Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ‘ಕ್ಷೇತ್ರ ಮರುವಿಂಗಡಣೆ’ | ಒಕ್ಕೂಟ...

‘ಕ್ಷೇತ್ರ ಮರುವಿಂಗಡಣೆ’ | ಒಕ್ಕೂಟ ವ್ಯವಸ್ಥೆ ಮತ್ತು ಕರ್ನಾಟಕದ ಪ್ರಾತಿನಿಧ್ಯಕ್ಕೆ ಧಕ್ಕೆಯಾಗುವ ಆತಂಕ : ಜಿ.ಪರಮೇಶ್ವರ್

ಅಮ್ಜದ್ ಖಾನ್ ಎಂ./ವಾರ್ತಾಭಾರತಿಅಮ್ಜದ್ ಖಾನ್ ಎಂ./ವಾರ್ತಾಭಾರತಿ28 Nov 2026 7:50 PM IST
share
‘ಕ್ಷೇತ್ರ ಮರುವಿಂಗಡಣೆ’ | ಒಕ್ಕೂಟ ವ್ಯವಸ್ಥೆ ಮತ್ತು ಕರ್ನಾಟಕದ ಪ್ರಾತಿನಿಧ್ಯಕ್ಕೆ ಧಕ್ಕೆಯಾಗುವ ಆತಂಕ : ಜಿ.ಪರಮೇಶ್ವರ್

ಬೆಂಗಳೂರು : ಲೋಕಸಭಾ ಕ್ಷೇತ್ರಗಳ ಸಂಖ್ಯೆಯನ್ನು ಏಕರೂಪವಾಗಿ ಶೇ.50ರಷ್ಟು ಹೆಚ್ಚಿಸುವ ಕೇಂದ್ರ ಸರಕಾರದ ಪ್ರಸ್ತಾವನೆಯು ಭಾರತದ ಒಕ್ಕೂಟ ವ್ಯವಸ್ಥೆ ಮತ್ತು ಸಮಾನ ರಾಜಕೀಯ ಪ್ರಾತಿನಿಧ್ಯದ ಮೇಲೆ ಪರಿಣಾಮ ಬೀರಬಹುದು ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಆತಂಕ ವ್ಯಕ್ತಪಡಿಸಿದ್ದಾರೆ.

ಶನಿವಾರ ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಅವರು, ಕ್ಷೇತ್ರಗಳ ಸಂಖ್ಯೆಯನ್ನು ಶೇ.50ರಷ್ಟು ಹೆಚ್ಚಿಸಲು ವೈಜ್ಞಾನಿಕ, ಜನಸಂಖ್ಯಾ ಅಥವಾ ಸಾಂವಿಧಾನಿಕ ಆಧಾರವೇನು?, ಇಂತಹ ಮಹತ್ವದ ನಿರ್ಧಾರ ಕೈಗೊಳ್ಳುವ ಮುನ್ನ ಸರ್ವಪಕ್ಷ ಸಭೆ ನಡೆಸದೆ ಹಾಗೂ ಅಂತರ್‍ರಾಜ್ಯ ಮಂಡಳಿಯ ಮೂಲಕ ರಾಜ್ಯಗಳ ಅಭಿಪ್ರಾಯ ಪಡೆಯದೆ ಕೇಂದ್ರ ಸರಕಾರ ಮುಂದುವರಿಯುತ್ತಿರುವುದನ್ನು ಟೀಕಿಸಿದ್ದಾರೆ.

ಪ್ರಸ್ತಾವಿತ ಸೂತ್ರದ ಪ್ರಕಾರ ಕರ್ನಾಟಕದ ಲೋಕಸಭಾ ಕ್ಷೇತ್ರಗಳ ಸಂಖ್ಯೆ ಈಗಿನ 28ರಿಂದ 42ಕ್ಕೆ ಏರಿಕೆಯಾಗಲಿದೆ. ಉತ್ತರ ಪ್ರದೇಶದ ಕ್ಷೇತ್ರಗಳು 80ರಿಂದ 120ಕ್ಕೆ ಮತ್ತು ಬಿಹಾರದ ಕ್ಷೇತ್ರಗಳು 40ರಿಂದ 60ಕ್ಕೆ ಹೆಚ್ಚಾಗಲಿವೆ. ಇದರಿಂದ ಕರ್ನಾಟಕ ಮತ್ತು ಉತ್ತರ ಪ್ರದೇಶಗಳ ನಡುವಿನ ಸಂಸದೀಯ ಪ್ರಾತಿನಿಧ್ಯದ ಅಂತರ 52ರಿಂದ 78 ಸ್ಥಾನಗಳಿಗೆ ವಿಸ್ತರಣೆಯಾಗಲಿದೆ ಎಂದು ಅವರು ವಿವರಿಸಿದ್ದಾರೆ.

ಏಕರೂಪದ ಶೇ.50ರಷ್ಟು ಹೆಚ್ಚಳವು ಈಗಿರುವ ಪ್ರಾತಿನಿಧ್ಯದ ಅಸಮಾನತೆಯನ್ನು ನಿವಾರಿಸುವುದಿಲ್ಲ. ಬದಲಿಗೆ ಅದನ್ನೇ ಮುಂದುವರಿಸಲಿದೆ ಎಂದು ಅಭಿಪ್ರಾಯಪಟ್ಟಿರುವ ಪರಮೇಶ್ವರ್, ಈ ವಿಚಾರದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವ್ಯಕ್ತಪಡಿಸಿರುವ ಆತಂಕಗಳಿಗೆ ಬೆಂಬಲ ಸೂಚಿಸಿದ್ದಾರೆ.

2023ರ ಕೇಂದ್ರ ಸರಕಾರದ ಅಂಕಿಅಂಶಗಳನ್ನು ಉಲ್ಲೇಖಿಸಿದ ಅವರು, ಭಾರತದ ಒಟ್ಟು ಜನನ ದರ 1.9ರಷ್ಟಿದ್ದರೆ ಕರ್ನಾಟಕದಲ್ಲಿ 1.5, ಉತ್ತರ ಪ್ರದೇಶದಲ್ಲಿ 2.6 ಮತ್ತು ಬಿಹಾರದಲ್ಲಿ 2.8ರಷ್ಟಿದೆ. ಜನಸಂಖ್ಯೆ ನಿಯಂತ್ರಣದ ರಾಷ್ಟ್ರೀಯ ಗುರಿಗಳನ್ನು ಸಾಧಿಸಿರುವ ದಕ್ಷಿಣ ಭಾರತದ ರಾಜ್ಯಗಳಿಗೆ ರಾಜಕೀಯವಾಗಿ ಅನ್ಯಾಯವಾಗಬಾರದು ಎಂದು ಅವರು ಒತ್ತಾಯಿಸಿದ್ದಾರೆ.

ಲೋಕಸಭಾ ಸ್ಥಾನಗಳನ್ನು ಹೆಚ್ಚಿಸುವ ಸಂದರ್ಭದಲ್ಲಿ ರಾಜ್ಯಸಭೆಯ ಪ್ರಾತಿನಿಧ್ಯ ಮತ್ತು ಸಂಸತ್ತಿನ ಉಭಯ ಸದನಗಳ ನಡುವಿನ ಅಧಿಕಾರದ ಸಮತೋಲನವನ್ನೂ ಕಾಪಾಡಬೇಕು ಎಂದು ತಿಳಿಸಿರುವ ಪರಮೇಶ್ವರ್, ಮಹಿಳಾ ಮೀಸಲಾತಿ ಜಾರಿಗೆ ಬೆಂಬಲವಿದೆ. ಆದರೆ, ಈಗಿರುವ ಸಂಸತ್ತಿನ ಸ್ಥಾನಗಳ ಸಂಖ್ಯೆಯಲ್ಲಿಯೆ ಶೇ.33ರಷ್ಟು ಮೀಸಲಾತಿಯನ್ನು ಜಾರಿಗೆ ತಂದು, 2029ರ ಚುನಾವಣೆಯಿಂದಲೆ ಅನುಷ್ಠಾ ನಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.

ಕ್ಷೇತ್ರ ಮರುವಿಂಗಡಣೆಗೆ ಸಂಬಂಧಿಸಿದ ವೈಜ್ಞಾನಿಕ ಆಧಾರಗಳನ್ನು ಬಹಿರಂಗಪಡಿಸಿ, ಎಲ್ಲ ರಾಜ್ಯಗಳೊಂದಿಗೆ ಸಮಾಲೋಚನೆ ನಡೆಸಿ ನ್ಯಾಯಸಮ್ಮತವಾದ ದೀರ್ಘಕಾಲಿಕ ಚೌಕಟ್ಟನ್ನು ರೂಪಿಸುವಂತೆ ಕೇಂದ್ರ ಸರಕಾರವನ್ನು ಒತ್ತಾಯಿಸಿರುವ ಅವರು, ಭಾರತದ ರಾಜಕೀಯ ಭವಿಷ್ಯವನ್ನು ನಿರ್ಧರಿಸಬೇಕಾದದ್ದು ಭಾರತದ ಸಂವಿಧಾನವೇ ಹೊರತು, ಯಾವುದೇ ರಾಜಕೀಯ ಪಕ್ಷದ ಭವಿಷ್ಯಕ್ಕಾಗಿ ಭಾರತದ ಸಂವಿಧಾನವನ್ನು ಬದಲಾಯಿಸಬಾರದು ಎಂದು ತಿಳಿಸಿದ್ದಾರೆ.

Tags

G. Parameshwara
share
ಅಮ್ಜದ್ ಖಾನ್ ಎಂ./ವಾರ್ತಾಭಾರತಿ
ಅಮ್ಜದ್ ಖಾನ್ ಎಂ./ವಾರ್ತಾಭಾರತಿ

ಅಮ್ಜದ್ ಖಾನ್ ಎಂ. ಬೆಂಗಳೂರು ವಿಶ್ವವಿದ್ಯಾಲಯದ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದು, 2007ರಿಂದ ವಾರ್ತಾಭಾರತಿ ಕನ್ನಡ ದೈನಿಕ ಬೆಂಗಳೂರು ಆವೃತ್ತಿಯಲ್ಲಿ ಹಿರಿಯ ರಾಜಕೀಯ ವರದಿಗಾರರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಪ್ರವಾಸಿ ಅನುಭವದ ವಿಶೇಷ ಲೇಖನಗಳನ್ನು ಬರೆಯುವುದು, ಪುಸ್ತಕ ಓದುವುದು‌, ಸಾಮಾಜಿಕ ಸೇವಾ ಕಾರ್ಯಗಳು ಇವರ ಹವ್ಯಾಸವಾಗಿವೆ.

Next Story
X