Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಕರ್ನಾಟಕ - ಲಕ್ಷದ್ವೀಪ ಐತಿಹಾಸಿಕ...

ಕರ್ನಾಟಕ - ಲಕ್ಷದ್ವೀಪ ಐತಿಹಾಸಿಕ ವ್ಯಾಪಾರ ಮಾರ್ಗ ಪುನರುಜ್ಜೀವನಗೊಳಿಸಲು ಒತ್ತು: ಸಚಿವ ಮಂಕಾಳ್ ವೈದ್ಯ

ವಾರ್ತಾಭಾರತಿವಾರ್ತಾಭಾರತಿ9 Dec 2024 9:51 PM IST
share
ಕರ್ನಾಟಕ - ಲಕ್ಷದ್ವೀಪ ಐತಿಹಾಸಿಕ ವ್ಯಾಪಾರ ಮಾರ್ಗ ಪುನರುಜ್ಜೀವನಗೊಳಿಸಲು ಒತ್ತು: ಸಚಿವ ಮಂಕಾಳ್ ವೈದ್ಯ

ಬೆಂಗಳೂರು: ಕರ್ನಾಟಕ ಮತ್ತು ಲಕ್ಷದ್ವೀಪ ನಡುವಿನ ಐತಿಹಾಸಿಕ ವ್ಯಾಪಾರ ಮಾರ್ಗಗಳನ್ನು ಪುನರುಜ್ಜೀವನಗೊಳಿಸಲು ಕರ್ನಾಟಕ ಜಲ ಸಾರಿಗೆ ಮಂಡಳಿ ಪೂರ್ವಭಾವಿಯಾಗಿ ಕೆಲಸ ಮಾಡುತ್ತದೆ ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲ ಸಾರಿಗೆ ಸಚಿವ ಮಂಕಾಳ್ ಎಸ್.ವೈದ್ಯ ತಿಳಿಸಿದರು.

ಲಕ್ಷದ್ವೀಪದ ಕವರತ್ತಿಗೆ ಭೇಟಿ ನೀಡಿದ ಸಚಿವ ವೈದ್ಯ, ಕಡಲ ವಲಯದಲ್ಲಿ ಕಾರ್ಯತಂತ್ರದ ಪಾಲುದಾರಿಕೆ ಮತ್ತು ಮೂಲ ಸೌಕರ್ಯ ಯೋಜನೆಗಳ ಬಗ್ಗೆ ಲಕ್ಷದ್ವೀಪ ಆಡಳಿತದ ಕೇಂದ್ರಾಡಳಿತ ಪ್ರದೇಶದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸುದೀರ್ಘವಾಗಿ ಚರ್ಚಿಸಿ, ಮಾತನಾಡಿದರು.

ಮಂಗಳೂರಿನಲ್ಲಿ ಲಕ್ಷದ್ವೀಪಕ್ಕೆ ಮೀಸಲಾದ ಜೆಟ್ಟಿಯನ್ನು ಅಭಿವೃದ್ಧಿಪಡಿಸುವ ಯೋಜನೆಯ ಪ್ರಗತಿಯನ್ನು ವೇಗಗೊಳಿಸ ಲಾಗುತ್ತಿದ್ದು, ಈ ಯೋಜನೆಯನ್ನು ಕೇಂದ್ರ ಸರ್ಕಾರದ ಬಂದರುಗಳು, ಹಡಗು ಮತ್ತು ಜಲಮಾರ್ಗಗಳ ಸಚಿವಾಲಯದ ಸಾಗರಮಾಲಾ ಯೋಜನೆಯಡಿ ಕೈಗೊಳ್ಳಲಾಗುತ್ತದೆ ಎಂದರು.

ಸಾಗರಮಾಲಾ ಯೋಜನೆಯಿಂದ ಲಕ್ಷದ್ವೀಪದ ದ್ವೀಪಗಳ ಮುಖ್ಯ ಭೂಭಾಗಕ್ಕೆ ಸಂಪರ್ಕ ಕಲ್ಪಿಸಲಾಗುತ್ತಿದೆ ಎಂದು ಲಕ್ಷದ್ವೀಪ ಕೇಂದ್ರಾಡಳಿತ ಪ್ರದೇಶದ ಅಧಿಕಾರಿಗಳು ತಿಳಿಸಿದರು. ತರುವಾಯ, ಲಕ್ಷದ್ವೀಪ ಆಡಳಿತದ ಕೇಂದ್ರಾಡಳಿತ ಪ್ರದೇಶ ಎದುರಿಸುತ್ತಿರುವ ಪ್ರಸ್ತುತ ನಿರ್ಬಂಧಗಳು ಮತ್ತು ಸವಾಲುಗಳನ್ನು ಲಕ್ಷದ್ವೀಪ ಆಡಳಿತದ ಕೇಂದ್ರಾಡಳಿತ ಪ್ರದೇಶದ ಅಧಿಕಾರಿಗಳು ಸಭೆಯಲ್ಲಿ ತಿಳಿಸಿದರು. ಕರ್ನಾಟಕ ರಾಜ್ಯದಿಂದ ಲಕ್ಷದ್ವೀಪದ ದ್ವೀಪಗಳಿಗೆ ಹಾಲು ಉತ್ಪನ್ನ ಗಳು, ಔಷಧಿಗಳು ಮತ್ತು ತಾಜಾ ಉತ್ಪನ್ನಗಳಂತಹ ಅಗತ್ಯ ಸರಕುಗಳ ಸಾಗಣೆಯನ್ನು ಹೆಚ್ಚಿಸಲು ಕರ್ನಾಟಕ ರಾಜ್ಯ ಒತ್ತು ನೀಡಲಿದೆ ಎಂದು ಭರವಸೆ ನೀಡಿದರು.

ಹೆಚ್ಚುವರಿಯಾಗಿ ವ್ಯಾಪಾರ ಮಾರ್ಗಗಳನ್ನು ಮತ್ತಷ್ಟು ಸುಗಮಗೊಳಿಸಲು ಹಳೆಯ ಮಂಗಳೂರು ಬಂದರು ಸಮೀಪದಲ್ಲಿ ಅಗತ್ಯ ಮೂಲಸೌಕರ್ಯಗಳನ್ನು ಸ್ಥಾಪಿಸಲು ಯುಟಿಎಲ್ಎಗೆ ನೆರವು ನೀಡುವಂತೆ ಸಚಿವ ಮಂಕಾಳ್ ಎಸ್‌ ವೈದ್ಯ ಮನವಿ ಮಾಡಿಕೊಂಡರು.

ಸಭೆಯಲ್ಲಿ ರಾಜ್ಯ ಮೂಲಸೌಕರ್ಯ ಅಭಿವೃದ್ಧಿ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಯ ಕಾರ್ಯದರ್ಶಿ ಡಾ.ಎನ್.ಮಂಜುಳಾ, ಕರ್ನಾಟಕ ಜಲಸಾರಿಗೆ ಮಂಡಳಿಯ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಜಯರಾಮ್ ರಾಯ್‌ ಪುರ ಹಾಗೂ ಲಕ್ಷದ್ವೀಪ ಆಡಳಿತದ ಕೇಂದ್ರಾಡಳಿತ ಪ್ರದೇಶದ ಅಧಿಕಾರಿಗಳು, ರಾಜ್ಯ ಸರ್ಕಾರದ ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.




share
ವಾರ್ತಾಭಾರತಿ
ವಾರ್ತಾಭಾರತಿ
Next Story
X