Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ‘ಗೃಹ ಇಲಾಖೆ ನಿಮ್ಮಪ್ಪ ಕೊಟ್ಟ ಜಹಗೀರಾ?’...

‘ಗೃಹ ಇಲಾಖೆ ನಿಮ್ಮಪ್ಪ ಕೊಟ್ಟ ಜಹಗೀರಾ?’ : ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಎಚ್.ಡಿ.ಕುಮಾರಸ್ವಾಮಿ ವಾಗ್ದಾಳಿ

ವಾರ್ತಾಭಾರತಿವಾರ್ತಾಭಾರತಿ15 Oct 2026 6:37 PM IST
share
‘ಗೃಹ ಇಲಾಖೆ ನಿಮ್ಮಪ್ಪ ಕೊಟ್ಟ ಜಹಗೀರಾ?’ : ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಎಚ್.ಡಿ.ಕುಮಾರಸ್ವಾಮಿ ವಾಗ್ದಾಳಿ

ಬೆಂಗಳೂರು : ಬ್ಲಾಕ್ ಮೇಲ್ ಮಾಡೋರಿಗೆ ರಕ್ಷಣೆ ಕೊಡುವುದಕ್ಕೆ ಹಾಗೂ ಇಷ್ಟ ಬಂದವರನ್ನೆಲ್ಲ ಕರೆಸಿ, ವಿಚಾರಣೆ ನಡೆಸುವುದಕ್ಕೆ ಗೃಹ ಇಲಾಖೆ ಏನು ನಿಮ್ಮ ಅಪ್ಪ ನಿಮಗೆ ಕೊಟ್ಟ ಬಳುವಳಿ ಅಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ಗುರುವಾರ ನಗರದಲ್ಲಿರುವ ಜೆಡಿಎಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ನಾಚಿಕೆ ಇಲ್ಲದೆ ಬ್ಲಾಕ್ ಮೇಲ್ ಮಾಡುವ ದುಷ್ಟರಿಗೆ ರಕ್ಷಣೆ ಕೊಡುತ್ತೀರಿ. ಅದನ್ನು ಪ್ರಶ್ನಿಸಿದ ನನ್ನನ್ನು ವಿಚಾರಣೆಗೆ ಕರೆಯುತ್ತಾರೆ ಅಂತೆ. ನಾನೇನು ನಿಮ್ಮಪ್ಪನ ಗಂಟು ತಿಂದಿದ್ದೀನಾ? ಮುಖ್ಯಮಂತ್ರಿಯನ್ನು ಯಾರೋ ಟ್ರ್ಯಾಪ್ ಮಾಡುತ್ತಾರೆ ಎಂದು ಸ್ವತಃ ಪ್ರಿಯಾಂಕ್ ಖರ್ಗೆ ಹೇಳುತ್ತಾರೆ. ಹಾಗಾದರೆ ಅಂಥ ಬ್ಲಾಕ್ ಮೇಲ್, ಸ್ಟಿಂಗ್ ಮಾಡೋರಿಗೆ ಸರಕಾರ ರಕ್ಷಣೆ ನೀಡುತ್ತಿರುವುದೇಕೆ ಎಂದು ಪ್ರಶ್ನಿಸಿದರು.

ಬಂದು ನನ್ನನ್ನು ಮುಟ್ಟಿ ನೋಡೋಣ. ಸ್ಟಿಂಗ್ ಮಾಡೋನು ರಾಜಾರೋಷವಾಗಿ ತಿರುಗುತ್ತಿದ್ದಾನೆ. ಅವನನ್ನು ಮುಟ್ಟಲು ನಿಮಗೆ ಯೋಗ್ಯತೆ ಇಲ್ಲ. ಇಲ್ಲಿ ಜೆಡಿಎಸ್ ಹುಡುಗರಿಗೆ ಹೆದರಿಸುವುದಕ್ಕೆ ಬರುತ್ತಿರಿ. ನನ್ನನ್ನು ಮತ್ತು ನನ್ನ ಕಾರ್ಯಕರ್ತರನ್ನು ಮುಟ್ಟಿ ನೋಡು, ಆಮೇಲೆ ಏನಾಗುತ್ತದೆ ನೋಡುವಿಯಂತೆ ಎಂದು ಪ್ರಿಯಾಂಕ್ ಖರ್ಗೆಗೆ ಕುಮಾರಸ್ವಾಮಿ ಏಕವಚನದಲ್ಲಿಯೇ ಸವಾಲು ಹಾಕಿದರು.

ರಾಕೇಶ್ ಶೆಟ್ಟಿ ಅಂದ್ರೆ ಯಾರು? ಯಾರವನು? ಅವನಿಗೂ ನಿನ್ನ ಮುಖ್ಯಮಂತ್ರಿಗೂ ಏನು ಸಂಬಂಧ? ನೀವೆಲ್ಲ ಇಷ್ಟ ಬಂದ ಹಾಗೆ ಜಂಗಲ್ ರಾಜ್ ಮಾಡಿಕೊಂಡಿದ್ದೀರಿ. ರಾಜ್ಯದ ಹಾಲಿ ಮುಖ್ಯಮಂತ್ರಿ ಈ ರಾಕೇಶ್ ಶೆಟ್ಟಿ ಎಂಬಾತನ ಜತೆ ಸೇರಿ ಕಳೆದ ಐದು ವರ್ಷಗಳಲ್ಲಿ ಏನೇನು ಮಾಡಿದ್ದಾರೆ ಎನ್ನುವುದು ಗೊತ್ತಿಲ್ಲವೇ? ಎಂದು ಕುಮಾರಸ್ವಾಮಿ ಹೇಳಿದರು.

ತಾಕತ್ತಿದ್ದರೆ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ಮಾಡಿಸಿ: ಸುಳ್ಳು ಪ್ರಕರಣಗಳು ಹಾಗೂ ಬೆದರಿಕೆಗಳಿಗೆ ನಾವು ಜಗ್ಗುವುದಿಲ್ಲ. ಪ್ರಿಯಾಂಕ್ ಖರ್ಗೆ, ಡಿ.ಕೆ.ಶಿವಕುಮಾರ್ ನಿಮ್ಮಿಬ್ಬರಿಗೆ ತಾಕತ್ತಿದ್ದರೆ ರಾಜ್ಯದ ಹೈಕೋರ್ಟ್ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ಮಾಡಿಸಿ. ನಾನು ಗಂಡಸ್ತನದಿಂದ ಮಾತನಾಡುತ್ತಿದ್ದೇನೆ, ನಿಮ್ಮ ತರಹ ಹೇಡಿ ಕೆಲಸ ಮಾಡುತ್ತಿಲ್ಲ ಎಂದು ಅವರು ಸವಾಲು ಎಸೆದರು.

ಸಿದ್ದರಾಮಯ್ಯ ಅವರಿಗೆ ಎಲ್ಲರೂ ಸೇರಿ ಬೆನ್ನಿಗೆ ಚೂರಿ ಹಾಕಿದರಲ್ಲ, ಆ ರೀತಿ ಎಲ್ಲರಿಗೂ ಮಾಡಲು ಸಾಧ್ಯವಿಲ್ಲ. ನಿಮ್ಮ ಪಾಪದ ಕೊಡ ತುಂಬಿದೆ. ಈ ಕಿರಾತಕರಿಗೆ ಪಾಠ ಕಲಿಸುವ ಸಮಯ ಹತ್ತಿರ ಬಂದಿದೆ. ಶಿವಕುಮಾರ್ ಹಾಗೂ ಬ್ಲಾಕ್‍ಮೇಲ್ ಪತ್ರಕರ್ತ ರಾಕೇಶ್ ಶೆಟ್ಟಿ ಇಬ್ಬರು ಸ್ಟಿಂಗ್ ಆಪರೇಶನ್ ಸಂಚು ಮಾಡಿ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದರು ಎಂದು ಅವರು ಗಂಭೀರ ಆರೋಪ ಮಾಡಿದರು.

ಸಿದ್ದರಾಮಯ್ಯ ಅವರ ಚಾರಿತ್ರ್ಯಹರಣ ಮಾಡಲು ರಾಜಕೀಯ ಸಂಚು ರೂಪಿಸಿದ ಶಿವಕುಮಾರ್ ಸಿಂಡಿಕೇಟಿನಲ್ಲಿ ಇದ್ದ ಎಲ್ಲರನ್ನು ಬಂಧಿಸಬೇಕು ಹಾಗೂ ಈ ಮುಖ್ಯಮಂತ್ರಿಯನ್ನು ‘ಕರ್ನಾಟಕದ ಸ್ಟಿಂಗ್ ಸಾಮ್ರಾಟ್' ಎಂದು ಕರೆಯಬೇಕು. ಸ್ಟಿಂಗ್ ಆಪರೇಷನ್ ಪ್ರಕರಣದಲ್ಲಿ ನನ್ನನ್ನು ಸಿಲುಕಿಸುವ ಸಂಚು ಹೂಡಲಾಗಿತ್ತು ಎಂದು ಅವರು ದೂರಿದರು.

ಮಾಧ್ಯಮಗೋಷ್ಠಿಯಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು, ವಿಧಾನ ಪರಿಷತ್ ಸದಸ್ಯರಾದ ಟಿ.ಎನ್.ಜವರಾಯಿಗೌಡ, ಮಾಜಿ ಶಾಸಕರಾದ ಚೌಡರೆಡ್ಡಿ, ಎ.ಮಂಜುನಾಥ್, ಸುರೇಶ್ ಗೌಡ, ಪಕ್ಷದ ರಾಜ್ಯ ವಕ್ತಾರರಾದ ದೇವರಾಜು, ನಾಗೇಂದ್ರ ಬಾಬು ಮುಂತಾದವರು ಉಪಸ್ತಿತರಿದ್ದರು.

Tags

HD Kumaraswamy
share
ವಾರ್ತಾಭಾರತಿ
ವಾರ್ತಾಭಾರತಿ
Next Story
X