Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ‘ನೈಸ್ ಭೂಮಿ ಖರೀದಿ ಸಾಬೀತುಪಡಿಸಿದರೆ...

‘ನೈಸ್ ಭೂಮಿ ಖರೀದಿ ಸಾಬೀತುಪಡಿಸಿದರೆ ನೇಣು ಹಾಕಿಕೊಳ್ಳುವೆ’ : ಸಿಎಂ ಡಿ.ಕೆ.ಶಿವಕುಮಾರ್‌ಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸವಾಲು

ವಾರ್ತಾಭಾರತಿವಾರ್ತಾಭಾರತಿ2 Oct 2026 11:30 PM IST
share
‘ನೈಸ್ ಭೂಮಿ ಖರೀದಿ ಸಾಬೀತುಪಡಿಸಿದರೆ ನೇಣು ಹಾಕಿಕೊಳ್ಳುವೆ’ : ಸಿಎಂ ಡಿ.ಕೆ.ಶಿವಕುಮಾರ್‌ಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸವಾಲು

ಬೆಂಗಳೂರು : ನೈಸ್ ಯೋಜನೆ ವ್ಯಾಪ್ತಿಯಲ್ಲಿ ನಾನು ಭೂಮಿ ಹೊಂದಿದ್ದೇನೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸುಳ್ಳು ಆರೋಪ ಮಾಡಿದ್ದಾರೆ. ಈ ಭಾಗದಲ್ಲಿ ನಾನು ಜಮೀನು ಖರೀದಿ ಮಾಡಿರುವುದನ್ನು ಸಾಬೀತು ಮಾಡಿದರೆ ಸಾರ್ವಜನಿಕವಾಗಿ ನೇಣು ಹಾಕಿಕೊಳ್ಳುತ್ತೇನೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸವಾಲು ಹಾಕಿದರು.

ಶುಕ್ರವಾರ ನೈಸ್ ಯೋಜನೆಗಾಗಿ ಭೂಮಿ ಕಳೆದುಕೊಂಡಿರುವ ರೈತರು, ಸಾರ್ವಜನಿಕರನ್ನು ಮಾದಾವಾರ ಬಳಿ ಭೇಟಿಯಾದ ಸಂದರ್ಭದಲ್ಲಿ ಮಾತನಾಡಿದ ಅವರು, ನೈಸ್ ಯೋಜನೆ ಹೆಸರಿನಲ್ಲಿ ಗುತ್ತಿಗೆದಾರನ ಜತೆ ಶಾಮೀಲಾಗಿ ಅಪಾರ ಪ್ರಮಾಣದ ಭೂಮಿಯನ್ನು ಲೂಟಿ ಹೊಡೆಯುತ್ತಿರುವ ಡಿಕೆಶಿ ಬಗ್ಗೆ ಮೊದಲನೇ ಕಂತಿನ ದಾಖಲೆಗಳನ್ನು ಬಿಡುಗಡೆ ಮಾಡಿದ್ದೇನೆ. ಇನ್ನು ಹಲವಾರು ಕಂತುಗಳಷ್ಟು ಬಿಡುಗಡೆ ಮಾಡುವ ದಾಖಲೆಗಳು ಬಾಕಿ ಇದೆ ಎಂದು ಹೇಳಿದರು.

ಬಿ.ಎಂ.ಕಾವಲ್ ಪ್ರದೇಶದಲ್ಲಿ ಈ ವ್ಯಕ್ತಿ ಸುಮಾರು 200ರಿಂದ 300 ಎಕರೆಯಷ್ಟು ಭೂಮಿಯನ್ನು ಖರೀದಿಸಿದ್ದಾರೆ. ಅಷ್ಟು ಭೂಮಿಯನ್ನು ಇವರು ಯಾವ ಮಾರ್ಗದಲ್ಲಿ ಖರೀದಿಸಿದರು? ನೈಸ್ ಯೋಜನೆ ವ್ಯಾಪ್ತಿಯಲ್ಲಿರುವ ಈ ಭೂಮಿಯನ್ನು ಅವರು ಖರೀದಿಸಿದ್ದು ಏಕೆ? ಇದು ಅತ್ಯಂತ ಫಲವತ್ತಾದ ಕೃಷಿ ಭೂಮಿ. ಇಲ್ಲಿ ಈ ಮುಖ್ಯಮಂತ್ರಿ ಸುಮಾರು 300 ಎಕರೆಯಷ್ಟು ಜಮೀನು ಹೊಂದಿದ್ದಾರೆ ಎಂದು ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದರು.

ರಾಜಕೀಯಕ್ಕೆ ಬರುವ ಮೊದಲೇ ಬಿಡದಿಯಲ್ಲಿ 44 ಎಕರೆ ಜಮೀನು ಖರೀದಿಸಿದ್ದೇನೆ. ಅಲ್ಲಿ ನಾನು ಇವರೊಂದಿಗೆ ರಿಯಲ್ ಎಸ್ಟೇಟ್ ಮಾಡುತ್ತಿಲ್ಲ. ಬದಲಿಗೆ ಕೃಷಿ, ಪಶುಸಂಗೋಪನೆ ಮಾಡುತ್ತಿದ್ದೇನೆ. ಕಾನೂನುಬಾಹಿರವಾಗಿ ನಾನೇನಾದರೂ ಒಂದು ಇಂಚು ಅಕ್ರಮವಾಗಿ ಭೂಮಿಯನ್ನು ಸಂಪಾದಿಸಿದರೆ ತಕ್ಷಣವೇ ರಾಜಕೀಯ ನಿವೃತ್ತಿ ಪಡೆಯುತ್ತೇನೆ. ಇವರ ಹಾಗೆ ಮುಗ್ಧರನ್ನು ಹೆದರಿಸಿ ಬೆದರಿಸುವ ಮೂಲಕ ಭೂಮಿಯನ್ನು ಕಿತ್ತುಕೊಳ್ಳುವ ಜಾಯಮಾನ ನನ್ನದಲ್ಲ ಎಂದು ಅವರು ವಾಗ್ದಾಳಿ ನಡೆಸಿದರು.

ಅವನು ಯಾವನೋ ನನ್ನ ಬಗ್ಗೆ ‘3ಬಿ’(ಬ್ಲಾಕ್ ಮೇಲ್ ಮಾಡುವುದು, ಬ್ಲಾಕ್ ಮ್ಯಾಜಿಕ್ ಮಾಡುವುದು, ಬೆನ್ನಿಗೆ ಚೂರಿ ಹಾಕುವುದು) ಎಂದು ಮಾತನಾಡಿದ್ದಾನೆ. ಅದು ನನ್ನ ಜಾಯಮಾನವಲ್ಲ. ನೈಸ್ ವಿಚಾರದಲ್ಲಿ ರೈತರ ಭೂಮಿ ವಾಪಸ್ ಬರುವ ತನಕ ಹೋರಾಟದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಅವರು ಗುಡುಗಿದರು.

ಹೈದರಾಬಾದ್ ಮೂಲದ ಉದ್ಯಮಿ ಮಹೇಶ್ ರೆಡ್ಡಿ ಎಂಬ ವ್ಯಕ್ತಿಯ ಜತೆ ಸೇರಿ ಡಿ.ಕೆ.ಶಿವಕುಮಾರ್ ನೈಸ್ ಯೋಜನೆಯನ್ನು ಲಪಟಾಯಿಸಲು ಹೊರಟಿದ್ದಾರೆ. ಇವರೊಂದಿಗೆ ಇನ್ನಷ್ಟು ಪ್ರಭಾವಿಗಳು ಕೈ ಜೋಡಿಸಿದ್ದಾರೆ. ರಸ್ತೆಯ ಉದೇಶಕ್ಕೆ ಸ್ವಾಧೀನ ಮಾಡಿಕೊಳ್ಳಲಾದ ಭೂಮಿಯಲ್ಲಿ ರಿಯಲ್ ಎಸ್ಟೇಟ್ ದಂಧೆ ನಡೆಸುತ್ತಿದ್ದಾರೆ ಎಂದು ಅವರು ಆರೋಪಿಸಿದರು.

ಸಿದ್ದಗಂಗಾಮಠದ ಡಾ.ಶಿವಕುಮಾರ ಸ್ವಾಮೀಜಿ ಅವರ ಬಗ್ಗೆ ಲಘುವಾಗಿ ಮಾತನಾಡಿರುವ ನೈಸ್ ಗುತ್ತಿಗೆದಾರ ಅಶೋಕ್ ಖೇಣಿಯನ್ನು ತಕ್ಷಣವೇ ಬಂಧಿಸಬೇಕು. ಅಶೋಕ್ ಖೇಣಿ ಸಿದ್ದಗಂಗಾ ಮಠದ ಆಸ್ತಿಯನ್ನು ಲೂಟಿ ಮಾಡಿದ್ದಾನೆ. ಇಂತಹ ಧರ್ಮ ದ್ರೋಹಿಗೆ ಡಿಕೆಶಿ ಸಹಕಾರ ಕೊಡುತ್ತಾ ಬಂದಿದ್ದಾರೆ. ಅ.5ರಂದು ಸುಪ್ರೀಂಕೋರ್ಟ್ ನಲ್ಲಿ ಹೈಕೋರ್ಟ್ ಅಭಿಪ್ರಾಯಗಳ ಮೇಲೆ ವಿಚಾರಣೆ ನಡೆಯುತ್ತದೆ. ಅದನ್ನು ನೋಡಿಕೊಂಡು ಮುಂದಿನ ಹೋರಾಟ ರೂಪಿಸೋಣ. ಭೂಮಿ ಕಳೆದುಕೊಂಡವರು ಯಾವುದೇ ಕಾರಣಕ್ಕೂ ಅಧೈರ್ಯ ಪಡುವುದು ಬೇಡ. ನಿಮ್ಮ ಜೊತೆ ನಾನಿದ್ದೇನೆ ಎಂದು ಕುಮಾರಸ್ವಾಮಿ ಅಭಯ ನೀಡಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಜವರಾಯಿಗೌಡ, ಮಾಜಿ ಶಾಸಕ ಎ.ಮಂಜುನಾಥ್, ಗ್ರೇಟರ್ ಬೆಂಗಳೂರು ಜೆಡಿಎಸ್ ಅಧ್ಯಕ್ಷ ಎಚ್.ಎಂ.ರಮೇಶ್ ಗೌಡ, ಹಿರಿಯ ಮುಖಂಡ ರುದ್ರೇಶ್ ಸೇರಿದಂತೆ ಅನೇಕರು ಇದ್ದರು.

Tags

HD Kumaraswamy
share
ವಾರ್ತಾಭಾರತಿ
ವಾರ್ತಾಭಾರತಿ
Next Story
X