Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಸೋನಿಯಾ, ರಾಹುಲ್ ಗಾಂಧಿಯನ್ನು ಗಡೀಪಾರು...

ಸೋನಿಯಾ, ರಾಹುಲ್ ಗಾಂಧಿಯನ್ನು ಗಡೀಪಾರು ಮಾಡುವುದೇ ಒಳ್ಳೆಯದು: ಛಲವಾದಿ ನಾರಾಯಣಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ17 Aug 2026 3:17 PM IST
share
ಸೋನಿಯಾ, ರಾಹುಲ್ ಗಾಂಧಿಯನ್ನು ಗಡೀಪಾರು ಮಾಡುವುದೇ ಒಳ್ಳೆಯದು: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಒಂದೇ ಮಾತರಂ ಗೀತೆಗೆ ಅವಮಾನ ಮಾಡಿರುವ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಹಾಗೂ ಅವರ ಮಗ ರಾಹುಲ್ ಗಾಂಧಿಯವರನ್ನು ಗಡೀಪಾರು ಮಾಡುವುದೇ ಒಳ್ಳೆಯದು ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದರು.

ವಿಧಾನಸೌಧದಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಒಂದೇ ಮಾತರಂ ಗೀತೆ ಹಾಡುವಾಗ ಕಾಂಗ್ರೆಸ್ ಅಪಮಾನ ಮಾಡಿದೆ. ಸೋನಿಯಾ ಗಾಂಧಿ ಈ ದೇಶದ ಪ್ರಜೆ ಅಲ್ಲ. ಅವರಿಗೆ ನಮ್ಮ ದೇಶದ ಬಗ್ಗೆ ಗೌರವ ಇಲ್ಲ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೂ ವಂದೇ ಮಾತರಂ ಹಾಡುವಾಗ ಗೌರವ ತೋರಿಸಿ ನಿಲ್ಲಿಸಿ ನಿಲ್ಲಿಸಿ ಎಂದು ಕಾನೂನು ತಿರಸ್ಕಾರ ಮಾಡಿದ್ದಾರೆ. ಇವರಿಗೆಲ್ಲ ಈ ದೇಶಲ್ಲಿ ಇರುವ ಯೋಗ್ಯತೆ ಇಲ್ಲ, ಇವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.

ಮೂವರನ್ನು ಕಗ್ಗೊಲೆ ಮಾಡಿದ ಸರಕಾರ

ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಕಾವೇರಿ ವನ್ಯಜೀವಿಧಾಮದ ಮರಿಯ ಮಂಗಲ ಅರಣ್ಯ ಪ್ರದೇಶದಲ್ಲಿ ಮೂವರನ್ನು ಈ ಸರಕಾರ ಕಗ್ಗೊಲೆ ಮಾಡಿದೆ ಎಂದು ಛಲವಾದಿ ನಾರಾಯಣಸ್ವಾಮಿ ಆರೋಪಿಸಿದ್ದಾರೆ.

ಅಲ್ಪಸಂಖ್ಯಾತರ ಪರ ಇದ್ದೇವೆ ಎಂದು ಹೇಳುವ ಸರಕಾರವೇ ಅದೇ ಸಮುದಾಯಕ್ಕೆ ಸೇರಿದ ಮೂವರನ್ನು ಎನ್ ಕೌಂಟರ್ ಮಾಡಿದೆ. ಇದು ಎಷ್ಟು ಸರಿ ಎಂದು ಪ್ರಶ್ನಿಸಿದರು.

ಎನ್ಕೌಂ ಟರ್ ನಲ್ಲಿ ಮೃತಪಟ್ಟವರು ಸಭ್ಯರು ಎಂದು ಆ ಪ್ರದೇಶದ ಎಲ್ಲರೂ ಹೇಳುತ್ತಿದ್ದಾರೆ. ಮೃತಪಟ್ವವರಿಗೂ ಅರಣ್ಯಾಧಿಕಾರಿಗಳಿಗೂ ಬಹುದಿನಗಳಿಂದ ವಾಗ್ವಾದ ನಡೆಯುತ್ತಿತ್ತು. ಆದ್ದರಿಂದಲೇ ಅವರನ್ನು ಎನ್ ಕೌಂಟರ್ ಮಾಡಿ ಸಾಯಿಸಿದ್ದಾರೆ ಎಂದು ಹೇಳುತ್ತಿದ್ದಾರೆ. ಈ ಸರಕಾರಕ್ಕೆ ಜನರ ಪ್ರಾಣದ ಬೆಲೆಯೇ ಗೊತ್ತಿಲ್ಲ. ಈ ಬಗ್ಗೆ ಸರಕಾರ ಎರಡೂ ಸದನದಲ್ಲಿ ತನ್ನ ನಿಲುವನ್ನು ಪ್ರಕಟಿಸಬೇಕು ಎಂದು ಆಗ್ರಹಿಸಿದರು.

ನಾಗೇಂದ್ರ ರಾಜೀನಾಮೆ ವರೆಗೆ ಹೋರಾಟ

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ 187 ಕೋಟಿ ರೂ. ನುಂಗಿದ್ದ ನಾಗೇಂದ್ರ ಅವರನ್ನೇ ಮತ್ತೆ ಈ ಸರ್ಕಾರದಲ್ಲಿ ಸಚಿವರಾಗಿ ನೇಮಿಸಲಾಗಿದೆ. ನಾಗೇಂದ್ರ ಅವರಿಗೆ ಇನ್ನೂ ಕ್ಲೀನ್ ಚಿಟ್ ಸಿಕ್ಕಿಲ್ಲ. ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆಯುತ್ತಿದೆ. ಹಣ ನುಂಗಿದ್ದು ಸರ್ಕಾರ ಮತ್ತು ಕಾಂಗ್ರೆಸ್ ಪಕ್ಷ. ಹಣ ತಿಂದ ಪಾಪಕ್ಕೆ ನಾಗೇಂದ್ರ ಅವರ ಭವಿಷ್ಯ ಕಟ್ಟಿಕೊಡಲು ಸಚಿವರಾಗಿನ್ನಾಗಿಸಿದ್ದಾರೆ ಎಂದರು. ನಾಗೇಂದ್ರ ಅವರು ರಾಜೀನಾಮೆ ಕೊಡೋವರೆಗೂ ಸದನ ನಡೆಯಲು ಬಿಡುವುದಿಲ್ಲ. ಹೋರಾಟ ಮಾಡೇ ತೀರುತ್ತೇವೆ ಎಂದರು.

ಕಾಶಪ್ಪನವರ್ ಸಂಪುಟದಿಂದ ಕೈ ಬಿಡಿ...

ಮೋದಿ ದೇಶವನ್ನು ಹೊಲಗೇರಿ ಮಾಡಿದ್ದಾರೆ ಎಂದು ಸಚಿವ ವಿಜಯಾನಂದ ಕಾಶಪ್ಪನವರ್ ಅವರು ಹೇಳಿ ಇಡೀ ದಲಿತ ಸಮುದಾಯಕ್ಕೆ ಅಪಮಾನ ಮಾಡಿದ್ದಾರೆ. ಆದ್ದರಿಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಚಿವರನ್ನು ಸಂಪುಟದಿಂದ ಕೈಬಿಡಬೇಕು ಎಂದು ಒತ್ತಾಯಿಸಿದರು. -

ಕಾಂಗ್ರೆಸ್ ಹೇಗೆ ದಲಿತರ ವಿರುದ್ಧ ಇದೆ ಎಂಬುದು ಜಗಜ್ಜಾಹೀರಾಗಿದೆ. ಈ ವಿಷಯವನ್ನೂ ಸದನದಲ್ಲಿ ಪ್ರಸ್ತಾಪಿಸಲಾಗುವುದು. ಉತ್ತರ ಸಿಗುವವರೆಗೆ ಸದನ ನಡೆಯಲು ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

Tags

Chalawadi Narayanaswamy
share
ವಾರ್ತಾಭಾರತಿ
ವಾರ್ತಾಭಾರತಿ
Next Story
X