Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಕೆಪಿಎಸ್‍ಸಿ ಹುದ್ದೆಗಳ ನೇಮಕಾತಿ ಅಕ್ರಮ:...

ಕೆಪಿಎಸ್‍ಸಿ ಹುದ್ದೆಗಳ ನೇಮಕಾತಿ ಅಕ್ರಮ: ಜ್ಞಾನೇಂದ್ರ ಕುಮಾರ್ ಮತ್ತೆ ಎಂಟು ದಿನ ಈ.ಡಿ. ವಶಕ್ಕೆ

ವಾರ್ತಾಭಾರತಿವಾರ್ತಾಭಾರತಿ26 Sept 2026 9:23 PM IST
share
ಕೆಪಿಎಸ್‍ಸಿ ಹುದ್ದೆಗಳ ನೇಮಕಾತಿ ಅಕ್ರಮ: ಜ್ಞಾನೇಂದ್ರ ಕುಮಾರ್ ಮತ್ತೆ ಎಂಟು ದಿನ ಈ.ಡಿ. ವಶಕ್ಕೆ

ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್‍ಸಿ) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂ.ಅಕ್ರಮ ಪ್ರಕರಣದಲ್ಲಿ ಆರೋಪಿಯಾಗಿರುವ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಗಂಗ್ವಾರ್‍ನನ್ನು ಎಂಟು ದಿನಗಳ ಕಾಲ ಈ.ಡಿ. ವಶಕ್ಕೆ ನೀಡಿ ನಗರದ ನಾಲ್ಕನೇ ಪ್ರಧಾನ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಆದೇಶಿಸಿದೆ.

ನೇಮಕಾತಿ ಅಕ್ರಮ ಪ್ರಕರಣದಲ್ಲಿ ತನಿಖೆ ಎದುರಿಸುತ್ತಿರುವ ಜ್ಞಾನೇಂದ್ರ ಕುಮಾರ್‌ ರ ಕಸ್ಟಡಿ ಅಂತ್ಯ ಹಿನ್ನೆಲೆ ಜಾರಿ ನಿರ್ದೇಶನಾಲಯದ(ಈ.ಡಿ.) ಅಧಿಕಾರಿಗಳು ಶನಿವಾರ ನ್ಯಾಯಾಲಯದ ಮುಂದೆ ಹಾಜರುಪಡಿಸಿದರು.

ಈ ವೇಳೆ, ಪ್ರಕರಣದ ಕುರಿತು ಇನ್ನಷ್ಟು ತನಿಖೆಯನ್ನು ನಡೆಸಬೇಕಿರುವ ಕಾರಣ, ಆರೋಪಿ ಜ್ಞಾನೇಂದ್ರ ಕುಮಾರ್‍ನನ್ನು ಹೆಚ್ಚಿನ ವಿಚಾರಣೆಗಾಗಿ ತಮ್ಮ ವಶಕ್ಕೆ ಒಪ್ಪಿಸಬೇಕೆಂದು ಈ.ಡಿ. ಪರ ವಕೀಲರು ನ್ಯಾಯಾಲಯಕ್ಕೆ ಮನವಿ ಮಾಡಿಕೊಂಡರು. ವಕೀಲರ ವಾದ-ಪ್ರತಿವಾದಗಳನ್ನು ಪರಿಗಣಿಸಿದ ನ್ಯಾಯಪೀಠ, ಆರೋಪಿ ಜ್ಞಾನೇಂದ್ರ ಕುಮಾರ್‍ನನ್ನು ಮತ್ತೆ ಎಂಟು ದಿನಗಳ ಕಾಲ ಈ.ಡಿ. ವಶಕ್ಕೆ ಒಪ್ಪಿಸಿದೆ.

ಇದೇ ವೇಳೆ, ಕಸ್ಟಡಿ ಅವಧಿಯಲ್ಲಿ ನಿಯಮಾನುಸಾರ ಆರೋಪಿಯನ್ನು ಭೇಟಿಯಾಗಲು ಅವರ ಕುಟುಂಬದ ಸದಸ್ಯರಿಗೆ ಅವಕಾಶ ಕಲ್ಪಿಸಬೇಕು ಎಂದು ನ್ಯಾಯಾಲಯ ತನಿಖಾಧಿಕಾರಿಗಳಿಗೆ ನಿರ್ದೇಶನ ನೀಡಿದೆ.

Tags

Gyanendra Kumar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X