Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ‘ಜಾಗತಿಕ ಹೂಡಿಕೆದಾರರ ಸಮಾವೇಶ-2027’...

‘ಜಾಗತಿಕ ಹೂಡಿಕೆದಾರರ ಸಮಾವೇಶ-2027’ ಪೂರ್ವಭಾವಿ ಸಮಾರಂಭ

ಹಿಂದುಳಿದ ಪ್ರದೇಶಗಳ ಅಭಿವೃದ್ಧಿಗೆ ಪೂರಕವಾದ ಸಮಾವೇಶವಾಗಬೇಕು: ಮುಖ್ಯಮಂತ್ರಿ

ವಾರ್ತಾಭಾರತಿವಾರ್ತಾಭಾರತಿ12 Nov 2026 10:38 PM IST
share
‘ಜಾಗತಿಕ ಹೂಡಿಕೆದಾರರ ಸಮಾವೇಶ-2027’ ಪೂರ್ವಭಾವಿ ಸಮಾರಂಭ

ಬೆಂಗಳೂರು : ಜಾಗತಿಕ ಹೂಡಿಕೆದಾರರ ಸಮಾವೇಶವು ಕೇವಲ ಬಂಡವಾಳ ಹೂಡಿಕೆಗೆ ಸೀಮಿತವಾದುದಲ್ಲ, ಕಲ್ಯಾಣ ಕರ್ನಾಟಕ, ಕಿತ್ತೂರು ಕರ್ನಾಟಕ ಸೇರಿದಂತೆ ಹಿಂದುಳಿದ ಪ್ರದೇಶಗಳ ಅಭಿವೃದ್ಧಿಗೆ ಪೂರಕವಾದ ಸಮಾವೇಶವಾಗಬೇಕು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.

ಗುರುವಾರ ನಗರದ ಖಾಸಗಿ ಹೊಟೇಲ್‍ನಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ‘ಜಾಗತಿಕ ಹುಡಿಕೆದಾರರ ಸಮಾವೇಶ-2027’ರ ಪೂರ್ವಭಾವಿ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

2027ರ ಎಪ್ರಿಲ್ 20-22ರವರೆಗೆ ಬೆಂಗಳೂರಿನಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ, ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಇತಿಹಾಸ ಸೃಷ್ಟಿಸಲಿದ್ದಾರೆ. ಜಾಗತಿಕ ಮಟ್ಟದ ಹೂಡಿಕೆದಾರರು, ಉದ್ಯಮಿಗಳು, ಕೈಗಾರಿಕೋದ್ಯಮಿಗಳನ್ನು ನಾವು ಎದುರು ನೋಡುತ್ತಿದ್ದೇವೆ ಎಂದು ಶಿವಕುಮಾರ್ ತಿಳಿಸಿದರು.

ಕರ್ನಾಟಕದ ಮೊದಲ ಜಾಗತಿಕ ಹೂಡಿಕೆದಾರರ ಸಮಾವೇಶವನ್ನು 2000ರಲ್ಲಿ ಅಂದಿನ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಆರಂಭಿಸುವ ಮೂಲಕ ರಾಜ್ಯವನ್ನು ಅಂತರ್‍ರಾಷ್ಟ್ರೀಯ ಹೂಡಿಕೆಯ ಭೂಪಟದಲ್ಲಿ ಗುರುತಿಸುವಂತೆ ಮಾಡಿದ್ದರು. ಅವರ ದೂರದೃಷ್ಟಿ ಮತ್ತು ಕೊಡುಗೆ ಇಂದಿಗೂ ರಾಜ್ಯದ ಕೈಗಾರಿಕಾ ಅಭಿವೃದ್ಧಿಗೆ ಸ್ಫೂರ್ತಿಯಾಗಿದೆ ಎಂದು ಅವರು ಸ್ಮರಿಸಿದರು.

ಕರ್ನಾಟಕದಲ್ಲಿ ಪ್ರತಿ ವರ್ಷ 13,940 ವೈದ್ಯರು, 1.25 ಲಕ್ಷ ಪ್ಯಾರಾಮೆಡಿಕಲ್, 1.25 ಲಕ್ಷ ಎಂಜಿನಿಯರ್‍ಗಳು ತಯಾರಾಗುತ್ತಿದ್ದಾರೆ. 2.6 ಲಕ್ಷ ಐಟಿ ವೃತ್ತಿಪರರು ಇದ್ದಾರೆ. ಈ ಜಾಗತಿಕ ಹೂಡಿಕೆದಾರರ ಸಮಾವೇಶವು ಭವಿಷ್ಯಕ್ಕೆ ಕರ್ನಾಟಕವನ್ನು ರೂಪಿಸುವ ಸಮಾವೇಶ ಆಗಬೇಕು ಎಂದು ಮುಖ್ಯಮಂತ್ರಿ ಹೇಳಿದರು.

ಕರ್ನಾಟಕವು ಈ ಹಿಂದಿನಿಂದಲೂ ಆವಿಷ್ಕಾರಗಳ ನೆಲೆಯಾಗಿದೆ. ಇಂಧನ ಕ್ಷೇತ್ರದಲ್ಲಿ 24 ಗೀಗಾ ವ್ಯಾಟ್ ವಿದ್ಯುತ್ ಉತ್ಪಾದನೆ ಗುರಿಯಿದ್ದು, 3 ಲಕ್ಷ ಕೋಟಿ ರೂ.ಗಳ ಹೂಡಿಕೆ ಅಗತ್ಯವಿದೆ. ಪ್ರತಿಯೊಬ್ಬ ಹೂಡಿಕೆದಾರರಿಗೆ ನಾವು ಏನು ಮಾತು ಕೊಟ್ಟಿದ್ದೆವೋ, ಅದರಂತೆ ನಡೆದುಕೊಳ್ಳುತ್ತೇವೆ. ಬೆಂಗಳೂರಿನ ಆಚೆಗೂ ಹೂಡಿಕೆ ಆಗಬೇಕು, ನಮ್ಮ ಜನ, ನಮ್ಮ ಎಂಜಿನಿಯರ್‍ಗಳು, ವಿಜ್ಞಾನಿಗಳು, ಕೌಶಲ್ಯ ಭರಿತ ಮಾನವ ಸಂಪನ್ಮೂಲ ನಮ್ಮ ಶಕ್ತಿಯಾಗಿದೆ ಎಂದು ಅವರು ಹೇಳಿದರು.

ಉದ್ಯೋಗದಾತರಿಗೆ ನಾವು ಮಹತ್ವ ನೀಡುತ್ತೇವೆ. ಕೇವಲ ಭೂಮಿಯಿಂದ ಉದ್ಯಮ ಬೆಳೆಯುವುದಿಲ್ಲ, ಪ್ರತಿಭೆ, ಕೌಶಲ್ಯ, ಅವಕಾಶಗಳಿಂದ ಉದ್ಯಮ ಬೆಳೆಯುತ್ತದೆ. ನಮ್ಮ ಸರಕಾರ ಕೈಗಾರಿಕಾ ಸ್ನೇಹಿಯಾದ ನೂತನ ಕೈಗಾರಿಕಾ ನೀತಿಯನ್ನು ಪರಿಚಯಿಸಿದೆ. ಹಿಂದುಳಿದ ಪ್ರದೇಶಗಳ ಅಭಿವೃದ್ಧಿಗಾಗಿ, ಅಲ್ಲಿ ಹೂಡಿಕೆ ಮಾಡುವವರಿಗೆ ಸರಕಾರ ಹೆಚ್ಚುವರಿ ನೆರವು ನೀಡುತ್ತದೆ ಎಂದು ಮುಖ್ಯಮಂತ್ರಿ ನುಡಿದರು.

ನೂತನ ಕೈಗಾರಿಕಾ ನೀತಿ, ಉದ್ಯೋಗ ಮಿತ್ರ, ಏಕಗವಾಕ್ಷಿ ವ್ಯವಸ್ಥೆಯಿಂದ ಹೂಡಿಕೆದಾರರ ಹಲವಾರು ಸಮಸ್ಯೆಗಳನ್ನು ಒಂದೇ ವೇದಿಕೆಯಡಿ ಬಗೆಹರಿಸಲು ಪ್ರಯತ್ನಿಸಲಾಗುವುದು. ಜಾಗತಿಕ ಹೂಡಿಕೆದಾರರು ಹಾಗೂ ಅನಿವಾಸಿ ಭಾರತೀಯರಿಗಾಗಿಯೆ ನಮ್ಮ ಸರಕಾರ ಪ್ರತ್ಯೇಕ ವಿಭಾಗವನ್ನು ತೆರೆದಿದೆ. ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸಲು ಪ್ರತ್ಯೇಕ ನೀತಿಯನ್ನು ರಚನೆ ಮಾಡುತ್ತಿದ್ದೇವೆ ಎಂದು ಶಿವಕುಮಾರ್ ಹೇಳಿದರು.

ನಾವು ಬೇರೆ ರಾಜ್ಯಗಳ ಜೊತೆ ಪೈಪೋಟಿಗೆ ನಿಂತಿಲ್ಲ. ನಮ್ಮ ಬಳಿ ನಮ್ಮದೆ ಆದ ಪ್ರತಿಭೆಯಿದೆ. ಹೂಡಿಕೆದಾರರ ಪರವಾಗಿ ನಮ್ಮ ಇಡೀ ಸರಕಾರ ನಿಲ್ಲಲಿದೆ. ಇದೇ ತಿಂಗಳು ನಡೆಯಲಿರುವ ಬೆಂಗಳೂರು ಟೆಕ್ ಸಮ್ಮಿಟ್ ನಲ್ಲೂ ಹಲವಾರು ವಿಚಾರಗಳು ನಿಮ್ಮ ಗಮನಕ್ಕೆ ಬರಲಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.

ಸಮಾರಂಭದಲ್ಲಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಬೃಹತ್ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್, ಗೃಹ ಹಾಗೂ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ, ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ.ಅಜಯ್ ಧರ್ಮಸಿಂಗ್, ಕೃಷಿ ಸಚಿವ ಪಿ.ಎಂ. ನರೇಂದ್ರ ಸ್ವಾಮಿ, ಮುಜುರಾಯಿ ಸಚಿವ ಬಸವಂತಪ್ಪ, ಮಾಜಿ ಸಚಿವ ಆರ್.ವಿ.ದೇಶಪಾಂಡೆ, ವಿವಿಧ ವಲಯದ ಉದ್ಯಮಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು.

Tags

Global Investors Meet-2027
share
ವಾರ್ತಾಭಾರತಿ
ವಾರ್ತಾಭಾರತಿ
Next Story
X