ ದೇವಸ್ಥಾನದ ಸುತ್ತ ಇರುವ ರಸ್ತೆಯಲ್ಲಿ ಕೂಡ ಸಂಚರಿಸಲು ಬಿಡುತ್ತಿರಲಿಲ್ಲ. ಅಂಥಹ ಕ್ರೂರ ಪದ್ಧತಿಯನ್ನು ವಿರೋಧಿಸಿ ಸ್ವಾಭಿಮಾನದಿಂದ ಬದುಕಬೇಕು ಎಂದು ನಾರಾಯಣ ಗುರು ಅವರು ವೈಕಂ ಚಳವಳಿ ಮಾಡಿದ್ದಾರೆ ಎಂದು ತಿಳಿಸಿದರು.

ನಾರಾಯಣಗುರು ನಿಗಮ ಸ್ಥಾಪನೆ ಮಾಡಿರುವುದು ಸಂತೋಷ. ನಿಗಮಕ್ಕೆ 10 ಕೋಟಿ ರೂ. ನೀಡಿದ್ದಾರೆ. ಹಿಂದೆ ನಾವು ಡಿ.ದೇವರಾಜ ಅರಸು ನಿಗಮದ ಅಡಿಯಲ್ಲಿದ್ದೆವು. ಅದರಲ್ಲಿ ಸಾವಿರ ಕೋಟಿ ರೂ. ಹಣ ಇತ್ತು. ಅದರಲ್ಲಿ ಅನುಕೂಲ ಪಡೆದುಕೊಳ್ಳಬಹುದಿತ್ತು ಎಂದು ಹೇಳಿದರು.

ಈಗ ದೇವರಾಜ ಅರಸು ನಿಗಮದ ಅಡಿಯಲ್ಲಿ ಕೇವಲ ಒಂದೆರೆಡು ಸಮುದಾಯಗಳಿವೆ. ಅವು ಮಾತ್ರ ಅನುಕೂಲ ಪಡೆದುಕೊಳ್ಳುತ್ತಿವೆ. ನಾವು ಏನೇ ಮಾಡಿದರೂ ಯೋಚನೆ ಮಾಡಬೇಕು. ವೀರಾವೇಶದಲ್ಲಿ ಸಮುದಾಯಕ್ಕೆ ಧಕ್ಕೆ ಆಗುವ ಕೆಲಸ ಮಾಡಬಾರದು ಎಂದು ಅಭಿಪ್ರಾಯಪಟ್ಟರು.

ದಕ್ಷಿಣ ಕನ್ನಡದಲ್ಲಿ 1912ರಲ್ಲಿ ನಾರಾಯಣಗುರುಗಳು ಕುದ್ರೋಳಿ ಗೋಕರ್ಣನಾಥ ಎಂದು ಶಿವ ಪ್ರತಿಷ್ಠಾಪನೆ ಮಾಡಿದರು. ಅದು ದೇವಸ್ಥಾನವಾಗಿಯೇ ಉಳಿಯಿತು, ಅಲ್ಲಿ ಆಶ್ರಮವಿಲ್ಲ. ಅದಕ್ಕೆ ಅಲ್ಲಿನ ಯುವಕರು ದಾರಿ ತಪ್ಪುತ್ತಿದ್ದಾರೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ, ಕೇರಳ ವರ್ಕಳ ಶಿವಗಿರಿ ಮಠದ ಋತಂಬರಾನಂದ ಸ್ವಾಮೀಜಿ, ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಭೀಮಣ್ಣ ಟಿ.ನಾಯ್ಕ, ವಿ.ಸುನಿಲ್ ಕುಮಾರ್, ಬೇಳೂರು ಗೋಪಾಲಕೃಷ್ಣ, ಜಗದೇವ ಗುತ್ತೇದಾರ್ ಮತ್ತಿತರರು ಉಪಸ್ಥಿತರಿದ್ದರು.

Tags

B.K.Hariprasad
share
ಮಾಳಿಂಗರಾಯ ಕೆಂಭಾವಿ/ವಾರ್ತಾಭಾರತಿ
ಮಾಳಿಂಗರಾಯ ಕೆಂಭಾವಿ/ವಾರ್ತಾಭಾರತಿ

ಮಾಳಿಂಗರಾಯ ಕೆಂಭಾವಿ ಅವರು ತುಮಕೂರು ವಿಶ್ವವಿದ್ಯಾಲಯದಲ್ಲಿ ಪತ್ರಿಕೋದ್ಯಮ, ಐಚ್ಛಿಕ ಕನ್ನಡ, ರಾಜ್ಯಶಾಸ್ತ್ರ ವಿಷಯಗಳಲ್ಲಿ ಪದವಿ ಹಾಗೂ ಪತ್ರಿಕೋದ್ಯಮ ಡಿಪ್ಲೊಮಾ ಪಡೆದಿದ್ದು, ವಾರ್ತಾಭಾರತಿ ಕನ್ನಡ ದೈನಿಕದಲ್ಲಿ 2023ರಿಂದ ಉಪಸಂಪಾದಕ, ವರದಿಗಾರರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಕವಿತೆ, ಲೇಖನ, ಸಿನೆಮಾ ವಿಮರ್ಶೆ ಬರೆಯುವುದು ಇವರ ಹವ್ಯಾಸವಾಗಿದೆ.

Next Story
X