Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ರೈತರಿಗೆ ಪರಿಹಾರ ತಲುಪಿಸುವುದೇ ರಾಜ್ಯ...

ರೈತರಿಗೆ ಪರಿಹಾರ ತಲುಪಿಸುವುದೇ ರಾಜ್ಯ ಸರಕಾರದ ಆದ್ಯತೆ : ಡಿಸಿಎಂ ಡಾ.ಪರಮೇಶ್ವರ್

ವಾರ್ತಾಭಾರತಿವಾರ್ತಾಭಾರತಿ31 Oct 2026 7:58 PM IST
share
ರೈತರಿಗೆ ಪರಿಹಾರ ತಲುಪಿಸುವುದೇ ರಾಜ್ಯ ಸರಕಾರದ ಆದ್ಯತೆ : ಡಿಸಿಎಂ ಡಾ.ಪರಮೇಶ್ವರ್

ಬೆಂಗಳೂರು : ಬರದಿಂದ ಬೆಳೆ ನಷ್ಟ ಅನುಭವಿಸಿರುವ ಅರ್ಹ ರೈತರಿಗೆ ಯಾವುದೇ ಅನಗತ್ಯ ತೊಂದರೆಯಾಗದಂತೆ ಪರಿಹಾರ ತಲುಪಿಸುವುದೇ ರಾಜ್ಯ ಸರಕಾರದ ಆದ್ಯತೆಯಾಗಿದೆ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.

ಶನಿವಾರ ಪ್ರಕಟಣೆ ನೀಡಿರುವ ಅವರು, ಬರದಿಂದಾಗಿ ರಾಜ್ಯದ ಲಕ್ಷಾಂತರ ರೈತ ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿವೆ. ತಮ್ಮ ಜೀವನೋಪಾಯವನ್ನು ಉಳಿಸಿಕೊಳ್ಳಲು ರೈತರು ಹೋರಾಡುತ್ತಿರುವ ಸಂದರ್ಭದಲ್ಲಿ ಅವರ ಬೆಂಬಲಕ್ಕೆ ನಿಲ್ಲುವುದು, ಅವರಲ್ಲಿ ಆತ್ಮವಿಶ್ವಾಸ ತುಂಬುವುದು ಹಾಗೂ ಸಾಧ್ಯವಿರುವ ಎಲ್ಲ ನೆರವು ಒದಗಿಸುವುದು ನಮ್ಮೆಲ್ಲರ ಜವಾಬ್ದಾರಿ. ರೈತರ ಸಂಕಷ್ಟಕ್ಕೆ ಬೇಕಿರುವುದು ಪರಿಹಾರವೇ ಹೊರತು ರಾಜಕೀಯ ವಿವಾದಗಳಲ್ಲ ಎಂದು ಹೇಳಿದ್ದಾರೆ.

ವಿಪಕ್ಷ ನಾಯಕ ಆರ್.ಅಶೋಕ್ ಸರಕಾರಿ ಆದೇಶದಲ್ಲಿರುವ 17 ಅಂಶಗಳನ್ನು ರೈತರಿಗೆ ವಿಧಿಸಿರುವ 17 ತೊಡಕುಗಳಂತೆ ಬಿಂಬಿಸುತ್ತಿದ್ದಾರೆ. ಆದರೆ ವಾಸ್ತವದಲ್ಲಿ ಈ ಅಂಶಗಳು ಫಲಾನುಭವಿಗಳ ಅರ್ಹತೆ, ದಾಖಲೆಗಳ ಪರಿಶೀಲನೆ ಹಾಗೂ ಆಡಳಿತ ವ್ಯವಸ್ಥೆಯ ಜವಾಬ್ದಾರಿಗೆ ಸಂಬಂಧಿಸಿವೆ. ಅರ್ಹರಿಗೆ ಪರಿಹಾರ ತಲುಪಿಸುವುದು, ಒಂದೇ ಪ್ರಕರಣಕ್ಕೆ ಎರಡೆರಡು ಬಾರಿ ಹಣ ಪಾವತಿಯಾಗುವುದನ್ನು ತಡೆಯುವುದು ಹಾಗೂ ಸಾರ್ವಜನಿಕ ಹಣದ ಸದ್ಬಳಕೆಯನ್ನು ಖಚಿತಪಡಿಸಿಕೊಳ್ಳುವುದು ಮುಖ್ಯ ಉದ್ದೇಶ ಎಂದು ವಿವರಣೆ ನೀಡಿದ್ದಾರೆ.

ಪರಿಹಾರ ಪಡೆಯಲು ರೈತರು ಹೊಸದಾಗಿ ಅರ್ಜಿ ಸಲ್ಲಿಸುವ ಅಥವಾ ಸರಕಾರಿ ಕಚೇರಿಯಿಂದ ಕಚೇರಿಗೆ ಅಲೆಯುವ ಅಗತ್ಯವಿಲ್ಲ. ಅಗತ್ಯವಿರುವ ಮಾಹಿತಿಯು ಈಗಾಗಲೇ ಸರಕಾರದ ಬಳಿ ಲಭ್ಯವಿದೆ. ಆ ಮಾಹಿತಿಯನ್ನು ಪರಿಶೀಲಿಸಿ ಪರಿಹಾರ ವಿತರಿಸುವ ಜವಾಬ್ದಾರಿ ಆಡಳಿತ ವ್ಯವಸ್ಥೆಯದ್ದಾಗಿದೆ. ಸರಕಾರಿ ದಾಖಲೆಗಳಲ್ಲಿ ಯಾವುದೇ ವ್ಯತ್ಯಾಸಗಳಿದ್ದಲ್ಲಿ, ನಿಗದಿತ ಪರಿಶೀಲನಾ ಪ್ರಕ್ರಿಯೆಯ ಮೂಲಕ ಅವುಗಳನ್ನು ಸರಿಪಡಿಸುವ ಜವಾಬ್ದಾರಿಯೂ ಸಂಬಂಧಪಟ್ಟ ಅಧಿಕಾರಿಗಳದ್ದೇ ಆಗಿರುತ್ತದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

1.5 ಕೋಟಿಗೂ ಅಧಿಕ ದಾಖಲೆಗಳನ್ನು ಪ್ರತ್ಯೇಕವಾಗಿ ಪರಿಶೀಲಿಸಿ ಆ ಬಳಿಕ ಪರಿಹಾರ ವಿತರಿಸಲು ಮುಂದಾಗಿದ್ದರೆ ಕನಿಷ್ಠ 3 ತಿಂಗಳ ಕಾಲಾವಕಾಶ ಬೇಕಾಗುತ್ತಿತ್ತು. ಇದರಿಂದ ಮಾಹಿತಿ ದಾಖಲಿಸುವಲ್ಲಿ ದೋಷಗಳು ಉಂಟಾಗುವ ಹಾಗೂ ಅರ್ಹ ಫಲಾನುಭವಿಗಳು ಪರಿಹಾರದಿಂದ ಹೊರಗುಳಿಯುವ ಸಾಧ್ಯತೆಯೂ ಹೆಚ್ಚಾಗುತ್ತಿತ್ತು. ಆದರೆ 2023ರ ಬರ ಪರಿಸ್ಥಿತಿಯಲ್ಲಿ ಯಶಸ್ವಿಯಾಗಿ ಬಳಸಲಾದ ಡಿಜಿಟಲ್ ವ್ಯವಸ್ಥೆಯನ್ನು ಮತ್ತಷ್ಟು ಸುಧಾರಿಸಿ ಪ್ರಸ್ತುತ ಪರಿಹಾರ ವಿತರಣೆಗೆ ಬಳಸಲಾಗುತ್ತಿದೆ ಎಂದು ಅವರು ವಿವರಿಸಿದ್ದಾರೆ.

ಪರಿಹಾರ ಘೋಷಿಸಿದ ಮಾತ್ರಕ್ಕೆ ಸರಕಾರದ ಜವಾಬ್ದಾರಿ ಮುಗಿಯುವುದಿಲ್ಲ. ಆ ಪರಿಹಾರ ರೈತರ ಕೈ ಸೇರಿದಾಗಲೇ ನಮ್ಮ ಜವಾಬ್ದಾರಿ ಪೂರ್ಣಗೊಳ್ಳುತ್ತದೆ. ನಮ್ಮ ಸರಕಾರದ ಕಾರ್ಯವೈಖರಿಯನ್ನು ಅಳೆಯಬೇಕಾದ ಮಾನದಂಡವೂ ಇದೇ ಆಗಿರಬೇಕು. ಆ ಬದ್ಧತೆಯನ್ನು ನಾವು ಖಂಡಿತವಾಗಿ ಉಳಿಸಿಕೊಳ್ಳುತ್ತೇವೆ ಎಂದು ಡಾ.ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.

Tags

Dr.G.Parameshwarastate governmentfarmers
share
ವಾರ್ತಾಭಾರತಿ
ವಾರ್ತಾಭಾರತಿ
Next Story
X