Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಪೋಷಕರ ವಾರ್ಷಿಕ ಆದಾಯ ನಿಗದಿತ ಮಿತಿ...

ಪೋಷಕರ ವಾರ್ಷಿಕ ಆದಾಯ ನಿಗದಿತ ಮಿತಿ ದಾಟಿದ್ದರೆ ಅಭ್ಯರ್ಥಿ ಮೀಸಲಾತಿ ಪತ್ರ ಪಡೆಯಲು ಅನರ್ಹ: ಹೈಕೋರ್ಟ್

ವಾರ್ತಾಭಾರತಿವಾರ್ತಾಭಾರತಿ6 Dec 2025 1:12 AM IST
share
ಪೋಷಕರ ವಾರ್ಷಿಕ ಆದಾಯ ನಿಗದಿತ ಮಿತಿ ದಾಟಿದ್ದರೆ ಅಭ್ಯರ್ಥಿ ಮೀಸಲಾತಿ ಪತ್ರ ಪಡೆಯಲು ಅನರ್ಹ: ಹೈಕೋರ್ಟ್

ಬೆಂಗಳೂರು : ಪ್ರವರ್ಗ 2ಎ (ಹಿಂದುಳಿದ ವರ್ಗ) ಅಡಿ ಪೋಷಕರ ವಾರ್ಷಿಕ ಆದಾಯ ನಿಗದಿತ ಮಿತಿ ದಾಟಿದ್ದರೆ ಅಭ್ಯರ್ಥಿ ಕೆನೆ ಪದರಕ್ಕೆ ಸೇರುತ್ತಾರೆ. ಆದ್ದರಿಂದ, ಅವರು ಮೀಸಲಾತಿ ಪತ್ರ ಪಡೆಯಲು ಅನರ್ಹರಾಗುತ್ತಾರೆ ಎಂದು ಹೈಕೋರ್ಟ್‌ ಮಹತ್ವದ ತೀರ್ಪು ನೀಡಿದೆ.

ಕೆಪಿಟಿಸಿಎಲ್ ಸಹಾಯಕ ಇಂಜಿನಿಯರ್ ಹುದ್ದೆಗೆ ಪ್ರವರ್ಗ 2ಎ (ಕುರುಬ ಜಾತಿ) ಅಡಿ ಆಯ್ಕೆಯಾಗಿದ್ದ ರಾಘವೇಂದ್ರ ಚಂದ್ರಣ್ಣನವರ್ ಎಂಬುವರಿಗೆ ಮೀಸಲಾತಿಗೆ ಅನ್ವಯಿಸುವ ಜಾತಿ ಸಿಂಧುತ್ವ ಪ್ರಮಾಣಪತ್ರ ವಿತರಿಸುವಂತೆ ಏಕಸದಸ್ಯ ನ್ಯಾಯಪೀಠ ಹೊರಡಿಸಿದ್ದ ಆದೇಶ ಪ್ರಶ್ನಿಸಿ ಸರಕಾರ ಮೇಲ್ಮನವಿ ಸಲ್ಲಿಸಿತ್ತು. ಮತ್ತೊಂದೆಡೆ, ಏಕಸದಸ್ಯ ಪೀಠದ ಆದೇಶ ಪಾಲನೆ ಮಾಡದ ಅಧಿಕಾರಿಗಳ ವಿರುದ್ಧ ನ್ಯಾಯಾಂಗ ‌ನಿಂದನೆ ಆರೋಪದಡಿ ಕ್ರಮ ಜರುಗಿಸುವಂತೆ ಕೋರಿ ರಾಘವೇಂದ್ರ ಅವರು ನ್ಯಾಯಾಂಗ ‌ನಿಂದನೆ ಅರ್ಜಿ ಸಲ್ಲಿಸಿದ್ದರು.

ಮೇಲ್ಮನವಿ ಹಾಗೂ ನ್ಯಾಯಾಂಗ ನಿಂದನೆ ಅರ್ಜಿಗಳನ್ನು ಒಟ್ಟಾಗಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಸಿ. ಎಂ. ಪೂಣಚ್ಚ ಅವರಿದ್ದ ವಿಭಾಗೀಯ ನ್ಯಾಯಪೀಠ, ಅಭ್ಯರ್ಥಿಯ ಪೋಷಕರ ವೇತನ ಸೇರಿ ಎಲ್ಲ ಮೂಲದ ಆದಾಯವನ್ನು ಪರಿಗಣಿಸಬೇಕು. ಒಂದು ವೇಳೆ ಆದಾಯವು ನಿಗದಿತ ಮಿತಿಯನ್ನು ದಾಟಿದರೆ, ಆದಾಯ ತೆರಿಗೆ ಪಾವತಿದಾರನಾದರೆ ಆಗ ಕೆನೆ ಪದರ ನಿಯಮ ಅನ್ವಯ ಆಗಲಿದ್ದು, ಅಭ್ಯರ್ಥಿಯು ಪ್ರವರ್ಗ 2ಎ ಅಡಿ ಮೀಸಲಾತಿ ಪಡೆಯಲು ಅವಕಾಶವಿಲ್ಲ ಎಂದು ತೀರ್ಪು ನೀಡಿದೆ.

ಈ ಹಿನ್ನೆಲೆಯಲ್ಲಿ ಸರ್ಕಾರದ ಮೇಲ್ಮನವಿ ಮಾನ್ಯ ಮಾಡಿ, ಏಕಸದಸ್ಯ ಪೀಠದ ಆದೇಶ ರದ್ದುಪಡಿಸಿರುವ ವಿಭಾಗೀಯ ಪೀಠ, ಅಭ್ಯರ್ಥಿ ರಾಘವೇಂದ್ರ ಸಲ್ಲಿಸಿದ್ದ‌ ನ್ಯಾಯಾಂಗ ನಿಂದನೆ ಅರ್ಜಿಯನ್ನು ಮುಕ್ತಾಯಗೊಳಿಸಿದೆ.

ಪ್ರಕರಣದ ಹಿನ್ನೆಲೆ:

ಕೆಪಿಟಿಸಿಎಲ್ ಸಹಾಯಕ ಇಂಜಿನಿಯರ್ ಹುದ್ದೆಗೆ ಅರ್ಜಿ ಸಲ್ಲಿಸಿದ್ದ ಧಾರವಾಡದ ರಾಘವೇಂದ್ರ ಚಂದ್ರಣ್ಣನವರ್ ಪ್ರವರ್ಗ- 2ಎ (ಕುರುಬ) ಅಡಿ ಆಯ್ಕೆಯಾಗಿದ್ದರು. ಅದರಂತೆ, ಮೀಸಲಾತಿ ಪತ್ರಕ್ಕಾಗಿ ಜಿಲ್ಲಾ ಜಾತಿ ಮತ್ತು ಆದಾಯ ಪರಿಶೀಲನೆ ಸಮಿತಿಗೆ ಅರ್ಜಿ ಸಲ್ಲಿಸಿದ್ದರು. ಆದರೆ,‌ ಅಭ್ಯರ್ಥಿಯ ಪೋಷಕರ ಆದಾಯವು ಪ್ರವರ್ಗ- 2ಎಗೆ ನಿಗದಿ ಪಡಿಸಿರುವ ವಾರ್ಷಿಕ ಆದಾಯ ಮಿತಿಯಾದ 8 ಲಕ್ಷ ರೂ. ಮೀರುತ್ತಿರುವುದರಿಂದ ಅವರು ಹಿಂದುಳಿದ ವರ್ಗಗಳಡಿ ಮೀಸಲಾತಿ ಪಡೆಯಲು ಅರ್ಹರಲ್ಲ ಎಂದಿದ್ದ ಸಮಿತಿ, 2024ರ ಮಾರ್ಚ್ 6ರಂದು ರಾಘವೇಂದ್ರ ಅರ್ಜಿ ತಿರಸ್ಕರಿಸಿತ್ತು.

ಇದನ್ನು ಪ್ರಶ್ನಿಸಿ ರಾಘವೇಂದ್ರ ಚಂದ್ರಣ್ಣನವರ್ ಸಲ್ಲಿಸಿದ್ದ ರಿಟ್ ಅರ್ಜಿಯನ್ನು 2024ರ ಅಕ್ಟೋಬರ್ 28ರಂದು ಮಾನ್ಯ ಮಾಡಿದ್ದ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ, ಕುರುಬ ಜಾತಿಯ ಪ್ರವರ್ಗ 2ಎ ಗೆ ಅನ್ವಯಿಸುವ ಮೀಸಲಾತಿಗೆ ರಾಘವೇಂದ್ರ ಅವರು ಅರ್ಹರೆಂದು ಪ್ರಮಾಣೀಕರಿಸುವ ಜಾತಿ ಸಿಂಧುತ್ವ ಪ್ರಮಾಣಪತ್ರವನ್ನು ಎರಡು ವಾರಗಳ ಒಳಗೆ ವಿತರಿಸಬೇಕು ಎಂದು ಆದೇಶಿಸಿತ್ತು. ಇದನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ವಿಭಾಗೀಯ ನ್ಯಾಯಪೀಠಕ್ಕೆ ಮೇಲ್ಮನವಿ ಸಲ್ಲಿಸಿತ್ತು. ಮತ್ತೊಂದೆಡೆ, ರಾಘವೇಂದ್ರ ಸಹ ಹೈಕೋರ್ಟ್ ಆದೇಶವನ್ನು ಸರ್ಕಾರ ಪಾಲನೆ ಮಾಡಿಲ್ಲ ಎಂದು ಆಕ್ಷೇಪಿಸಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X