ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ: ಬಿಜೆಪಿಯಿಂದ ಚುನಾವಣಾ ಉಸ್ತುವಾರಿಗಳ ನೇಮಕ

ರಾಮ್ ಮಾಧವ್
ಬೆಂಗಳೂರು: ಮುಂಬರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಚುನಾವಣೆಗೆ ಬಿಜೆಪಿ ಚುನಾವಣಾ ಉಸ್ತುವಾರಿಗಳನ್ನು ನೇಮಕ ಮಾಡಿದೆ.
ಈ ಬಗ್ಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಆದೇಶ ಹೊರಡಿಸಿದ್ದು, ಪಕ್ಷದ ಹಿರಿಯ ನಾಯಕ ಹಾಗೂ ರಾಷ್ಟ್ರೀಯ ಮಾಜಿ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್ ಅವರನ್ನು ಚುನಾವಣಾ ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ.
ಸಹ-ಉಸ್ತುವಾರಿಗಳಾಗಿ ರಾಜಸ್ಥಾನ ಬಿಜೆಪಿಯ ಸತೀಶ್ ಪೂನಿಯಾ ಹಾಗೂ ಮಹಾರಾಷ್ಟ್ರದ ಬಿಜೆಪಿ ಶಾಸಕ ಸಂಜಯ್ ಉಪಾಧ್ಯಾಯರನ್ನು ನೇಮಕ ಮಾಡಲಾಗಿದೆ.
2018ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ರಾಮ್ ಮಾಧವ್ ಬಿಜೆಪಿಯ ಚುನಾವಣೆ ಉಸ್ತುವಾರಿಯಾಗಿ ಕೆಲಸ ಮಾಡಿದ್ದರು.
ಜೂನ್ 30ರೊಳಗಾಗಿ ಜಿಬಿಎ ಚುನಾವಣೆ ನಡೆಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿರುವ ಬಿಜೆಪಿ ಸಿದ್ಧತೆ ಆರಂಭಿಸಿದ್ದು, ಚುನಾವಣಾ ಉಸ್ತುವಾರಿಗಳನ್ನು ನೇಮಕ ಮಾಡಿದೆ.
Next Story





