ಬೆಂಗಳೂರಿನಲ್ಲಿ 233 ಕೋಟಿ ರೂ.ವೆಚ್ಚದಲ್ಲಿ ವಿಜ್ಞಾನ ನಗರಿ ಸ್ಥಾಪನೆ

ಬೆಂಗಳೂರು: ಬೆಂಗಳೂರು ನಗರದಲ್ಲಿ ಕೇಂದ್ರ ಸರಕಾರದ ಸಹಭಾಗಿತ್ವದಲ್ಲಿ ಒಟ್ಟು 233 ಕೋಟಿ ರೂ. ವೆಚ್ಚದಲ್ಲಿ ವಿಜ್ಞಾನ ನಗರಿಯನ್ನು ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಭಾಷಣದಲ್ಲಿ ಉಲ್ಲೇಖಿಸಿದ್ದಾರೆ.
ಯುವಕರ ಕೌಶಲ್ಯಾಭಿವೃದ್ಧಿಗಾಗಿ ಕಲಬುರಗಿ, ಶಿವಮೊಗ್ಗ, ಹುಬ್ಬಳ್ಳಿ ಮತ್ತು ತುಮಕೂರಿನಲ್ಲಿ ಕರ್ನಾಟಕ ನಾವೀನ್ಯತೆ ಮತ್ತು ತಂತ್ರಜ್ಞಾನ ಸೊಸೈಟಿ ಮತ್ತು ಕಿಯೋನಿಕ್ಸ್ ಸಹಯೋಗದೊಂದಿಗೆ ಒಟ್ಟಾರೆ 12 ಕೋಟಿ ರೂ. ವೆಚ್ಚದಲ್ಲಿ ಉದಯೋನ್ಮುಖ ತಂತ್ರಜ್ಞಾನಗಳಲ್ಲಿ ಕೌಶಲ್ಯ ಮತ್ತು ನಾವೀನ್ಯತಾ ಕೇಂದ್ರಗಳನ್ನು ಸ್ಥಾಪಿಸಲಾಗುವುದು.
ಶಿವಮೊಗ್ಗ, ರಾಯಚೂರು, ಚಿಕ್ಕಮಗಳೂರು, ಯಾದಗಿರಿ ಮತ್ತು ಮೈಸೂರಿನಲ್ಲಿ ಕೇಂದ್ರ ಸರಕಾರದ ಸಹಯೋಗದೊಂದಿಗೆ ವಿಜ್ಞಾನ ಕೇಂದ್ರ/ತಾರಾಲಯಗಳನ್ನು ಹೊಸದಾಗಿ ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.
Next Story





