Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಅತ್ತೆ ಆಸ್ತಿ ಹೊಡೆಯಲು ಸಂಚು; ಸೊಸೆಗೆ...

ಅತ್ತೆ ಆಸ್ತಿ ಹೊಡೆಯಲು ಸಂಚು; ಸೊಸೆಗೆ ಮನೆ ಖಾಲಿ ಮಾಡುವಂತೆ ಎಸಿ ಹೊರಡಿಸಿದ್ದ ಆದೇಶ ಎತ್ತಿಹಿಡಿದ ಹೈಕೋರ್ಟ್

ವಾರ್ತಾಭಾರತಿವಾರ್ತಾಭಾರತಿ30 Nov 2025 12:57 AM IST
share
ಅತ್ತೆ ಆಸ್ತಿ ಹೊಡೆಯಲು ಸಂಚು; ಸೊಸೆಗೆ ಮನೆ ಖಾಲಿ ಮಾಡುವಂತೆ ಎಸಿ ಹೊರಡಿಸಿದ್ದ ಆದೇಶ ಎತ್ತಿಹಿಡಿದ ಹೈಕೋರ್ಟ್

ಬೆಂಗಳೂರು/ಧಾರವಾಡ : ಅತ್ತೆಯ ಮನೆಯಲ್ಲೇ ಠಿಕಾಣಿ ಹೂಡಿ ಆಸ್ತಿ ಲಪಟಾಯಿಸಲು ಸಂಚು ಹೂಡಿದ್ದ ಆರೋಪದಡಿ ಮಹಿಳೆಯೊಬ್ಬರಿಗೆ (ಸೊಸೆ) ಮನೆ ಖಾಲಿ ಮಾಡುವಂತೆ ನಿರ್ದೇಶಿಸಿ ಬಳ್ಳಾರಿ ಉಪವಿಭಾಗಾಧಿಕಾರಿ (ಎಸಿ) ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್‌ ಧಾರವಾಡ ಪೀಠ ಎತ್ತಿಹಿಡಿದಿದೆ.

ಬಳ್ಳಾರಿ ಉಪವಿಭಾಗಾಧಿಕಾರಿ 2025ರ ಜೂನ್ 17ರಂದು ಹೊರಡಿಸಿರುವ ಆದೇಶ ರದ್ದು ಕೋರಿ ಸೊಸೆ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ವಜಾಗೊಳಿಸಿದೆ.

ಹೈಕೋರ್ಟ್ ಆದೇಶವೇನು?

ಪೋಷಕರು ಮತ್ತು ಹಿರಿಯ ನಾಗರಿಕರ ನಿರ್ವಹಣೆ ಮತ್ತು ಕಲ್ಯಾಣ ಕಾಯ್ದೆ–2007ರ ಅನುಸಾರ ಅತ್ಯಂತ ಅಪರೂಪದ ಸಂದರ್ಭಗಳಲ್ಲಿ ಮಾತ್ರವೇ ಹಿರಿಯರನ್ನು ಮನೆಯಿಂದ ಹೊರಹಾಕುವ ಆದೇಶವನ್ನು ಸಮರ್ಥನೀಯ ಎಂದು ನಿರ್ಣಯಿಸಬಹುದು ಎಂದು ಹೈಕೋರ್ಟ್ ಆದೇಶದಲ್ಲಿ ಅಭಿಪ್ರಾಯ ಪಟ್ಟಿದೆ.

ಹಿರಿಯ ನಾಗರಿಕರು ಎನಿಸಿರುವ ಅತ್ತೆಯನ್ನು ಸೊಸೆ ಔಟ್‌‌ಹೌಸ್‌ನಲ್ಲಿ (ಹೊರಮನೆ) ಇರಿಸಿದ್ದಾರೆ. ಇದರಿಂದ, ಅತ್ತೆ ತಮ್ಮ ಸ್ವಂತ ಮನೆಗೆ ಗೌರವಯುತ ಪ್ರವೇಶ ಹೊಂದುವ ಅವಕಾಶ ಕಳೆದುಕೊಳ್ಳುತ್ತಿದ್ದಾರೆ. ಮನೆಯು ಸೊಸೆಯ ವಶದಲ್ಲಿದ್ದು, ಅತ್ತೆ ಆ ಆವರಣದಲ್ಲಿ ವಾಸಿಸುತ್ತಿಲ್ಲ. ಪತಿಯ ಮರಣದ ನಂತರ ಸೊಸೆ (ಅರ್ಜಿದಾರೆ) ಆಂಧ್ರಪ್ರದೇಶಕ್ಕೆ ತಮ್ಮ ನಿವಾಸವನ್ನು ಬದಲಾಯಿಸಿದ್ದಾರೆ. ಅತ್ತೆಯೊಂದಿಗೆ ಸೊಸೆಯ ಸಂಬಂಧ ಹಳಸಿದೆ. ಈ ಆಧಾರದಡಿ ಮನೆಯ ಆವರಣವನ್ನು ಉಳಿಸಿಕೊಳ್ಳಲು ಒತ್ತಾಯಿಸಲು ಸೊಸೆಗೆ ಅವಕಾಶವಿಲ್ಲ ಎಂದು ನ್ಯಾಯಾಲಯ ಹೇಳಿದೆ.

ಪ್ರಕರಣವೇನು?

ಅರ್ಜಿದಾರೆಯ ಪತಿ 8 ವರ್ಷಗಳ ಹಿಂದೆ ಮೃತಪಟ್ಟಿದ್ದರು. ಅರ್ಜಿದಾರೆ ಹಾಗೂ ಆಕೆಯ ಅತ್ತೆಯ ನಡುವಿನ ಸಂಬಂಧ ಹಳಸಿತ್ತು. ಸರ್ಕಾರಿ ಕೆಲಸ ಸಿಗಲಿದೆ ಎಂಬ ಕಾರಣಕ್ಕೆ ಸೊಸೆ ಆಂಧ್ರಪ್ರದೇಶಕ್ಕೆ ವಾಸ ಬದಲಿಸಿದ್ದರು. ಈ ಮಧ್ಯೆ, ಬಳ್ಳಾರಿಯ ಸಿದ್ಧಾರ್ಥ ನಗರದಲ್ಲಿ ಸ್ವಯಾರ್ಜಿತವಾಗಿ ನಿರ್ಮಿಸಿದ ಮನೆಯಲ್ಲಿ ಅತ್ತೆ ವಾಸವಿದ್ದರು. ಹಣಕಾಸಿನ ತೊಂದರೆಯಿಂದ ಮನೆಯನ್ನು ಮಾರಾಟ ಮಾಡಲು ಉದ್ದೇಶಿಸಿ, ಮುಂಗಡ ಹಣ ಪಡೆದಿದ್ದರು. ಈ ವಿಷಯ ತಿಳಿದು ಮನೆಗೆ ಬಂದಿದ್ದ ಸೊಸೆ, ತನಗೂ ಆಸ್ತಿಯಲ್ಲಿ ಪಾಲು ನೀಡಬೇಕು ಇಲ್ಲವಾದರೆ 60 ಲಕ್ಷ ರೂ. ನೀಡಬೇಕು ಎಂದು ಹೇಳಿ ಮನೆಯಲ್ಲಿದ್ದ ಅತ್ತೆಯ ಸಾಮಾನುಗಳನ್ನು ಹೊರಹಾಕಿ, ಮನೆಯಲ್ಲಿ ಠಿಕಾಣಿ ಹೂಡಿದ್ದರು.

ಇದರಿಂದ, ಸಕ್ಷಮ ಪ್ರಾಧಿಕಾರವಾದ ಹಿರಿಯ ನಾಗರಿಕರ ನಿರ್ವಹಣಾ ನ್ಯಾಯಮಂಡಳಿಯ ಅಧ್ಯಕ್ಷರೂ ಆದ ಬಳ್ಳಾರಿ ಉಪವಿಭಾಗಾಧಿಕಾರಿಗೆ ಅರ್ಜಿ ಸಲ್ಲಿಸಿದ್ದ ಮೃತ ಮಗನ ಪೋಷಕರು ಆಸ್ತಿ ರಕ್ಷಣೆ ಮಾಡುವ ಜತೆಗೆ, ಮಾನಸಿಕ ಶಾಂತಿ ಮತ್ತು ಪ್ರಾಣ ರಕ್ಷಣೆ ನೀಡಬೇಕು ಎಂದು ಕೋರಿದ್ದರು. ವಿಚಾರಣೆ ನಡೆಸಿದ್ದ ಸಕ್ಷಮ ಪ್ರಾಧಿಕಾರ, ಸೊಸೆ ಮನೆಯನ್ನು ಖಾಲಿ ಮಾಡಬೇಕು. ಆಸ್ತಿಯನ್ನು ಮನವಿದಾರ ಹಿರಿಯ ನಾಗರಿಕ ಪೋಷಕರ ಹೆಸರಿಗೆ ನೋಂದಾಯಿಸಬೇಕು ಎಂದು ಬಳ್ಳಾರಿ ಉಪನೋಂದಣಾಧಿಕಾರಿಗೆ ಆದೇಶಿಸಿದ್ದರು. ಈ ಆದೇಶ ರದ್ದುಕೋರಿ ಸೊಸೆ ಹೈಕೋರ್ಟ್‌ ಮೆಟ್ಟಿಲೇರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X