ಅಬ್ದುಲ್ ರಹ್ಮಾನ್ ಹತ್ಯೆ ಪ್ರಕರಣ | ನಾಲ್ವರ ಬಂಧನ : ಗೃಹ ಸಚಿವ ಜಿ.ಪರಮೇಶ್ವರ್

ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನಲ್ಲಿ ಅಬ್ದುಲ್ ರಹ್ಮಾನ್ ಹತ್ಯೆಗೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಲಾಗಿದ್ದು, ಅವರಿಂದ ಸಂಗ್ರಹಿಸಿದ ಮಾಹಿತಿಯ ಆಧಾರದ ಮೇಲೆ ಮುಲಾಜಿಲ್ಲದೇ ಮುಂದಿನ ಕ್ರಮ ತೆಗದುಕೊಳ್ಳಲಾಗುವುದು ಎಂದು ಗೃಹ ಸಚಿವ ಜಿ.ಪರಮೇಶ್ವರ್ ಅವರು ಹೇಳಿದ್ದಾರೆ.
ಗುರುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಕೊಲೆಯ ನಂತರ ನಾಲ್ವರನ್ನು ಬಂಧಿಸಲಾಗಿದೆ ಮತ್ತು ಅವರ ಹೇಳಿಕೆಗಳ ಆಧಾರದ ಮೇಲೆ ನಮಗೆ ಕೆಲವು ಗಂಭೀರ ಮಾಹಿತಿ ಸಿಕ್ಕಿದೆ. ಅದನ್ನು ಬಳಸಿಕೊಂಡು ಮುಂದಿನ ತನಿಖೆ ಮತ್ತು ಕ್ರಮ ಕೈಗೊಳ್ಳಲಾಗುವುದು" ಎಂದು ತಿಳಿಸಿದರು.
ಕರಾವಳಿಯಲ್ಲಿ ಕೋಮುಗಲಭೆ ಸಂಬಂಧ ಮುಲಾಜಿಲ್ಲದೇ ಕ್ರಮ ತೆಗೆದುಕೊಳ್ಳುತ್ತೇವೆ. ಅದನ್ನು ಹತ್ತಿಕ್ಕದೆ ಬಿಡುವುದಿಲ್ಲ. ಆ್ಯಂಟಿ ಕಮ್ಯೂನಲ್ ಫೋರ್ಸ್ಗೆ ಯಾವ ರೀತಿ ಪವರ್ ಕೊಡಬೇಕು ಎಂಬುದನ್ನು ಚರ್ಚೆ ಮಾಡಿದ್ದೇವೆ. ನಿನ್ನೆಯೇ ತಕ್ಷಣ ಜಾರಿಯಾಗುವಂತೆ ಆದೇಶ ಕೂಡ ಮಾಡಲಾಗಿದೆ ಎಂದು ಹೇಳಿದರು.
Next Story





