Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ದೇಶ ಆರ್ಥಿಕವಾಗಿ ಭೀಕರ...

ದೇಶ ಆರ್ಥಿಕವಾಗಿ ಭೀಕರ ಸ್ಥಿತಿಯಲ್ಲಿದ್ದಾಗ ಸರಿದಾರಿಗೆ ತಂದಿದ್ದವರು ಮನಮೋಹನ್ ಸಿಂಗ್ : ಎಚ್‌.ಡಿ.ದೇವೇಗೌಡ

ವಾರ್ತಾಭಾರತಿವಾರ್ತಾಭಾರತಿ27 Dec 2024 6:52 PM IST
share
ದೇಶ ಆರ್ಥಿಕವಾಗಿ ಭೀಕರ ಸ್ಥಿತಿಯಲ್ಲಿದ್ದಾಗ ಸರಿದಾರಿಗೆ ತಂದಿದ್ದವರು ಮನಮೋಹನ್ ಸಿಂಗ್ :   ಎಚ್‌.ಡಿ.ದೇವೇಗೌಡ

ಬೆಂಗಳೂರು : ನಮ್ಮ ದೇಶ ಆರ್ಥಿಕವಾಗಿ ಭೀಕರ ಪರಿಸ್ಥಿತಿಯಲ್ಲಿದ್ದಾಗ ಹಣಕಾಸು ಸಚಿವರಾಗಿ ಬಂದ ಡಾ.ಮನಮೋಹನ್ ಸಿಂಗ್ ಅವರು ಸಮರ್ಥವಾಗಿ ಕೆಲಸ ಮಾಡಿದರು ಹಾಗೂ ಅರ್ಥ ವ್ಯವಸ್ಥೆಯನ್ನು ಸರಿದಾರಿಗೆ ತಂದರು ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಇಂದಿಲ್ಲಿ ಬಣ್ಣಿಸಿದ್ದಾರೆ.

ಶುಕ್ರವಾರ ಜೆಡಿಎಸ್ ಪಕ್ಷದ ಕಚೇರಿ ಜೆ.ಪಿ.ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಮನಮೋಹನ್ ಸಿಂಗ್ ಅವರ ಶ್ರದ್ಧಾಂಜಲಿ ಸಮರ್ಪಣೆ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಇಂದು ಅತ್ಯಂತ ದುಃಖದ ದಿನ. ಮನಮೋಹನ್ ಸಿಂಗ್‍ರ ನಿಧನ ನನಗೆ ಬಹಳ ನೋವುಂಟು ಮಾಡಿದೆ. ನಾನು ಮನಮೋಹನ್ ಸಿಂಗ್ ನೋಡಿದ್ದು 1991ರಲ್ಲಿ, ಲೋಕಸಭೆಯಲ್ಲಿ. ನಾನು ಮೊದಲ ಬಾರಿಗೆ ಲೋಕಸಭೆಗೆ ಹೋಗಿದ್ದೆ. ಅವರು ಪಿ.ವಿ.ನರಸಿಂಹ ರಾವ್ ಸರಕಾರದಲ್ಲಿ ಆರ್ಥಿಕ ಸಚಿವರಾಗಿದ್ದರು.

ನಮ್ಮ ರಾಷ್ಟ್ರದ ಆರ್ಥಿಕ ಪರಿಸ್ಥಿತಿ ಸರಿಪಡಿಸಲು ಅನೇಕ ಪ್ರಯತ್ನಗಳನ್ನು ಮಾಡಿದರು. ಆ ಸಂದರ್ಭದಲ್ಲಿ ಆರ್ಥಿಕವಾಗಿ ದೇಶದ ಸ್ಥಿತಿ ಬಹಳ ಹದಗೆಟ್ಟಿತ್ತು. ಅದಕ್ಕೂ ಹಿಂದೆ 130ಟನ್ ಚಿನ್ನವನ್ನು ಒತ್ತೆ ಇಡಲಾಗಿತ್ತು. ಅಂತಹ ಭೀಕರ ಪರಿಸ್ಥಿತಿ ಇತ್ತು. ಆ ಸನ್ನಿವೇಶದಲ್ಲಿ ಮನಮೋಹನ್ ಸಿಂಗ್ ಆರ್ಥಿಕ ಸಚಿವರಾಗಿ ತಮ್ಮ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಿದರು ಎಂದು ಅವರು ನೆನಪು ಮಾಡಿಕೊಂಡರು.

ಮನಮೋಹನ್ ಸಿಂಗ್ ಅವರನ್ನು ನಾನು ಬಹಳ ಟೀಕೆ ಮಾಡಿದ್ದೆ. ಅವರ ನೀತಿಗಳನ್ನು ಪ್ರಶ್ನೆ ಮಾಡಿದ್ದೆ. ಖಾಸಗಿಕರಣ, ವಿದೇಶದಿಂದ ಹಣ ಬರಲು ನಮ್ಮ ದೇಶದ ಆರ್ಥಿಕ ನೀತಿಗಳನ್ನು ಮಾರ್ಪಾಡು ಮಾಡಿ ಆರ್ಥಿಕ ಸುಧಾರಣೆಗಳನ್ನು ಜಾರಿಗೆ ತಂದರು. ಇದು ದೊಡ್ಡ ಬೆಳವಣಿಗೆ ಎಂದು ದೇವೇಗೌಡ ಬಣ್ಣಿಸಿದರು.

ಮನಮೋಹನ್ ಸಿಂಗ್‍ರು ಸರಳ ಸಜ್ಜನ ಪ್ರಾಮಾಣಿಕ ವ್ಯಕ್ತಿ ಆಗಿದ್ದವರು. ನಾವು ಪಕ್ಷ ರಾಜಕಾರಣವನ್ನು ಹೊರತುಪಡಿಸಿ ಅವರನ್ನು ನೆನೆಯುತ್ತಿದ್ದೇವೆ. ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ನಮ್ಮ ಪಕ್ಷದ ಪರವಾಗಿ, ವೈಯಕ್ತಿಕವಾಗಿ ಮನಮೋಹನ್ ಸಿಂಗ್ ಅವರಿಗೆ ಗೌರವ ಸಲ್ಲಿಸಿದ್ದಾರೆ ಎಂದು ಅವರು ತಿಳಿಸಿದರು.

ನರಸಿಂಹ ರಾವ್ ಸರಕಾರದಲ್ಲಿ ಈ ದೇಶದ ಗೌರವ ಉಳಿಸಲು ಆರ್ಥಿಕ ತಜ್ಞರಾಗಿ ಮನಮೋಹನ್ ಸಿಂಗ್ ಅವರು ಸೇವೆ ಸಲ್ಲಿಸಿದ್ದರು. ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ ದೇಶವನ್ನು ಪಾರು ಮಾಡಿ ಗೌರವ ಉಳಿಸಿದ್ದು ಅವರು. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥನೆ ಮಾಡುತ್ತೇನೆ. ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ದೇವರು ನೀಡಲಿ ಎಂದು ದೇವೇಗೌಡ ಗದ್ಗದಿತರಾದರು.

ದೇಶಕ್ಕೆ ಮನಮೋಹನ್ ಸಿಂಗ್ ಅವರು ಸುಧೀರ್ಘ ಕಾಲ ಸೇವೆ ಸಲ್ಲಿಸಿದ್ದಾರೆ. ಮುತ್ಸದಿ ರಾಜಕಾರಣಿ ಹಿರಿಯ ರಾಜಕಾರಣಿ 92 ವಯಸ್ಸಲ್ಲಿ ಅಗಲಿದ್ದಾರೆ. ವಯಕ್ತಿಕ ನನಗೆ ತುಂಬಾ ಬೇಸರವಾಗಿದೆ. ಅವರ ಆತ್ಮಕ್ಕೆ ಭಗವಂತ ಮೋಕ್ಷ ಕೊಡಲಿ, ಪರಮಾತ್ಮ ಅವರ ಕುಟುಂಬಕ್ಕೆ ನೋವು ಸಹಿಸುವ ಶಕ್ತಿ ನೀಡಲಿ ಎಂದು ಅವರು ಭಾವುಕರಾದರು.

ದೇಶದಲ್ಲಿ ಯಾವುದೇ ಸರಕಾರಿ ಕಾರ್ಯಕ್ರಮ ಮಾಡಬಾರದು. ಶೋಕಾಚರಣೆ ಇದೆ. ರಾಷ್ಟ್ರ ಧ್ವಜವನ್ನು ಅರ್ಧಕ್ಕೆ ಇಳಿಸಿ ಗೌರವ ಕೊಡಬೇಕು. ಅವರು ನಮ್ಮ ದೇಶಕ್ಕೆ ಸುಧೀರ್ಘ ಸೇವೆ ಸಲ್ಲಿಸಿದ್ದಾರೆ. ಮುತ್ಸದಿ ರಾಜಕಾರಣಿ ಹಿರಿಯ ರಾಜಕಾರಣಿ ತಮ್ಮ 92ನೇ ವಯಸ್ಸಿನಲ್ಲಿ ನಮ್ಮನ್ನೆಲ್ಲಾ ಅಗಲಿದ್ದಾರೆ ದೇವೇಗೌಡರು ಹೇಳಿದರು.

ಅವರು ಜಾರಿ ಮಾಡಿದ ಉದಾರೀಕರಣ, ಖಾಸಗೀಕರಣ ಮತ್ತು ಜಾಗತೀಕರಣ ನೀತಿಗಳ ಮೂಲಕ ದೇಶಕ್ಕೆ ವಿದೇಶಿ ನೇರ ಬಂಡವಾಳ ದೊಡ್ಡ ಪ್ರಮಾಣದಲ್ಲಿ ಹರಿದು ಬಂತು. ಹಣಕಾಸು ಸಚಿವರಾಗಿ ಬರುವುದಕ್ಕೆ ಮೊದಲು ಅವರು ಜಾಗತಿಕ ಮಟ್ಟದಲ್ಲಿ ಕೆಲಸ ಮಾಡಿದ್ದರು. ಹೀಗಾಗಿ ಅಲ್ಲಿ ಬಹಳ ದೊಡ್ಡ ಅನುಭವ ಗಳಿಸಿಕೊಂಡರು. ಆರ್ಥಿಕ ವಿಚಾರದಲ್ಲಿ ಅವರು ತುಂಬಾ ಬುದ್ದಿವಂತರಾಗಿದ್ದರು ಎಂದು ದೇವೇಗೌಡ ಸ್ಮರಿಸಿದರು.

ಮಾಜಿ ಸಚಿವರಾದ ಸಿ.ಎಸ್.ಪುಟ್ಟರಾಜು, ವೆಂಕಟರಾವ್ ನಾಡಗೌಡ, ಪರಿಷತ್ ಸದಸ್ಯ ಕೆ.ಎ.ತಿಪ್ಪೇಸ್ವಾಮಿ, ನಗರ ಘಟಕದ ಅಧ್ಯಕ್ಷ ಎಚ್.ಎಂ.ರಮೇಶ್ ಗೌಡ, ಮಾಜಿ ಶಾಸಕ ಲಿಂಗೇಶ ಸೇರಿದಂತೆ ಅನೇಕ ಮುಖಂಡರು ಸಭೆಯಲ್ಲಿ ಪಾಲ್ಗೊಂಡಿದ್ದರು.


share
ವಾರ್ತಾಭಾರತಿ
ವಾರ್ತಾಭಾರತಿ
Next Story
X