Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ‘ಹಳ್ಳಿಕಾರ್ ಸಮುದಾಯ’ಕ್ಕೆ ಸ್ಥಾನಮಾನ...

‘ಹಳ್ಳಿಕಾರ್ ಸಮುದಾಯ’ಕ್ಕೆ ಸ್ಥಾನಮಾನ ಕಲ್ಪಿಸಲು ಪ್ರಯತ್ನ: ಡಾ.ಜಿ.ಪರಮೇಶ್ವರ್

ವಾರ್ತಾಭಾರತಿವಾರ್ತಾಭಾರತಿ4 Oct 2026 6:09 PM IST
share
‘ಹಳ್ಳಿಕಾರ್ ಸಮುದಾಯ’ಕ್ಕೆ ಸ್ಥಾನಮಾನ ಕಲ್ಪಿಸಲು ಪ್ರಯತ್ನ: ಡಾ.ಜಿ.ಪರಮೇಶ್ವರ್

ಬೆಂಗಳೂರು : ‘ಹಳ್ಳಿಕಾರ್ ಸಮುದಾಯ’ವು ರಾಜ್ಯದಲ್ಲಿ ಅತ್ಯಂತ ಕಡಿಮೆ ಜನಸಂಖ್ಯೆ ಹೊಂದಿರುವ ಸಣ್ಣ ಸಮುದಾಯಗಳಲ್ಲಿ ಒಂದಾಗಿದ್ದು, ನಿರ್ಲಕ್ಷ್ಯಕ್ಕೆ ಒಳಗಾಗಿರುವ ಸಮುದಾಯ. ಈ ಸಮುದಾಯಕ್ಕೆ ಸೂಕ್ತ ಸ್ಥಾನಮಾನ ಕಲ್ಪಿಸುವ ಅಗತ್ಯವಿದೆ. ಹಿಂದುಳಿದ ವರ್ಗದ ಸೂಕ್ತ ಪ್ರವರ್ಗಕ್ಕೆ ಸೇರಿಸುವ ವಿಚಾರದಲ್ಲಿ ನನ್ನ ಸಂಪೂರ್ಣ ಸಹಮತಿ ಇದ್ದು, ಈ ಕುರಿತು ಸಿಎಂ ಜತೆಗೆ ಚರ್ಚಿಸುತ್ತೇನೆ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ರವಿವಾರ ಇಲ್ಲಿನ ಮೈಸೂರು ರಸ್ತೆಯ ಪೂರ್ಣಿಮಾ ಪ್ಯಾಲೇಸ್‍ನಲ್ಲಿ ಆರ್‍ಎಂಆರ್ ಹಳ್ಳಿಕಾರ್ ಫೌಂಡೇಷನ್ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ 2025-26ನೇ ಸಾಲಿನ ಎಸ್‍ಎಸ್‍ಎಲ್‍ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಉತ್ತೀರ್ಣರಾದ ಮತ್ತು ಅತ್ಯಧಿಕ ಅಂಕಗಳಿಸಿದ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ವಿದ್ಯಾರ್ಥಿವೇತನ ವಿತರಣಾ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ರಾಜ್ಯದಲ್ಲಿ ಅನೇಕ ಸಮುದಾಯಗಳು ನಿರ್ಲಕ್ಷ್ಯಕ್ಕೆ ಒಳಗಾಗಿವೆ. ಇಂತಹ ಸಮುದಾಯಗಳ ಸ್ಥಿತಿಗತಿಗಳನ್ನು ಅಧ್ಯಯನ ಮಾಡಲು ಚಿನ್ನಸ್ವಾಮಿ, ವೆಂಕಟಸ್ವಾಮಿ ಮತ್ತು ಕಾಂತರಾಜ್ ಆಯೋಗಗಳನ್ನು ರಚಿಸಲಾಗಿತ್ತು. ಯಾವ ಸಮುದಾಯಗಳು ನಿರ್ಲಕ್ಷ್ಯಕ್ಕೆ ಒಳಗಾಗಿವೆ ಎಂಬುದನ್ನು ಗುರುತಿಸಿ, ಅವುಗಳಿಗೆ ಉತ್ತೇಜನ ನೀಡುವ ರೀತಿಯಲ್ಲಿ ಸರಕಾರಗಳು ಕ್ರಮ ತೆಗೆದುಕೊಳ್ಳಬೇಕೆಂಬ ಉದ್ದೇಶದಿಂದ ಈ ಆಯೋಗಗಳನ್ನು ರಚಿಸಲಾಗಿತ್ತು. ಆದರೂ ಬಹಳಷ್ಟು ಸಮುದಾಯಗಳು ಇನ್ನೂ ಹಿಂದುಳಿದಿವೆ ಎಂದು ಅವರು ತಿಳಿಸಿದರು.

ಸಂವಿಧಾನದ ಆಶಯದಂತೆ ಪ್ರತಿಯೊಬ್ಬರಿಗೂ ಸ್ವಾಭಿಮಾನದ ಬದುಕು ದೊರೆಯಬೇಕು. ಅದನ್ನೇ ಡಾ. ಬಿ.ಆರ್.ಅಂಬೇಡ್ಕರ್ ಸಂವಿಧಾನದಲ್ಲಿ ಪ್ರತಿಪಾದಿಸಿದ್ದಾರೆ. ಹಳ್ಳಿಕಾರ್ ಸಮುದಾಯವು ಹಿಂದುಳಿದ ವರ್ಗದ ಯಾವ ಪ್ರವರ್ಗಕ್ಕೆ ಸೇರಲು ಅರ್ಹವಾಗಿದೆಯೋ, ಆ ಪ್ರವರ್ಗಕ್ಕೆ ಸೇರಿಸುವ ನಿಟ್ಟಿನಲ್ಲಿ ಪ್ರಯತ್ನ ಮಾಡುತ್ತೇನೆ ಎಂದು ಅವರು ತಿಳಿಸಿದರು.

ಸುಮಾರು 2,500 ವಿದ್ಯಾರ್ಥಿಗಳನ್ನು ಉತ್ತೇಜಿಸುವ ಉದ್ದೇಶದಿಂದ ಪ್ರತಿಭಾ ಪುರಸ್ಕಾರ ನೀಡಲಾಗುತ್ತಿದೆ. ಸುಮಾರು 2 ಕೋಟಿ ರೂ.ಹಣವನ್ನು ಕೆ.ಎಂ.ನಾಗರಾಜ ಪುರಸ್ಕಾರದ ರೂಪದಲ್ಲಿ ನೀಡುತ್ತಿದ್ದಾರೆ. ಇದಕ್ಕಿಂತ ಸಮಾಜದ ಮೇಲಿನ ಕಳಕಳಿಯನ್ನು ಇನ್ನೆಲ್ಲಿ ನೋಡಲು ಸಾಧ್ಯ ಎಂದರು.

ಸಾರ್ವಜನಿಕ ಬದುಕಿನಲ್ಲಿ ಸಮಾಜದ ಮೇಲಿನ ಕಳಕಳಿಯನ್ನು ಹೇಗೆ ಅರ್ಥ ಮಾಡಿಕೊಳ್ಳಬೇಕು ಎಂಬುದಕ್ಕೆ ಇಂತಹ ಕಾರ್ಯಗಳು ಉದಾಹರಣೆ. ಕೆಲವರು ತಮ್ಮ ತಂದೆ-ತಾಯಿ ಹೆಸರಿನಲ್ಲಿ ಕಲ್ಯಾಣ ಮಂಟಪಗಳನ್ನು ನಿರ್ಮಿಸುತ್ತಾರೆ, ಇತರ ಸೇವಾ ಕಾರ್ಯಗಳನ್ನು ಮಾಡುತ್ತಾರೆ. ಆದರೆ ಕೆ.ಎಂ. ನಾಗರಾಜ ಸಮಾಜದ ಮೇಲಿನ ಕಳಕಳಿಯನ್ನೇ ತಮ್ಮ ಸೇವೆಯ ಕ್ಷೇತ್ರವಾಗಿ ಆಯ್ಕೆ ಮಾಡಿಕೊಂಡಿದ್ದಾರೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ನಮಗೆ ಎರಡು ಪ್ರಮುಖ ವಿಚಾರಗಳು ಅಗತ್ಯವಾಗಿವೆ. ಮಾನವತ್ವದ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ನಮ್ಮ ತಂದೆ-ತಾಯಿ ನಮ್ಮನ್ನು ಯಾವ ರೀತಿಯಲ್ಲಿ ಬೆಳೆಸಿದ್ದಾರೆ ಎಂಬುದನ್ನು ಅರಿತು, ಅವರು ನೀಡಿರುವ ಸಂಸ್ಕಾರ ಮತ್ತು ಮೌಲ್ಯಗಳನ್ನು ನಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದು ಅವರು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ಯಾವ ಶಿಕ್ಷಣ ಪಡೆದರೆ ನನಗೂ ಮತ್ತು ಸಮಾಜಕ್ಕೂ ಉಪಯೋಗವಾಗುತ್ತದೆ ಎಂಬುದು ಮುಖ್ಯ. ಇದನ್ನು ಅರಿತು ವಿದ್ಯಾರ್ಥಿಗಳು ತಮ್ಮ ಕೋರ್ಸ್‍ಗಳನ್ನು ಆಯ್ಕೆ ಮಾಡಿಕೊಳ್ಳಬೇಕು. ದೇಶದಲ್ಲಿ ನಡೆಯುತ್ತಿರುವ ಬದಲಾವಣೆಯ ಭಾಗವಾಗಬೇಕು. ದೇಶದ ಅಭಿವೃದ್ಧಿಯಲ್ಲಿ ನಿಮ್ಮ ಪಾಲು ಇರಬೇಕು. ಫೌಂಡೇಷನ್ ವತಿಯಿಂದ ನೀಡಲಾಗುತ್ತಿರುವ ಈ ಪುರಸ್ಕಾರ ನಿಮ್ಮ ಮುಂದಿನ ಕಲಿಕೆಗೆ ಸಹಾಯವಾಗಲಿ ಎಂದು ಹಾರೈಸಿದರು.

ಕಾರ್ಯಕ್ರಮದಲ್ಲಿ ಸಚಿವರಾದ ರಾಮಲಿಂಗಾರೆಡ್ಡಿ, ಎಚ್.ಸಿ.ಬಾಲಕೃಷ್ಣ, ಟಿ.ರಘಮೂರ್ತಿ, ಹೊಸದಿಲ್ಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ, ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ.ರೇವಣ್ಣ, ಪರಿಷತ್ ಸದಸ್ಯ ಪುಟ್ಟಣ್ಣ, ಆರ್‍ಎಂಅರ್ ಹಳ್ಳಿಕಾರ್ ಫೌಂಡೇಷನ್ ಟ್ರಸ್ಟ್‌ ನ ಅಧ್ಯಕ್ಷ ಕೆ.ಎಂ.ನಾಗರಾಜ್ ಉಪಸ್ಥಿತರಿದ್ದರು.

Tags

G. Parameshwar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X