6 ವರ್ಷ ಮೇಲ್ಪಟ್ಟ ಮಕ್ಕಳಿಗೆ ಹೆಲ್ಮೆಟ್ ಕಡ್ಡಾಯ

ಸಾಂದರ್ಭಿಕ ಫೈಲ್ ಚಿತ್ರ
ಬೆಂಗಳೂರು: ಆರು ವರ್ಷ ಮೇಲ್ಪಟ್ಟ ಎಲ್ಲ ಮಕ್ಕಳಿಗೂ ಹೆಲ್ಮೆಟ್ ಕಡ್ಡಾಯವಿದ್ದು, ಈ ನಿಯಮವನ್ನು ಪಾಲಿಸಬೇಕು ಎಂದು ನಗರ ಸಂಚಾರ ಪೊಲೀಸರು ಸೂಚಿಸಿದ್ದಾರೆ.
ನಗರದ ಶಾಲೆ, ಕಾಲೇಜು ಬಳಿ ಸಂಚಾರ ನಿಯಮ ಉಲ್ಲಂಘನೆ ಆಗುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಸಂಚಾರ ಪೊಲೀಸರು ಶನಿವಾರ ವಿಶೇಷ ಕಾರ್ಯಾಚರಣೆ ನಡೆಸಿದ್ದಾರೆ.
ಬಹುತೇಕ ಅಪಘಾತಗಳಲ್ಲಿ ತಲೆಗೆ ಪೆಟ್ಟು ಬಿದ್ದು ಸವಾರರು ಮೃತಪಡುತ್ತಿದ್ದಾರೆ. ಮಕ್ಕಳ ಸುರಕ್ಷತೆ ದೃಷ್ಠಿಯಿಂದ ಹೆಲ್ಮೆಟ್ ಕಡ್ಡಾಯವಾಗಿದ್ದು, ಈ ಬಗ್ಗೆ ಪೋಷಕರಿಗೆ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಸಂಚಾರ ಪೊಲೀಸರು ತಿಳಿಸಿದ್ದಾರೆ.
Next Story





