Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ‘ನೈಸ್’ ಹಗರಣದ ವಿರುದ್ಧ ಜನರು ಎದ್ದು...

‘ನೈಸ್’ ಹಗರಣದ ವಿರುದ್ಧ ಜನರು ಎದ್ದು ನಿಲ್ಲಬೇಕು : ಎಚ್.ಡಿ.ಕುಮಾರಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ23 Aug 2026 5:41 PM IST
share
‘ನೈಸ್’ ಹಗರಣದ ವಿರುದ್ಧ ಜನರು ಎದ್ದು ನಿಲ್ಲಬೇಕು : ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು : ನೈಸ್ ಕಂಪೆನಿಯ ವಿರುದ್ಧ ನಾನು ಜೆಡಿಎಸ್ ಕಾರ್ಯಕರ್ತರನ್ನು ಎತ್ತಿಕಟ್ಟುತ್ತಿಲ್ಲ, ಇಡೀ ರಾಜ್ಯದ ಜನರೇ ಈ ಯೋಜನೆ ವಿರುದ್ಧ ಎದ್ದು ನಿಲ್ಲಬೇಕಾಗಿದೆ. ಅಂತಹ ದೊಡ್ಡ ಹಗರಣ ನಡೆದಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ರವಿವಾರ ರಾಮನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಜನ ನಮ್ಮನ್ನು ಆಯ್ಕೆ ಮಾಡಿರುವುದು ಈ ದುರಾಡಳಿತವನ್ನು ಪ್ರಶ್ನೆ ಮಾಡಲು. ರೈತರ ಭೂಮಿಯನ್ನು ಲಪಟಾಯಿಸುವ ಕೆಲಸ ನಡೆದರೆ ಅದರ ಬಗ್ಗೆ ದನಿ ಎತ್ತಲು ಜನರು ನಮಗೆ ಶಕ್ತಿ ಕೊಟ್ಟಿದ್ದಾರೆ. ನೈಸ್ ರಸ್ತೆಗಾಗಿ 20 ವರ್ಷದಿಂದ ರೈತರ ಭೂಮಿ ವಶಕ್ಕೆ ಪಡೆದು ಇನ್ನೂ ಪರಿಹಾರದ ಹಣವನ್ನು ಕೊಟ್ಟಿಲ್ಲ ಎಂದು ದೂರಿದರು.

ಟೇಪ್ ಹಿಡಿದುಕೊಂಡು ಅಳತೆ ಮಾಡಿ ಭೂಮಿ ಲಪಟಾಯಿಸಿ ದೋಖಾ ಮಾಡಿ, ಅಭಿವೃದ್ಧಿ ಹೆಸರಲ್ಲಿ ರೈತರ ಭೂಮಿ ವಶಪಡಿಸಿಕೊಂಡು 20ವರ್ಷದಿಂದ ಅನಧಿಕೃತವಾಗಿ ಟೋಲ್ ಸಂಗ್ರಹಿಸುತ್ತಿದ್ದಾರೆ. ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ಕೆಟ್ಟ ಹಗರಣ. ಆ ರಸ್ತೆ ರಾಷ್ಟ್ರೀಯ ಹೆದ್ದಾರಿಯಲ್ಲ, ರಾಜ್ಯ ಸರಕಾರಕ್ಕೆ ಸೇರಿದ್ದು. ಅಲ್ಲಿ ಟೋಲ್ ಸಂಗ್ರಹ ಮಾಡುತ್ತಿರುವುದೇ ಅಕ್ರಮ. ಕೂಡಲೇ ಟೋಲ್ ಸಂಗ್ರಹಕ್ಕೆ ಸರಕಾರ ತಡೆಯೊಡ್ಡಬೇಕು ಎಂದು ಆಗ್ರಹಿಸಿದರು.

ಇಲ್ಲಿಯ ಶಾಸಕ ಹಿಂದೆ ನನ್ನ ಜೊತೆಯಲ್ಲೇ ಇದ್ದ. ಆ ಸಮಯದಲ್ಲಿ ಗುತ್ತಿಗೆದಾರರೊಬ್ಬರು 600ಕೋಟಿ ರೂ.ಕೆಲಸ ಮಾಡಿ ಹಣ ಸಿಗದೇ ಇದ್ದಾಗ, ಅಯ್ಯಯ್ಯೋ ಅಣ್ಣ.. ಆ ವಿಷಯ ಎತ್ತಬೇಡಣ್ಣ ಎಂದು ಕಾಲು ಹಿಡಿದುಕೊಳ್ಳಲು ಬಂದಿದ್ದ. ಅದನ್ನು ಅವರು ನೆನಪಿಸಿಕೊಳ್ಳಬೇಕು. ಇವನಿಂದ ನಾನು ಕಲಿಯಬೇಕಾ ಎಂದು ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

‘ಕುಮಾರಸ್ವಾಮಿ ಪಾಪದ ಕೊಳೆಯನ್ನು ನಾವು ತೊಳೆಯುತ್ತಿದ್ದೇವೆ’ ಎಂಬ ಕಾಂಗ್ರೆಸ್ ನಾಯಕರ ಹೇಳಿಕೆಗೆ ತಿರುಗೇಟು ನೀಡಿದ ಕುಮಾರಸ್ವಾಮಿ, ‘ಕೊಳೆ ನಾ? ಎಲ್ಲಿದೆ ಕೊಳೆ? ನಾವು ರಾಮನಗರಕ್ಕೆ ಬಂದಾಗ ಕನಕಪುರ ಹೇಗಿತ್ತು? ಕನಕಪುರದಲ್ಲಿ ಬೀದಿ ದೀಪದ ಕಂಬ ಇರಲಿಲ್ಲ. ದೇವೇಗೌಡರು ಕನಕಪುರಕ್ಕೆ ವಿದ್ಯುತ್ ಸಂಪರ್ಕ ಕೊಡಿಸುವಾಗ ಇವರು ಎಲ್ಲಿದ್ದರು? ಕೊತವಾಲನಿಗೆ ಹೆಂಡ ಕೊಡಲು ಬಾರ್‍ನಲ್ಲಿ ಕೂತಿದ್ದರು ಎಂದು ಟೀಕಿಸಿದರು.


Tags

HD Kumaraswamy
share
ವಾರ್ತಾಭಾರತಿ
ವಾರ್ತಾಭಾರತಿ
Next Story
X