Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ‘ಮುತ್ತತ್ತಿಯಲ್ಲಿ ಪ್ರವಾಸಿಗರ...

‘ಮುತ್ತತ್ತಿಯಲ್ಲಿ ಪ್ರವಾಸಿಗರ ಸುರಕ್ಷತೆಗೆ ಅಗತ್ಯ ಕ್ರಮ’; ಗೃಹ ಸಚಿವ ಪ್ರಿಯಾಂಕ್ ಖರ್ಗೆಗೆ ಎಚ್.ಡಿ.ಕುಮಾರಸ್ವಾಮಿ ಪತ್ರ

ವಾರ್ತಾಭಾರತಿವಾರ್ತಾಭಾರತಿ26 Jun 2026 7:24 PM IST
share
‘ಮುತ್ತತ್ತಿಯಲ್ಲಿ ಪ್ರವಾಸಿಗರ ಸುರಕ್ಷತೆಗೆ ಅಗತ್ಯ ಕ್ರಮ’; ಗೃಹ ಸಚಿವ ಪ್ರಿಯಾಂಕ್ ಖರ್ಗೆಗೆ ಎಚ್.ಡಿ.ಕುಮಾರಸ್ವಾಮಿ ಪತ್ರ

ಬೆಂಗಳೂರು : ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಹಲಗೂರು ಹತ್ತಿರ ಇರುವ ಪ್ರಸಿದ್ಧ ಪ್ರವಾಸಿ ಕ್ಷೇತ್ರವಾಗಿರುವ ಮುತ್ತತ್ತಿಯಲ್ಲಿ ಪ್ರವಾಸಿಗರ ಸುರಕ್ಷತೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಹಾಗೂ ಒಂದು ಪೊಲೀಸ್ ಉಪ ಠಾಣೆ ಸ್ಥಾಪಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕು ಎಂದು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿ ಕೋರಿದ್ದಾರೆ.

ಶುಕ್ರವಾರ ಈ ಸಂಬಂಧ ಗೃಹ ಸಚಿವ ಪ್ರಿಯಾಂಕ್ ಖರ್ಗೆಗೆ ಪತ್ರ ಬರೆದಿರುವ ಅವರು, ಮುತ್ತತ್ತಿಯಲ್ಲಿ ಕಾವೇರಿ ನದಿಯಲ್ಲಿ ನಿರಂತರವಾಗಿ ಪ್ರವಾಸಿಗರು ನದಿಯ ನೀರಿನ ಸುಳಿಗಳಿಗೆ ಸಿಲುಕಿ ತಮ್ಮ ಅಮೂಲ್ಯ ಜೀವಗಳನ್ನು ಕಳೆದುಕೊಳ್ಳುತ್ತಿದ್ದಾರೆ. ನದಿಯಲ್ಲಿ ನಿಗೂಢವಾಗಿರುವ ಸುಳಿಗಳಿಗೆ ಸಿಲುಕಿ ಪ್ರವಾಸಿಗರು ಜೀವ ತೆರುತ್ತಿರುವ ಪ್ರಕರಣಗಳು ದಿನೇದಿನೆ ಹೆಚ್ಚಾಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಕಳೆದ ಐದು ತಿಂಗಳಲ್ಲಿ 11ಕ್ಕೂ ಹೆಚ್ಚು ಪ್ರವಾಸಿಗರು ಈಜಲು ಹೋಗಿ ದುರಂತ ಮರಣ ಹೊಂದಿದ್ದಾರೆ. ಕಳೆದ ಐದು ವರ್ಷಗಳಲ್ಲಿ 36ಕ್ಕೂ ಅಧಿಕ ಮಂದಿ ಬಲಿಯಾಗಿದ್ದಾರೆ ಎಂದು ಅಂಕಿ ಅಂಶಗಳು ಹೇಳುತ್ತವೆ. ಈ ಸಾವುಗಳಿಗೆ ತಡೆ ಹಾಕುವ ತುರ್ತು ಅಗತ್ಯವಿದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಮುತ್ತತ್ತಿ ಕ್ಷೇತ್ರವು ನಾಡಿನಲ್ಲಿ ಪ್ರಸಿದ್ಧ ಪ್ರವಾಸಿ ತಾಣಗಳಲ್ಲಿ ಒಂದಾಗಿದೆ. ಇಲ್ಲಿನ ಆಂಜನೇಯ ಸ್ವಾಮಿ ದೇವಾಲಯಕ್ಕೆ ರಾಜ್ಯದ ವಿವಿಧ ಭಾಗಗಳಿಂದ ಭಕ್ತರು ಬರುತ್ತಾರೆ. ಭಕ್ತರು ನದಿಗೆ ಇಳಿದು ಪುಣ್ಯಸ್ನಾನ ಮಾಡುತ್ತಾರೆ. ಆದರೆ, ಇಲ್ಲಿ ಎಚ್ಚರಿಕೆ ಫಲಕಗಳು, ರಕ್ಷಣಾ ಸಿಬ್ಬಂದಿ ಇಲ್ಲದ ಕಾರಣ ತಮಗೆ ಅರಿವಿಲ್ಲದೆಯೆ ಜನರು ಸಾವಿನ ದವಡೆಗೆ ಸಿಲುಕುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಮುತ್ತತ್ತಿ ನದಿ ಭಾಗದ ಪ್ರದೇಶದಲ್ಲಿ ಹೆಚ್ಚಿನ ಭದ್ರತಾ ಸಿಬ್ಬಂದಿ ನಿಯೋಜಿಸಬೇಕು, ಎಚ್ಚರಿಕೆಯ ಫಲಕಗಳನ್ನು ಅಳವಡಿಸಬೇಕು ಮತ್ತು ನದಿಗೆ ಇಳಿಯದಂತೆ ತಡೆಯಲು ದಂಡೆಯ ಉದ್ದಕ್ಕೂ ಮುಳ್ಳಿನ ತಂತಿ ಹಾಗೂ ಬ್ಯಾರಿಕೇಡ್‍ಗಳನ್ನು ಅಳವಡಿಸಲು ತುರ್ತು ಕ್ರಮ ಕೈಗೊಳ್ಳಬೇಕು ಹಾಗೂ ಮುತ್ತತ್ತಿಯಲ್ಲಿ ಒಂದು ಪೊಲೀಸ್ ಉಪ ಠಾಣೆಯನ್ನು ಸ್ಥಾಪಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಬೇಕು ಎಂದು ಕುಮಾರಸ್ವಾಮಿ ಕೋರಿದ್ದಾರೆ.


Tags

HD Kumaraswamy
share
ವಾರ್ತಾಭಾರತಿ
ವಾರ್ತಾಭಾರತಿ
Next Story
X