Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ರಾಜ್ಯಾದ್ಯಂತ ‘ಎನಿವೇರ್ ನೋಂದಣಿ’...

ರಾಜ್ಯಾದ್ಯಂತ ‘ಎನಿವೇರ್ ನೋಂದಣಿ’ ವ್ಯವಸ್ಥೆ ವಿಸ್ತರಣೆ: ಕಂದಾಯ ಸಚಿವ ಕೃಷ್ಣ ಬೈರೇಗೌಡ

ವಾರ್ತಾಭಾರತಿವಾರ್ತಾಭಾರತಿ15 March 2024 6:15 PM IST
share
ರಾಜ್ಯಾದ್ಯಂತ ‘ಎನಿವೇರ್ ನೋಂದಣಿ’ ವ್ಯವಸ್ಥೆ ವಿಸ್ತರಣೆ: ಕಂದಾಯ ಸಚಿವ ಕೃಷ್ಣ ಬೈರೇಗೌಡ

ಬೆಂಗಳೂರು: ನೋಂದಣಿ ಇಲಾಖೆಯನ್ನು ಮತ್ತಷ್ಟು ಜನಸ್ನೇಹಿಗೊಳಿಸುವ ಉದ್ದೇಶದಿಂದ ಬೆಂಗಳೂರಿಗೆ ಮಾತ್ರ ಸೀಮಿತವಾಗಿದ್ದ ‘ಎನಿವೇರ್ ನೋಂದಣಿ’ ವ್ಯವಸ್ಥೆಯನ್ನು ರಾಜ್ಯಾದ್ಯಂತ ಜಾರಿಗೊಳಿಸಲಾಗುವುದು ಎಂದು 2024-25ರ ಆಯವ್ಯಯ ಭಾಷಣದಲ್ಲಿ ಘೋಷಿಸಲಾಗಿತ್ತು. ಇದೀಗ ಬಜೆಟ್ ಮಂಡಿಸಿ ತಿಂಗಳೊಳಗಾಗಿ ಈ ವ್ಯವಸ್ಥೆಯನ್ನು ರಾಜ್ಯಾದ್ಯಂತ ವಿಸ್ತರಿಸಲು ನಿರ್ಧರಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ಶುಕ್ರವಾರ ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಅವರು, ಉಪ ನೋಂದಣಾಧಿಕಾರಿ ಕಚೇರಿ ಎಂದರೆ ಜನದಟ್ಟಣೆ ಸಾಮಾನ್ಯ ಎಂಬಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಜನಸಾಮಾನ್ಯರನ್ನು ಸರಕಾರಿ ಕಚೇರಿಗಳಲ್ಲಿ ಕಾಯಿಸುವುದೂ ಒಂದು ರೀತಿಯ ಶೋಷಣೆ ಎಂಬುದರಲ್ಲಿ ಎರಡು ಮಾತಿಲ್ಲ. ಇದೇ ಕಾರಣಕ್ಕೆ ಬೆಂಗಳೂರಿನಲ್ಲಿ ಈಗಾಗಲೇ ಎನಿವೇರ್ ನೋಂದಣಿ ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದೆ ಎಂದು ಹೇಳಿದ್ದಾರೆ.

ದಸ್ತಾವೇಜುಗಳ ನೋಂದಣಿಗಳಲ್ಲಿನ ವಿಳಂಬ ತಡೆಗಟ್ಟಿ ನೋಂದಣಿ ಪ್ರಕ್ರಿಯೆಯನ್ನು ಸುಲಭಗೊಳಿಸಿ ಕಚೇರಿ ಸಿಬ್ಬಂದಿಗಳ ಮೇಲೆ ಕೆಲಸದ ಒತ್ತಡ ಕಡಿಮೆ ಮಾಡುವುದು ಈ ಯೋಜನೆಯ ಉದ್ದೇಶವಾಗಿತ್ತು.

ಇದೇ ಕಾರಣಕ್ಕೆ 2011ರಲ್ಲಿ ಬೆಂಗಳೂರು ನಗರ ಜಿಲ್ಲೆಯ ಗಾಂಧಿನಗರ, ಬಸವನಗುಡಿ, ಜಯನಗರ, ಶಿವಾಜಿನಗರ ಹಾಗೂ ರಾಜಾಜಿನಗರ ಜಿಲ್ಲಾ ನೋಂದಣಿ ಕಚೇರಿಯ ವ್ಯಾಪ್ತಿಯ ಉಪನೋಂದಣಿ ಕಚೇರಿಗಳಲ್ಲಿ ಈ ವ್ಯವಸ್ಥೆ ಜಾರಿಗೆ ತರಲಾಗಿತ್ತು ಎಂದು ಕೃಷ್ಣ ಬೈರೇಗೌಡ ಮಾಹಿತಿ ನೀಡಿದ್ದಾರೆ.

ಈ ಯೋಜನೆಯ ಮೂಲಕ ಆಸ್ತಿ ನೋಂದಣಿ ಸಮಯದಲ್ಲಿ ಜನಸಾಮಾನ್ಯರು ಬೆಂಗಳೂರು ನಗರದ ಜಿಲ್ಲಾ ನೋಂದಣಿ ಕಚೇರಿ ವ್ಯಾಪ್ತಿಯ ಯಾವುದಾದರೂ ಉಪನೋಂದಣಿ ಕಚೇರಿಯಲ್ಲಿ ಆಸ್ತಿ ನೋಂದಣಿ ಮಾಡಿಕೊಳ್ಳಲು ನೋಂದಣಿ ಕಾಯ್ದೆ-1908ರ ಕಲಂ (5) ಹಾಗೂ ಕಲಂ (6) ರಡಿಯಲ್ಲಿ ಅನುವು ಮಾಡಿಕೊಡಲಾಗಿತ್ತು ಎಂದು ಅವರು ತಿಳಿಸಿದ್ದಾರೆ.

ಎನಿವೇರ್ ನೋಂದಣಿ ವ್ಯವಸ್ಥೆಯು ಬೆಂಗಳೂರು ನಗರ ಜಿಲ್ಲೆಯಲ್ಲಿ ಯಶಸ್ವಿಯಾಗಿ ಕಾರ್ಯ ನಿರ್ವಹಿಸುತ್ತಿದೆ. ಜನ ಸಾಮಾನ್ಯರಿಗೆ ನೋಂದಣಿ ವಿಚಾರದಲ್ಲಿ ತ್ವರಿತ ಸೇವೆ ನೀಡಲು ಈ ಯೋಜನೆ ಸಹಕಾರಿಯಾಗಿದೆ. ಜನರೂ ಇದರ ಉಪಯೋಗವನ್ನು ಬಳಸಿಕೊಳ್ಳುತ್ತಿದ್ದಾರೆ. ಇದೇ ಕಾರಣಕ್ಕೆ ಈ ಯೋಜನೆಯನ್ನು ಇದೀಗ ರಾಜ್ಯಾದ್ಯಂತ ವಿಸ್ತರಿಸಲು ಬಜೆಟ್‍ನಲ್ಲಿ ನೀಡಿದ ಆಶ್ವಾಸನೆಯಂತೆ ಇಲಾಖೆ ಒಂದು ಹೆಜ್ಜೆ ಮುಂದೆ ಇಟ್ಟಿದೆ ಎಂದು ಕೃಷ್ಣ ಬೈರೇಗೌಡ ಹೇಳಿದ್ದಾರೆ.

ಅಲ್ಲದೆ, ಪ್ರಾಯೋಗಿಕವಾಗಿ ಬೆಳಗಾವಿ ಹಾಗೂ ತುಮಕೂರು ಜಿಲ್ಲೆಗಳಲ್ಲಿ ನಿನ್ನೆ(ಮಾ.14)ರಿಂದಲೆ ಜನರಿಗೆ ಎನಿವೇರ್ ನೋಂದಣಿ ವ್ಯವಸ್ಥೆಯನ್ನು ಪರಿಚಯಿಸಿದ್ದು, ಜನರಿಂದಲೂ ಉತ್ತಮ ಸ್ಪಂದನೆ ದೊರೆಯುತ್ತಿದೆ. ಭವಿಷ್ಯದಲ್ಲಿ ಎನಿವೇರ್ ನೋಂದಣಿ ವ್ಯವಸ್ಥೆಯ ಅಡಿ ಯಾವುದೇ ವ್ಯಕ್ತಿಯು ನೋಂದಣಿ ದಸ್ತಾವೇಜನ್ನು ಜಿಲ್ಲೆಯ ವ್ಯಾಪ್ತಿಯ ಯಾವುದಾದರೂ ಉಪನೋಂದಣಿ ಕಚೇರಿಯಲ್ಲಿ ನೋಂದಾಯಿಸಿಕೊಳ್ಳಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

ಈ ನೂತನ ಯೋಜನೆಯು ಸಾರ್ವಜನಿಕರಿಗೆ ಉಪಯುಕ್ತ ವ್ಯವಸ್ಥೆಯಾಗಿರಲಿದೆ. ದಸ್ತಾವೇಜಿನ ನೋಂದಣಿಯಲ್ಲಿ ಪಾರದರ್ಶಕತೆಯನ್ನು ಹೆಚ್ಚಿಸುತ್ತದೆ. ಮತ್ತು ನೋಂದಣಿ ಪ್ರಕ್ರಿಯೆಯಲ್ಲಿ ವಿಳಂಬವನ್ನು ತಡೆಗಟ್ಟಿ ಸಾರ್ವಜನಿಕರ ಸಮಯ ಉಳಿಸಿ ಕಚೇರಿಯ ಜನದಟ್ಟಣೆಯನ್ನು ನಿಯಂತ್ರಿಸುತ್ತದೆ. ಅಲ್ಲದೆ, ಕಚೇರಿ ನೋಂದಣಿ ಕೆಲಸವನ್ನೂ ಜಿಲ್ಲೆಯಾದ್ಯಂತ ಎಲ್ಲ ಕಚೇರಿಗಳಿಗೂ ಸಮಾನವಾಗಿ ಹಂಚಿಕೆ ಮಾಡಲು ಈ ಯೋಜನೆ ಸಹಕಾರಿಯಾಗಿರಲಿದೆ ಎಂದು ಕೃಷ್ಣ ಬೈರೇಗೌಡ ಹೇಳಿದ್ದಾರೆ.

ಉಪ ನೋಂದಣಾಧಿಕಾರಿ(ಸಬ್ ರಿಜಿಸ್ಟ್ರಾರ್) ಕಚೇರಿಗಳನ್ನು ಜನಸ್ನೇಹಿಗೊಳಿಸುವ ನಿಟ್ಟಿನಲ್ಲಿ ಎ.1 ರಿಂದ ರವಿವಾರವೂ ಕಚೇರಿಗಳು ಕಾರ್ಯನಿರ್ವಹಿಸುವಂತೆ ಈಗಾಗಲೆ ಸೂಚಿಸಲಾಗಿದೆ. ನಗರ ಭಾಗದಲ್ಲಿ ಅನೇಕ ಜನರು ನೋಂದಣಿಗಾಗಿ ತಮ್ಮ ಕೆಲಸ ಕಾರ್ಯಗಳಿಗೆ ರಜಾ ಹಾಕಿ ಬರಬೇಕಾಗುತ್ತದೆ. ಇದರಿಂದ ಕೆಲವರಿಗೆ ಅನಾನುಕೂಲವೂ ಆಗುತ್ತಿದೆ. ಹೀಗಾಗಿ ರವಿವಾರವೂ ಸಬ್ ರಿಜಿಸ್ಟ್ರಾರ್ ಕಚೇರಿಗಳನ್ನು ತೆರೆಯಲು ನಿರ್ಧರಿಸಲಾಗಿದೆ ಎಂದು ಅವರು ನುಡಿದಿದ್ದಾರೆ.

ಒಂದು ಕಂದಾಯ ಜಿಲ್ಲೆಯಲ್ಲಿ ಕನಿಷ್ಠ 6-7 ನೋಂದಣಾ ಕಚೇರಿಗಳು ಇರುತ್ತವೆ. ರೋಸ್ಟರ್ ಆಧಾರದ ಮೇಲೆ ಒಂದೊಂದು ವಾರ ಒಂದೊಂದು ನೋಂದಣಾಧಿಕಾರಿ ಕಚೇರಿ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಲಾಗಿದೆ. ಇದರ ಬಗ್ಗೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲು ಕ್ರಮ ತೆಗದುಕೊಳ್ಳಲಾಗಿದೆ ಎಂದು ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X