Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ನಿಯಮಬಾಹಿರವಾಗಿ ‘ಇ-ಖಾತಾ’ ನೀಡಿದ್ದ...

ನಿಯಮಬಾಹಿರವಾಗಿ ‘ಇ-ಖಾತಾ’ ನೀಡಿದ್ದ ಆರೋಪ: ಇಬ್ಬರು ಜಿಬಿಎ ಅಧಿಕಾರಿಗಳು ಅಮಾನತು

ವಾರ್ತಾಭಾರತಿವಾರ್ತಾಭಾರತಿ6 Nov 2026 9:59 PM IST
share
ನಿಯಮಬಾಹಿರವಾಗಿ ‘ಇ-ಖಾತಾ’ ನೀಡಿದ್ದ ಆರೋಪ: ಇಬ್ಬರು ಜಿಬಿಎ ಅಧಿಕಾರಿಗಳು ಅಮಾನತು

ಬೆಂಗಳೂರು : ಬೆಂಗಳೂರಿನ 100ಕ್ಕೂ ಹೆಚ್ಚು ಫ್ಲಾಟ್‍ಗಳಿಗೆ ನ ನಿಯಮಬಾಹಿರವಾಗಿ ‘ಇ-ಖಾತಾ’ ನೀಡಿದ್ದ ಆರೋಪದಡಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಇಬ್ಬರು ಹಿರಿಯ ಕಂದಾಯ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ.

ಅಮಾನತುಗೊಂಡ ಅಧಿಕಾರಿಗಳನ್ನು ಬೆಂಗಳೂರು ಪೂರ್ವ ನಗರ ಪಾಲಿಕೆಯ ಪ್ರಭಾರ ಕಂದಾಯ ಅಧಿಕಾರಿ ಬಸವರಾಜ್ ಮಗಿ ಹಾಗೂ ಬೆಂಗಳೂರು ಪಶ್ಚಿಮ ನಗರ ಪಾಲಿಕೆಯ ಪ್ರಭಾರ ಕಂದಾಯ ಅಧಿಕಾರಿ ಲೋಕಮಾತಾ ಡಿ.ಎಸ್. ಎಂದು ಗುರುತಿಸಲಾಗಿದೆ. ಅಧಿಕಾರಿಗಳ ಈ ಕೃತ್ಯವನ್ನು ‘ಗಂಭೀರ ದುರ್ನಡತೆ, ಅಪರಾಧಿಕ ಅಕ್ರಮ ಹಾಗೂ ಸಂಪೂರ್ಣ ಸ್ವೀಕಾರಾರ್ಹವಲ್ಲದ್ದು’ ಎಂದು ಜಿಬಿಎ ತನ್ನ ಅಮಾನತು ಆದೇಶದಲ್ಲಿ ತಿಳಿಸಿದೆ.

ಕೆ.ಆರ್.ಪುರ ಮತ್ತು ಕೆಂಗೇರಿ ವಲಯಗಳ ಆಸ್ತಿ ದಾಖಲೆಗಳನ್ನು ಕೂಲಂಕಶವಾಗಿ ಪರಿಶೀಲಿಸಿದಾಗ ಈ ಅಕ್ರಮ ಬೆಳಕಿಗೆ ಬಂದಿದೆ. ಬ್ಯಾಂಕ್‍ಗಳಲ್ಲಿ ಸಾಲ ತೀರಿಸದ ಸುಸ್ತಿದಾರರ ಆಸ್ತಿಗಳನ್ನು ಸರ್ಫೇಸಿ ಕಾಯ್ದೆ ಅಡಿಯಲ್ಲಿ ವಶಪಡಿಸಿಕೊಂಡು ಹರಾಜು ಹಾಕಿದಾಗ ಆಸ್ತಿ ದಾಖಲೆಗಳನ್ನು ವರ್ಗಾಯಿಸಲು ಜಿಬಿಎ ‘ಇ-ಆಸ್ತಿ’ ತಂತ್ರಾಂಶದಲ್ಲಿ ವಿಶೇಷ ಹಿಂಬಾಗಿಲ ಸೌಲಭ್ಯ ಕಲ್ಪಿಸಿತ್ತು.

ಆದರೆ, ಅಮಾನತುಗೊಂಡ ಇಬ್ಬರೂ ಅಧಿಕಾರಿಗಳು ಇವು ಸರ್ಫೇಸಿ ಮಾರಾಟ ಪ್ರಮಾಣಪತ್ರಗಳು ಅಲ್ಲದಿದ್ದರೂ ಸಹ, ಸಾಮಾನ್ಯ ಕ್ರಯಪತ್ರಗಳು ಮತ್ತು ಇತರ ದಾಖಲೆಗಳನ್ನು ಬಳಸಿಕೊಂಡು ಸಾಫ್ಟ್‌ ವೇರ್ ದುರ್ಬಳಕೆ ಮೂಲಕ ಅಕ್ರಮವಾಗಿ ಇ-ಖಾತಾ ಮಂಜೂರು ಮಾಡಿದ್ದಾರೆ.

ಬಸವರಾಜ್ ಮಗಿ ಸುಮಾರು 98 ಅರ್ಜಿದಾರರಿಗೆ ಹಾಗೂ ಲೋಕಮಾತಾ ಸುಮಾರು 6 ಪ್ರಕರಣಗಳಿಗೆ ಅಕ್ರಮವಾಗಿ ಇ-ಖಾತಾ ಅನುಮೋದಿಸಿದ್ದಾರೆ. ಕಂದಾಯ ನಿರೀಕ್ಷಕರು ನಕಾರಾತ್ಮಕ ವರದಿ ನೀಡಿದ್ದಾಗ್ಯೂ ಅಧಿಕಾರಿಗಳು ಈ ಅರ್ಜಿಗಳನ್ನು ಪುರಸ್ಕರಿಸಿರುವುದು ಕಂಡುಬಂದಿದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಅಧಿಕಾರಿಗಳು ಜಿಬಿಎ ನಿಯಮಗಳು 2024ರ ಅಡಿಯಲ್ಲಿ ಹೊರಡಿಸಲಾದ ಕನಿಷ್ಠ 3 ಸುತ್ತೋಲೆಗಳನ್ನು ಹಾಗೂ ಪ್ರಮಾಣಿತ ಕಾರ್ಯಾಚರಣೆ ವಿಧಾನವನ್ನು ಸಂಪೂರ್ಣವಾಗಿ ಉಲ್ಲಂಘಿಸಿದ್ದಾರೆ. ಈ ಪ್ರಕರಣದ ಕುರಿತು ಸ್ಪಷ್ಟನೆ ನೀಡಿರುವ ಜಿಬಿಎ, ನಾವು ಯಾವುದೇ ರೀತಿಯ ವಂಚನೆಯನ್ನು ಸಹಿಸುವುದಿಲ್ಲ ಮತ್ತು ಸಾರ್ವಜನಿಕ ನಂಬಿಕೆಯನ್ನು ಕಳೆದುಕೊಳ್ಳಲು ಬಿಡುವುದಿಲ್ಲ ಎಂದು ಎಚ್ಚರಿಸಿದೆ.

Tags

GBA
share
ವಾರ್ತಾಭಾರತಿ
ವಾರ್ತಾಭಾರತಿ
Next Story
X