ರನ್ಯಾ ರಾವ್ ವಿರುದ್ಧ ಕಾಫಿಪೋಸಾ ಪ್ರಶ್ನಿಸಿ ತಾಯಿಯಿಂದ ಹೇಬಿಯಸ್ ಕಾರ್ಪಸ್ ಅರ್ಜಿ
ಆಕ್ಷೇಪ ಸಲ್ಲಿಸಲು ಸಿಇಐಬಿಗೆ ಸೂಚನೆ

ರನ್ಯಾ ರಾವ್
ಬೆಂಗಳೂರು: ಅಕ್ರಮ ಚಿನ್ನ ಸಾಗಣೆ ಪ್ರಕರಣದಲ್ಲಿ ನಟಿ ರನ್ಯಾ ರಾವ್ ಅವರನ್ನು ಕೇಂದ್ರೀಯ ಆರ್ಥಿಕ ಗುಪ್ತಚರ ಬ್ಯೂರೊ (ಸಿಇಐಬಿ) ‘ಕಾಫಿಪೋಸಾ’ ಕಾಯ್ದೆ ಅಡಿ ಬಂಧಿಸಿರುವುದನ್ನು ಪ್ರಶ್ನಿಸಿ ಅವರು ತಾಯಿ ರೋಹಿಣಿ ಹೈಕೋರ್ಟ್ ಹೇಬಿಯಸ್ ಕಾರ್ಪಸ್ ಗೆ ಅರ್ಜಿ ಸಲ್ಲಿಸಿದ್ದಾರೆ.
ಈ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಪ್ರತಿವಾದಿ ಸಿಇಐಬಿಗೆ ಆಕ್ಷೇಪಣೆ ಸಲ್ಲಿಸುವಂತೆ ಸೂಚನೆ ನೀಡಿದೆ.
ಇದಕ್ಕೂ ಮುನ್ನ ಅರ್ಜಿದಾರ ಪರ ವಕೀಲರು ವಾದ ಮಂಡಿಸಿ, ಕಾಫಿಪೋಸಾ ಅಡಿಯ ಬಂಧನವನ್ನು ಸಲಹಾ ಮಂಡಳಿ ದೃಢೀಕರಿಸಿದೆ ಎಂದು ಹೈಕೋರ್ಟ್ ಗೆ ಮಾಹಿತಿ ನೀಡಿದರು.
ಕಾಫಿಪೋಸಾ ಅಡಿ ಬಂಧನಕ್ಕೆ ನೀಡಿದ ಕಾರಣ ದೋಷಪೂರಿತವಾಗಿದೆ. ಕಾಫಿಪೋಸಾ ಪ್ರಕರಣದಡಿ ರನ್ಯಾ ಬಂಧನವೇ ಕಾನೂನುಬಾಹಿರ ಎಂದು ವಾದ ಮಂಡಿಸಿದರು.
ವಾದ ಆಲಿಸಿದ ಪೀಠ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿ ವಿಚಾರಣೆ ಆ.28ಕ್ಕೆ ವಿಚಾರಣೆ ಮುಂದೂಡಿದೆ.
Next Story





