Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಬಳಕೆದಾರರ ಖಾತೆಯ ಮಾಹಿತಿ ಕೋರಿಕೆ;...

ಬಳಕೆದಾರರ ಖಾತೆಯ ಮಾಹಿತಿ ಕೋರಿಕೆ; ಫೋನ್‌ಪೇ ಮೇಲ್ಮನವಿ ಸಂಬಂಧ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

ವಾರ್ತಾಭಾರತಿವಾರ್ತಾಭಾರತಿ27 Nov 2025 12:19 AM IST
share
ಬಳಕೆದಾರರ ಖಾತೆಯ ಮಾಹಿತಿ ಕೋರಿಕೆ; ಫೋನ್‌ಪೇ ಮೇಲ್ಮನವಿ ಸಂಬಂಧ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

ಬೆಂಗಳೂರು : ಕ್ರಿಕೆಟ್‌ ಬೆಟ್ಟಿಂಗ್‌‌ಗೆ ಸಂಬಂಧಿಸಿದ ಪ್ರಕರಣದಲ್ಲಿ ತನಿಖಾಧಿಕಾರಿಯು ಬಳಕೆದಾರರ ಖಾತೆಯ ಸಂಪೂರ್ಣ ಮಾಹಿತಿ ಒದಗಿಸಲು ನೀಡಿದ್ದ ನೋಟಿಸ್‌ ಎತ್ತಿ ಹಿಡಿದಿದ್ದ ಏಕಸದಸ್ಯ ಪೀಠದ ಕ್ರಮ ಪ್ರಶ್ನಿಸಿ ಫೋನ್‌ಪೇ ಸಲ್ಲಿಸಿರುವ ಮೇಲ್ಮನವಿ ಕುರಿತು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌ ಜಾರಿಗೊಳಿಸಿದೆ.

ಬಳಕೆದಾರರ ಖಾತೆಯ ಸಂಪೂರ್ಣ ಮಾಹಿತಿ ಒದಗಿಸುವಂತೆ ಪೊಲೀಸರು ಅಪರಾಧ ದಂಡ ಪ್ರಕ್ರಿಯಾ ಸಂಹಿತೆ (ಸಿಆರ್‌ಪಿಸಿ) ಸೆಕ್ಷನ್‌ 91ರ ಅಡಿ ನೀಡಿರುವ ನೋಟಿಸ್‌ ಪ್ರಶ್ನಿಸಿ ಫೋನ್‌ಪೇ ಪ್ರೈವೇಟ್‌ ಲಿಮಿಟೆಡ್‌ ಸಲ್ಲಿಸಿದ್ದ ಅರ್ಜಿಯನ್ನು ಏಕಸದಸ್ಯ ನ್ಯಾಯಪೀಠ ವಜಾಗೊಳಿಸಿತ್ತು. ಇದನ್ನು ಪ್ರಶ್ನಿಸಿ ಫೋನ್‌ಪೇ ಸಲ್ಲಿಸಿರುವ ಮೇಲ್ಮನವಿಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಸಿ.ಎಂ. ಪೂಣಚ್ಚ ಅವರಿದ್ದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.

ಮೇಲ್ಮನವಿದಾರರ ಪರವಾಗಿ ವಾದ ಮಂಡಿಸಿದ ವಕೀಲ ನಿತಿನ್‌ ರಮೇಶ್‌ ಅವರು, ಸಿಆರ್‌ಪಿಸಿ ಸೆಕ್ಷನ್‌ 91 ಹಾಗೂ 'ಪಾವತಿ ಮತ್ತು ಇತ್ಯರ್ಥ ವ್ಯವಸ್ಥೆ ಕಾಯ್ದೆ' ಸೆಕ್ಷನ್‌ 22 ಹಾಗೂ 'ಬ್ಯಾಂಕರ್ಸ್‌ ಬುಕ್‌ ಸಾಕ್ಷ್ಯ ಕಾಯ್ದೆ' ಸಂಬಂಧಿಸಿದ ಪ್ರಕರಣ ಇದಾಗಿದೆ. ಸಿಆರ್‌ಪಿಸಿ ಸೆಕ್ಷನ್‌ 91ರ ಅಡಿ ನೋಟಿಸ್‌ ಜಾರಿ ಮಾಡಿ ಪಾವತಿ ಮತ್ತು ಇತ್ಯರ್ಥ ವ್ಯವಸ್ಥೆ ಕಾಯ್ದೆ ಆಡಳಿತಕ್ಕೆ ಒಳಪಡುವ ಯುಪಿಐ ಸೇವೆ ನೀಡುವ ಸಂಸ್ಥೆಯಿಂದ ಇಡೀ ಮಾಹಿತಿಯನ್ನು ಕೋರಬಹುದೇ? ಕಾಯ್ದೆ ಅಡಿ ನಮಗೆ ಪರವಾನಗಿ ಸಹ ನೀಡಲಾಗಿದೆ. ಪಾವತಿ ಮತ್ತು ಇತ್ಯರ್ಥ ವ್ಯವಸ್ಥೆ ಕಾಯ್ದೆ ಸೆಕ್ಷನ್‌ 22ರ ಪ್ರಕಾರ ಯುಪಿಐ ಸೇವೆ ನೀಡುವವರನ್ನು ಬ್ಯಾಂಕರ್ಸ್‌ ಬುಕ್‌ ಸಾಕ್ಷ್ಯ ಕಾಯ್ದೆ ಅಡಿ ಬ್ಯಾಂಕ್‌ಗಳಿಗೆ ಸಮನಾಗಿ ಪರಿಗಣಿಸಲಾಗುತ್ತದೆ. ಏಕಸದಸ್ಯ ನ್ಯಾಯಪೀಠವು ಯುಪಿಐ ಮಧ್ಯಸ್ಥಿಕೆ ಸಂಸ್ಥೆಗಳಿಗೆ ರಕ್ಷಣೆ ನೀಡಿರುವುದನ್ನು ಗುರುತಿಸಿಲ್ಲ ಎಂದು ವಿವರಿಸಿದರು.

ವಾದ ಆಲಿಸಿದ ನ್ಯಾಯಪೀಠ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸಿಇಎನ್‌ ಪೊಲೀಸ್‌ ಠಾಣೆ ಮತ್ತು ಗ್ರಾಮಾಂತರ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗೆ ನೋಟಿಸ್‌ ಜಾರಿಗೊಳಿಸಿ, ವಿಚಾರಣೆಯನ್ನು 2026ರ ಫೆಬ್ರವರಿ 12ಕ್ಕೆ ಮುಂದೂಡಿತು.

ಪ್ರಕರಣವೇನು?

ವ್ಯಕ್ತಿಯೊಬ್ಬರು ಭಾರತ ಮತ್ತು ದಕ್ಷಿಣ ಆಫ್ರಿಕಾ ಕ್ರಿಕೆಟ್‌ ಪಂದ್ಯಕ್ಕೆ ಬೆಟ್ಟಿಂಗ್‌ ಮಾಡುವ ಸಂಬಂಧ ಕ್ರೀಡಾ ವೆಬ್‌ಸೈಟ್‌ ಒಂದಕ್ಕೆ ಸುಮಾರು 6 ಸಾವಿರ ರೂ. ಠೇವಣಿ ಇಡಲು ಫೋನ್‌ ಪೇ ಬಳಕೆ ಮಾಡಿದ್ದರು. ಆದರೆ, ಆನಂತರ ಅವರು ತಮ್ಮ ವರ್ಚುವಲ್‌ ವಾಲೆಟ್‌ ಮೂಲಕ ಹಣ ಹಿಂಪಡೆಯಲು ಸಾಧ್ಯವಾಗಿರಲಿಲ್ಲ. ಅಂತಿಮವಾಗಿ ವೆಬ್‌ಸೈಟ್‌ ಅನ್ನು ನಿರ್ಬಂಧಿಸಲಾಗಿತ್ತು. ಇದರಿಂದ, ಆ ವ್ಯಕ್ತಿಯು ತನಗೆ ವಂಚನೆಯಾಗಿದೆ ಎಂದು ಆರೋಪಿಸಿ, ಹಣ ವಾಪಸ್‌ ಕೊಡಿಸುವಂತೆ ದೂರು ಸಲ್ಲಿಸಿದ್ದರು.

ಇದರ ಆಧಾರದಲ್ಲಿ ಫೋನ್‌ಪೇಗೆ ಅದರ ವೇದಿಕೆ ಬಳಕೆ ಮಾಡಿ ಜೂಜಿನ ವೆಬ್‌ಸೈಟ್‌ಗೆ ಹಣ ಠೇವಣಿ ಇಟ್ಟಿರುವ ಸಂಬಂಧ ಮಾಹಿತಿ ನೀಡುವಂತೆ ಸಿಆರ್‌ಪಿಸಿ ಸೆಕ್ಷನ್‌ 91ರ ಅಡಿ 2022ರ ಡಿಸೆಂಬರ್‌ನಲ್ಲಿ ಪೊಲೀಸರು ನೋಟಿಸ್‌ ಜಾರಿ ಮಾಡಿದ್ದರು.

ಬಳಕೆದಾರ ಯಾರಿಗೆ ಹಣ ಪಾವತಿಸಿದ್ದಾರೆ? ಅಂಥ ಗ್ರಾಹಕರನ್ನು ಸೇರ್ಪಡೆ ಮಾಡುವುದಕ್ಕೂ ಮುನ್ನ ಫೋನ್‌ಪೇ ಅವರಿಗೆ ವಿವರಣೆ ನೀಡಿತ್ತೇ? ವಂಚನೆ ಆಗುತ್ತಿರುವ ಬಗ್ಗೆ ಫೋನ್‌ಪೇಗೆ ತಿಳಿದಿತ್ತೇ? ತನ್ನ ವೇದಿಕೆಯಲ್ಲಿ ಆನ್‌ಲೈನ್‌ ಜೂಜು ನಡೆಯುತ್ತಿರುವುದು ಪತ್ತೆ ಮಾಡಿತ್ತೇ ಎನ್ನುವ ಪ್ರಶ್ನೆಗಳೂ ಸೇರಿದಂತೆ ಆನ್‌ಲೈನ್‌ ಜೂಜಿನಲ್ಲಿ ತೊಡಗಿರುವ ಗ್ರಾಹಕರ ಪಟ್ಟಿ ಒದಗಿಸುವಂತೆ ಪೊಲೀಸ್‌ ನೋಟಿಸ್‌ನಲ್ಲಿ ಕೋರಲಾಗಿತ್ತು.

ಇದನ್ನು ಪ್ರಶ್ನಿಸಿ ಫೋನ್‌ಪೇ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ, ಗೌಪ್ಯವಾಗಿಡಬೇಕಾದ ಮಾಹಿತಿಯನ್ನು ಬಹಿರಂಗಗೊಳಿಸಲಾಗದು ಎಂಬ ಫೋನ್‌ಪೇ ವಾದವನ್ನು ಒಪ್ಪಲಾಗದು. ಕಾನೂನುಬದ್ಧವಾಗಿ ಸಾಕ್ಷಿ ಸಂಗ್ರಹಿಸಿ, ತನಿಖೆಯನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುವ ತನಿಖಾಧಿಕಾರಿಯ ಕೈಯನ್ನು ಗ್ರಾಹಕರ ಖಾಸಗಿತನ ರಕ್ಷಣೆ ಹೆಸರಿನ ನೆಪದಲ್ಲಿ ಕಟ್ಟಿಹಾಕಲಾಗದು. ಹೊಣೆಗಾರಿಕೆ ಮತ್ತು ಗೌಪ್ಯತೆ ಒಟ್ಟೊಟ್ಟಿಗೆ ಸಾಗಬೇಕು ಎಂದು ಆದೇಶಿಸಿತ್ತು.

ಕ್ರಿಮಿನಲ್‌ ಚಟುವಟಿಕೆಯ ವಾಸನೆ ಕಂಡುಬಂದಾಗ ಸಂಸ್ಥೆಗಳು ತನಿಖಾ ಸಮನ್ಸ್‌ನಿಂದ ಹಿಂದೆ ಸರಿಯಲಾಗದು ಎಂದು ಬಾಂಬೆ, ಮದ್ರಾಸ್‌ ಮತ್ತು ಕೇರಳ ಹೈಕೋರ್ಟ್‌ ಹೇಳಿವೆ. ಆದ್ದರಿಂದ, ಸಾರ್ವಜನಿಕ ಹಿತಾಸಕ್ತಿ ಮತ್ತು ಕ್ರಿಮಿನಲ್‌ ತನಿಖೆಯ ವಿಷಯ ಬಂದಾಗ ದತ್ತಾಂಶ ರಕ್ಷಣೆಯ ಕರ್ತವ್ಯ ತಲೆಬಾಗಬೇಕಾಗುತ್ತದೆ. ತನಿಖಾಧಿಕಾರಿ ಕೇಳುವ ಮಾಹಿತಿಯು ನಿರ್ದಿಷ್ಟವಾಗಿರಬೇಕು. ಈ ನೆಲೆಯಲ್ಲಿ ಪೊಲೀಸರು ಫೋನ್‌‌ಪೇಗೆ ಜಾರಿ ಮಾಡಿರುವ ನೋಟಿಸ್‌ ಕಾನೂನುಬಾಹಿರವಲ್ಲ. ಇಲ್ಲಿ ಹಲವು ಖಾತೆಗಳ ಮೂಲಕ ಹಣ ವರ್ಗಾವಣೆಯಾಗಿದ್ದು, ಅಕ್ರಮ ಹಣಕಾಸು ವ್ಯವಹಾರ ಪತ್ತೆ ಮಾಡುವ ಗುರಿಯನ್ನು ತನಿಖೆ ಹೊಂದಿದೆ ಎಂದು ಅಭಿಪ್ರಾಯಪಟ್ಟು ಫೋನ್‌ಪೆ ಅರ್ಜಿ ವಜಾಗೊಳಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X