ಬೆಂಗಳೂರು | ಪತಿಗೆ ಕಿರಕುಳ ಆರೋಪ; ಪೋಷಕ ನಟಿ ಮೇಲೆ ಎಫ್‍ಐಆರ್ ದಾಖಲು

ಬೆಂಗಳೂರು : ಪತಿಗೆ ಕಿರುಕುಳ ನೀಡಿದ ಆರೋಪದಡಿ ಕನ್ನಡ ಚಿತ್ರರಂಗದ ಪೋಷಕ ನಟಿ ಶಶಿಕಲಾ ವಿರುದ್ಧ ಇಲ್ಲಿನ ವಿದ್ಯಾರಣ್ಯಪುರ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ.
ಪತಿ ಹಾಗೂ ನಿರ್ದೇಶಕ ಹರ್ಷವರ್ಧನ್ ಟಿ.ಜಿ. ನೀಡಿರುವ ದೂರಿನ ಅನ್ವಯ ಎಫ್‍ಐಆರ್ ದಾಖಲಾಗಿದ್ದು, ಈ ಸಂಬಂಧ ಪೊಲೀಸರು ನಟಿ ಶಶಿಕಲಾಗೆ ನೋಟಿಸ್ ಜಾರಿಗೊಳಿಸಿದ್ದಾರೆ ಎಂದು ತಿಳಿದುಬಂದಿದೆ.
2024ರ ಆಗಸ್ಟ್ ನಲ್ಲಿ ತಮ್ಮನ್ನು ಮನೆಯಿಂದ ಹೊರಹಾಕಿರುವ ಶಶಿಕಲಾ, ಯೂಟ್ಯೂಬ್ ಚಾನೆಲ್‍ವೊಂದರ ಸಿಬ್ಬಂದಿಯೊಂದಿಗೆ ಸೇರಿ ತನ್ನ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ. ಹಣ ವಿಚಾರವಾಗಿಯೂ ಗಲಾಟೆ ನಡೆಸಿ ಹಲ್ಲೆ ಮಾಡಲಾಗಿದೆ ಎಂದು ಹರ್ಷವರ್ಧನ್ ನೀಡಿರುವ ದೂರಿನ ಅನ್ವಯ ಶಶಿಕಲಾ ಸೇರಿದಂತೆ ಇಬ್ಬರ ವಿರುದ್ಧ ವಿದ್ಯಾರಣ್ಯಪುರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Next Story





