Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳುವ...

ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳುವ ಮೊದಲೇ ‘ಕರ್ನಾಟಕ ನಕ್ಸಲ್ ಮುಕ್ತ’ ಮಾಡಿದ್ದೇವೆ : ಜಿ.ಪರಮೇಶ್ವರ್

ವಾರ್ತಾಭಾರತಿವಾರ್ತಾಭಾರತಿ2 April 2026 7:26 PM IST
share
ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳುವ ಮೊದಲೇ ‘ಕರ್ನಾಟಕ ನಕ್ಸಲ್ ಮುಕ್ತ’ ಮಾಡಿದ್ದೇವೆ : ಜಿ.ಪರಮೇಶ್ವರ್
ಪೊಲೀಸ್ ಧ್ವಜ ದಿನಾಚರಣೆ ಹಾಗೂ ಮುಖ್ಯಮಂತ್ರಿಗಳ ಪದಕ ಪ್ರದಾನ ಸಮಾರಂಭ

ಬೆಂಗಳೂರು : ಕೇಂದ್ರ ಗೃಹ ಸಚಿವ ಅಮಿತ್ ಶಾ ದೇಶವನ್ನು ನಕ್ಸಲ್ ಮುಕ್ತ ಮಾಡಿದ್ದೇವೆ ಎಂದು ಹೇಳಿದ್ದಾರೆ. ಆದರೆ, ಇದಕ್ಕೂ ಮೊದಲೇ ಕರ್ನಾಟಕ ರಾಜ್ಯವನ್ನು ನಕ್ಸಲ್ ಚಟುವಟಿಕೆ ಮುಕ್ತ ಮಾಡಿದ್ದೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

ಗುರುವಾರ ಕೋರಮಂಗಲದ ಕೆಎಸ್ಸಾಆರ್ಪಿ ಪೆರೇಡ್ ಮೈದಾನದಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ಏರ್ಪಡಿಸಿದ್ದ ಪೊಲೀಸ್ ಧ್ವಜ ದಿನಾಚರಣೆ ಹಾಗೂ ‘ಮುಖ್ಯಮಂತ್ರಿಗಳ ಪದಕ’ ಪ್ರದಾನ ಸಮಾರಂಭದ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇತ್ತೀಚಿಗೆ ದೇಶವನ್ನು ನಕ್ಸಲ್ ಮುಕ್ತ ಮಾಡಿದ್ದೇವೆ ಎಂದು ಹೇಳಿಕೆ ನೀಡಿದ್ದಾರೆ. ಆದರೆ, ಕರ್ನಾಟಕದಲ್ಲಿ ಬಹಳ ವರ್ಷಗಳ ಹಿಂದೆಯೇ ನಕ್ಸಲ್ ನಿಗ್ರಹ ಪಡೆ ಸ್ಥಾಪಿಸುವ ಮೂಲಕ ದೇಶದಲ್ಲೇ ಮೊದಲು ಕರ್ನಾಟಕವನ್ನು ನಾವು ನಕ್ಸಲ್ ಮುಕ್ತ ರಾಜ್ಯವನ್ನಾಗಿ ಮಾಡಿದ್ದೇವೆ ಎಂದು ತಿಳಿಸಿದರು.

ರಾಜ್ಯದಲ್ಲಿ ಶಾಂತಿ, ನೆಮ್ಮದಿ, ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸರು ಶ್ರಮ ಪಡುತ್ತಿದ್ದಾರೆ. ಅದರಲ್ಲಿ ಯಶಸ್ವಿಯಾಗಿದ್ದಾರೆ. ಇಂಡಿಯಾ ಜಸ್ಟೀಸ್ ವರದಿ ಪ್ರಕಾರ ದೇಶದಲ್ಲಿ ನೊಂದವರಿಗೆ ನ್ಯಾಯ ನೀಡುವುದರಲ್ಲಿ ಕರ್ನಾಟಕ ಮೊದಲ ಸ್ಥಾನದಲ್ಲಿದೆ ಎಂಬ ಗೊತ್ತಾಗಿದೆ. ವಿಶೇಷವಾಗಿ ನ್ಯಾಯ ಒದಗಿಸುವುದರಲ್ಲಿ ಪೊಲೀಸ್ ಇಲಾಖೆ ಉತ್ತಮವಾಗಿ ಕೆಲಸ ಮಾಡಿದೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಪೊಲೀಸ್ ಇಲಾಖೆಯು ಪ್ರತಿನಿತ್ಯ ಸವಾಲುಗಳನ್ನು ಎದುರಿಸುತ್ತದೆ. ಸವಾಲುಗಳ ಮಧ್ಯೆ ಕಳೆದ ಮೂರು ವರ್ಷಗಳಿಂದ ನಮ್ಮ ಸರಕಾರವು ಮುಖ್ಯಮಂತ್ರಿಗಳ ನೇತೃತ್ವದಲ್ಲಿ ರಾಜ್ಯದಲ್ಲಿ ಶಾಂತಿ ಕಾಪಾಡುವುದರಲ್ಲಿ ಯಶಸ್ವಿಯಾಗಿದೆ. ರಾಜ್ಯಕ್ಕೆ ಬಂಡಾವಾಳ ಹೂಡಿಕೆಗೆ ಬರುವ ಜನ ಶಾಂತಿ, ನೆಮ್ಮದಿಯನ್ನು ಬಯಸುತ್ತಾರೆ. ರಾಜ್ಯದಲ್ಲಿ ಸೌಹಾರ್ದಯುತ ವಾತಾವರಣ ಸೃಷ್ಟಿ ಮಾಡುವುದರಲ್ಲಿ ಪೊಲೀಸ್ ಇಲಾಖೆ ಯಶಸ್ವಿಯಾಗಿದೆ ಎಂದು ಅವರು ಹೇಳಿದರು.

ಕರ್ತವ್ಯದ ವೇಳೆ ಇಲಾಖೆಗೆ ಚ್ಯುತಿ ಬಾರದಂತೆ ಅತ್ಯಂತ ಕ್ಷಿಪ್ರವಾಗಿ ಅಪರಾಧಗಳನ್ನು ಪತ್ತೆ ಹಚ್ಚಿರುವುದನ್ನು ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳು ತೋರಿಸಿಕೊಟ್ಟಿದೆ. ಕಾರ್ಯದಕ್ಷತೆಗೆ, ಸಾಮಾಥ್ರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸುತ್ತೇನೆ ಎಂದ ಅವರು, ರಾಜ್ಯದಲ್ಲಿ ಡ್ರಗ್ಸ್ ಜಾಲವನ್ನು ಸಂಪೂರ್ಣವಾಗಿ ಮಟ್ಟ ಹಾಕಲು ನಮ್ಮ ಸರಕಾರವು ಮುಂದಾಗಿದ್ದು, ಡ್ರಗ್ಸ್ ಮುಕ್ತ ಕರ್ನಾಟಕ ಮಾಡುವುದಾಗಿ ಮಾನ್ಯ ಮುಖ್ಯಮಂತ್ರಿಗಳು ಘೋಷಣೆ ಮಾಡಿದ್ದಾರೆ. ಕಳೆದ ಮೂರು ವರ್ಷಗಳಲ್ಲಿ ಸಾವಿರಾರು ಕೋಟಿ ರೂ. ಮೌಲ್ಯದ ಮಾದಕ ದ್ರವ್ಯ ಪತ್ತೆಹಚ್ಚುವ ಮೂಲಕ ದಂಧೆಯಲ್ಲಿ ತೊಡಗಿದ ಅನೇಕ ಆರೋಪಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗಿದೆ ಎಂದರು.

ದೇಶದಲ್ಲಿ ಸೈಬರ್ ಕ್ರೈಂ ಹಾವಳಿ ಹೆಚ್ಚಾಗುತ್ತಿದೆ. ದೇಶದಲ್ಲೇ ಮೊಟ್ಟ ಮೊದಲ ಬಾರಿಗೆ ಕರ್ನಾಟಕವೂ ಸೈಬರ್ ಕಮಾಂಡ್ ಯೂನಿಟ್ ಸ್ಥಾಪಿಸಿ, ಡಿಜಿ ಶ್ರೇಣಿಯ ಅಧಿಕಾರಿಯನ್ನು ನೇಮಿಸಿದೆ. ಸೈಬರ್ ಕಮಾಂಡ್ ಯೂನಿಟ್‍ಗೆ ಹೆಚ್ಚು ಪ್ರೋತ್ಸಾಹಿಸಿ ಮೂಲಕ ಸೈಬರ್ ಅಪರಾಧಗಳನ್ನು ಕಡಿಮೆ ಮಾಡುವುದರಲ್ಲಿ ಯಶಸ್ವಿಯಾಗಿದ್ದೇವೆ. ಅದೇ ರೀತಿ, ಆಧುನಿಕತೆ ಪ್ರತಿನಿತ್ಯ ಸವಾಲುಗಳನ್ನು ಒಟ್ಟುತ್ತಿದೆ. ಎಲ್ಲ ಹಂತದಲ್ಲಿಯೂ ತರಬೇತಿಯನ್ನು ಪಡೆಯುವ ಮೂಲಕ ಕಾರ್ಯಕ್ಷಮತೆಯನ್ನು ಹೆಚ್ಚಿಸಿಕೊಂಡು ಕೆಲಸ ಮಾಡಬೇಕಿದೆ ಎಂದು ಹೇಳಿದರು.

‘ಕವಿತಾಳ’ ದೇಶದ ಅತ್ಯುತ್ತಮ ಪೊಲೀಸ್ ಠಾಣೆ: ‘ರಾಯಚೂರು ಜಿಲ್ಲೆಯ ಕವಿತಾಳ ಪೊಲೀಸ್ ಠಾಣೆಯನ್ನು ದೇಶದ 3ನೆ ಅತ್ಯುತ್ತಮ ಪೊಲೀಸ್ ಠಾಣೆ ಎಂದು ಕೇಂದ್ರ ಗೃಹ ಇಲಾಖೆ ಗುರುತಿಸಿದೆ. ಮುಂದಿನ ದಿನಗಳಲ್ಲಿ ರಾಜ್ಯದ ಎಲ್ಲ ಪೊಲೀಸ್ ಠಾಣೆಗಳು, ಕವಿತಾಳ ಪೊಲೀಸ್ ಠಾಣೆಯಂತೆಯೇ ಅತ್ಯುತ್ತಮ ಪೊಲೀಸ್ ಠಾಣೆಗಳಾಗಬೇಕು ಎಂದು ಸರಕಾರ ಬಯಸುತ್ತದೆ’

-ಡಾ.ಜಿ.ಪರಮೇಶ್ವರ್, ಗೃಹ ಸಚಿವ

Tags

G. Parameshwar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X