Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಕೃಷಿಯಲ್ಲಿ ಡಿಜಿಟಲ್ ತಂತ್ರಜ್ಞಾನ...

ಕೃಷಿಯಲ್ಲಿ ಡಿಜಿಟಲ್ ತಂತ್ರಜ್ಞಾನ ಅಳವಡಿಕೊಳ್ಳಿ: ಯುವ ರೈತರಿಗೆ ಡಾ.ಶಾಲಿನಿ ರಜನೀಶ್ ಕರೆ

ನಾಲ್ಕು ದಿನಗಳ ಕೃಷಿ ಮೇಳ: 34.13 ಲಕ್ಷ ಮಂದಿ ಭಾಗಿ, 6.17 ಕೋಟಿ ರೂ.ವಹಿವಾಟು

ವಾರ್ತಾಭಾರತಿವಾರ್ತಾಭಾರತಿ17 Nov 2024 10:18 PM IST
share
ಕೃಷಿಯಲ್ಲಿ ಡಿಜಿಟಲ್ ತಂತ್ರಜ್ಞಾನ ಅಳವಡಿಕೊಳ್ಳಿ: ಯುವ ರೈತರಿಗೆ ಡಾ.ಶಾಲಿನಿ ರಜನೀಶ್ ಕರೆ

ಬೆಂಗಳೂರು: ನಮ್ಮ ಯುವ ರೈತರು ಕೃಷಿಯಲ್ಲಿ ಡಿಜಿಟಲ್ ತಂತ್ರಜ್ಞಾನವನ್ನು ಆಳವಡಿಸಿಕೊಳ್ಳುವ ಮೂಲಕ ವ್ಯವಸಾಯದಲ್ಲಿ ಕ್ರಾಂತಿಯನ್ನು ತರಬೇಕಾಗಿದೆ ಎಂದು ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಕರೆ ನೀಡಿದ್ದಾರೆ.

ರವಿವಾರ ಇಲ್ಲಿನ ಜಿಕೆವಿಕೆ ಆವರಣದಲ್ಲಿ ಕೃಷಿ ವಿಶ್ವವಿದ್ಯಾನಿಲಯವು ಆಯೋಜಿಸಿದ್ದ ಕೃಷಿ ಮೇಳದ ಸಮಾರೋಪ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಅವರು, ಕೃಷಿಯಲ್ಲಿ ತಂತ್ರಜ್ಞಾನದ ಬಳಕೆಯಿಂದಾಗಿ ಇತರೆ ದೇಶಗಳು ನಮ್ಮ ಆಧುನಿಕ ಕೃಷಿಯನ್ನು ಹೊಗಳುವಂತಾಗಬೇಕು ಎಂದರು.

ಕೃಷಿ ಅಭಿವೃದ್ಧಿಯಲ್ಲಿ ಕೃಷಿ ವಿಶ್ವವಿದ್ಯಾನಿಲಯಗಳು ಮಹತ್ತರ ಪಾತ್ರವನ್ನು ವಹಿಸುತ್ತಿವೆ. ಕೃಷಿ ವಿಶ್ವವಿದ್ಯಾನಿಲಯ ಆಯೋಜಿಸಿರುವ ಈ ಬೃಹತ್ ಕೃಷಿಮೇಳ ದೇಶದಲ್ಲಿ ಮಾದರಿಯಾಗಿದೆ. ರೈತರು ಈ ಮೇಳಕ್ಕೆ ಭೇಟಿ ನೀಡಿದ ರೈತರು ತಾವು ನೋಡಿದ ಕೃಷಿ ತಾಂತ್ರಿಕತೆಗಳು, ತಳಿಗಳ ಬಗ್ಗೆ ಇನ್ನು ಹತ್ತು ರೈತರಿಗೆ ಮಾಹಿತಿಯನ್ನು ರವಾನಿಸಿದಾಗ ಮಾತ್ರ ಈ ಮೇಳಕ್ಕೆ ಒಂದು ಅರ್ಥಸಿಗುತ್ತದೆ ಎಂದು ಹೇಳಿದರು.

ಮೇಳದಲ್ಲಿ ಕೃಷಿಗೆ ಸಂಬಂಧಿಸಿದ ಎಲ್ಲ ಮಾಹಿತಿ, ತಂತ್ರಜ್ಞಾನ, ಪರಿಕರಗಳು ಮತ್ತು ರುಚಿಯಾದ ಹಳ್ಳಿಯ ಸೊಗಡಿನ ಮಧ್ಯಾಹ್ನದ ಊಟದ ವ್ಯವಸ್ಥೆ ಕಲ್ಪಿಸಿರುವುದು ಸಂತಸದ ವಿಷಯ. ಈ ಮೇಳದಲ್ಲಿ ಕೃಷಿಯಲ್ಲಿ ನಿರತರಾದ ಮಹಿಳೆಯರನ್ನು ಗುರುತಿಸಿ ಸನ್ಮಾನಿಸುವುದು ಅಭಿನಂದನಾರ್ಹ. ಈ ನಾಲ್ಕು ದಿನಗಳ ಬೃಹತ್ ಮೇಳ ಆಯೋಜಿಸಿರುವ ಕೃಷಿ ವಿಶ್ವವಿದ್ಯಾನಿಲಯದ ಪ್ರತಿಯೊಬ್ಬರನ್ನು ಅಭಿನಂದಿಸುತ್ತೇನೆ ಎಂದು ಅವರು ಹೇಳಿದರು.

ಕೃಷಿ ವಿವಿ ಕುಲಪತಿ ಡಾ.ಎಸ್.ವಿ.ಸುರೇಶ ಮಾತನಾಡಿ, ಕೃಷಿ ವಿಶ್ವವಿದ್ಯಾನಿಲಯ ಆಯೋಜಿಸಿರುವ ನಾಲ್ಕು ದಿನಗಳ ಕೃಷಿಮೇಳ ಅಭೂತ ಪೂರ್ವಯಶಸ್ಸಿಗೆ ಸಾಕ್ಷಿಯಾಗಿದೆ ಎಂದು ತಿಳಿಸಿದರು.

ಡಿಜಿಟಲ್ ಕೃಷಿಯು ಭವಿಷ್ಯದ ಕೃಷಿಗೆ ಮುನ್ನುಡಿವಾಗಿದ್ದು, ಡಿಜಿಟಲ್ ತಂತ್ರಜ್ಞಾನಗಳಾದ ಕೃತಕ ಬುದ್ದಿಮತ್ತೆ, ಡೋನ್‍ಗಳ ಅಳವಡಿಕೆ, ಹವಾಮಾನ ಆಧಾರಿತ ಕೃಷಿಯು ಆಹಾರ ಉತ್ಪದನೆಯನ್ನು ಹೆಚ್ಚಿಸುವುದರ ಜೊತೆಗೆ ರೈತರನ್ನು ಆರ್ಥಿಕವಾಗಿ ಸಧೃಡರನ್ನಾಗಿ ಮಾಡಬಲ್ಲದು. ಮುಂದಿನ ದಿನಗಳಲ್ಲಿ ಡಿಜಿಟಲ್ ಕೃಷಿಯನ್ನು ಕೃಷಿ ಯಂತ್ರದಾರೆಗೆ ಅಳವಡಿಸಲು ಮಾರ್ಗಸೂಚಿಗಳನ್ನು ರೂಪಿಸಲಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲಾ ಮಟ್ಟದ ಪ್ರಗತಿಪರ ರೈತ, ಅತ್ಯುತ್ತಮ ಯುವ ರೈತ ಹಾಗೂ ರೈತ ಮಹಿಳಾ ಪ್ರಶಸ್ತಿಗಳನ್ನು ಪ್ರಧಾನ ಮಾಡಲಾಯಿತು. ಕುಲಸಚಿವ ಡಾ. ಕೆ.ಸಿ. ನಾರಾಯಣಸ್ವಾಮಿ, ಸಂಶೋಧನಾ ನಿರ್ದೇಶಕ ಡಾ. ಎಚ್.ಎಸ್. ಶಿವರಾಮು, ವಿಸ್ತರಣಾ ನಿರ್ದೇಶಕ ಡಾ. ವೈ.ಎನ್. ಶಿವಲಿಂಗಯ್ಯ ಸೇರಿದಂತೆ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ನಾಲ್ಕು ದಿನಗಳ ಕೃಷಿ ಮೇಳ: 34.13 ಲಕ್ಷ ಮಂದಿ ಭಾಗಿ, 6.17 ಕೋಟಿ ರೂ.ವಹಿವಾಟು

ನಾಲ್ಕು ದಿನಗಳ ಕೃಷಿ ಮೇಳದಲ್ಲಿ ಒಟ್ಟು 34.13 ಲಕ್ಷ ಮಂದಿ ಭಾಗವಹಿಸಿದ್ದು, ಒಟ್ಟು 6.17 ಕೋಟಿ ರೂ.ಗಳ ವಹಿವಾಟು ನಡೆದಿದೆ. ರಿಯಾಯಿತಿ ದರದ ಭೋಜನಾಲಯದಲ್ಲಿ 53,111 ಮಂದಿ ಮಧ್ಯಾಹ್ನದ ಊಟವನ್ನು ಸವಿದಿದ್ದಾರೆ. ಮೊದಲನೆ ದಿನ 3.82 ಲಕ್ಷ ಮಂದಿ ಮೇಳಕ್ಕೆ ಭೇಟಿ ನೀಡಿದ್ದು, 8.5 ಕೋಟಿ ರೂ.ಗಳ ವಹಿವಾಟು ನಡೆದಿದೆ.

ಎರಡನೆ ದಿನ 7.60 ಲಕ್ಷ ಮಂದಿ ಮೇಳಕ್ಕೆ ಭೇಟಿ ನೀಡಿದ್ದು, 1.25 ಕೋಟಿ ರೂ.ಗಳ ವಹಿವಾಟು ನಡೆದಿದೆ. ಮೂರನೆ ದಿನ 10.25 ಲಕ್ಷ ಮಂದಿ ಮೇಳಕ್ಕೆ ಭೇಟಿ ನೀಡಿದ್ದು, 1.75 ಕೋಟಿ ರೂ.ಗಳ ವಹಿವಾಟು ನಡೆದಿದೆ. ನಾಲ್ಕನೆ ದಿನದಂದು 12.46 ಲಕ್ಷ ಮಂದಿ ಮೇಳಕ್ಕೆ ಭೇಟಿ ನೀಡಿದ್ದು, 2.35 ಕೋಟಿ ರೂ.ಗಳ ವಹಿವಾಟು ನಡೆದಿದೆ ಎಂದು ಕೃಷಿ ವಿವಿ ಮಾಹಿತಿ ನೀಡಿದೆ.








share
ವಾರ್ತಾಭಾರತಿ
ವಾರ್ತಾಭಾರತಿ
Next Story
X