Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಬೆಂಗಳೂರಿನ 24 ಲಕ್ಷ ಆಸ್ತಿ ಮಾಲಕರಿಗೆ...

ಬೆಂಗಳೂರಿನ 24 ಲಕ್ಷ ಆಸ್ತಿ ಮಾಲಕರಿಗೆ ವಾಟ್ಸಾಪ್‍ನಲ್ಲಿ ಉಚಿತ ಇ-ಖಾತಾ ವಿತರಣೆ : ಮಹೇಶ್ವರ್ ರಾವ್

ವಾರ್ತಾಭಾರತಿವಾರ್ತಾಭಾರತಿ17 Nov 2026 10:39 PM IST
share
ಬೆಂಗಳೂರಿನ 24 ಲಕ್ಷ ಆಸ್ತಿ ಮಾಲಕರಿಗೆ ವಾಟ್ಸಾಪ್‍ನಲ್ಲಿ ಉಚಿತ ಇ-ಖಾತಾ ವಿತರಣೆ : ಮಹೇಶ್ವರ್ ರಾವ್

ಬೆಂಗಳೂರು : ಜಿಬಿಎ ವ್ಯಾಪ್ತಿಯ 5 ನಗರ ಪಾಲಿಕೆಗಳಲ್ಲಿನ ಸುಮಾರು 24 ಲಕ್ಷ ಆಸ್ತಿ ಮಾಲಕರಿಗೆ ಉಚಿತವಾಗಿ ವಾಟ್ಸಾಪ್ ಮೂಲಕ ಇ-ಖಾತಾ ವಿತರಿಸಲಾಗುತ್ತಿದೆ ಎಂದು ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ತಿಳಿಸಿದ್ದಾರೆ.

ಮಂಗಳವಾರ ಈ ಸಂಬಂಧ ಮಾಹಿತಿ ನೀಡಿರುವ ಅವರು, ರಾಜ್ಯ ಸರಕಾರದ 6ನೇ ಗ್ಯಾರಂಟಿಯಾದ ‘ಭೂ-ಗ್ಯಾರಂಟಿ - ನನ್ನ ಖಾತಾ, ನನ್ನ ಹಕ್ಕು’ ಅಭಿಯಾನದಡಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಹಾಗೂ ಐದು ಬೆಂಗಳೂರು ನಗರ ಪಾಲಿಕೆಗಳ ವ್ಯಾಪ್ತಿಯ ಸುಮಾರು 24 ಲಕ್ಷ ಆಸ್ತಿ ಮಾಲಕರಿಗೆ ಇ-ಖಾತಾ ಪ್ರಮಾಣಪತ್ರಗಳನ್ನು ಉಚಿತವಾಗಿ ವಾಟ್ಸಾಪ್ ಮೂಲಕ ನೇರವಾಗಿ ತಲುಪಿಸಲಾಗುತ್ತಿದೆ ಎಂದರು.

ಆಸ್ತಿ ಮಾಲಕರು ತಮ್ಮ ಇ-ಖಾತಾ ಪ್ರಮಾಣಪತ್ರವನ್ನು ಪಿಡಿಎಫ್ ರೂಪದಲ್ಲಿ ವಾಟ್ಸಾಪ್ ಮೂಲಕ ಪಡೆಯಲಿದ್ದಾರೆ. ಇದರಿಂದ ಸಾರ್ವಜನಿಕರು ಯಾವುದೇ ಸರಕಾರಿ ಕಚೇರಿಗೆ ಭೇಟಿ ನೀಡದೆ ಅಥವಾ ಮಧ್ಯವರ್ತಿಗಳನ್ನು ಸಂಪರ್ಕಿಸದೆ ತಮ್ಮ ಇ-ಖಾತಾ ಪ್ರಮಾಣಪತ್ರವನ್ನು ಡೌನ್‍ಲೋಡ್ ಮಾಡಿಕೊಂಡು ಡಿಜಿಟಲ್ ರೂಪದಲ್ಲಿ ಸುರಕ್ಷಿತವಾಗಿರಿಸಿಕೊಳ್ಳಬಹುದು ಎಂದು ಮುಖ್ಯ ಆಯುಕ್ತರು ಹೇಳಿದರು.

ವಾಟ್ಸಾಪ್ ಸಂದೇಶದೊಂದಿಗೆ ಜಿಬಿಎಯ ಅಧಿಕೃತ ಇ-ಆಸ್ತಿ ಪೋರ್ಟಲ್ ಆದ https://GBAeAasthi.karnataka.gov.in ಲಿಂಕ್ ಅನ್ನು ಸಹ ನೀಡಲಾಗಿದ್ದು, ಸಾರ್ವಜನಿಕರು ತಮ್ಮ ಇಪಿಐಡಿ ಸಂಖ್ಯೆಯನ್ನು ಬಳಸಿ ಆನ್‍ಲೈನ್ ಮೂಲಕ ಇ-ಖಾತಾದಲ್ಲಿ ತಿದ್ದುಪಡಿ ಅಥವಾ ಮಾಲಕತ್ವ ಬದಲಾವಣೆ(ಮ್ಯುಟೇಷನ್) ಪ್ರಕ್ರಿಯೆಗಾಗಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಮುಖ್ಯ ಆಯುಕ್ತರು ತಿಳಿಸಿದರು.

ಸರಕಾರಿ ಸೇವೆಗಳನ್ನು ನೇರವಾಗಿ ನಾಗರಿಕರ ಮನೆಬಾಗಿಲಿಗೆ ತಲುಪಿಸುವ ಈ ಉಪಕ್ರಮವು ಅನಗತ್ಯ ಕಚೇರಿ ಭೇಟಿಗಳನ್ನು ತಪ್ಪಿಸುವುದರ ಜೊತೆಗೆ, ಪಾರದರ್ಶಕ, ಸುಲಭ ಹಾಗೂ ನಾಗರಿಕ ಸ್ನೇಹಿ ಸೇವಾ ವಿತರಣೆಗೆ ಉತ್ತೇಜನ ನೀಡಲಿದೆ. ಆದ್ದರಿಂದ, ಎಲ್ಲಾ ಆಸ್ತಿ ಮಾಲಕರು ತಮ್ಮ ವಾಟ್ಸಾಪ್ ಸಂದೇಶಗಳನ್ನು ಪರಿಶೀಲಿಸಿ, ಇ-ಖಾತಾ ಪಿಡಿಎಫ್ ಪ್ರಮಾಣಪತ್ರವನ್ನು ಪಡೆದುಕೊಳ್ಳುವಂತೆ ಕೋರಲಾಗಿದೆ ಎಂದು ಮುಖ್ಯ ಆಯುಕ್ತರು ತಿಳಿಸಿದರು.

Tags

Maheshwar RaoE-khata
share
ವಾರ್ತಾಭಾರತಿ
ವಾರ್ತಾಭಾರತಿ
Next Story
X