Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಕೆಇಎಯಿಂದ ಮೊದಲ ಬಾರಿಗೆ ಯಶಸ್ವಿ...

ಕೆಇಎಯಿಂದ ಮೊದಲ ಬಾರಿಗೆ ಯಶಸ್ವಿ ಪ್ರಾಯೋಗಿಕ ವೆಬ್ ಕ್ಯಾಸ್ಟಿಂಗ್

37 ಪರೀಕ್ಷಾ ಕೇಂದ್ರಗಳಲ್ಲಿ ನಡೆದ ಡಿಸಿಇಟಿ ; ಶೇ.96ರಷ್ಟು ಹಾಜರಾತಿ

ವಾರ್ತಾಭಾರತಿವಾರ್ತಾಭಾರತಿ22 Jun 2024 9:49 PM IST
share
ಕೆಇಎಯಿಂದ ಮೊದಲ ಬಾರಿಗೆ ಯಶಸ್ವಿ ಪ್ರಾಯೋಗಿಕ ವೆಬ್ ಕ್ಯಾಸ್ಟಿಂಗ್

ಬೆಂಗಳೂರು : ಡಿಪ್ಲೊಮಾ ಪಾಸಾದವರಿಗೆ ಎಂಜಿನಿಯರಿಂಗ್ 3ನೆ ಸೆಮಿಸ್ಟರ್ ಗೆ ನೇರ ಪ್ರವೇಶ ಅರ್ಹತೆ ನಿರ್ಧರಿಸಲು ಶನಿವಾರ ಡಿಸಿಇಟಿ-24 ಪರೀಕ್ಷೆಯು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ(ಕೆಇಎ) ನೇತೃತ್ವದಲ್ಲಿ ಇದೇ ಮೊದಲ ಬಾರಿಗೆ ಪ್ರಾಯೋಗಿಕ ವೆಬ್ ಕ್ಯಾಸ್ಟಿಂಗ್ ನೆರವಿನಿಂದ ಯಶಸ್ವಿಯಾಗಿ ನಡೆಯಿತು.

ಬೆಂಗಳೂರು ಸೇರಿದಂತೆ 12 ಜಿಲ್ಲೆಗಳ 37 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಮಧ್ಯಾಹ್ನ 2ರಿಂದ 5ರವರೆಗೆ ನಡೆಯಿತು. ಪರೀಕ್ಷೆ ತೆಗೆದುಕೊಂಡಿದ್ದ ಒಟ್ಟು 18,215 ವಿದ್ಯಾರ್ಥಿಗಳ ಪೈಕಿ ಶೇ.96ರಷ್ಟು ಅಭ್ಯರ್ಥಿಗಳು ಹಾಜರಾಗಿದ್ದರು. ವೆಬ್ ಕ್ಯಾಸ್ಟಿಂಗ್ ಪ್ರಕ್ರಿಯೆಯ ಮೇಲ್ವಿಚಾರಣೆಯನ್ನು ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಅವರು ತಮ್ಮ ಕಚೇರಿಯಿಂದಲೇ ನಡೆಸಿದರು.

ಇದೇ ಮೊದಲ ಸಲ ಪ್ರಾಯೋಗಿಕವಾಗಿ ನಡೆದ ವೆಬ್ ಕ್ಯಾಸ್ಟಿಂಗ್, ಪರೀಕ್ಷಾ ಕೇಂದ್ರಗಳ ಪ್ರಾಂಶುಪಾಲರ ಕೊಠಡಿಯಲ್ಲಿ ನಡೆಯುವ ಪ್ರಕ್ರಿಯೆಗೆ ಸೀಮಿತವಾಗಿತ್ತು. ಪರೀಕ್ಷಾ ಸಮಯಕ್ಕಿಂತ ಮುಂಚೆ ಆಯಾ ಜಿಲ್ಲಾ ಖಜಾನೆಗಳಿಂದ ಬರುವ ಪ್ರಶ್ನೆ‌ ಪತ್ರಿಕೆಗಳ ಮತ್ತು ಒಎಂಆರ್ ಶೀಟುಗಳ ಬಂಡಲ್ ಗಳನ್ನು ತಕ್ಷಣವೇ ಪ್ರಾಂಶುಪಾಲರ ಕೊಠಡಿಯ ಕಪಾಟಿನಲ್ಲಿ ಸೀಲ್ ಮಾಡಿ ಇಡಬೇಕೆಂಬುದು ನಿಯಮದೆ. ಇದನ್ನು ಯಾವುದೇ ಕಾರಣಕ್ಕೂ ಪರೀಕ್ಷೆ ಆರಂಭವಾಗುವ 20 ನಿಮಿಷಕ್ಕಿಂತ ಮುಂಚೆ ಹೊರಕ್ಕೆ ತೆಗೆಯಬಾರದು. ಇದರ ಕಡ್ಡಾಯ ಪಾಲನೆಯನ್ನು ಖುದ್ದು ಎಚ್.ಪ್ರಸನ್ನ ಅವರು ಖಾತರಿಪಡಿಸಿಕೊಂಡರು. ಖಜಾನೆಯಿಂದ ಬಂದ ಬಂಡಲ್ ಅನ್ನು ಬಾಗಲಕೋಟೆಯ ಪರೀಕ್ಷಾ ಕೇಂದ್ರದಲ್ಲಿ ಪ್ರಾಂಶುಪಾಲರು ಮೇಜಿನ ಮೇಲೆ ಇರಿಸಿಕೊಂಡು ಕುಳಿತಿರುವುದನ್ನು ಗಮನಿಸಿದ ಪ್ರಸನ್ನ ಅವರು, ಅದನ್ನು 1.40ರವರೆಗೆ ಕಪಾಟಿನ ಒಳಗೆ ಇರುವಂತೆ ಸೂಚಿಸಿದರು.

ಇದೇ ರೀತಿ ಸಣ್ಣಪುಟ್ಟ ದೋಷಗಳನ್ನು ಪಟ್ಟಿ ಮಾಡಿ ಅವುಗಳನ್ನು ಸರಿಪಡಿಸುವ ಕೆಲಸ ನಡೆಯಿತು. ಎಲ್ಲಿಯೂ ಅಕ್ರಮಗಳಿಗೆ ಅವಕಾಶ ಇಲ್ಲದಂತೆ ಯಶಸ್ವಿಯಾಗಿ ನಡೆಯಿತು. ಪರೀಕ್ಷೆ ಮುಗಿದ ನಂತರ ಉತ್ತರ ಪತ್ರಿಕೆಗಳನ್ನು ಕೊಠಡಿ ಮೇಲ್ವಿಚಾರಕರು ತಂದು ಕೊಡುವ ವ್ಯವಸ್ಥೆ ಮೇಲೂ ನಿಗಾ ವಹಿಸಲಾಯಿತು.

‘ಯಾವುದೇ ರೀತಿಯ ಪರೀಕ್ಷಾ ಅಕ್ರಮಗಳಿಗೆ ಅವಕಾಶ ಆಗಬಾರದೆಂಬ ನಿಟ್ಟಿನಲ್ಲಿ ಪರೀಕ್ಷಾ ಪ್ರಕ್ರಿಯೆಯನ್ನು ವೆಬ್ ಕ್ಯಾಸ್ಟಿಂಗ್ ನೆರವಿನಿಂದ ವೀಕ್ಷಿಸುವ ವ್ಯವಸ್ಥೆ ಅಳವಡಿಸಿಕೊಳ್ಳಲು ಕೆಇಎ ನಿರ್ಧರಿಸಿದೆ. ಮೊದಲ ಹಂತವಾಗಿ, ಇಂದು ಪ್ರಾಂಶುಪಾಲರ ಕೊಠಡಿಯ ಪ್ರಕ್ರಿಯೆಯ ವೆಬ್ ಕ್ಯಾಸ್ಟಿಂಗ್ ಯಶಸ್ವಿಯಾಗಿ ನಡೆದಿದೆ. ಮುಂಬರುವ ದಿನಗಳಲ್ಲಿ ಪರೀಕ್ಷಾ ಕೊಠಡಿಗಳಲ್ಲಿ ಅಭ್ಯರ್ಥಿಗಳು ಪರೀಕ್ಷೆ ಪ್ರಕ್ರಿಯೆಯನ್ನೂ ವೆಬ್ ಕ್ಯಾಸ್ಟಿಂಗ್‍ಗೆ ಒಳಪಡಿಸಿ ಪರೀಕ್ಷಾ ವ್ಯವಸ್ಥೆಯನ್ನು ಸಂಪೂರ್ಣ ಪಾರದರ್ಶಕಗೊಳಿಸಲಾಗುವುದು’ ಎಂದು ಪ್ರಸನ್ನ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X