Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಇದು ಜಾತಿಗಣತಿಯೋ, ದ್ವೇಷಗಣತಿಯೋ? :...

ಇದು ಜಾತಿಗಣತಿಯೋ, ದ್ವೇಷಗಣತಿಯೋ? : ಎಚ್.ಡಿ.ಕುಮಾರಸ್ವಾಮಿ ಪ್ರಶ್ನೆ

ವಾರ್ತಾಭಾರತಿವಾರ್ತಾಭಾರತಿ15 April 2025 7:26 PM IST
share
ಇದು ಜಾತಿಗಣತಿಯೋ, ದ್ವೇಷಗಣತಿಯೋ? : ಎಚ್.ಡಿ.ಕುಮಾರಸ್ವಾಮಿ ಪ್ರಶ್ನೆ

ಬೆಂಗಳೂರು: ಜಾತಿಗಣತಿ ವರದಿಯದ್ದು ಎನ್ನಲಾದ ಅಂಕಿ ಅಂಶಗಳ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಇದು ಜಾತಿಗಣತಿಯೋ, ದ್ವೇಷಗಣತಿಯೋ? ಎಂದು ಪ್ರಶ್ನೆ ಮಾಡಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಮಂಡ್ಯ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಚಿತ್ರದುರ್ಗ ಸೇರಿ ಹಳೇ ಮೈಸೂರು ಜಿಲ್ಲೆಗಳಲ್ಲಿ ವಾಸಿಸುವ ಒಕ್ಕಲಿಗ ಸಮುದಾಯದ ಸಂಖ್ಯೆ ಎಷ್ಟು? ಎಂದು ಕೇಳಿದ್ದಾರೆ.

ಜಾತಿ ಗಣತಿ ಗಜಪ್ರಸವ ತಥಂಗಕ್ಕೆ ಸಂಪುಟದಲ್ಲಿ ಶಾಸ್ತ್ರೋಕ್ತವಾಗಿ ಅರಿಶಿಣ ಕಂಕುಮ ಹಚ್ಚಿ ಕಡ್ಡಿ ಹಚ್ಚಲಾಗಿದೆ. ಆ ವರದಿಯದ್ದು ಎನ್ನಲಾದ ಅಂಕಿ-ಅಂಶಗಳು ಎಲ್ಲೆಡೆ ತೇಲಾಡುತ್ತಿವೆ. ಯಾವುದೋ ಅಜ್ಞಾತ ಕೈ ಅದನ್ನು ವ್ಯವಸ್ಥಿತವಾಗಿ ತೇಲಿಬಿಟ್ಟಿದೆ. ಒಕ್ಕಲಿಗ ಸಮಾಜಕ್ಕೆ ಸೇರಿದ ಅಂಕಿ-ಸಂಖ್ಯೆ ಅಷ್ಟೇ ಅಲ್ಲ, ವೀರಶೈವ ಲಿಂಗಾಯತ ಮತ್ತು ಇನ್ನಿತರೆ ಸಮಾಜಗಳ ಸಂಖ್ಯೆಯೂ ನನಗೆ ಅಚ್ಚರಿ ಹುಟ್ಟಿಸಿದೆ ಎಂದು ಅವರು ಹೇಳಿದ್ದಾರೆ.

ಗಣತಿ ಗ್ಯಾರಂಟಿ ರಾಜ್ಯದಲ್ಲಿ ಅಲ್ಲೋಲ ಕಲ್ಲೋಲವೆಬ್ಬಿಸಲು ಹೂಡಿದ ಷಡ್ಯಂತ್ರ್ಯವೇ? ಅಥವಾ ಸರಣಿ ದರ ಏರಿಕೆ, ಸಾಲುಸಾಲು ಭ್ರಷ್ಟ ಹಗರಣಗಳ ಮುಜುಗರದಿಂದ ಮುಖ ಮುಚ್ಚಿಕೊಳ್ಳಲು ಜನರ ಗಮನ ಬೇರೆಡೆಗೆ ಹೊರಳಿಸಲು ರೂಪಿಸಿದ ಸಂಚೇ? ಎಂದು ಕುಮಾರಸ್ವಾಮಿ ಶಂಕೆ ವ್ಯಕ್ತಪಡಿಸಿದ್ದಾರೆ.

ಇಡೀ ರಾಜ್ಯವು ಜಾತಿ ಬೆಂಕಿಯಲ್ಲಿ ಹೊತ್ತಿ ಉರಿಯುತ್ತಿದ್ದರೆ, ಕಾಂಗ್ರೆಸ್ ಸರಕಾರದ ಈ ನಡೆ ಕೆಲ ನಿರ್ದಿಷ್ಟ ಸಮುದಾಯಗಳ ಮೇಲೆ ರಾಜಕೀಯ, ಸಾಮಾಜಿಕವಾಗಿ ಹಗೆತನ ಸಾಧಿಸುವ ಮುಂದುವರಿದ ಅಧ್ಯಾಯವೇ? ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

ಪೆನ್ನೂ ಪೇಪರ್ ಕೇಳಿದ್ದ ಡಿಕೆಶಿಗೆ ಟಾಂಗ್: ಮುಖ್ಯಮಂತ್ರಿ ಕುರ್ಚಿ ಹತ್ತಲು ಚಾತಕ ಪಕ್ಷಿಯಂತೆ ನಿದ್ದೆಗೆಟ್ಟು, ‘ಒಂದ್ ಸಲ ನಂಗೂ ಪೆನ್ನೂ-ಪೇಪರ್ ಕೊಡಿ' ಎಂದು ಸಮುದಾಯದ ಮುಂದೆ ಮಂಡಿಯೂರಿ ಗೋಗರೆದ ವ್ಯಕ್ತಿ ಸಿದ್ದಷಡ್ಯಂತ್ರ್ಯ ವರದಿಗೆ ಶಿರಬಾಗಿ ಸಮ್ಮತಿಸಿಸುವರೇ? ಹಿಂದೊಮ್ಮೆ ನಾಡಪ್ರಭು ಕೆಂಪೇಗೌಡ ಅಂತರ್‍ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕ್ಷೀಣದನಿಯಲ್ಲಿ ಗಣತಿ ವರದಿಯನ್ನು ವಿರೋಧಿಸಿದ್ದವರು ಈಗ ನಾಲಿಗೆ ಬದಲಿಸಿದ್ದಾರೆ. ಶಿವ ಶಿವಾ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಗೆ ಕುಮಾರಸ್ವಾಮಿ ಟಾಂಗ್ ನೀಡಿದ್ದಾರೆ.

‘ನಾನ್ ಒಂದು ನ್ಯಾಷನಲ್ ಪಾರ್ಟಿಯ ಸ್ಟೇಟ್ ಪ್ರೆಸಿಡೆಂಟ್ ಕಣ್ರೀ.. ನಂಗೆ ಎಲ್ರೂ ಸಮಾನ! ಈಗಷ್ಟೇ ಕಣ್ ತೆರೆದಿದ್ದೇವೆ. ಗಣತಿಗೆ ಯಾರ ವಿರೋಧವೂ ಇಲ್ಲ, ವಿರೋಧವಾದ್ರೂ ಯಾಕಿರುತ್ತೆ ಹೇಳಿ?’ ಎಂದು ಸುದ್ದಿಗಾರರನ್ನೇ ತಳ್ಳಿಕೊಂಡು ಪಲಾಯನಗೈದರಲ್ಲಾ..? ಪೆನ್ನೂ ಪೇಪರ್ ಕೊಟ್ಟ ಪಾಪಕ್ಕೆ ಒಕ್ಕಲಿಗ ಸಮಾಜ ಬೆಲೆ ತೆರುತ್ತಿದೆ. ಕುರ್ಚಿ ದುರಾಸೆಗೆ ಈ ವ್ಯಕ್ತಿ ಅದೇ ಪೆನ್ನಿನಲ್ಲಿ ಸಮಾಜದ ಮರಣಶಾಸನ ಬರೆಯುತ್ತಿದ್ದಾರೆ ಎಂದು ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಲ್ಲದೆ, ಈ ವರದಿಗೆ ನನ್ನ ಒಪ್ಪಿಗೆ ಇಲ್ಲ. ಅನ್ಯಾಯದ ವಿರುದ್ಧ ಹೋರಾಟಕ್ಕೆ ನಾನು ಶತಸಿದ್ಧ ಎಂದು ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X