Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಐದು ಬಾರಿ ತಿರಸ್ಕೃತವಾದರೂ ಪಟ್ಟು ಬಿಡದ...

ಐದು ಬಾರಿ ತಿರಸ್ಕೃತವಾದರೂ ಪಟ್ಟು ಬಿಡದ ಸರಕಾರ: ಕಾಡುಗೊಲ್ಲರನ್ನು ಎಸ್ಟಿ ಪಟ್ಟಿಗೆ ಸೇರಿಸಲು ಮತ್ತೆ ಶಿಫಾರಸು

ವಾರ್ತಾಭಾರತಿವಾರ್ತಾಭಾರತಿ21 Nov 2026 4:26 PM IST
share
ಐದು ಬಾರಿ ತಿರಸ್ಕೃತವಾದರೂ ಪಟ್ಟು ಬಿಡದ ಸರಕಾರ: ಕಾಡುಗೊಲ್ಲರನ್ನು ಎಸ್ಟಿ ಪಟ್ಟಿಗೆ ಸೇರಿಸಲು ಮತ್ತೆ ಶಿಫಾರಸು

ಬೆಂಗಳೂರು: ಕಾಡುಗೊಲ್ಲ (ಅಡವಿಗೊಲ್ಲ) ಮತ್ತು ಹಟ್ಟಿಗೊಲ್ಲ ಸಮುದಾಯವನ್ನು ಪರಿಶಿಷ್ಟ ಪಂಗಡಗಳ (ಎಸ್ಟಿ) ಪಟ್ಟಿಗೆ ಸೇರಿಸಬೇಕೆಂಬ ದಶಕಗಳ ಬೇಡಿಕೆಗೆ ರಾಜ್ಯ ಸರ್ಕಾರ ಮತ್ತೊಮ್ಮೆ ಬಲ ತುಂಬಿದೆ. ಈ ಹಿಂದೆ ರಾಜ್ಯ ಸರ್ಕಾರ ಸಲ್ಲಿಸಿದ್ದ ಪ್ರಸ್ತಾವವನ್ನು ಕೇಂದ್ರ ಸರ್ಕಾರ ಐದು ಬಾರಿ ತಿರಸ್ಕರಿಸಿದ್ದರೂ, ಸಮುದಾಯದ ಬೇಡಿಕೆಯನ್ನು ಕೈಬಿಡದ ರಾಜ್ಯ ಸರ್ಕಾರ ಇದೀಗ ಹೊಸದಾಗಿ ಸಮಗ್ರ ಅಧ್ಯಯನ ನಡೆಸಿ, ಕೇಂದ್ರಕ್ಕೆ ಮತ್ತೊಮ್ಮೆ ಶಿಫಾರಸು ಮಾಡಲು ನಿರ್ಧರಿಸಿದೆ.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧ್ಯಕ್ಷತೆಯಲ್ಲಿ ನವೆಂಬರ್ 19ರಂದು ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಈ ಬಾರಿ ಹಿಂದಿನ ವರದಿಗಳನ್ನೇ ಪುನರಾವರ್ತಿಸುವ ಬದಲು, ಕೇಂದ್ರ ಸರ್ಕಾರದ ಆಕ್ಷೇಪಣೆಗಳಿಗೆ ಸೂಕ್ತ ಉತ್ತರ ನೀಡುವ ರೀತಿಯಲ್ಲಿ ಹೊಸ ಕುಲಶಾಸ್ತ್ರೀಯ ಅಧ್ಯಯನ ನಡೆಸಿ ವರದಿ ಸಲ್ಲಿಸಲು ಸರ್ಕಾರ ಮುಂದಾಗಿದೆ.

ಮೂರು ತಿಂಗಳಲ್ಲಿ ಹೊಸ ಅಧ್ಯಯನ ವರದಿ

ಕಾಡುಗೊಲ್ಲ ಸಮುದಾಯದ ಸಾಮಾಜಿಕ, ಸಾಂಸ್ಕೃತಿಕ, ಆರ್ಥಿಕ ಮತ್ತು ಬುಡಕಟ್ಟು ಹಿನ್ನೆಲೆಯನ್ನು ಸಮಗ್ರವಾಗಿ ಅಧ್ಯಯನ ಮಾಡಿ, ಹೊಸ ವರದಿ ಸಿದ್ಧಪಡಿಸಲು ಸರ್ಕಾರ ಕ್ರಮ ಕೈಗೊಂಡಿದೆ.

ಇದಕ್ಕಾಗಿ ಧಾರವಾಡದ 'ಸೆಂಟರ್ ಫಾರ್ ಮಲ್ಟಿ-ಡಿಸಿಪ್ಲಿನರಿ ಡೆವಲಪ್ಮೆಂಟ್ ರಿಸರ್ಚ್' (CMDR) ಸಂಸ್ಥೆಯ ತಜ್ಞ ಮಾನವಶಾಸ್ತ್ರಜ್ಞರ ನೆರವು ಪಡೆಯಲು ನಿರ್ಧರಿಸಲಾಗಿದೆ.

ಈ ಸಂಬಂಧ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯು ನವೆಂಬರ್ 18ರಂದೇ ಆದೇಶ ಹೊರಡಿಸಿದೆ. ಮೂರು ತಿಂಗಳೊಳಗೆ ಅಧ್ಯಯನ ಪೂರ್ಣಗೊಳಿಸಿ ವರದಿ ಸಲ್ಲಿಸುವಂತೆ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ನಿರ್ದೇಶಕರು ಹಾಗೂ ಮೈಸೂರಿನ ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆಯ ನಿರ್ದೇಶಕರಿಗೆ ಸೂಚಿಸಲಾಗಿದೆ.

ಹೊಸ ಅಧ್ಯಯನದ ಮೂಲಕ ಸಮುದಾಯದ ವಿಶಿಷ್ಟ ಜೀವನಶೈಲಿ, ಸಾಮಾಜಿಕ ಸ್ಥಿತಿ, ಸಾಂಪ್ರದಾಯಿಕ ಆಚರಣೆಗಳು, ವಾಸಸ್ಥಳ ಮತ್ತು ಬುಡಕಟ್ಟು ಲಕ್ಷಣಗಳನ್ನು ದಾಖಲಿಸಿ, ಕೇಂದ್ರದ ಪರಿಶೀಲನೆಗೆ ಅಗತ್ಯವಿರುವ ಸಮಗ್ರ ದಾಖಲೆ ಸಿದ್ಧಪಡಿಸುವ ಉದ್ದೇಶ ಸರ್ಕಾರಕ್ಕಿದೆ.

2015ರಿಂದ ಐದು ಬಾರಿ ಪ್ರಸ್ತಾವ: ಐದೂ ಬಾರಿ ತಿರಸ್ಕಾರ

ಕಾಡುಗೊಲ್ಲರನ್ನು ಎಸ್ಟಿ ಪಟ್ಟಿಗೆ ಸೇರಿಸುವಂತೆ ರಾಜ್ಯ ಸರ್ಕಾರ 2015ರಿಂದ ನಿರಂತರವಾಗಿ ಪ್ರಯತ್ನಿಸುತ್ತಿದೆ. 2015ರ ಮಾರ್ಚ್ 18ರಂದು ಮೊದಲ ಬಾರಿಗೆ ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವಾಲಯಕ್ಕೆ ಪ್ರಸ್ತಾವ ಸಲ್ಲಿಸಲಾಗಿತ್ತು. ಅದೇ ವರ್ಷ ಆಗಸ್ಟ್ 17ರಂದು ಮತ್ತೊಂದು ಪ್ರಸ್ತಾವವನ್ನೂ ಕಳುಹಿಸಲಾಗಿತ್ತು.

ನಂತರ 2018ರ ಸೆಪ್ಟಂಬರ್ 28, 2021ರ ಅಕ್ಟೋಬರ್ 12 ಮತ್ತು 2022ರ ಫೆಬ್ರವರಿ 4, 2023ರ ಜೂನ್ 5 ಹಾಗೂ 2025ರ ಎಪ್ರಿಲ್ 3ರಂದು ಕೇಂದ್ರಕ್ಕೆ ಪ್ರಸ್ತಾವಗಳನ್ನು ಸಲ್ಲಿಸಲಾಗಿತ್ತು.

ಆದರೆ, ಭಾರತದ ರಿಜಿಸ್ಟ್ರಾರ್ ಜನರಲ್ (ORGI) ಕಚೇರಿಯು ಈ ಪ್ರಸ್ತಾವಗಳನ್ನು ಪರಿಶೀಲಿಸಿ ಐದು ಸಂದರ್ಭಗಳಲ್ಲಿ ಶಿಫಾರಸು ಮಾಡಲು ನಿರಾಕರಿಸಿತ್ತು. 2017ರ ಫೆಬ್ರವರಿ 6, 2019ರ ಫೆಬ್ರವರಿ 18, 2022ರ ಸೆಪ್ಟಂಬರ್ 22, 2024ರ ಮಾರ್ಚ್ 27 ಮತ್ತು 2026ರ ಜೂನ್ 15ರಂದು ಆಕ್ಷೇಪಣೆಗಳನ್ನು ವ್ಯಕ್ತಪಡಿಸಿತ್ತು.

ಹಿಂದೆ ಸಲ್ಲಿಸಿದ ಪ್ರಸ್ತಾವಗಳಲ್ಲಿ ಹೊಸ ಮಾಹಿತಿ ಅಥವಾ ಹೆಚ್ಚುವರಿ ಸಾಕ್ಷ್ಯಾಧಾರಗಳಿಲ್ಲ ಎಂಬುದು ಕೇಂದ್ರದ ಪ್ರಮುಖ ಆಕ್ಷೇಪಣೆಯಾಗಿತ್ತು. 2022ರ ಸೆಪ್ಟಂಬರ್ 14ರಂದು ಪರಿಷ್ಕರಿಸಲಾದ ಕೇಂದ್ರದ ಮಾರ್ಗಸೂಚಿಗಳ ಪ್ರಕಾರ, ಭಾರತೀಯ ರಿಜಿಸ್ಟ್ರಾರ್ ಜನರಲ್ನ ಒಪ್ಪಿಗೆ ಇಲ್ಲದೆ ಎಸ್ಟಿ ಪಟ್ಟಿಗೆ ಹೊಸ ಸಮುದಾಯವನ್ನು ಸೇರಿಸುವ ಪ್ರಕ್ರಿಯೆ ಮುಂದುವರಿಸಲು ಸಾಧ್ಯವಿಲ್ಲ.

ಈ ಹಿನ್ನೆಲೆಯಲ್ಲಿ ಜುಲೈ 22, 2026ರಂದು ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವಾಲಯವು ರಾಜ್ಯದ ಪ್ರಸ್ತಾವವನ್ನು ಅಧಿಕೃತವಾಗಿ ತಿರಸ್ಕರಿಸಿತ್ತು.

ಕೇಂದ್ರ ಸಚಿವ ಸೋಮಣ್ಣ ಪತ್ರದ ಬಳಿಕ ಮತ್ತೆ ಚುರುಕಾದ ಪ್ರಕ್ರಿಯೆ

ಪ್ರಸ್ತಾವ ಐದನೇ ಬಾರಿಯೂ ತಿರಸ್ಕೃತಗೊಂಡ ಹಿನ್ನೆಲೆಯಲ್ಲಿ ಈ ವಿಚಾರ ಮತ್ತೆ ಮುನ್ನೆಲೆಗೆ ಬಂದಿತ್ತು. ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಅಕ್ಟೋಬರ್ 7 ಮತ್ತು ಅಕ್ಟೋಬರ್ 30ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಪತ್ರ ಬರೆದಿದ್ದರು. ಹಿಂದಿನ ಪ್ರಸ್ತಾವಗಳಲ್ಲಿದ್ದ ಮಾಹಿತಿಯನ್ನೇ ಮತ್ತೆ ಮತ್ತೆ ಸಲ್ಲಿಸಿರುವುದರಿಂದ ಕೇಂದ್ರ ಮಟ್ಟದಲ್ಲಿ ಅನುಮೋದನೆ ದೊರೆತಿಲ್ಲ ಎಂದು ಅವರು ಗಮನ ಸೆಳೆದಿದ್ದರು.

ಕೇವಲ ಹಳೆಯ ದಾಖಲೆಗಳನ್ನು ಪುನಃ ಸಲ್ಲಿಸುವ ಬದಲು, ತಜ್ಞರ ಸಮಿತಿ ರಚಿಸಿ ಕೇಂದ್ರ ಸರ್ಕಾರದ ಪರಿಷ್ಕೃತ ಮಾನದಂಡಗಳಿಗೆ ಅನುಗುಣವಾಗಿ ಹೊಸ ಮತ್ತು ಸಮಗ್ರ ವರದಿ ಸಿದ್ಧಪಡಿಸಬೇಕು ಎಂದು ಅವರು ಸಲಹೆ ನೀಡಿದ್ದರು.

ಇದೇ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಕಾಡುಗೊಲ್ಲ ಅಭಿವೃದ್ಧಿ ನಿಗಮದ ಅಧ್ಯಕ್ಷ ಮಹೇಶ್ ಎಂ. ಅಕ್ಟೋಬರ್ 31ರಂದು ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದ್ದರು. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವಾಸಿಸುತ್ತಿರುವ ಕಾಡುಗೊಲ್ಲರ ಸ್ಥಿತಿಗತಿ ಮತ್ತು ಅವರ ಬಹುದಿನಗಳ ಬೇಡಿಕೆಯನ್ನು ಸರ್ಕಾರದ ಗಮನಕ್ಕೆ ತಂದಿದ್ದರು.

12 ಜಿಲ್ಲೆ, 40 ತಾಲೂಕುಗಳಲ್ಲಿ 6 ಲಕ್ಷಕ್ಕೂ ಅಧಿಕ ಕಾಡುಗೊಲ್ಲರು

ರಾಜ್ಯದ 12 ಜಿಲ್ಲೆಗಳ 40 ತಾಲೂಕುಗಳ ವ್ಯಾಪ್ತಿಯಲ್ಲಿ ಒಟ್ಟು 1,273 ಹಟ್ಟಿಗಳಲ್ಲಿ ಆರು ಲಕ್ಷಕ್ಕೂ ಹೆಚ್ಚು ಕಾಡುಗೊಲ್ಲರು ವಾಸಿಸುತ್ತಿದ್ದಾರೆ ಎಂದು ಅಭಿವೃದ್ಧಿ ನಿಗಮದ ಅಧ್ಯಕ್ಷರು ಸರ್ಕಾರಕ್ಕೆ ಸಲ್ಲಿಸಿರುವ ಮನವಿಯಲ್ಲಿ ತಿಳಿಸಿದ್ದಾರೆ.

ಈ ಸಮುದಾಯದ ಅನೇಕ ಕುಟುಂಬಗಳು ಮುಖ್ಯ ಜನವಸತಿ ಪ್ರದೇಶಗಳಿಂದ ಸುಮಾರು 3ರಿಂದ 4 ಕಿಲೋಮೀಟರ್ ದೂರದಲ್ಲಿ, ಅರಣ್ಯದಂಚಿನ ಪ್ರದೇಶಗಳಲ್ಲಿ ವಾಸಿಸುತ್ತಿವೆ. ರಸ್ತೆ, ಕುಡಿಯುವ ನೀರು ಸೇರಿದಂತೆ ಅಗತ್ಯ ಮೂಲಸೌಕರ್ಯಗಳ ಕೊರತೆಯ ನಡುವೆಯೂ ಜೀವನ ನಡೆಸುತ್ತಿವೆ ಎಂದು ಮನವಿಯಲ್ಲಿ ವಿವರಿಸಲಾಗಿದೆ.

ಸಮುದಾಯದ ವಿಶಿಷ್ಟ ಸಾಮಾಜಿಕ ಮತ್ತು ಸಾಂಸ್ಕೃತಿಕ ಹಿನ್ನೆಲೆಯನ್ನು ಪರಿಗಣಿಸಿ, ಎಸ್ಟಿ ಪಟ್ಟಿಗೆ ಸೇರ್ಪಡೆಗೊಳಿಸುವ ಪ್ರಕ್ರಿಯೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ಸಚಿವ ಸಂಪುಟದ ಅನುಮೋದನೆ ಪಡೆದು ಕೇಂದ್ರಕ್ಕೆ ಮತ್ತೊಮ್ಮೆ ಶಿಫಾರಸು ಸಲ್ಲಿಸಬೇಕು ಎಂದವರು ಮನವಿ ಮಾಡಿದ್ದರು.

ಈ ಬಾರಿ ಹೊಸ ದಾಖಲೆಗಳೊಂದಿಗೆ ಕೇಂದ್ರಕ್ಕೆ ಮನವಿ

ಹಿಂದಿನ ಐದು ಪ್ರಯತ್ನಗಳಲ್ಲಿಯೂ ಎದುರಾದ ಅಡೆತಡೆಗಳನ್ನು ಗಮನದಲ್ಲಿಟ್ಟುಕೊಂಡು ರಾಜ್ಯ ಸರ್ಕಾರ ಈ ಬಾರಿ ಹೊಸ ರೀತಿಯಲ್ಲಿ ಪ್ರಸ್ತಾವ ಸಿದ್ಧಪಡಿಸಲು ಮುಂದಾಗಿದೆ. ಧಾರವಾಡದ CMDR ಸಂಸ್ಥೆಯ ಮೂಲಕ ನಡೆಸಲಾಗುವ ಅಧ್ಯಯನವು ಈ ಪ್ರಕ್ರಿಯೆಯಲ್ಲಿ ಪ್ರಮುಖ ಪಾತ್ರ ವಹಿಸಲಿದೆ.

ಮೂರು ತಿಂಗಳೊಳಗೆ ವರದಿ ಸಿದ್ಧಪಡಿಸಿ, ಅಗತ್ಯ ದಾಖಲೆಗಳೊಂದಿಗೆ ಕೇಂದ್ರ ಸರ್ಕಾರಕ್ಕೆ ಮತ್ತೊಮ್ಮೆ ಶಿಫಾರಸು ಸಲ್ಲಿಸುವುದು ಸರ್ಕಾರದ ಮುಂದಿನ ಹಂತವಾಗಿದೆ.

ಕಾಡುಗೊಲ್ಲ ಸಮುದಾಯದ ಬಹುದಿನಗಳ ಬೇಡಿಕೆಗೆ ಮತ್ತೊಮ್ಮೆ ರಾಜಕೀಯ ಮತ್ತು ಆಡಳಿತಾತ್ಮಕ ಬೆಂಬಲ ದೊರೆತಿರುವುದು ಈ ನಿರ್ಧಾರದ ವಿಶೇಷತೆಯಾಗಿದೆ.

Tags

Fresh RecommendationKadugolla CommunityST List
share
ವಾರ್ತಾಭಾರತಿ
ವಾರ್ತಾಭಾರತಿ
Next Story
X