ಬೆಂಗಳೂರು| ಪತ್ನಿಗೆ ಕಿರುಕುಳ ಆರೋಪ: ಕಾನ್ಸ್ ಟೇಬಲ್ ವಿರುದ್ಧ ಎಫ್‍ಐಆರ್

ಬೆಂಗಳೂರು: ಪತ್ನಿಗೆ ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡಿದ ಆರೋಪದಡಿ ಇಲ್ಲಿನ ಇಂದಿರಾನಗರ ಪೊಲೀಸ್ ಠಾಣೆಯ ಕಾನ್ಸ್ ಟೇಬಲ್ ಮನೋಜ್.ಎಸ್ ಹಾಗೂ ಇತರರ ವಿರುದ್ಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ.
ರೇಖಾ ಎಂಬುವವರು ದೂರು ನೀಡಿದ್ದು, ಕಾನ್ಸ್‍ಟೇಬಲ್ ಮನೋಜ್‍ನನ್ನು ಕಳೆದ ವರ್ಷ ನಂಜನಗೂಡಿನಲ್ಲಿ ಮದುವೆಯಾಗಿದ್ದು, ವಸಂತನಗರದ ಪೊಲೀಸ್ ವಸತಿ ಗೃಹದಲ್ಲಿ ಇಬ್ಬರೂ ವಾಸವಿದ್ದರು. ಆದರೆ, ಮನೋಜ್ ತಮಗೆ ವರದಕ್ಷಿಣೆ ಕಿರುಕುಳ ನೀಡುತ್ತಿದ್ದಾರೆ. ಜತೆಗೆ, : ಪತ್ನಿಗೆ ಮಾನಸಿಕ ಹಾಗೂ ದೈಹಿಕ ಕಿರುಕುಳ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ದೂರಿನನ್ವಯ ಮೊಕದ್ದಮೆ ದಾಖಲಿಸಿಕೊಂಡಿರುವ ಹೈಗ್ರೌಂಡ್ಸ್ ಠಾಣೆ ಪೊಲೀಸರು, ವಿಚಾರಣೆಗೆ ಹಾಜರಾಗುವಂತೆ ಕಾನ್ಸ್ ಟೇಬಲ್ ಮನೋಜ್‍ಗೆ ನೋಟಿಸ್ ನೀಡಿದ್ದಾರೆಂದು ತಿಳಿದುಬಂದಿದೆ.
Next Story