Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಎಇಇ ನೇಮಕ ಅಕ್ರಮದಲ್ಲಿ ಪ್ರಿಯಾಂಕ್...

ಎಇಇ ನೇಮಕ ಅಕ್ರಮದಲ್ಲಿ ಪ್ರಿಯಾಂಕ್ ಖರ್ಗೆಗೆ ಸಂಬಂಧವಿದೆ : ಎಚ್.ಡಿ.ಕುಮಾರಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ31 Aug 2026 7:44 PM IST
share
ಎಇಇ ನೇಮಕ ಅಕ್ರಮದಲ್ಲಿ ಪ್ರಿಯಾಂಕ್ ಖರ್ಗೆಗೆ ಸಂಬಂಧವಿದೆ : ಎಚ್.ಡಿ.ಕುಮಾರಸ್ವಾಮಿ

ಹೊಸದಿಲ್ಲಿ : ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾಗಿದ್ದಾಗ ಸಹಾಯಕ ಎಕ್ಸಿಕ್ಯೂಟಿವ್ ಇಂಜಿನಿಯರ್(ಎಇಇ) ಗ್ರೇಡ್ 1 ಹುದ್ದೆಗಳ ಆಯ್ಕೆ ಮತ್ತು ನೇಮಕಾತಿಯಲ್ಲಿ ನಡೆದಿರುವ ಅಕ್ರಮದಿಂದ ಸಚಿವ ಪ್ರಿಯಾಂಕ್ ಖರ್ಗೆ ನುಣುಚಿಕೊಳ್ಳಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಸೋಮವಾರ ಹೊಸದಿಲ್ಲಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಅಭ್ಯರ್ಥಿಗಳನ್ನು ರೆಸಾರ್ಟ್‍ನಲ್ಲಿ ಕೂರಿಸಿ ಪ್ರಶ್ನೆ ಪತ್ರಿಕೆಗಳನ್ನು ಕೊಟ್ಟು ಓಎಂಆರ್ ಶೀಟ್‍ಗಳಲ್ಲಿ ಗುರುತು ಹಾಕಿಸಿರುವ ಅಕ್ರಮದಿಂದ ಅವರು ಪಾರಾಗಲು ಸಾಧ್ಯವಿಲ್ಲ ಎಂದು ತಿಳಿಸಿದರು.

ದೇಶದಲ್ಲಿ ನಡೆಯುವ ಎಲ್ಲ ವಿಷಯಗಳ ಬಗ್ಗೆ ಪ್ರಿಯಾಂಕ್ ಖರ್ಗೆ ಅವರಿಗೆ ಮಾಹಿತಿ ಇರುತ್ತದೆ. ಆದರೆ ಸ್ವತಃ ತಾವೇ ನಿರ್ವಹಿಸುತ್ತಿರುವ ಇಲಾಖೆಯಲ್ಲಿ ಏನೇನು ನಡೆಯುತ್ತಿದೆ ಎಂಬುದು ಗೊತ್ತಾಗುವುದಿಲ್ಲ ಎಂದರೆ ಹೇಗೆ? ಇಂತಹ ಅತಿಯಾದ ಜಾಣತನ ಪ್ರದರ್ಶಿಸುವ ಅಗತ್ಯವಿಲ್ಲ. ಜನರು ಬಹಳ ಬುದ್ಧಿವಂತರಿದ್ದಾರೆ. ಎಲ್ಲ ವಿಷಯಗಳನ್ನು ಅರ್ಥ ಮಾಡಿಕೊಳ್ಳುತ್ತಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದರು.

ಸಹಾಯಕ ಎಕ್ಸಿಕ್ಯೂಟಿವ್ ಇಂಜಿನಿಯರ್ ಗ್ರೇಡ್ 1 ಹುದ್ದೆ ಮತ್ತು ಪಶುವೈದ್ಯಾಧಿಕಾರಿಗಳ ಆಯ್ಕೆಯಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬೆಂಗಳೂರಿನಲ್ಲಿ ಬಹಿರಂಗವಾಗಿ ಯುವಜನರ ಜೊತೆ ಸಂವಾದ ನಡೆಸಬೇಕು. ಅವರು ಎಲ್ಲಿದ್ದಾರೋ ಗೊತ್ತಿಲ್ಲ. ದೇಶದಲ್ಲಿಯೇ ಇದ್ದರೆ ಅವರು ತಕ್ಷಣವೇ ಬೆಂಗಳೂರಿಗೆ ಬಂದು ನಿರುದ್ಯೋಗಿ ಯುವಕರ ಮನವಿಗಳನ್ನು ಆಲಿಸಬೇಕು. ಆಗ ಅವರ ಅನುಭವ ಮತ್ತಷ್ಟು ವಿಸ್ತಾರಗೊಳ್ಳುತ್ತದೆ ಎಂದು ಕುಮಾರಸ್ವಾಮಿ ಲೇವಡಿ ಮಾಡಿದರು.

ಕುಮಾರಸ್ವಾಮಿ ದಾಖಲೆಗಳನ್ನು ಇಟ್ಟುಕೊಂಡು ಮಾತನಾಡಲಿ ಎಂದು ಪ್ರಿಯಾಂಕ್ ಖರ್ಗೆ ಬಾಲಿಶ ಹೇಳಿಕೆ ನೀಡಿದ್ದಾರೆ. ನಾನು ಕೆಪಿಎಸ್‍ಸಿ ಹಗರಣಗಳ ಬಗ್ಗೆ ಚರ್ಚೆ ಮಾಡಿರುವ ಎಲ್ಲ ಸಂದರ್ಭಗಳಲ್ಲಿಯೂ ದಾಖಲೆಗಳನ್ನು ಮುಂದಿಟ್ಟೇ ಮಾತನಾಡಿದ್ದೇನೆ. ತನಿಖಾ ವರದಿ, ಕಾರ್ಬನ್'ನಿಂದ ತಿದ್ದಿದ ಓಎಂಆರ್ ಶೀಟ್'ಗಳು, ಸಬ್ ಕಮಿಟಿ ವರದಿ ಇತ್ಯಾದಿಗಳನ್ನು ಬಿಡುಗಡೆ ಮಾಡಿದ್ದೇನೆ. ಎಇಇ ಹುದ್ದೆಗಳ ಆಯ್ಕೆ ಮತ್ತು ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂದು ಮುಖ್ಯಮಂತ್ರಿಯೆ ಸದನದಲ್ಲಿ ಉತ್ತರ ನೀಡಿದ್ದಾರೆ. ಇದಕ್ಕಿಂತ ಇನ್ನೇನು ದಾಖಲೆಗಳನ್ನು ಒದಗಿಸಬೇಕು? ಎಂದು ಅವರು ಪ್ರಶ್ನಿಸಿದರು.

ಪ್ರಿಯಾಂಕ್ ಖರ್ಗೆ ರಾಜಕೀಯ ನಿವೃತ್ತಿ ಆಗುತ್ತೇನೆ ಎಂದು ನನಗೆ ಸವಾಲು ಹಾಕಿದ್ದಾರೆ. ನಾನು ಅವರ ರಾಜಕೀಯ ನಿವೃತ್ತಿ ಬಯಸುವುದಿಲ್ಲ. ಆದರೆ ಪಾರದರ್ಶಕವಾಗಿ ತನಿಖೆ ನಡೆಸಿ ತಪ್ಪಿತಸ್ಥರನ್ನು ಶಿಕ್ಷೆಗೆ ಒಳಪಡಿಸಬೇಕು ಎಂಬುದೇ ನನ್ನ ಆಗ್ರಹ. ಅಕ್ರಮ ನಡೆದಿರುವುದು ಪ್ರಿಯಾಂಕ್ ಖರ್ಗೆ ಸೇರಿ ಸರಕಾರದಲ್ಲಿರುವ ಪ್ರತಿಯೊಬ್ಬರಿಗೂ ಗೊತ್ತಿತ್ತು ಎಂದು ಅವರು ದೂರಿದರು.

Tags

HD Kumaraswamy
share
ವಾರ್ತಾಭಾರತಿ
ವಾರ್ತಾಭಾರತಿ
Next Story
X