ವಿಧಾನಸೌಧ ಠಾಣೆಯ ಎದುರು ಪ್ರತಿಭಟಿಸಿದ್ದ 11 ಮಂದಿ ವಿರುದ್ಧ ಎಫ್‍ಐಆರ್ ದಾಖಲು

ಬೆಂಗಳೂರು: ಬೈಕ್ ಟ್ಯಾಕ್ಸಿ ಸೇವೆಯನ್ನು ರದ್ದುಗೊಳಿಸುವ ಬದಲು ಸೂಕ್ತ ನಿಯಮಗಳನ್ನು ರೂಪಿಸಬೇಕೆಂದು ಒತ್ತಾಯಿಸಿ ವಿಧಾನಸೌಧದ ಠಾಣೆ ಎದುರು ಪ್ರತಿಭಟನೆ ನಡೆಸಿದ್ದ 11 ಮಂದಿಯ ವಿರುದ್ಧ ಎಫ್‍ಐಆರ್ ದಾಖಲಾಗಿದೆ.
ಕಾನೂನುಬಾಹಿರವಾಗಿ ಗುಂಪುಗೂಡಿ ಪ್ರತಿಭಟಿಸಿದ ಆರೋಪದಡಿ ವಿಧಾನಸೌಧ ಠಾಣಾ ಪೊಲೀಸರು, ಸ್ವಯಂಪ್ರೇರಿತವಾಗಿ 11 ಮಂದಿ ಪ್ರತಿಭಟನಾಕಾರರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವುದಾಗಿ ತಿಳಿಸಿದ್ದಾರೆ.
ಜೂ.21ರಂದು ಪೊಲೀಸರಿಗೆ ಯಾವುದೇ ಮಾಹಿತಿ ನೀಡದೆ ಶಿವಮೊಗ್ಗ, ಮೈಸೂರು ಹಾಗೂ ಹಾಸನ ಸೇರಿದಂತೆ ವಿವಿಧ ಕಡೆಗಳಿಂದ ಬೈಕ್ ಟ್ಯಾಕ್ಸಿ ಸವಾರರು ಬಂದು ಗುಂಪುಗೂಡಿ ವಿಧಾನಸೌಧದ ಮುಂದೆ ಸರಕಾರದ ವಿರುದ್ಧ ತಮ್ಮ ಬೇಡಿಕೆ ಈಡೇರಿಸುವಂತೆ ಪ್ರತಿಭಟನೆ ನಡೆಸಿದ್ದರು ಎಂದು ದೂರಿನಲ್ಲಿ ಆರೋಪಿಸಲಾಗಿದೆ.
Next Story