Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ,...

ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ, ಶೀಘ್ರ ಪರಿಹಾರ ಒದಗಿಸಿ : ಕೇಂದ್ರ ತಂಡಕ್ಕೆ ಡಿಸಿಎಂ ಜಿ.ಪರಮೇಶ್ವರ್ ಮನವಿ

ವಾರ್ತಾಭಾರತಿವಾರ್ತಾಭಾರತಿ3 Oct 2026 7:58 PM IST
share
ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ, ಶೀಘ್ರ ಪರಿಹಾರ ಒದಗಿಸಿ : ಕೇಂದ್ರ ತಂಡಕ್ಕೆ ಡಿಸಿಎಂ ಜಿ.ಪರಮೇಶ್ವರ್ ಮನವಿ

ಬೆಂಗಳೂರು : ರಾಜ್ಯದಲ್ಲಿ ಉಂಟಾಗಿರುವ ತೀವ್ರ ಬರಗಾಲದ ಪರಿಸ್ಥಿತಿಯನ್ನು ನಿಷ್ಪಕ್ಷಪಾತವಾಗಿ ಹಾಗೂ ಸಮಗ್ರವಾಗಿ ಪರಿಶೀಲಿಸಿ, ಕೇಂದ್ರ ಸರಕಾರದಿಂದ ಸಕಾಲದಲ್ಲಿ ನೆರವು ದೊರೆಯುವಂತೆ ನೋಡಿಕೊಳ್ಳಬೇಕು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವ ಡಾ.ಜಿ.ಪರಮೇಶ್ವರ್ ಅಂತರ್ ಸಚಿವಾಲಯದ ಕೇಂದ್ರ ತಂಡಕ್ಕೆ ಮನವಿ ಮಾಡಿದರು.

ಶನಿವಾರ ಸಿಎಂ ಗೃಹಕಚೇರಿ ಕೃಷ್ಣದಲ್ಲಿ ನಡೆದ ಸಭೆಯಲ್ಲಿ ಕೇಂದ್ರ ತಂಡವನ್ನುದ್ದೇಶಿಸಿ ಮಾತನಾಡಿದ ಅವರು, ಇತ್ತೀಚಿನ ದಶಕಗಳಲ್ಲಿ ರಾಜ್ಯವು ಕಂಡ ಅತ್ಯಂತ ತೀವ್ರ ಬರಗಾಲದ ಪರಿಸ್ಥಿತಿಯನ್ನು ಎದುರಿಸುತ್ತಿದೆ. ಇದರಿಂದ ಕೃಷಿ, ತೋಟಗಾರಿಕೆ, ಕುಡಿಯುವ ನೀರು ಹಾಗೂ ಗ್ರಾಮೀಣ ಜನರ ಜೀವನೋಪಾಯದ ಮೇಲೆ ತೀವ್ರ ಪರಿಣಾಮ ಬೀರಿದೆ ಎಂದರು.

ಇದು ನಮ್ಮ ಕಾಲದಲ್ಲಿ ನಾವು ಕಂಡ ಅತ್ಯಂತ ತೀವ್ರವಾದ ಬರಗಾಲಗಳಲ್ಲಿ ಒಂದಾಗಿದೆ. ಅನೇಕ ಕಡೆಗಳಲ್ಲಿ ಬೆಳೆಗಳು ಮೊಳಕೆಯೊಡೆದು, ಕೇವಲ ಎರಡು ಎಲೆಗಳು ಬಂದ ನಂತರ ಒಣಗಿಹೋಗಿವೆ. ಮಳೆಯಾದಾಗ ರೈತರು ಮತ್ತೆ ಬಿತ್ತನೆ ಮಾಡಿದರು, ಆದರೆ, ಎರಡನೇ ಬಾರಿ ಬಿತ್ತಿದ ಬೆಳೆಯೂ ಒಣಗಿಹೋಯಿತು. ಇಂದು ನೀವು ಹೊಲಗಳಿಗೆ ಭೇಟಿ ನೀಡಿದರೆ, ಹಲವು ಕಡೆಗಳಲ್ಲಿ ಬೆಳೆಯೇ ಉಳಿದಿಲ್ಲದಿರುವುದನ್ನು ಕಾಣಬಹುದು ಎಂದು ಜಿ.ಪರಮೇಶ್ವರ್ ತಂಡಕ್ಕೆ ವಿವರಿಸಿದರು.

ಬರಗಾಲದ ಪರಿಸ್ಥಿತಿಯ ಕುರಿತು ಕೇಂದ್ರ ಸರಕಾರದ ಮಧ್ಯಪ್ರವೇಶ ಮತ್ತು ಪರಿಹಾರ ಕೋರಿ ಪ್ರಧಾನಿ, ಕೇಂದ್ರ ಗೃಹಸಚಿವರು ಮತ್ತು ಕೇಂದ್ರ ಕೃಷಿ ಸಚಿವರಿಗೆ ಸತತವಾಗಿ ಮುಖ್ಯಮಂತ್ರಿಗಳು ಹಾಗೂ ರಾಜ್ಯ ಸರಕಾರವು ಹಲವು ಬಾರಿ ಪತ್ರ ಬರೆದಿದೆ. ಆದರೆ, ಇಲ್ಲಿಯವರೆಗೆ ಒಂದೇ ಒಂದು ಪ್ರತಿಕ್ರಿಯೆಯೂ ಬಂದಿಲ್ಲ. ದಯವಿಟ್ಟು ಈ ವಿಷಯವನ್ನು ಪರಿಶೀಲಿಸಿ, ಪರಿಹಾರ ಕಾರ್ಯವನ್ನು ಮುಂದುವರಿಸಲು ನಮಗೆ ಸಹಾಯ ಮಾಡಿ ಎಂದು ಜಿ.ಪರಮೇಶ್ವರ್ ಕೇಂದ್ರ ತಂಡದ ಗಮನ ಸೆಳೆದರು.

ನಾವು ಹೆಚ್ಚುವರಿಯಾಗಿ ಏನನ್ನೂ ಕೇಳುತ್ತಿಲ್ಲ. ನ್ಯಾಯಯುತವಾದ ಮೌಲ್ಯಮಾಪನ ಮಾಡಬೇಕೆಂಬುದು ನಮ್ಮ ಏಕೈಕ ಮನವಿ. ದಯವಿಟ್ಟು ವಾಸ್ತವ ಪರಿಸ್ಥಿತಿಯನ್ನು ಗಮನಿಸಿ ಮತ್ತು ರಾಜ್ಯಕ್ಕೆ ನಿಜವಾಗಿಯೂ ಸಲ್ಲಬೇಕಾದ ನೆರವನ್ನು ಪಡೆಯಲು ನಮಗೆ ಸಹಾಯ ಮಾಡಿ ಎಂದು ಜಿ.ಪರಮೇಶ್ವರ್ ತಿಳಿಸಿದರು.

2026ರ ನೈಋತ್ಯ ಮುಂಗಾರು ಅವಧಿಯಲ್ಲಿ ಕರ್ನಾಟಕವು ಒಟ್ಟಾರೆ ಶೇ.35ರಷ್ಟು ಮಳೆಯ ಕೊರತೆಯನ್ನು ದಾಖಲಿಸಿದೆ. ರಾಜ್ಯವು ಕೇವಲ 551 ಮಿ.ಮೀ. ಮಳೆಯನ್ನು ಪಡೆದಿದ್ದು, ಇದು 1956ರ ನಂತರ ರಾಜ್ಯದಲ್ಲಿ ದಾಖಲಾದ ಎರಡನೇ ಅತಿ ಕಡಿಮೆ ನೈಋತ್ಯ ಮುಂಗಾರು ಮಳೆಯಾಗಿದೆ. ರಾಜ್ಯದ 31 ಜಿಲ್ಲೆಗಳ ಪೈಕಿ 30 ಜಿಲ್ಲೆಗಳಲ್ಲಿ ಮಳೆಯ ಕೊರತೆ ಕಂಡುಬಂದಿದೆ ಮತ್ತು 240 ತಾಲೂಕುಗಳ ಪೈಕಿ 209 ತಾಲೂಕುಗಳಲ್ಲಿ ಮಳೆಯ ಕೊರತೆ ದಾಖಲಾಗಿದೆ ಎಂದು ಜಿ.ಪರಮೇಶ್ವರ್ ವಿವರಿಸಿದರು.

ಬರಗಾಲದಿಂದ ಉಂಟಾಗಿರುವ ಅತಿದೊಡ್ಡ ಸವಾಲುಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯೂ ಒಂದಾಗಿದೆ. ಮುಂಬರುವ ಬೇಸಿಗೆಯಲ್ಲಿ ಪರಿಸ್ಥಿತಿ ಇನ್ನಷ್ಟು ಹದಗೆಡಬಹುದು. ಸರಕಾರವು ಈಗಾಗಲೇ ಬರ ನಿರ್ವಹಣಾ ಕ್ರಮಗಳನ್ನು ಕೈಗೊಂಡಿದ್ದು, ಕುಡಿಯುವ ನೀರಿಗಾಗಿ ಅನುದಾನವನ್ನೂ ಬಿಡುಗಡೆ ಮಾಡಿದೆ ಎಂದು ಪರಮೇಶ್ವರ್ ಹೇಳಿದರು.

ಪ್ರಸ್ತುತ, 227 ಟ್ಯಾಂಕರ್‍ಗಳು ಮತ್ತು ಬಾಡಿಗೆಗೆ ಪಡೆದ 720 ಕೊಳವೆಬಾವಿಗಳ ಮೂಲಕ 861 ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರನ್ನು ಪೂರೈಸಲಾಗುತ್ತಿದೆ. ಮುಂಬರುವ ತಿಂಗಳುಗಳಲ್ಲಿ 2,300ಕ್ಕೂ ಹೆಚ್ಚು ಗ್ರಾಮ ಪಂಚಾಯಿತಿಗಳು ಕುಡಿಯುವ ನೀರಿನ ಸಮಸ್ಯೆಯನ್ನು ಎದುರಿಸಬಹುದು ಎಂದು ರಾಜ್ಯ ಸರಕಾರ ಅಂದಾಜಿಸಿದ್ದು, ಇದಕ್ಕಾಗಿ ತುರ್ತು ಕಾರ್ಯಯೋಜನೆಗಳನ್ನು ಸಿದ್ಧಪಡಿಸಲಾಗಿದೆ. ಕುಡಿಯುವ ನೀರಿನ ಪೂರೈಕೆಯನ್ನು ದೃಢಪಡಿಸಿಕೊಳ್ಳಲು, ರಾಜ್ಯ ಸರಕಾರವು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಮೂಲಕ ತನ್ನ ನಿಧಿಯಿಂದ 306 ಕೋಟಿಗಳನ್ನು ಬಿಡುಗಡೆ ಮಾಡಿದೆ ಎಂದು ಪರಮೇಶ್ವರ್ ತಿಳಿಸಿದರು.

ಬರದ ಪರಿಣಾಮವನ್ನು ತಗ್ಗಿಸಲು ಬೆಳೆ ರಕ್ಷಣೆ, ಮೇವಿನ ಲಭ್ಯತೆ, ಜಾನುವಾರುಗಳ ರಕ್ಷಣೆ ಮತ್ತು ಗ್ರಾಮೀಣ ಉದ್ಯೋಗಕ್ಕೆ ಸಂಬಂಧಿಸಿದ ಕ್ರಮಗಳನ್ನು ಸರಕಾರ ಕೈಗೊಂಡಿದೆ. ಈ ವರ್ಷ ರಾಜ್ಯವು ‘ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ'ಯ ಅಡಿಯಲ್ಲಿ ದಾಖಲೆಯ 37.50 ಲಕ್ಷ ರೈತರನ್ನು ನೋಂದಾಯಿಸಿದೆ ಮತ್ತು ಅರ್ಹ ಬೆಳೆ ವಿಮೆ ಪರಿಹಾರದ ಕೋರಿಕೆಗಳನ್ನು ವಿಳಂಬವಿಲ್ಲದೆ ಮೌಲ್ಯಮಾಪನ ಮಾಡಿ ವಿಲೇವಾರಿ ಮಾಡುವಂತೆ ಕೋರಿದೆ ಎಂದು ಪರಮೇಶ್ವರ್ ಹೇಳಿದರು.

ಕೇಂದ್ರದ ಮಾರ್ಗಸೂಚಿಗಳ ಪಾಲನೆ..!

ಪ್ರಸ್ತುತ ಮೌಲ್ಯಮಾಪನ ಮಾಡಲಾದ 177 ತಾಲೂಕುಗಳಲ್ಲಿ ಸುಮಾರು 47.09 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಷ್ಟವಾಗಿದೆ ಎಂದು ವರದಿಯಾಗಿದೆ. ಸಂಪೂರ್ಣ ಮೌಲ್ಯಮಾಪನ ಪೂರ್ಣಗೊಂಡ ನಂತರ, ಬರದಿಂದ ಬಾಧಿತವಾದ ಒಟ್ಟು ಬೆಳೆ ಪ್ರದೇಶವು ಸುಮಾರು 55 ಲಕ್ಷ ಹೆಕ್ಟೇರ್‍ಗಳಷ್ಟಾಗಬಹುದು ಎಂದು ರಾಜ್ಯ ಸರಕಾರ ಅಂದಾಜಿಸಿದೆ ಮತ್ತು ಅಂದಾಜು ಆರ್ಥಿಕ ನಷ್ಟವು 46,324.50 ಕೋಟಿಯಷ್ಟಿದೆ. ಬರಪೀಡಿತ ಪ್ರದೇಶಗಳನ್ನು ಮೌಲ್ಯಮಾಪನ ಮಾಡುವಾಗ ಮತ್ತು ಘೋಷಿಸುವಾಗ ರಾಜ್ಯ ಸರಕಾರವು ಕೇಂದ್ರ ಸರಕಾರದ ‘ಬರ ನಿರ್ವಹಣಾ ಕೈಪಿಡಿ’ಯಲ್ಲಿ ಸೂಚಿಸಲಾದ ಮಾನದಂಡಗಳನ್ನು ಕಟ್ಟುನಿಟ್ಟಾಗಿ ಪಾಲಿಸಿದೆ ಎಂದು ಜಿ.ಪರಮೇಶ್ವರ್ ಹೇಳಿದರು.

Tags

G. Parameshwara
share
ವಾರ್ತಾಭಾರತಿ
ವಾರ್ತಾಭಾರತಿ
Next Story
X