ಚಕ್ರವರ್ತಿ ಸೂಲಿಬೆಲೆ ವಿರುದ್ಧದ ಪ್ರಕರಣ ವಿಚಾರ : ಅಲ್ಪಸಂಖ್ಯಾತರ ಆಯೋಗದ ಸೂಚನೆಯಂತೆ ಮಾಹಿತಿ ಕೇಳಿದ್ದಾರೆ : ಜಿ.ಪರಮೇಶ್ವರ್

ಬೆಂಗಳೂರು : ಚಕ್ರವರ್ತಿ ಸೂಲಿಬೆಲೆ ವಿರುದ್ಧ ಪ್ರಕರಣಗಳು ದಾಖಲಾಗಿರುವ ವಿಚಾರ ಸಂಬಂಧ ಅಲ್ಪಸಂಖ್ಯಾತರ ಆಯೋಗದ ಸೂಚನೆಯಂತೆ ಪೊಲೀಸ್ ಇಲಾಖೆ ಮಾಹಿತಿ ಪ್ರಕ್ರಿಯೆ ನಡೆಸಿದೆ ಹೊರತು, ಬೇರೆ ಕಾರಣಗಳು ಕಂಡುಬಂದಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
ಗುರುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಲ್ಪಸಂಖ್ಯಾತ ಆಯೋಗದವರು ಚಕ್ರವರ್ತಿ ಸೂಲಿಬೆಲೆ ವಿರುದ್ಧ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಪೊಲೀಸ್ ಮಹಾನಿರ್ದೇಶಕರನ್ನು ಕೇಳಿದ್ದಾರೆ. ಅದೇ ಹಿನ್ನೆಲೆಯಲ್ಲಿ ಡಿಜಿಯವರು ಸಂಬಂಧಪಟ್ಟ ಎಸ್ಪಿಗೆ ಫೋನ್ ಮಾಡಿ ಮಾಹಿತಿ ಕೇಳಿದ್ದಾರೆ ಎಂದು ಹೇಳಿದರು.
ಗಡೀಪಾರು ಮಾಡಲು ಬೇರೆ ಕಾರಣಗಳಿರುತ್ತವೆ. ತನಗೆ ಗೊತ್ತಿರುವ ಮಟ್ಟಿಗೆ ಅದಕ್ಕಾಗಿ ಡಿಜಿಯವರು ಎಸ್ಪಿಗೆ ಕರೆ ಮಾಡಿರಲ್ಲ ಎಂದು ಅವರು ಸ್ಪಷ್ಟನೆ ನೀಡಿದರು.
Next Story





