Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಅಬಕಾರಿ ಸನ್ನದು ಇ-ಹರಾಜು ಪ್ರಕ್ರಿಯೆಗೆ...

ಅಬಕಾರಿ ಸನ್ನದು ಇ-ಹರಾಜು ಪ್ರಕ್ರಿಯೆಗೆ ನೀಡಿದ್ದ ತಡೆ ತೆರವಿಗೆ ಹೈಕೋರ್ಟ್ ನಕಾರ

ವಾರ್ತಾಭಾರತಿವಾರ್ತಾಭಾರತಿ12 Jan 2026 10:31 PM IST
share
ಅಬಕಾರಿ ಸನ್ನದು ಇ-ಹರಾಜು ಪ್ರಕ್ರಿಯೆಗೆ ನೀಡಿದ್ದ ತಡೆ ತೆರವಿಗೆ ಹೈಕೋರ್ಟ್ ನಕಾರ

ಬೆಂಗಳೂರು : ರಾಜ್ಯದಲ್ಲಿ 569 ಅಬಕಾರಿ ಸನ್ನದುಗಳನ್ನು ಇ-ಹರಾಜು ಮಾಡಲು ಅಬಕಾರಿ ಇಲಾಖೆ ಡಿಸೆಂಬರ್ 19ರಂದು ಹೊರಡಿಸಿದ್ದ ಅಧಿಸೂಚನೆಗೆ ನೀಡಿದ್ದ ಮಧ್ಯಂತರ ತಡೆಯಾಜ್ಞೆ ತೆರವುಗೊಳಿಸಲು ಹೈಕೋರ್ಟ್‌ ಸೋಮವಾರ ನಿರಾಕರಿಸಿದೆ.

ಇದರಿಂದ ಜನವರಿ 13 ರಿಂದ ರಾಜ್ಯಾದ್ಯಂತ ನಡೆಯಬೇಕಿದ್ದ ನವೀಕರಣವಾಗದ, ಸ್ಥಗಿತಗೊಂಡಿದ್ದ 477 ಸಿಎಲ್‌-2ಎ ಚಿಲ್ಲರೆ ಮದ್ಯ ಮಾರಾಟ ಮಳಿಗೆ ಮತ್ತು 92 ಸಿಎಲ್‌-9ಎ ರಿಫ್ರೆಶ್‌ ರೂಮ್‌ ಸನ್ನದುಗಳ ಹರಾಜು ಪ್ರಕ್ರಿಯೆಗೆ ತಡೆ ಬಿದ್ದಂತಾಗಿದೆ.

ಅಬಕಾರಿ ಇಲಾಖೆಯ ಅಧಿಸೂಚನೆ ಪ್ರಶ್ನಿಸಿ ಹುಬ್ಬಳ್ಳಿಯ ಶಾಂತಾಬಾಯಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಕೆ.ಎಸ್‌. ಹೇಮಲೇಖಾ ಅವರಿದ್ದ ಏಕಸದಸ್ಯ ನ್ಯಾಯಪೀಠ (ಧಾರವಾಡ) ಸೋಮವಾರ ವಿಚಾರಣೆ ನಡೆಸಿತು.

ಸರಕಾರದ ಪರ ಹಾಜರಾದ ಅಡ್ವೊಕೇಟ್‌ ಜನರಲ್‌ ಕೆ. ಶಶಿಕಿರಣ್‌ ಶೆಟ್ಟಿ ಅವರು, 25-30 ವರ್ಷಗಳಿಂದ ನವೀಕರಣವಾಗದ ಮತ್ತು ಸ್ಥಗಿತಗೊಂಡಿರುವ ಪರವಾನಗಿಗಳನ್ನು ಸರಕಾರ ಆದಾಯ ಸಂಗ್ರಹಣೆ ದೃಷ್ಟಿಯಿಂದ ಇ-ಹರಾಜು ಮಾಡಲು ಹೊರಟಿದೆ. ಆನಂತರ ಒಬ್ಬೊಬ್ಬರೇ ಲೈಸೆನ್ಸ್‌ ನವೀಕರಣಕ್ಕೆ ಅರ್ಜಿ ಸಲ್ಲಿಸಿ ನ್ಯಾಯಾಲಯದ ಮೊರೆ ಹೋಗುತ್ತಿದ್ದಾರೆ. ಆದ್ದರಿಂದ, ಈ ಲೈಸನ್ಸ್‌ಗಳ ಮೇಲೆ ಅರ್ಜಿದಾರರು ಹಕ್ಕು ಮಂಡಿಸಲಾಗದು. ಮಂಗಳವಾರದಿಂದಲೇ ಇ-ಹರಾಜು ನಿಗದಿಯಾಗಿರುವುದರಿಂದ ತಡೆಯಾಜ್ಞೆ ತೆರವು ಕೋರಿ ಸರಕಾರ ಸಲ್ಲಿಸಿರುವ ಮಧ್ಯಂತರ ಅರ್ಜಿ ಮಾನ್ಯ ಮಾಡಬೇಕು ಎಂದು ಕೋರಿದರು.

ಇದನ್ನು ಆಕ್ಷೇಪಿಸಿದ ಅರ್ಜಿದಾರರ ಪರ ಹಿರಿಯ ವಕೀಲ ಅಶೋಕ್‌ ಹಾರನಹಳ್ಳಿ ಅವರು, ಹಲವು ವರ್ಷಗಳಿಂದ ನವೀಕರಣ ಮಾಡಿಕೊಳ್ಳಲಾಗದ ಲೈಸೆನ್ಸ್‌ಗಳನ್ನು ಇದೀಗ ಇ-ಹರಾಜು ಮಾಡಲು ಇಲಾಖೆ ಮುಂದಾಗಿದೆ. ಆದರೆ, ಅವುಗಳನ್ನು 2008ರಲ್ಲಿ ಎಂಎಸ್‌ಐಎಲ್‌ಗೆ ಸರಕಾರ ನೀಡಿದ್ದರಿಂದ ಅರ್ಜಿದಾರರ ಲೈಸೆನ್ಸ್‌ ಊರ್ಜಿತದಲ್ಲಿಲ್ಲವೆಂದು ಸುಮ್ಮನಾಗಿದ್ದರು. ಆದರೆ, ಇದೀಗ ಮತ್ತೆ ಅದೇ ಲೈಸನ್ಸ್‌ಗಳಿಗೆ ಜೀವ ನೀಡಿ ಮತ್ತೆ ಹರಾಜು ಹಾಕಲು ಮುಂದಾಗಿರುವುದರಿಂದ ಅರ್ಜಿದಾರರ ಕಾನೂನು ಬದ್ಧ ಹಕ್ಕು ಕಸಿದುಕೊಂಡಂತಾಗಿದೆ ಎಂದರು.

ಮುಂದುವರಿದು, ಸರಕಾರ ನಡೆಸಲು ಉದ್ದೇಶಿಸಿರುವ ಇ-ಹರಾಜು ಪ್ರಕ್ರಿಯೆಯಲ್ಲಿ ಹಲವು ಪ್ರವರ್ಗಗಳಿಗೆ ಮೀಸಲು ಸೌಲಭ್ಯ ಕಲ್ಪಿಸಲಾಗಿದೆ. ಆದರೆ, ಅದಕ್ಕೆ ಯಾವುದೇ ಮಾನದಂಡ ಅನುಸರಿಸಿಲ್ಲ. ಆ ಬಗ್ಗೆ ಅಧಿಸೂಚನೆಯಲ್ಲೂ ಉಲ್ಲೇಖಿಸಲಾಗಿಲ್ಲ. ಆ ರೀತಿ ಮೀಸಲು ಒದಗಿಸಲು ಶಾಸನಾತ್ಮಕ ಬೆಂಬಲವೂ ಇಲ್ಲ. ಆ ಮೂಲಕ ಸರಕಾರ ಅರ್ಜಿದಾರರ ಸಾಂವಿಧಾನಿಕ ಹಕ್ಕು ಕಸಿದುಕೊಳ್ಳುತ್ತಿದೆ. ಆದ್ದರಿಂದ, ಯಾವುದೇ ಕಾರಣಕ್ಕೂ ಮಧ್ಯಂತರ ತಡೆ ತೆರವುಗೊಳಿಸಬಾರದು, ಇ-ಹರಾಜು ಪ್ರಕ್ರಿಯೆಗೆ ಅವಕಾಶ ಮಾಡಿಕೊಡಬಾರದು ಎಂದು ಮನವಿ ಮಾಡಿದರು.

ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ, ತಡೆ ತೆರವು ಕೋರಿ ಸರಕಾರ ಸಲ್ಲಿಸಿದ್ದ ಮಧ್ಯಂತರ ಅರ್ಜಿ ತಿರಸ್ಕರಿಸಿತಲ್ಲದೆ, ಇ-ಹರಾಜು ಪ್ರಕ್ರಿಯೆಗೆ ಡಿಸೆಂಬರ್ 26ರಂದು ನೀಡಿದ್ದ ತಡೆಯಾಜ್ಞೆಯನ್ನು ವಿಸ್ತರಿಸಿ, ವಿಚಾರಣೆಯನ್ನು ಫೆಬ್ರವರಿ 11ಕ್ಕೆ ಮುಂದೂಡಿತು.

Tags

High Court
share
ವಾರ್ತಾಭಾರತಿ
ವಾರ್ತಾಭಾರತಿ
Next Story
X