Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಬೆಂಗಳೂರಿನಲ್ಲಿ ಟೆನಿಸ್ ಅಕಾಡೆಮಿ...

ಬೆಂಗಳೂರಿನಲ್ಲಿ ಟೆನಿಸ್ ಅಕಾಡೆಮಿ ಸ್ಥಾಪನೆಗೆ 5 ಎಕರೆ ಜಮೀನು ನೀಡಲು ಪರಿಶೀಲನೆ: ಡಾ.ಜಿ.ಪರಮೇಶ್ವರ್

ಅಮ್ಜದ್ ಖಾನ್ ಎಂ./ವಾರ್ತಾಭಾರತಿಅಮ್ಜದ್ ಖಾನ್ ಎಂ./ವಾರ್ತಾಭಾರತಿ21 Nov 2026 8:05 PM IST
share
ಬೆಂಗಳೂರಿನಲ್ಲಿ ಟೆನಿಸ್ ಅಕಾಡೆಮಿ ಸ್ಥಾಪನೆಗೆ 5 ಎಕರೆ ಜಮೀನು ನೀಡಲು ಪರಿಶೀಲನೆ: ಡಾ.ಜಿ.ಪರಮೇಶ್ವರ್

ಬೆಂಗಳೂರು : ಯುವ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸಲು ಮತ್ತು ಕ್ರೀಡಾ ಪ್ರತಿಭೆಗಳನ್ನು ಪೋಷಿಸಲು ಬೆಂಗಳೂರಿನಲ್ಲಿ ಟೆನಿಸ್ ಅಕಾಡೆಮಿ ಸ್ಥಾಪನೆಗಾಗಿ ಐದು ಎಕರೆ ಜಮೀನು ಮಂಜೂರು ಮಾಡುವ ಸಾಧ್ಯತೆಯನ್ನು ರಾಜ್ಯ ಸರಕಾರ ಪರಿಶೀಲಿಸಲಿದೆ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಶನಿವಾರ ನಗರದ ಕಬ್ಬನ್ ಪಾರ್ಕ್‍ನಲ್ಲಿರುವ ಎಸ್.ಎಂ.ಕೃಷ್ಣ ಟೆನಿಸ್ ಕ್ರೀಡಾಂಗಣದಲ್ಲಿ ರಾಜ್ಯ ಪೊಲೀಸ್ ಇಲಾಖೆಯ ವತಿಯಿಂದ ಆಯೋಜಿಸಲಾಗಿದ್ದ ‘27ನೇ ಅಖಿಲ ಭಾರತ ಪೊಲೀಸ್ ಲಾನ್ ಟೆನಿಸ್ ಚಾಂಪಿಯನ್‍ಶಿಪ್-2026'ರ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

ಬೆಂಗಳೂರಿನಲ್ಲಿ ಟೆನಿಸ್ ಅಕಾಡೆಮಿ ಸ್ಥಾಪಿಸಲು ಐದು ಎಕರೆ ಜಮೀನು ನೀಡುವಂತೆ ನಿನ್ನೆಯಷ್ಟೇ ಒಬ್ಬರು ನನ್ನನ್ನು ಭೇಟಿಯಾಗಿ ಮನವಿ ಮಾಡಿದ್ದಾರೆ. ನಾನು ತಕ್ಷಣವೇ ಸಕಾರಾತ್ಮಕವಾಗಿ ಸ್ಪಂದಿಸಿದ್ದೇನೆ. ಯುವಕರು ಟೆನಿಸ್ ಕ್ರೀಡೆಯತ್ತ ಆಕರ್ಷಿತರಾಗಿ ರಾಷ್ಟ್ರೀಯ ಮತ್ತು ಅಂತರ್ ರಾಷ್ಟ್ರೀಯ ಮಟ್ಟದಲ್ಲಿ ಸ್ಪರ್ಧಿಸಲು ಅನುಕೂಲವಾಗುವಂತೆ ಸೂಕ್ತ ಜಮೀನನ್ನು ಗುರುತಿಸಿ ಮಂಜೂರು ಮಾಡುವ ಬಗ್ಗೆ ಪರಿಶೀಲಿಸಲಾಗುವುದು ಎಂದು ಅವರು ಹೇಳಿದರು.

ಪದಕ ವಿಜೇತರಿಗೆ ಭರ್ಜರಿ ನಗದು ಪುರಸ್ಕಾರ :

ಕ್ರೀಡಾಪಟುಗಳನ್ನು ಪ್ರೋತ್ಸಾಹಿಸಲು ರಾಜ್ಯ ಸರಕಾರ ಕೈಗೊಂಡಿರುವ ಕ್ರಮಗಳ ಕುರಿತು ಮಾತನಾಡಿದ ಪರಮೇಶ್ವರ್, ಪ್ರಮುಖ ಅಂತರ್ ರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪದಕ ಗೆದ್ದವರಿಗೆ ನೀಡುವ ನಗದು ಪುರಸ್ಕಾರವನ್ನು ಹೆಚ್ಚಿಸಲಾಗಿದೆ ಎಂದರು.

ಚಿನ್ನದ ಪದಕ ವಿಜೇತರಿಗೆ 1 ಕೋಟಿ ರೂ., ಬೆಳ್ಳಿ ಪದಕ ವಿಜೇತರಿಗೆ 75 ಲಕ್ಷ ರೂ. ಹಾಗೂ ಕಂಚಿನ ಪದಕ ವಿಜೇತರಿಗೆ 50 ಲಕ್ಷ ರೂ. ನಗದು ಬಹುಮಾನ ನೀಡಲಾಗುತ್ತಿದೆ. ನಮ್ಮ ಕ್ರೀಡಾಪಟುಗಳು ಹೆಚ್ಚಿನ ಸಾಧನೆ ಮಾಡಿ ರಾಜ್ಯ ಹಾಗೂ ದೇಶಕ್ಕೆ ಮತ್ತಷ್ಟು ಪದಕಗಳನ್ನು ತರಲಿ ಎಂಬುದು ಇದರ ಉದ್ದೇಶವಾಗಿದೆ ಎಂದು ಅವರು ತಿಳಿಸಿದರು.

ಸರಕಾರಿ ನೇಮಕಾತಿಯಲ್ಲಿ ಕ್ರೀಡಾಪಟುಗಳಿಗೆ ಮೀಸಲಾತಿ :

ಸರಕಾರದ ವಿವಿಧ ಇಲಾಖೆಗಳ ನೇಮಕಾತಿಯಲ್ಲಿ ಕ್ರೀಡಾಪಟುಗಳಿಗೆ ಶೇ.2ರಷ್ಟು ಮೀಸಲಾತಿ ಜಾರಿಗೊಳಿಸಲಾಗಿದ್ದು, ಪೊಲೀಸ್ ಇಲಾಖೆಯಲ್ಲಿ ಈ ಮೀಸಲಾತಿಯನ್ನು ಶೇ.3ಕ್ಕೆ ಹೆಚ್ಚಿಸಲಾಗಿದೆ. ಈ ಸೌಲಭ್ಯದಡಿ ಈಗಾಗಲೇ ಹಲವಾರು ಕ್ರೀಡಾಪಟುಗಳು ಅಧಿಕಾರಿಗಳು ಮತ್ತು ಕಾನ್‍ಸ್ಟೇಬಲ್‍ಗಳಾಗಿ ಆಯ್ಕೆಯಾಗಿದ್ದಾರೆ. ಇಂತಹ ಯೋಜನೆಗಳನ್ನು ಇನ್ನಷ್ಟು ಬಲಪಡಿಸಿ ಪ್ರತಿಭಾವಂತ ಕ್ರೀಡಾಪಟುಗಳಿಗೆ ಹೆಚ್ಚಿನ ಅವಕಾಶಗಳನ್ನು ಕಲ್ಪಿಸಲಾಗುವುದು ಎಂದು ಪರಮೇಶ್ವರ್ ಹೇಳಿದರು.

ಶಾಲೆ, ಕಾಲೇಜು ಮತ್ತು ವಿಶ್ವವಿದ್ಯಾಲಯ ಮಟ್ಟದಲ್ಲಿ ಕ್ರೀಡೆಗಳನ್ನು ಉತ್ತೇಜಿಸಲು ಸರಕಾರ ಬದ್ಧವಾಗಿದ್ದು, ಅಥ್ಲೆಟಿಕ್ಸ್, ಫುಟ್‍ಬಾಲ್, ಹಾಕಿ ಮತ್ತು ಟೆನಿಸ್‍ನಂತಹ ಕ್ರೀಡೆಗಳಲ್ಲಿ ಕ್ರೀಡಾಪಟುಗಳನ್ನು ಬೆಳೆಸಲು ಒತ್ತು ನೀಡಲಾಗುತ್ತಿದೆ. ಕರ್ನಾಟಕದ ಹೆಚ್ಚಿನ ಕ್ರೀಡಾಪಟುಗಳು ಅಂತರ್ ರಾಷ್ಟ್ರೀಯ ಸ್ಪರ್ಧೆಗಳಲ್ಲಿ ಭಾರತವನ್ನು ಪ್ರತಿನಿಧಿಸಿ ಒಲಿಂಪಿಕ್ಸ್ ನಲ್ಲಿ ಪದಕ ಗೆಲ್ಲುವುದನ್ನು ನೋಡುವುದೇ ನಮ್ಮ ಗುರಿಯಾಗಿದೆ ಎಂದು ಅವರು ಹೇಳಿದರು.

ಆರು ದಿನಗಳ ಕಾಲ ನಡೆದ ಚಾಂಪಿಯನ್‍ಶಿಪ್ ಅನ್ನು ಯಶಸ್ವಿಯಾಗಿ ಆಯೋಜಿಸಿದ್ದಕ್ಕಾಗಿ ಕರ್ನಾಟಕ ಪೊಲೀಸ್ ಇಲಾಖೆಯನ್ನು ಅಭಿನಂದಿಸಿದ ಪರಮೇಶ್ವರ್, ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ.ಎಂ.ಎ.ಸಲೀಂ ಹಾಗೂ ಪಂದ್ಯಾವಳಿಯ ಯಶಸ್ಸಿಗೆ ಶ್ರಮಿಸಿದ ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿಯ ಕಾರ್ಯವನ್ನು ಶ್ಲಾಘಿಸಿದರು.

ಪಂದ್ಯಾವಳಿಯಲ್ಲಿ ಭಾಗವಹಿಸಿದ್ದ ಎಲ್ಲ 167 ಕ್ರೀಡಾಪಟುಗಳು, ವಿಜೇತರು, ರನ್ನರ್ಸ್-ಅಪ್ ಹಾಗೂ ಸಮಗ್ರ ಚಾಂಪಿಯನ್‍ಗಳಿಗೆ ಪರಮೇಶ್ವರ್ ಅಭಿನಂದನೆ ಸಲ್ಲಿಸಿದರು.

ಸಮಾರಂಭದಲ್ಲಿ ಸಚಿವ ರಿಝ್ವಾನ್ ಅರ್ಶದ್, ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ. ಎಂ.ಎ.ಸಲೀಂ, ಬೆಂಗಳೂರು ನಗರ ಮುಖ್ಯ ಪೊಲೀಸ್ ಆಯುಕ್ತ ಆರ್.ಹಿತೇಂದ್ರ ಸೇರಿದಂತೆ ಹಲವು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Tags

GovernmentLandTennis AcademyBengaluruDr.G.Parameshwara
share
ಅಮ್ಜದ್ ಖಾನ್ ಎಂ./ವಾರ್ತಾಭಾರತಿ
ಅಮ್ಜದ್ ಖಾನ್ ಎಂ./ವಾರ್ತಾಭಾರತಿ

ಅಮ್ಜದ್ ಖಾನ್ ಎಂ. ಬೆಂಗಳೂರು ವಿಶ್ವವಿದ್ಯಾಲಯದ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದು, 2007ರಿಂದ ವಾರ್ತಾಭಾರತಿ ಕನ್ನಡ ದೈನಿಕ ಬೆಂಗಳೂರು ಆವೃತ್ತಿಯಲ್ಲಿ ಹಿರಿಯ ರಾಜಕೀಯ ವರದಿಗಾರರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಪ್ರವಾಸಿ ಅನುಭವದ ವಿಶೇಷ ಲೇಖನಗಳನ್ನು ಬರೆಯುವುದು, ಪುಸ್ತಕ ಓದುವುದು‌, ಸಾಮಾಜಿಕ ಸೇವಾ ಕಾರ್ಯಗಳು ಇವರ ಹವ್ಯಾಸವಾಗಿವೆ.

Next Story
X