Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಜಾತಿ, ಧರ್ಮ ಮೀರಿ ನಿಂತಿರುವ ಜೆನ್ ಝೀಗಳು...

ಜಾತಿ, ಧರ್ಮ ಮೀರಿ ನಿಂತಿರುವ ಜೆನ್ ಝೀಗಳು ಸಮಾಜಕ್ಕೆ ಮಾದರಿ : ಡಾ.ಜಿ.ಪರಮೇಶ್ವರ್

ವಾರ್ತಾಭಾರತಿವಾರ್ತಾಭಾರತಿ20 Aug 2026 9:32 PM IST
share
ಜಾತಿ, ಧರ್ಮ ಮೀರಿ ನಿಂತಿರುವ ಜೆನ್ ಝೀಗಳು ಸಮಾಜಕ್ಕೆ ಮಾದರಿ : ಡಾ.ಜಿ.ಪರಮೇಶ್ವರ್
‘ಸಮಾನತೆಯನ್ನು ಅಕ್ಷರಶಃ ಜೀವನದಲ್ಲಿ ಅಳವಡಿಸಿಕೊಂಡವರು ಅರಸು’

ಬೆಂಗಳೂರು : ಜೆನ್ ಝೀಗಳು ಇಂದು ಎಲ್ಲೆಡೆ ಸದ್ದು ಮಾಡುತ್ತಿದ್ದಾರೆ. ಅವರ ಆಸೆ ಆಕಾಂಕ್ಷೆಗಳು ಬೇರೆ ಇವೆ. ಅವರಿಗೆ ಜಾತಿ, ಧರ್ಮಗಳ ವ್ಯತ್ಯಾಸ ಬೇಕಿಲ್ಲ. ಜೀವನ ಕಟ್ಟಿಕೊಳ್ಳುವುದೇ ಅವರಿಗೆ ಮುಖ್ಯ. ಇಂತದ್ದೊಂದು ಆಲೋಚನೆ ಕಡೆಗೆ ಅವರು ಇಡೀ ಸಮಾಜವನ್ನು ಕೊಂಡೊಯ್ಯುತ್ತಿರುವುದು ಗಮನಾರ್ಹವಾಗಿದೆ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ತಿಳಿಸಿದರು.

ಗುರುವಾರ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ನಡೆದ ಮಾಜಿ ಸಿಎಂ ಡಿ.ದೇವರಾಜ ಅರಸು ಅವರ 111ನೇ ಜನ್ಮದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ, ಇತಿಹಾಸ ತಜ್ಞ ಪ್ರೊ.ಪಿ.ವಿ.ನಂಜರಾಜ ಅರಸು ಅವರಿಗೆ ‘ಡಿ.ದೇವರಾಜ ಅರಸು ಪ್ರಶಸ್ತಿ' ಪ್ರದಾನ ಮಾಡಿದ ಬಳಿಕ ಅವರು ಮಾತನಾಡಿದರು.

ಇಂದು ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಮತ್ತು ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ಜನ್ಮದಿನ. ಇಬ್ಬರು ದೇಶದಲ್ಲಿ ಬದಲಾವಣೆಗೆ ಅಡಿಗಲ್ಲು ಹಾಕಿದ ಮಹಾನ್ ನಾಯಕರು. ಸಮಾಜದ ಒಳಿತಿನ ದೃಷ್ಟಿಯಿಂದ ತಮ್ಮ ಅಧಿಕಾರಾವಧಿಯಲ್ಲಿ ಹಲವು ಬದಲಾವಣೆ ತಂದಿದ್ದಾರೆ ಎಂದು ಡಾ.ಜಿ.ಪರಮೇಶ್ವರ್ ಹೇಳಿದರು.

ದೇವರಾಜ ಅರಸು ಅವರು ಶ್ರೇಣೀಕೃತ ವ್ಯವಸ್ಥೆಯನ್ನು ಅರ್ಥ ಮಾಡಿಕೊಂಡವರು. ಸಮಾಜದಲ್ಲಿ ಪ್ರತಿಯೊಬ್ಬರಿಗೂ ಗೌರವ, ಸ್ವಾಭಿಮಾನದ ಬದುಕು ಸಿಗಬೇಕು ಎಂದು ಅನೇಕ ಕಾರ್ಯಕ್ರಮಗಳನ್ನು ಕೊಟ್ಟಿದ್ದಾರೆ. ಅವುಗಳಿಂದ ಇಂದು ಅನೇಕ ಧನಾತ್ಮಕ ಬದಲಾವಣೆಯನ್ನು ನಾವು ಕಾಣುತ್ತಿದ್ದೇವೆ ಎಂದು ಡಾ.ಜಿ.ಪರಮೇಶ್ವರ್ ತಿಳಿಸಿದರು.

ಪ್ರಪಂಚದ ಯಾವುದೇ ದೇಶದಲ್ಲಿ ಶ್ರೇಣಿಕೃತ ವ್ಯವಸ್ಥೆ ಇಲ್ಲ. ನಾನಂತು ಯಾವ ದೇಶದಲ್ಲೂ ಜಾತಿ ವ್ಯವಸ್ಥೆ ನೋಡಿಲ್ಲ. ಭಾರತದಲ್ಲಿ ಯಾಕೆ ಬಂತು ಎನ್ನುವುದಕ್ಕೆ ಉತ್ತರ ಎಲ್ಲರಿಗೂ ಗೊತ್ತಿದೆ. ಮನುಷ್ಯನನ್ನು ಮನುಷ್ಯನನ್ನಾಗಿ ಕಾಣಬೇಕು ಎಂಬುದೇ ದೇವರಾಜ ಅರಸು ಅವರ ಕನಸಾಗಿತ್ತು. ಅದನ್ನು ಸಾಕಾರ ಮಾಡಲು ಅವರು ಶ್ರಮಿಸಿದರು ಎಂದು ಡಾ.ಜಿ.ಪರಮೇಶ್ವರ್ ತಿಳಿಸಿದರು.

ಮಲ ಹೊರುವ ಪದ್ಧತಿ ಜಗತ್ತಿನ ಯಾವ ದೇಶದಲ್ಲೂ ಇರಲಿಲ್ಲ. ನಾವು 21 ಶತಮಾನಕ್ಕೆ ಕಾಲಿಟ್ಟಿದ್ದೇವೆ, ಎಲ್ಲೆಡೆ ಆಧುನಿಕತೆಯ ಗಾಳಿ ಬೀಸುತ್ತಿದೆ. ಹೀಗಿದ್ದರೂ ಇಂದಿಗೂ ಈ ಅನಿಷ್ಟ ಪದ್ಧತಿ ಅನೇಕ ರಾಜ್ಯಗಳಲ್ಲೂ ಇದೆ ಎನ್ನುವುದು ನೋವಿನ ವಿಚಾರ. ಮಲಹೊರುವ ಪದ್ಧತಿಯನ್ನು ನಿಷೇಧ ಮಾಡಿ, ಆ ಸಮುದಾಯಗಳಿಗೆ ಗೌರವ ತರುವ ಕೆಲಸ ಮಾಡಿರುವುದೇ ದೇಶದಲ್ಲಿ ಮೊದಲ ದೊಡ್ಡ ಬದಲಾವಣೆ. ಈ ಬದಲಾವಣೆಗೆ ಮುನ್ನುಡಿ ಬರೆದವರು ದೇವರಾಜ ಅರಸು ಎಂದು ಡಾ.ಜಿ.ಪರಮೇಶ್ವರ್ ತಿಳಿಸಿದರು.

ಕಾರ್ಯಕ್ರಮದಲ್ಲಿ ಪರಿಷತ್ ಸಭಾಪತಿ ಸಲೀಂ ಅಹ್ಮದ್, ಸಚಿವರಾದ ಶಿವರಾಜ್ ತಂಗಡಗಿ, ಬಸವಂತಪ್ಪ, ಡಾ.ಯತೀಂದ್ರ, ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ.ರೇವಣ್ಣ, ಶಾಸಕರಾದ ಅಲ್ಲಮಪ್ರಭು ಪಾಟೀಲ್, ಪ್ರದೀಪ್ ಈಶ್ವರ್, ಭೀಮಣ್ಣ ಚಿಮ್ಮನಕಟ್ಟಿ, ಪರಿಷತ್ ಸದಸ್ಯರಾದ ಎಫ್.ಎಚ್.ಜಕ್ಕಪ್ಪನವರ್, ಗಾಯತ್ರಿ ಶಾಂತನಗೌಡ ಮುಂತಾದವರು ಉಪಸ್ಥಿತರಿದ್ದರು.

‘ಅರಸು ಹಾದಿಯಲ್ಲಿ ನಡೆದುಕೊಂಡು ಬಂದ ಸಿದ್ದರಾಮಯ್ಯ’ :

ಸಿದ್ದರಾಮಯ್ಯ ಅವರು ದೇವರಾಜ ಅರಸು ಅವರ ದಾರಿಯಲ್ಲಿ ನಡೆದುಕೊಂಡು ಬಂದವರು. ದನಿಯಿಲ್ಲದ ಜನರಿಗೆ ದನಿ ನೀಡುವ ಕೆಲಸ ಮಾಡಿದ್ದಾರೆ. ಬಡವರಿಗೆ ಶಕ್ತಿ ತುಂಬುವ ಕೆಲಸ ಮಾಡಿದ್ದಾರೆ. ಡಿ.ಕೆ.ಶಿವಕುಮಾರ್ ಅವರು ತಮ್ಮದೇ ಆದ ಆಲೋಚನೆಗಳನ್ನು ಹೊಂದಿದ್ದಾರೆ. ಎಲ್ಲರಿಗೂ ಸಮಾನತೆ ಸಿಗಬೇಕು, ರಾಜ್ಯ ಪ್ರಗತಿ ಹೊಂದಬೇಕು ಎಂಬ ಕನಸು ಹೊಂದಿದ್ದಾರೆ ಎಂದು ಡಾ.ಜಿ.ಪರಮೇಶ್ವರ್ ಹೇಳಿದರು.

ಭೂ ಸುಧಾರಣೆ ಅರಸು ಆಡಳಿತದ ಪ್ರಮುಖ ಮೈಲಿಗಲ್ಲು:

‘ಅಧಿಕಾರವೆಂದರೆ ಕೇವಲ ಆಡಳಿತ ನಡೆಸುವ ಸಾಧನವಲ್ಲ; ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಅವಕಾಶ, ಗೌರವ ಮತ್ತು ಸಮಾನ ಹಕ್ಕುಗಳನ್ನು ತಲುಪಿಸುವ ಜವಾಬ್ದಾರಿ ಎಂಬುದನ್ನು ಅರಸು ಅವರು ತಮ್ಮ ಆಡಳಿತದ ಮೂಲಕ ತೋರಿಸಿಕೊಟ್ಟರು. ಭೂ ಸುಧಾರಣೆ ದೇವರಾಜ ಅರಸು ಅವರ ಆಡಳಿತದ ಪ್ರಮುಖ ಮೈಲಿಗಲ್ಲು. ಅಭಿವೃದ್ಧಿಯ ಫಲ ಸಮಾಜದ ಎಲ್ಲ ವರ್ಗಗಳಿಗೂ ಸಮಾನವಾಗಿ ತಲುಪಬೇಕು. ಬಡತನದಿಂದ ಯಾವುದೇ ಮಗು ಶಿಕ್ಷಣದಿಂದ ವಂಚಿತವಾಗಬಾರದು, ರೈತರು ತಮ್ಮ ಪರಿಶ್ರಮಕ್ಕೆ ನ್ಯಾಯಯುತ ಪ್ರತಿಫಲ ಪಡೆಯಬೇಕು ಎಂಬುದು ಅರಸು ಅವರ ಚಿಂತನೆಯ ಮೂಲ ಆಶಯವಾಗಿತ್ತು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅಭಿಪ್ರಾಯಪಟ್ಟರು.

Tags

G.ParameshwarareligioncasteGen Z
share
ವಾರ್ತಾಭಾರತಿ
ವಾರ್ತಾಭಾರತಿ
Next Story
X