Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಸ್ಟಿಂಗ್ ಮಾಡುವ ಗುರುವಿಗೆ ತಿರುಮಂತ್ರ...

ಸ್ಟಿಂಗ್ ಮಾಡುವ ಗುರುವಿಗೆ ತಿರುಮಂತ್ರ ಹೇಳಲು ಸಾಧ್ಯವೇ?, ಹಾಗೇನಾದರೂ ಆಗಿದ್ದರೆ ತನಿಖೆ ಮಾಡಿಸಲಿ : ಎಚ್.ಡಿ.ಕುಮಾರಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ8 Oct 2026 11:22 PM IST
share
ಸ್ಟಿಂಗ್ ಮಾಡುವ ಗುರುವಿಗೆ ತಿರುಮಂತ್ರ ಹೇಳಲು ಸಾಧ್ಯವೇ?, ಹಾಗೇನಾದರೂ ಆಗಿದ್ದರೆ ತನಿಖೆ ಮಾಡಿಸಲಿ  : ಎಚ್.ಡಿ.ಕುಮಾರಸ್ವಾಮಿ

ಹೊಸದಿಲ್ಲಿ : ಸ್ಟಿಂಗ್ ಆಪರೇಶನ್ ಮಾಡುವುದರಲ್ಲಿ ಮಾಸ್ಟರ್ ಆಗಿರುವ ವ್ಯಕ್ತಿಯೇ ತನ್ನ ವಿರುದ್ಧ ಸ್ಟಿಂಗ್ ನಡೆಯುತ್ತಿದೆ ಎಂದು ಹೇಳುತ್ತಿರುವುದು ಹಾಸ್ಯಾಸ್ಪದ. ಸ್ಟಿಂಗ್ ಮಾಡುವ ಗುರುವಿಗೆ ತಿರುಮಂತ್ರ ಹೇಳಲು ಸಾಧ್ಯವೇ? ಹಾಗೇನಾದರೂ ಆಗಿದ್ದರೆ ತನಿಖೆ ಮಾಡಿಸಲಿ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸವಾಲು ಹಾಕಿದರು.

ಗುರುವಾರ ಹೊಸದಿಲ್ಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನನ್ನು ಟ್ರ್ಯಾಪ್ ಮಾಡಲಿಕ್ಕೆ ಬಂದಿದ್ದರು, ಆ ವಿಷಯ ಪೊಲಿಸರಿಗೂ ಗೊತ್ತು. ಹಲವಾರು ಫೋಟೋಗಳು ಇವೆ ಎಂದು ಬೇರೆ ಹೇಳಿದ್ದಾರೆ. ಸ್ಟಿಂಗ್ ಮಾಡಿದ ಆ ಪಿತಾಮಹ ಯಾರು ಅಂತಲೂ ಗೊತ್ತು ಎಂದಿದ್ದಾರೆ. ಅವರೆಲ್ಲಾ ಯಾರೂ ಎಂಬುದನ್ನು ಜನಗಳ ಮುಂದೆ ಇಡಿ. ನಿಮ್ಮ ಬಳಿ 35 ಲಕ್ಷ ರೂ.ಬಹುಮಾನ ಪಡೆದುಕೊಂಡ ಎಸ್‍ಐಟಿ ಇದೆಯಲ್ಲವೇ? ಇಂದು ಟಾಂಗ್ ಕೊಟ್ಟರು.

ಈ ಮುಖ್ಯಮಂತ್ರಿ ನೀಡುತ್ತಿರುವ ಹೇಳಿಕೆಗಳೆ ಅವರ ವ್ಯಕ್ತಿತ್ವವನ್ನು ತೋರಿಸುತ್ತವೆ. ಜನರ ಗಮನವನ್ನು ಬೇರೆಡೆ ತಿರುಗಿಸಲು ಇಂತಹ ಸ್ಟಂಟ್ ಮಾಡುತ್ತಿದ್ದಾರೆ. ನೈಸ್ ಕಂಪನಿಗೆ ಸಂಬಂಧಿಸಿದ ಅಕ್ರಮಗಳ ದಾಖಲೆಗಳನ್ನು ಬಿಡುಗಡೆ ಮಾಡಿದಾಗ ಉಂಟಾದ ಮುಜುಗರವನ್ನು ಮರೆಮಾಚಲು ಇಂತಹ ಸುದ್ದಿಗಳನ್ನು ಹಬ್ಬಿಸುತ್ತಿದ್ದಾರೆ. ಮಾಧ್ಯಮಗಳಲ್ಲಿ ಈ ಸುದ್ದಿ ಪ್ರಕಟವಾಗದಂತೆ ತಡೆಯಲು ಇಂತಹ ಕೆಲಸ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ವಿರುದ್ಧ ಕುಮಾರಸ್ವಾಮಿ ಆರೋಪ ಮಾಡಿದರು.

ರಾಜ್ಯದ ಮುಖ್ಯಮಂತ್ರಿ ಆಗಿ, ಹಿಂದಿನ ಸಿಎಂ ಸಿದ್ದರಾಮಯ್ಯ ಅವರನ್ನು ಟ್ರ್ಯಾಪ್ ಮಾಡಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಸ್ಟಿಂಗ್ ಮಾಡಲು ಬಂದವರನ್ನು ಹಿಡಿಯದೇ ಕಡಲೆಪುರಿ ತಿನ್ನುತ್ತಿದ್ದೀರಾ? ಎಲ್ಲಾ ವಿಷಯ ಗೊತ್ತಿದ್ದರೂ ಅವರನ್ನು ಯಾಕೆ ಹಿಡಿಯಲಿಲ್ಲ? ಈ ನೈಸ್ ಸಂಸ್ಥೆ ಮಾಲಕ ನಿಮ್ಮನ್ನು ಭೇಟಿ ಮಾಡಿ ಹೋದರು. ಅವರೇ ಏನಾದರೂ ನಿಮ್ಮನ್ನು ಟ್ರ್ಯಾಪ್ ಮಾಡಲಿಕ್ಕೆ ಪ್ರಯತ್ನ ಮಾಡುತ್ತಿದ್ದಾರೋ ಎಂಬ ಸತ್ಯವನ್ನು ನೀವೇ ಹೇಳಬೇಕು ಎಂದು ಅವರು ಹೇಳಿದರು.

ಈ ಹಿಂದೆ ರಮೇಶ್ ಜಾರಕಿಹೊಳಿ ಅವರನ್ನು ಟ್ರ್ಯಾಪ್ ಮಾಡುವ ಕೆಲಸ ಮಾಡಿದ್ದು ಯಾರು? ಮಾಜಿ ಮಂತ್ರಿ ಕೆ.ಎನ್.ರಾಜಣ್ಣ ವಿಧಾನಸಭೆಯಲ್ಲೇ 40-48 ಜನರ ಟ್ರ್ಯಾಪ್ ಬಗ್ಗೆ ಮಾತನಾಡಿದ್ದರು. ನಮ್ಮ ಮಂತ್ರಿಮಂಡಲದ ಮಂತ್ರಿಯೇ ಮೂಲಪುರುಷನೇ ಇದ್ದಾನೆ ಎಂದು ರಾಜಣ್ಣ ಹೇಳಿದ್ದರು. ಹಿಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಯಾವ ರೀತಿ ಮುಗಿಸಿದಿರಿ ಎನ್ನುವುದನ್ನು ನಾನು ಬಲ್ಲೆ. ಸತ್ಯ ಹೇಳಿ, ಇದೆಲ್ಲಾ ನಿಮ್ಮದೇ ಕೈವಾಡ ಅಲ್ಲವೇ? ಎಂದು ಡಿಕೆಶಿಯನ್ನು ಕುಮಾರಸ್ವಾಮಿ ಪ್ರಶ್ನಿಸಿದರು.

ಸ್ಟಿಂಗ್ ಯಾರು ಮಾಡಲು ಬಂದರು ಎಂಬುದನ್ನು ಮುಖ್ಯಮಂತ್ರಿ ಹೇಳಲೇಬೇಕಾಗುತ್ತದೆ. ಅವರು ಹೇಳಿಕೆ ಕೊಟ್ಟು ಸುಮ್ಮನೆ ಇರೋಕೆ ಆಗೋದಿಲ್ಲ. ಮುಖ್ಯಮಂತ್ರಿ ವಿರುದ್ಧವೇ ಟ್ರ್ಯಾಪ್ ನಡೆಯುತ್ತಿದೆ ಎಂದರೆ ಸಾಮಾನ್ಯ ವಿಷಯವಲ್ಲ. ಇದೆಲ್ಲಾ ತನಿಖೆಗೆ ಒಳಪಡಬೇಕು. ರಾಜ್ಯಪಾಲರನ್ನು ಭೇಟಿಗೆ ತೆರಳಿದ್ದವರಲ್ಲಿ ಒಬ್ಬರು ಇದ್ದಾರೆ ಎಂದು ಹೇಳಿದ್ದೀರಾ? ಯಾರು ಅವರು? ಎಂಬುದನ್ನು ಅವರು ಹೇಳಬೇಕಾಗುತ್ತದೆ ಎಂದು ಅವರು ಒತ್ತಾಯಿಸಿದರು.

ಗೃಹ ಸಚಿವ ಪ್ರಿಯಾಂಕ್ ಖರ್ಗೆ ನೈತಿಕತೆಯ ಬಗ್ಗೆ ಮಾತನಾಡುತ್ತಾರೆ. ಅವರಿಗೆ ಅಂತಹ ನೈತಿಕತೆ ಇದ್ದರೆ ಕೆಪಿಎಸ್‍ಸಿಯಲ್ಲಿ ನಡೆದ 24 ಜನ ಸಹಾಯಕ ಎಕ್ಸಿಕ್ಯೂಟಿವ್ ಎಂಜಿನಿಯರ್ ಗಳ ನೇಮಕಾತಿಗೆ ರುಜು ಹಾಕಿದ್ದರ ಬಗ್ಗೆ ಇದುವರೆಗೂ ಯಾಕೆ ಉತ್ತರ ನೀಡಿಲ್ಲ ಎಂದು ಕುಮಾರಸ್ವಾಮಿ ಪ್ರಶ್ನಿಸಿದರು.

Tags

HD Kumaraswamy
share
ವಾರ್ತಾಭಾರತಿ
ವಾರ್ತಾಭಾರತಿ
Next Story
X